Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದಿ ಭಾಷೆಯ ಮಹತ್ವ ಹಾಗೂ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಹಿಂದಿಯನ್ನು ಬಳಸುವ ಮತ್ತು ಉತ್ತೇಜಿಸುವ ಕುರಿತು ವಿದ್ಯಾರ್ಥಿಗಳಿಗೆ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿ ಸುಖತಾ ಪ್ರಶಾಂತ್ ಸುವರ್ಣ ಮಾಹಿತಿ ನೀಡಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಭಾಷಾ ಸಂಘದ ಸಹಯೋಗದೊಂದಿಗೆ ಆಯೋಜಿಸಿದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿ, ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿ, ರಿಷಿತಾ ಕಾರ್ಯಕ್ರಮ ನಿರೂಪಿಸಿ, ಶಿಫಾಶೇಖ್ ಸ್ವಾಗತಿಸಿ, ಇಶಿತಾ ಸಿದ್ದು ವಂದಿಸಿದರು.

Read More

ಸದಸ್ಯರ ವಿಶ್ವಾಸವೇ ಸಂಸ್ಥೆಯ ಯಶಸ್ಸು – ಎಚ್. ಜಯಶೀಲ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರಿನ ಜನರ ಆರ್ಥಿಕ ಅಗತ್ಯತೆಗಳಿಗೆ ಪೂರಕವಾಗಿ ಸಹಕಾರಿ ಸಂಸ್ಥೆಯನ್ನು ಆರಂಭಿಸಲಾಗಿದೆ. ಠೇವಣಿದಾರರ ವಿಶ್ವಾಸ ಹಾಗೂ ಪ್ರತಿ ಗ್ರಾಹಕರ ಮನಗೆಲ್ಲುವಲ್ಲಿ ಸಂಸ್ಥೆ ಯಶಸ್ವಿಯಾಗಿದ್ದು, ಸಂಸ್ಥೆ ಆರಂಭಗೊಂಡ ಮೂರೇ ವರ್ಷದಲ್ಲಿ ತೃಪ್ತಿಕರ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಚ್. ಜಯಶೀಲ ಶೆಟ್ಟಿ ಹೇಳಿದರು. ಅವರು ಗುರುವಾರ ಹೆರಂಜಾಲುವಿನ ಸನ್ಮಾನ ಸಭಾಭವನದಲ್ಲಿ ಜರುಗಿದ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಹೆರಂಜಾಲು ಇದರ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಆರ್ಥಿಕ ವರ್ಷಾಂತ್ಯಕ್ಕೆ 8.52 ಕೋಟಿ ಠೇವಣಿ ಹೊಂದಿದ್ದು, 7.93ಕೋಟಿ ಸಾಲ ನೀಡಿದೆ ವಾರ್ಷಿಕವಾಗಿ 51.88 ಕೋಟಿ ವ್ಯವಹಾರ ನಡೆಸಿ, ನಿವ್ವಳ 7.36 ಲಕ್ಷ ಲಾಭ ಗಳಿಸಿದೆ. ಸಂಸ್ಥೆಯ ವಿವಿಧ ನಿಧಿಗಳಲ್ಲಿ 6.27 ಲಕ್ಷ ಮೀಸಲಿರಿಸಿದ್ದು, 1.05 ಕೋಟಿ ಮೊತ್ತದ ಹಣವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬೈಕಿಗೆ ಕಾಡುಹಂದಿ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಬನ್ನಾಡಿಯ ನಿವಾಸಿ ಬಸವರಾಜ್ ಪಿ.ಎಂ. ಗಾಯಗೊಂಡ ಘಟನೆ ಇಲ್ಲಿನ ಮಣೂರು ಸಮೀಪ ಮಂಗಳವಾರ ಸಂಭವಿಸಿದೆ. ಗಸ್ತು ಕರ್ತವ್ಯ ಮುಗಿಸಿ ಬೆಳಗಿನ ಜಾವ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ಮನೆಗೆ ವಾಪಸಾಗುತ್ತಿದ್ದಾಗ ಕಾಡು ಹಂದಿ ಅಡ್ಡ ಬಂದು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದರು. ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಚಾಲಕ ಬೈಕಿನ ಮೇಲೆಯೇ ಚಲಾಯಿಸಿಕೊಂಡು ಪರಾರಿಯಾದನು ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಈ ಮೂಲಕ ಪ್ರತಿಭಾನ್ವೇಷಣೆಯೊಂದಿಗೆ ಪ್ರತಿಭೆ ಅನಾವರಣಕ್ಕೆ ಸಹಕಾರಿ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು. ಅವರು ಬುಧವಾರ ಕಾಲೇಜು ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ, ಗೀತಾನಂದ ಫೌಂಡೇಶನ್ ವತಿಯಿಂದ ಸ್ಥಳೀಯ ಪದವಿ ಪೂರ್ವ ಕಾಲೇಜಿನಿಂದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶುಲ್ಕ ವಿತರಣೆ ಮತ್ತು ಪ್ರತಿಭಾನ್ವೇಷಣೆ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಆದರೆ ಅದನ್ನು ಸಮನಾಗಿ ಸ್ವೀಕರಿಸಿದಾಗ ಯಶಸ್ಸಿನ ಮಟ್ಟಿಲು ಏರಲು ಸಾಧ್ಯ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಖಾರ ಎಂಬ ಪದ ಬಾಯಿಯನ್ನು ಸುಡಬಲ್ಲದು ಆದರೆ ಅಹಂಕಾರ ದೇಗವನ್ನು ಸುಡಲ್ಪಡುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳ ತಮ್ಮ…

Read More

ಕುಂದಾಪ್ರ ಡಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾಟದ ಚಾಂಪಿಯನ್‌ಶಿಪ್ ಸುತ್ತಿನಲ್ಲಿ ದ್ವಿತೀಯ ಸ್ಥಾನ ಪಡೆದು ರನ್ನರ್ಸ್ ಅಪ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಿಲ್ಲಿಯ ಪ್ರತಿಷ್ಠಿತ ಡಿ.ಕೆ. ಪೆಜೆನ್ಸ್ ಸಂಸ್ಥೆ ಆಯೋಜಿಸಿದ್ದ ‘ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025’ ಕಿರೀಟವು ಕುಂದಾಪುರದ ನಿಶಾಲಿ ಕುಂದರ್ ಮುಡಿಗೇರಿದೆ. ದಿಲ್ಲಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಇತ್ತೀಚಿಗೆ ನಡೆದ ಸ್ಪರ್ಧೆಯಲ್ಲಿ ದೇಶದ ನಾನಾ ಭಾಗಗಳಿಂದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಂದಿದ್ದ 44 ಸ್ಪರ್ಧಿಗಳನ್ನು ಎದುರಿಸಿ ನಿಶಾಲಿ ಈ ಪ್ರತಿಷ್ಠಿತ ಟೈಟಲ್‌ಗಳನ್ನು ಮುಡಿಗೇರಿಸುವ ಮೂಲಕ ರಾಜ್ಯಕ್ಕೆ ಹುಟ್ಟೂರಿನಲ್ಲಿ ಕೀರ್ತಿ ತಂದಿದ್ದಾರೆ. ಅವರು ಕಳೆದ 6 ತಿಂಗಳಿನಿಂದ ಈ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದರು. ಟ್ಯಾಲೆಂಟ್ ಸುತ್ತಿನಲ್ಲಿ ಈ ನೆಲದ ಹೆಮ್ಮೆಯ ಯಕ್ಷಗಾನ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ನಜ್ಮೀ ಸಯೀದ್ ಹಾಗೂ ಡಾ. ಜಿಮ್ಮಿ ಗರಿಮಾ ಅವರು ನಿಶಾಲಿಗೆ ಫೈಡ್ ಆಫ್ ಇಂಡಿಯಾ-ಮಿಸ್ ಇಂಡಿಯಾ 2025ರ ಕಿರೀಟವನ್ನು ತೊಡಿಸಿದರು. ಡಾ. ಜಿಮ್ಮಿ ಗರಿಮಾ ಅವರ ಸಂಯೋಜನೆಯ ಈ ಸ್ಪರ್ಧೆಯ ಗ್ರಾಂಡ್ ಜ್ಯೂರಿಗಳಾದ ಮಾರ್ಗರೆಟ್ ಚೊರೆಯಿ, ನಜ್ಮೀ ಸಯೀದ್, ಸೋನಲ್ ಗೋಸಾಲಿಯಾ ಹಾಗೂ ಮನೀಷಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ನಿರಂತರ 111ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸತೀಶ್ ನಾಯಕ್ ಗುಡ್ಡೆಯಂಗಡಿ, ರಾಧಾಕೃಷ್ಣ ಪ್ರಭು, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಗಿರೀಶ್ ನಾಗೇಶ್ ಪ್ರಭು, ಗಣೇಶ್ ಭಟ್, ಕೀರ್ತನಾ ಭಟ್, ಜಯಂತಿ ಗಣಪತಿ ಸೇರುಗಾರ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಪಂಚಮಿ ಭಟ್ ಮಂಗಳೂರು ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭು ನೇತೃತ್ವದಲ್ಲಿ ಪಂಚಮಿ ಭಟ್ ಮಂಗಳೂರು ಅವರು ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ  ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ  ಪ್ರಶಸ್ತಿ  ಗೆದ್ದುಕೊಂಡಿತು. ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ತಂಡ 3-1 ಅಂತರದಿಂದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು  3-1 ಅಂತರದಿಂದ ಪರಭವಗೊಳಿಸಿತ್ತು. ವಿಜೇತರಿಗೆ ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ  “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣ ತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಮಾತನಾಡಿ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು. ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಬೋಧಕ – ಬೋಧಕೇತರ ವರ್ಗದವರು, ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ಅವರು ಕಾರ್ಯಕ್ರಮ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನ ಐ.ಇ.ಸಿ ಹಾಗೂ ಎಸ್.ಬಿ.ಸಿ.ಸಿ ಕಾರ್ಯಚಟುವಟಿಕೆಯಡಿ ಜಾನಪದ ಕಲಾ ಪ್ರಕಾರಗಳ ಮೂಲಕ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಾನಪದ ಕಲಾತಂಡಗಳ ಅಗತ್ಯವಿರುವ ಹಿನ್ನೆಲೆ, ಜಿಲ್ಲೆಯಿಂದ ಸಾಂಗ್ ಆಂಡ್ ಡ್ರಾಮಾ ಡಿವಿಜನ್, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯಲ್ಲಿ ನೋಂದಣಿಯಾಗಿರುವ ಹಾಗೂ ಆರೋಗ್ಯ ಇಲಾಖೆಯ ವಿಭಾಗೀಯ ಮಟ್ಟದಲ್ಲಿ ತರಬೇತಿ ಪಡೆದಿರುವ ಆಸಕ್ತ ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಐ.ಇ.ಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More