ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ 2025-26ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ್ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 19ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್.ವಿ.ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 16ನೇ ಬಾರಿ ಪಡೆದು ಅವಳಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 17-3 ಅಂಕಗಳ ಅಂತರದಿಂದ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ವಿರುದ್ಧ 14 ಅಂಕ ಹಾಗೂ ಇನ್ನಿಂಗ್ಸ್ ನೊಂದಿಗೆ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ 17-2 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿ.ಎಫ್.ಜಿ.ಸಿ ಕಾಲೇಜು ವಿರುದ್ಧ 15 ಅಂಕ ಹಾಗೂ ಇನ್ನಿಂಗ್ಸ್ನೊಂದಿಗೆ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ “ಸಮಗ್ರ ಪ್ರಶಸ್ತಿ”ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್ಶಿಪ್ ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಯನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಮಹಿಳಾ ನಿಲಯವನ್ನು ಸ್ವಾಗತ ದ್ವಾರ, ಮದುವೆ ಚಪ್ಪರ, ಮಾವಿನ ತಳಿರು-ತೋರಣ, ಬಣ್ಣ-ಬಣ್ಣದ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿದ್ದು, ಯಾವುದೇ ಖಾಸಗಿ ಮದುವೆಗೆ ಕಡಿಮೆಯಿಲ್ಲ ಎಂಬಂತೆ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ವಿವಾಹ ಕಾರ್ಯಕ್ರಮವು ನೋಡುಗರನ್ನು ಆಕರ್ಷಿಸುತ್ತಿತ್ತು. ಮದುವೆಗೆ ಆಗಮಿಸಿದ ಗಣ್ಯರನ್ನು, ಅಧಿಕಾರಿಗಳನ್ನು ತಂಪು ಪಾನೀಯ ಹಾಗೂ ಗುಲಾಬಿ ಹೂವುಗಳನ್ನು ನೀಡಿ, ನಿಲಯದ ಸಿಬ್ಬಂದಿಗಳು ಆದರದಿಂದ ಬರಮಾಡಿಕೊಳ್ಳುತ್ತಿರುವ ದೃಶ್ಯ ಮದುವೆಗೆ ಮತ್ತಷ್ಟು ಮೆರುಗು ನೀಡಿತ್ತು. ಇವೆಲ್ಲವೂ ಕಂಡುಬಂದಿದ್ದು, ಇಂದು ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ನಿವಾಸಿನಿಯರೇ ವಿವಾಹ ಕಾರ್ಯಕ್ರಮದಲ್ಲಿ ಎನ್ನುವುದೇ ವಿಶೇಷ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೊಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಚಿ.ಸೌ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಇಲ್ಲಿನ ವಾಸಿ ಸತೀಶ್ ಪ್ರಭು ಅವರ ಪುತ್ರ ಚಿ.ಸಂಜಯ ಪ್ರಭು ಅವರೊಂದಿಗೆ ಹಾಗೂ ಇನ್ನೊರ್ವ ನಿವಾಸಿನಿಯಾದ ಚಿ.ಸೌ.ಸುಶೀಲ ಅವರ ವಿವಾಹವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬಹುಮಾನ ವಿತರಣಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೆ, ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ವೇದಿಕೆಯಾಗಿದೆ. ಜೀವನದಲ್ಲಿ ಎದುರಾಗುವ ಸೋಲು ಗೆಲುವನ್ನು ಸಮದೂಗಿಸಿಕೊಂಡು ಹೋಗುವುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು ಎಂದರು. ಈ ಸಮಾರಂಭವನ್ನು ಉಡುಪಿ ನೌಕರರ ಸಂಘದ ಅಧ್ಯಕ್ಷರಾದ ಬಸ್ರೂರಿನ ನಿವೇದಿತ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳನ್ನು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವಲ್ಲಿ ಸದಾ ಈ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಆರೋಪಿಸಿದ್ದಾರೆ. ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೇಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಲು & ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ: ಸುದ್ದಿಗೊಷ್ಠಿಯಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಅವರೊಂದಿಗೆ ಚರ್ಚಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿ ಅವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧ ಅವಿನಾಭಾವ ಸಂಬಂಧ. ವಿದ್ಯಾರ್ಥಿ ದಿಸೆಯಲ್ಲಿ ಪಡೆದ ಅನುಭವ ಜೀವನಕ್ಕೆ ಪ್ರೇರಣೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಛಲ ಹೊಂದಿರಬೇಕು. ಪೈಪೋಟಿಯ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಜೊತೆಯಲ್ಲಿ ಕೌಶಲ್ಯ ಬೇಕು. ಮಾತನಾಡುವ ಕಲೆ, ಪರಿಸ್ಥಿತಿಯನ್ನು ಎದುರಿಸುವ ಧೈರ್ಯ ಇರಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಸುರೇಶ ತುಂಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ.ಎಸ್.ವಿ. ಅಸೋಸಿಯೇಶನ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಬೆಳೆಯಬೇಕಾದರೆ ನಾವು ಬದಲಾಗಬೇಕು. ಬದಲಾಗಬೇಕಾದರೆ ಕಲಿಯಬೇಕು. ಕಲಿಯಬೇಕಾದರೆ ತೆರೆದುಕೊಳ್ಳಬೇಕು. ನಮ್ಮನ್ನು ನಾವು ಹೊರ ಜಗತ್ತಿಗೆ ಸಮರ್ಪಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಉತ್ಸಾಹ ಮತ್ತು ಹಂಬಲ ಇರಬೇಕು. ನಮ್ಮ ಸುತ್ತಮುತ್ತಲು ಇರುವ ಅವಕಾಶಗಳನ್ನು ನೋಡುತ್ತಿರಬೇಕು. ಇವೆಲ್ಲದರ ಮಧ್ಯೆ ತಾಳ್ಮೆ ಅವಶ್ಯಕ. ಮಾತು ಸಾಧನೆಯಾಗಬಾರದು. ಸಾಧನೆ ಮಾತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ (ರಿ) ಬೈಂದೂರು ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದ್ದಾರೆ. ಅವರು ಗುರುವಾರ ಬೈಂದೂರು ರೋಟರಿ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆ ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿದ್ದು ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು. ಡಿಸೆಂಬರ್ 14ರ ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ “ಚಾಮಚೆಲುವೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಸುಜಾತ ಅಕ್ಕಿ, ನಿರ್ದೇಶನ ವಿಕಾಸ್ ಚಂದ್ರ, ಡಿಸೆಂಬರ್ 15ರ ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ “ನನ… ನನಮ್ ರಸ್ತೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಗಜಾನನ ಶರ್ಮಾ ಬೆಂಗಳೂರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐಕ್ಯೂಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗಣೇಶ್ ಪೈ. ಎಂ. ಪ್ರಸ್ತಾವಿಸಿ ಸ್ವಾಗತಿಸಿದರು. ನಾಗಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 27ನೇ ವರ್ಷದ ಸೂರ್ಯ ಕಂಬಳೋತ್ಸವ ಡಿಸೆಂಬರ್ 25 ಗುರುವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘಟಕ ಸಂತೋಷ ಪೂಜಾರಿ ಕಾಡಿನತಾರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅವನಿಕಾ ಜಿ. ನಿರೂಪಿಸಿ, ಅಮೋಘ ಪೈ ಸ್ವಾಗತಿಸಿ, ಹರಿದಾಸ್ ಆರ್. ಮಲ್ಯ ವಂದನಾರ್ಪಣೆ ಗೈದರು. ಈ ಕಾರ್ಯಕ್ರಮದ ನಂತರ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಐಸ್ ಕ್ರಿಂ ವಿತರಿಸಲಾಯಿತು.
