ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಿಕ್ಅಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮರವಂತೆಯ ಬೆಟ್ಟಿನಮನೆ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತಪಟ್ಟವರು. ಅವರು ಸ್ಕೂಟರ್ನಲ್ಲಿ ತ್ರಾಸಿ ಕಡೆಯಿಂದ ಮರವಂತೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಬಸ್ ನಿಲ್ದಾಣದ ಸಮೀಪ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಪಿಕ್ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಘಟನೆ ಕೋಟ ಇವರ ಸಂಯೋಜನೆಯೊಂದಿಗೆ ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಹಾಗೂ ಎಸ್ಎಲ್ಆರ್ಎಂ ಘಟಕ ಕೋಡಿ ಇವರ ಸಹಯೋಗದೊಂದಿಗೆ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ಸದಸ್ಯ ಪ್ರಭಾಕರ್ ಮೆಂಡನ್ ಮತ್ತು ಕೃಷ್ಣ ಪೂಜಾರಿಯವರ ಮಾರ್ಗದರ್ಶನದಲ್ಲಿ ಮನೆಗೊಂದು ಗಿಡ ನೆಡುವ 2ನೇ ವರ್ಷದ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಹೊಸಬೆಂಗ್ರೆ ಪರಿಸರದಲ್ಲಿ ಕೋಡಿ ಮೀನುಗಾರಿಕೆ ಸೊಸೈಟಿ ನಿರ್ದೇಶಕ ಲಕ್ಷ್ಮಣ್ ಸುವರ್ಣ ಮನೆಯಲ್ಲಿ ಗಿಡ ನಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ಮಾಜಿ ಸಂಜೀವಿನಿ ಅಧ್ಯಕ್ಷೆ ದೀಪಾ ಆರ್. ಖಾರ್ವಿ, ಕೋಡಿಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್. ಹಾಗೂ ಕೋಡಿತಲೆ ಅಂಗನವಾಡಿ ಕಾರ್ಯಕರ್ತೆ ನಿರೋಷ, ಎಸ್ಎಲ್ಆರ್ಎಂ ಸಿಬ್ಬಂದಿ ಕಿರಣ್ ಪುತ್ರನ್, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಮತಿ, ಜ್ಯೋತಿ, ಸುಜಾತ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in/ssppre/ ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in/post_sa/signin.aspx ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪರಿಸರದ ಮೇಲೆ ಮನುಕುಲ ನಿರಂತರ ದರ್ಪ ತೊರಿಸುತ್ತಿದ್ದಾರೆ. ಇದರ ದುಷ್ಪರಿಣಾಮ ಈಗಾಗಲೇ ನಾವುಗಳು ಅನುಭವಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಸೋಮವಾರ ಸರಕಾರಿ ಹಿ.ಪ್ರಾ. ಶಾಲೆ, ಕೋಟ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ.ಕೋಟ, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ, ಕೋಟ ಲಿಜನ್, ಜೆಸಿಐ ಕಲ್ಯಾಣಪುರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ನಾವಿದ್ದೇವೆ ವೈಭೋಗದ ಜೀವನಕ್ಕಾಗಿ ಕಾಂಕ್ರೀಟ್ ಕಾಡನ್ನು ನಿರ್ಮಿಸುತ್ತಿದ್ದೇವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೆನರಾ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಸುಮಾರು 30 ವರ್ಷ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯ ಸಿಬ್ಬಂದಿ ಜಿ. ಗಂಗಾಧರ ಪೈ ಅವರನ್ನು ಗಂಗೊಳ್ಳಿ ಕೆನರಾ ಬ್ಯಾಂಕಿನ ವತಿಯಿಂದ ಸೋಮವಾರ ಬೀಳ್ಕೊಡಲಾಯಿತು. ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಸೋಮವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ವಾಸು ದೇವಾಡಿಗ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಬ್ಯಾಂಕಿನ ಅಧಿಕಾರಿ ಮಂಜುನಾಥ, ಬ್ಯಾಂಕ್ ಸಿಬ್ಬಂದಿ ರೇಷ್ಮಾ, ನಿವೃತ್ತ ಅಧಿಕಾರಿ ಅಶೋಕ ಜಿ.ವಿ., ಉದ್ಯಮಿ ದಿನಕರ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ನಿವೃತ್ತ ಸಿಬ್ಬಂದಿ ರಾಜೀವ ಶೇರುಗಾರ್ ಮೊದಲಾದವರು ನಿವೃತ್ತರ ಸೇವೆಯನ್ನು ಸ್ಮರಿಸಿ ಅವರನ್ನು ಅಭಿನಂದಿಸಿದರು. ಬ್ಯಾಂಕ್ ಕಟ್ಟಡ ಮಾಲೀಕ ಎಂ.ಜಿ.ಅಜಿತ್ ನಾಯಕ್, ಅಶ್ವಿತಾ ಜಿ.ಪೈ, ಪ್ರಿಯಾ ಪೈ, ದಿಯಾ ಪೈ, ಬ್ಯಾಂಕಿನ ಸಿಬ್ಬಂದಿಗಳು, ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮುಖ್ಯ ಅತಿಥಿ ರೇಡಿಯೋ ಟೆಕ್ನಾಲಜಿಸ್ಟ್ ಮತ್ತು ಉದ್ಯಮಿ ಸ್ವರಾಜ್ ಶೆಟ್ಟಿ ಅವರು ದೀಪ ಬಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ಡೀನ್, ಡಾ. ಪದ್ಮಚಾರಣ ಸ್ವೈನ್, ಐಎಂಜೆ ಇನ್ಸ್ಟಿಟ್ಯೂಟ್ಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರು ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಜೆನಿಫರ್ ಫ್ರೀಡಾ ಮೆನೆಜಸ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ವಿಜ್ಞಾನ ಸಂಸ್ಥೆಗಳ ಉಪಪ್ರಾಂಶುಪಾಲರಾದ ಸೌಜನ್ಯಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಪದ್ಮಚಾರಣ ಸ್ವೈನ್ ಅವರು ವೃತ್ತಿ ಮಾರ್ಗದರ್ಶನದ ಮಹತ್ವದ ಬಗ್ಗೆ ಮಾತನಾಡಿದರು ಮತ್ತು ಸೌಜನ್ಯಾ ಅವರು ಅತಿಥಿಯನ್ನು ಪರಿಚಯಿಸಿದರು. ಮುಖ್ಯ ಅತಿಥಿಯಾದ ಸ್ವರಾಜ್ ಶೆಟ್ಟಿ ಅವರು ಆರೋಗ್ಯ ವೃತ್ತಿಯಲ್ಲಿ ಇರುವ ವೃತ್ತಿಪರ ಅವಕಾಶಗಳು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪೂರ್ತಿಮಾತು ಸರಣಿ 10 ಕಾರ್ಯಕ್ರಮ ಆಯೋಜಿಸಲಾಗಿತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜೆಸಿಐ ತರಬೇತುದಾರರೂ ಖ್ಯಾತವ್ಯಾಗ್ಮಿಗಳಾಗಿರುವ ಕೆ. ರಾಜೇಂದ್ರ ಭಟ್ ಅವರು “ಕಲಿಯುವುದು ಒಂದು ಹಬ್ಬ ಸಂಭ್ರಮಿಸೋಣ” ಎಂಬ ಶೀರ್ಷಿಕೆಯಡಿಯಲ್ಲಿ ಉಪನ್ಯಾಸ ನೀಡಿದರು. ಜಗತ್ತಿನಲ್ಲಿ ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮ ಇಚ್ಛಾಶಕ್ತಿಯೇ ಶ್ರೇಷ್ಠವಾದದ್ದು, ಅನೇಕ ಅದ್ಭುತಗಳು ಸೃಷ್ಟಿಯಾಗಿರುವುದು ಭಿನ್ನ ಯೋಚನೆ ಮತ್ತು ಯೋಜನೆಗಳಿಂದ ಆದ್ದರಿಂದ ಕಲಿಕೆ ಒಂದು ಸಂಭ್ರಮವಾಗಬೇಕು.ಒತ್ತಡ ಮುಕ್ತ ಕಲಿಕೆಯಿಂದ ಸಾಧನೆಯಾಗುತ್ತದೆ ಎಂದು.ಅನೇಕ ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು. ನಮ್ಮ ಮೆದುಳಿನ ಶಕ್ತಿಯನ್ನು ದುರುಪಯೋಗಪಡಿಸಿಕೊಳ್ಳದೆ, ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಅವರು ಸರ್ವರನ್ನು ಸ್ವಾಗತಿಸುವುದರ ಜೊತೆಗೆ ಪ್ರಾಸ್ತಾವಿಕ ನುಡಿಗಳಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಸತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ವಲಯ-1ರ ಸಹಾಯಕ ಗವರ್ನರ್ ಆಗಿ ಐ. ನಾರಾಯಣ ಆಯ್ಕೆಯಾಗಿದ್ದಾರೆ. ವಲಯ ಒಂದರ ವ್ಯಾಪ್ತಿಯಲ್ಲಿ ಒಟ್ಟು ಎಂಟು ಕ್ಲಬ್ಗಳಿಗೆ ಸಹಾಯಕ ಗವರ್ನರ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ. 2016ರಲ್ಲಿ ರೋಟರಿ ಕ್ಲಬ್ ಬೈಂದೂರಿನ ಸದಸ್ಯರಾಗಿ ರೋಟರಿ ಚಟುವಟಿಕೆಯಲ್ಲಿ ಸಕ್ರಿಯ ತೊಡಗಿಸಿಕೊಂಡ ಅವರು 2015-19ರ ಸಾಲಿಗೆ ಬೈಂದೂರು ರೋಟರಿಯ ಅಧ್ಯಕ್ಷರಾಗಿ ಕ್ಲಬ್ಬನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದರು. ನಂತರದ ವರ್ಷಗಳಲ್ಲಿ ವಲಯ ಮಟ್ಟದ ಹುದ್ದೆಗಳು ಹಾಗೂ ಜಿಲ್ಲಾ ರೋಟರಿ ಲಿಟರಸಿ ಮಿಷನ್ ಇದರ ವೈಸ್ ಚೇರ್ಮನ್ ಆಗಿ, 2024-25ರ ಸಾಲಿನ ಆರ್ಐಎಲ್ಎಂ ಜಿಲ್ಲಾ ಚೇರ್ಮನ್ ಆಗಿ ರೋಟರಿ ಸೇವೆಯಲ್ಲಿ ಜಿಲ್ಲಾ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅವರು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಹತ್ತು ವರ್ಷ ನಿರ್ದೇಶಕರಾಗಿ, ಒಂದು ಅವಧಿಗೆ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿರುತ್ತಾರೆ. ಕುಂದಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಕ್ರೀಡಾ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮ್ಯಾಕ್ಸಿಮಾ ವಿಲ್ಲಾ ಮನೆಗೆ ಮಾರಕಾಸ್ತ್ರಗಳೊಂದಿಗೆ ಕಳ್ಳರು ನುಗ್ಗಲು ಯತ್ನಿಸಿದ ಘಟನೆ ಇತ್ತೀಚಿಗೆ ನಡೆದಿದೆ. ಬಾಗಿಲಿನ ನೆಟ್ ಮುರಿದು ಒಳಗೆ ನುಗ್ಗಲು ಕಳ್ಳರು ಪ್ರಯತ್ನಿಸಿದ್ದಾರೆ. ಬಾಗಿಲು ಮುರಿಯುವ ವೇಳೆ ಮನೆಯಾಕೆ ಎಚ್ಚರಗೊಂಡಿದ್ದಾರೆ. ಮಹಿಳೆಯ ಬೊಬ್ಬೆ ಮತ್ತು ಆಕೆ ಫೋನ್ ಕರೆ ಮಾಡುತ್ತಿರುವುದನ್ನು ಗಮನಿಸಿದ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ನೇ ಸಾಲಿನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪ್ರಾವೇಶಿಕ ಪ್ರಥಮ ಪರೀಕ್ಷೆಯಲ್ಲಿ ಕುಂದಾಪುರದ ಗುರು ಪರಂಪರಾ ಸಂಗೀತ ಸಭಾದ ವಿದ್ಯಾರ್ಥಿ ಹಾಗೂ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಸಂಕಲ್ಪ್ ಕುಮಾರ್, 75 ರಲ್ಲಿ 70 ಅಂಕಗಳನ್ನು ಪಡೆದು ಹೊನ್ನಾವರ ಸೆಂಟರ್ ನಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಈತ ಎಮ್ಐಟಿ ಮಣಿಪಾಲದ ಪ್ರಾಧ್ಯಾಪಕ ಡಾ. ಸಂಪತ್ ಕುಮಾರ್ ಹಾಗೂ ಶಿಲ್ಪಾ ದಂಪತಿಗಳ ಪ್ರಥಮ ಪುತ್ರ. ಅವರು ಗೋಪಾಡಿ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಹಾಗೂ ವಿದುಷಿ ಪ್ರತಿಮಾ ಭಟ್ ಮಾಳಕೊಪ್ಪ ಅವರಲ್ಲಿ ಕಳೆದ ಎಂಟು ವರ್ಷಗಳಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡುತ್ತಿದ್ದಾರೆ. ಅಲ್ಲದೆ 2024-25 ನೇ ಸಾಲಿನ ಡ್ರಾಯಿಂಗ್ ಸೀನಿಯರ್ ಪರೀಕ್ಷೆಯಲ್ಲೂ ವಿಶಿಷ್ಟ ಶ್ರೇಣಿಯೊಂದಿಗೆ ಉತ್ತೀರ್ಣನಾಗಿರುತ್ತಾರೆ. ಸಂಕಲ್ಪ್ ಕುಮಾರ್ ಅವರ ಸಾಧನೆಗೆ ಗುರು ಪರಂಪರಾ ಸಂಗೀತ ಸಭಾ, ಕುಂದಾಪುರ ಹಾಗೂ ಕೋಟ…
