Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಂಡಿದ್ದು, ಗಣತಿದಾರರು ಜಿಲ್ಲೆಯ ನಾಗರೀಕ ಮನೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಕುಟುಂಬದ ಪಡಿತರ ಚೀಟಿ, ಆಧಾರ್ ಸಂಖ್ಯೆ, ವಿಶೇಷ ಚೇತನರು ಕುಟುಂಬದಲ್ಲಿದ್ದರೆ ಯು.ಡಿ.ಐ.ಡಿ ಸಂಖ್ಯೆಯನ್ನು ಗಣತಿದಾರರಿಗೆ ನೀಡಬೇಕಾಗಿರುತ್ತದೆ. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್‌ಗಳಿಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿರುತ್ತದೆ ಹಾಗೂ ಸಮೀಕ್ಷೆ ವೇಳೆ E-Kyc (Aadhar)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ  ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಅವರಿಗೆ ಆರೋಗ್ಯ ವಿಜ್ಞಾನದ ಶೈಕ್ಷಣಿಕ ವಲಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.   ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಪ್ರಶಸ್ತಿ ನೀಡಿ ಗೌರವಿಸಿದರು. ಅವರು ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಕಳೆದ 18 ವರ್ಷಗಳಿಂದ ಪ್ರಾಚರ್ಯಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜುಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 51ನೇ ವರ್ಷದ ಸಮಾರಂಭದ ಅಂಗವಾಗಿ ಶ್ರೀ ದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಮತ್ತು ಗ್ರಾಮಾಭಿವೃದ್ಧಿಗೋಸ್ಕರ ಶ್ರೀ ಚಂಡಿಕಾ ಯಾಗ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಮಂಗಳವಾರ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ರಾಜ ಪೂಜಾರಿ ದಂಪತಿ, ಶಿವಾನಂದ ಗಾಣಿಗ ದಂಪತಿ ಹಾಗೂ ರಘುರಾಮ ಪೂಜಾರಿ ದಂಪತಿ ಯಾಗದ ಯಜಮಾನಿಕೆ ವಹಿಸಿದ್ದರು. ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್‌ಆರ್‌ಜಿ., ಕಾರ್ಯದರ್ಶಿ ಎಂ. ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್, ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಭಜಕರು, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸೋಮವಾರಂದು ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಸಂದೇಶಗಳ ಪರಿಚಯಕ್ಕಾಗಿ ’ಗೀತಾ ಸಂದೇಶ ಸಾರ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಬ್ರಾಯ ನಂದೋಡಿ, ಕಾಸರಗೋಡು ಪ್ರಧಾನ ಗುರುಗಳು ಗೀತಾ ಜ್ಞಾನ ಯಜ್ಞ ಸಮಿತಿಯವರು ಮಕ್ಕಳಿಗೆ ಭಗವದ್ಗೀತೆಯ ಬಗ್ಗೆ ತಿಳಿಸುತ್ತಾ, ನಾವು 84 ಲಕ್ಷ ಕೋಟಿ  ಜನ್ಮಗಳನ್ನು ದಾಟಿ ಮನುಷ್ಯ ಜನ್ಮ ಪಡೆದಿದ್ದೇವೆ. ದೇಹವನ್ನು ಶುದ್ಧೀಕರಿಸುವಂತೆ ಸದಾ ಮನಸ್ಸನ್ನು ಶುದ್ಧ ಮಾಡಿಕೊಳ್ಳುತ್ತಿರಬೇಕು. ಇಂದು ನೀವು ಈ ಶಾಲೆಯಲ್ಲಿ ನಿಮ್ಮ ದೈನಂದಿನ ದಿನಚರಿಯನ್ನು ಹೇಗೆ ಪಾಲಿಸುತ್ತಿರೊ ಅದೇ ದಿನಚರಿಯನ್ನು ನಿಮ್ಮ ಮುಂದಿನ ಜೀವನದಲ್ಲೂ ಮುಂದುವರಿಸಿಕೊಳ್ಳಬೇಕು.  ನಾವು ನಮ್ಮ ಬಗ್ಗೆಯಷ್ಟೇ ಮಾತಾಡಬೇಕು. ನಮ್ಮ ಉದ್ಧಾರ ನಮ್ಮ ಪ್ರಯತ್ನದಿಂದಲೇ ಸಾಧ್ಯ. ಪ್ರಾಮಾಣಿಕತೆಯನ್ನು ಬೆಳೆಸಿಕೊಳ್ಳಬೇಕು. ಸುಖ-ದುಃಖವನ್ನು ಸಮಾನವಾಗಿ ಕಾಣಬೇಕು. ಹಿರಿಯನ್ನು ಗೌರವಿಸಿ, ಕಲಿಯುವ ತವಕದಿಂದ ಪ್ರಶ್ನಿಸಬೇಕು. ಆಗಷ್ಟೇ ವಿದ್ಯಾಭ್ಯಾಸ  ಸುಲಲಿತವಾಗಿ ಸಾಗಬಲ್ಲದು ಎನ್ನುತ್ತಾ ಭಗವದ್ಗೀತೆಯ ಅಧ್ಯಯನವನ್ನು ನಿರಂತರ ನಡೆಸಿರೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ವರದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆಯ ದಿನೇಶ್ ಬೋವಿ ಅವರು ʼಪರಿಸರ ಉಳಿಸಿʼ ಎಂಬ ಸಂದೇಶದೊಂದಿಗೆ ಸತತ 11 ತಿಂಗಳ ಕಾಲ ಉಡುಪಿಯಿಂದ ಲಡಾಕ್ ತನಕ 3,300 ಕಿಮೀ ಯಾತ್ರೆಯನ್ನು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದ ದಿನೇಶ್‌, 2025ರ ಸೆ.15ರಂದು ಲಡಾಖ್ ತಲುಪಿ ಸತತ 330 ದಿನಗಳ ಸೈಕಲ್ ಯಾತ್ರೆಯನ್ನು ಸಂಪೂರ್ಣಗೊಳಿಸಿದ್ದಾರೆ. ಕರ್ನಾಟಕದಿಂದ ಆರಂಭಗೊಂಡ ಸೈಕಲ್‌ ಪ್ರಯಾಣ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮೂಲಕವಾಗಿ ಜಮು ಕಾಶ್ಮೀರ ತಲುಪಿದ್ದು 8 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. ಲಡಾಕ್‌ಗೆ 11 ತಿಂಗಳಿಗಿಂತ ಬೇಗ ತಲುಪ ಬಹುದಾಗಿದ್ದರೂ, ಕಾಶ್ಮೀರದ ಥಾಂಗ್ ಗ್ರಾಮದ ರಸ್ತೆ ವರ್ಷದಲ್ಲಿ 6 ತಿಂಗಳು ಮಾತ್ರ ತೆರೆದಿರುತ್ತದೆ. ಹಾಗಾಗಿ 1 ತಿಂಗಳು ಮುಂಬೈಯಲ್ಲಿ ವಿಶ್ರಾಂತಿ ಮಾಡಿದ್ದರೆ, 3 ತಿಂಗಳು ಗುಜರಾತಿನಲ್ಲಿ ತಂಗಿದ್ದರು. 11 ತಿಂಗಳ ಸೈಕಲ್ ಪ್ರಯಾಣದಲ್ಲಿ ಒಟ್ಟು ಸುಮಾರು 1.5 ಲಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ಜ್ಯುವೆಲ್ಲರಿ ಶಾಪ್‌ನಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಂಧಿತ ಆರೋಪಿ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು, ಆತ ನಾಳೆ ಕೊಡುವುದಾಗಿ ಹೇಳಿ ವಂಚಿಸಿದ್ದನು. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ಪ್ರವೀಣ್ ಎಂಬಾತನನ್ನು ಸೆ.29ರಂದು ಬಂಧಿಸಿ, ಕಾರು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025’ ನೃತ್ಯ ಕಾರ್ಯಕ್ರಮ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ನಿರ್ಮಲ ಬಿಲ್ಲವ, ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಕಾಲೇಜಿನ ಉದ್ಯೋಗ ಮಾಹಿತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಐದು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಸ್ಟೀವನ್ ಡಿಕೋಸ್ಟ್‌ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಸಂಸ್ಥೆಯ ಜಾಬೀಸ್, ಪೂಜಿತಾ, ಹಫೀಜ್ ಹಾಗೂ ಸಂತೋಷ್ ತರಬೇತಿ ನೀಡಿದರು. ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಸ್ನಾತಕ ಪದವಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಮನೋಹರ್ ಬಿ. ಹಾಗೂ ಮ್ಯಾಜಿಕ್ ಬಸ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಭಾರ್ಗವ ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮ ನಿರೂಪಿಸಿ, ಸ್ನಾತಕೋತ್ತರ ಪದವಿ ಉದ್ಯೋಗ ಕೋಶದ ಸಂಚಾಲಕ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು. ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ, ಸಂಖ್ಯಾ ಬಂಧ(ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು. ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.…

Read More