ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಉಪ್ಪುಂದ ಶಾಖೆಯಿಂದ ನಬಾರ್ಡ್ ಸಹಯೋಗದೊಂದಿಗೆ ಉಪ್ಪುಂದದ ನಾಡದೋಣಿ ಸಭಾಭವನಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ – ಸಹಕಾರಿ ಸಾಕ್ಷರತಾ ಶಿಬಿರ ಸೋಮವಾರ ಆಯೋಜಿಸಲಾಗಿತ್ತು. ನಬಾರ್ಡ್ ಮಂಗಳೂರಿನ ಡಿಸ್ಟಿಕ್ಟ್ ಡೆಪ್ಯೂಟಿ ಮ್ಯಾನೇಜರ್ ಸಂಗೀತಾ ಕರ್ತಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಿನಿಯರ್ ಬ್ರಾಂಚ್ ಇನ್ಸಪೆಕ್ಟರ್ ರವೀಂದ್ರ ಭಟ್, ಕೇಂದ್ರ ಕಛೇರಿ ಪಿಸಿಬಿ ವಿಭಾಗದ ಸಿ. ಶಂಭುಲಿಂಗ್, ಸಿ. ಸಂದೀಪ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಮಣಿಪಾಲ ಆಸ್ಪತ್ರೆಯ ಡಿಪಾರ್ಟ್ಮೆಂಟ್ ಆಫ್ ನ್ಯೂಟ್ರಿಷನ್ ಅಂಡ್ ಡಯಟಿಕ್ಸ್ ವಿಭಾಗದ ಡಾ. ಅನುಷಾ, ಕೆನರಾ ಬ್ಯಾಂಕ್ ಫೈನಾನ್ಸಿಯಲ್ ಲಿಟರೆಸಿ ಕೌನ್ಸಿಲರ್ ಆಶಾಲತಾ, ಎನರ್ಜಿ ಸೋಲಾರ್‌ನ ಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಆರ್ಥಿಕ ಸಾಕ್ಷರತೆ ಬಗ್ಗೆ ಆಶಾಲತಾ ಮಾಹಿತಿ ನೀಡಿದರು. ಆರೋಗ್ಯಪೂರ್ಣ ಆಹಾರ ಕ್ರಮದ ಬಗ್ಗೆ ಡಾ. ಅನುಷಾ ಮತ್ತು ವಿದ್ಯಾರ್ಥಿಗಳು ಮಾಹಿತಿ ನೀಡಿದರು. ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ ಎಕ್ಕಾರು, ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು. ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಿ. ಎ. ಮತ್ತು ಸಿ. ಎಸ್. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಶಿಕ್ಷಾಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಇದರ ಸಹ ಸಂಸ್ಥಾಪಕರಾದ ಪ್ರತಾಪ ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸಿ. ಎ. ಸ್ವಸ್ಥಿಕ್, ಸಿ. ಎ. ವೖಷ್ಣವಿ ಮತ್ತು ಸಿ. ಎ. ಭರತೇಶ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಿ. ಎ. ಸ್ವಸ್ತಿಕ್ ಮತ್ತು ಸಿ. ಎ. ವೖಷ್ಣವಿ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಅರುಣ್ ಎ. ಎಸ್., ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ, ಕಾರ್ಯಕ್ರಮದ ಉಪನ್ಯಾಸಕ ಸಂಯೋಜಕರಾದ ಸುಮಾ ಮತ್ತು ರಿತಿನ್. ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಭೂಮಿಕಾ ಕಾರ್ಯಕ್ರಮ ನಿರೂಪಿಸಿ, ದ್ರುವ ಸ್ವಾಗತಿಸಿ, ಸುಜನ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ವೈದ್ಯಕೀಯ ವಿಭಾಗ, ಮಾಹೆ ಮಣಿಪಾಲ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಶ್ರೀ ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ, ದೈವಜ್ಞ ಬ್ರಾಹ್ಮಣರ ಸಂಘ, ಶ್ರೀ ವೀರ ವಿಠಲ ದೇವಸ್ಥಾನ ಗಂಗೊಳ್ಳಿ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಶಿಬಿರವನ್ನು ಉದ್ಘಾಟಿಸಿದರು. ಕೆಎಂಸಿ ಮಣಿಪಾಲದ ವೈದ್ಯಾಧಿಕಾರಿ ಡಾ. ಸಾಚಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಶಂಕರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೈಸೂರಿನ ದಸರಾ ಕಾರ್ಯಕ್ರಮದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್ ಬಿ. ಪೂಜಾರಿ ಭಾಗವಹಿಸಿ 90.ಕೆಜಿ ಬಲ ಕೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರ ಮೂಲಕ ಸತತ 4 ವರ್ಷ ಚಿನ್ನದ ಪದಕ ಮೂಡಿಗೆರಿಸಿಕೊಂಡಿದ್ದಾರೆ. ಅವರು ಅಂತಾಷ್ಟ್ರೀಯ ಕ್ರೀಡಾ ಸ್ಪರ್ಧಿಯಾಗಿ ಭಾಗವಹಿಸಿ ಹಲವು ಪದಕಗಳನ್ನು ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ “ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ” ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಇತ್ತೀಚಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಸಿಬ್ಬಂದಿಗಳು ಉದ್ಯೋಗ ಸಂಬಂಧಿತ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ, ವೈಯಕ್ತಿಕ ಮತ್ತು ವೃತ್ತಿಜೀವನದ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿತ್ತು.ಕಾರ್ಯಕ್ರಮಕ್ಕೆ ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ಉದ್ಯೋಗ ಸ್ಥಳದಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಾಯೋಗಿಕ ವಿಧಾನಗಳು ಮತ್ತು ಕೆಲಸ-ಜೀವನ ಸಮತೋಲನ ಸಾಧಿಸುವ ತಂತ್ರಗಳನ್ನು ಕುರಿತು ಬೆಳಕು ಚೆಲ್ಲಿದರು. ಸ್ವಯಂ ಆರೈಕೆ, ಸಮಯ ನಿರ್ವಹಣೆ ಮತ್ತು ಸಕಾರಾತ್ಮಕ ಕೆಲಸದ ವಾತಾವರಣದ ಮಹತ್ವವನ್ನು ಅವರು ಒತ್ತಿ ಹೇಳಿದರು. ಇದೇ ಸಂದರ್ಭದಲ್ಲಿ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್, ಉಪಪ್ರಾಂಶುಪಾಲರಾದ ರೂಪಶ್ರೀ ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಇಲ್ಲಿನ ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ. ಆಕೆಯಿಂದ ಕಳವುಗೈದ 2.5 ಲಕ್ಷ ರೂ. ಮೌಲ್ಯದ ಹವಳದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಸೆಪ್ಟೆಂಬರ್ 26ರಂದು ರಾತ್ರಿ 8:50ರಿಂದ 9:15ರ ನಡುವೆ ದೇವಿಪ್ರಿಯಾ ಎಂಬ ಭಕ್ತೆಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು 3 ಪವನ್ ಹವಳದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ್ದರು. ಇದರ ಮೌಲ್ಯ ಅಂದಾಜು ರೂ.2.5 ಲಕ್ಷ ಎಂದು ದೂರಿನಲ್ಲಿ ಹೇಳಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ನೀಲೇಶ್ ಚೌಹಾಣ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣಾ ಉಪನಿರೀಕ್ಷಕ ವಿನಯ್ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪರಿಸರ ಉಳಿಸಿ ಎಂಬ ಸಂದೇಶದೊಂದಿಗೆ ಉಡುಪಿಯಿಂದ ಲಡಾಖ್‌ವರೆಗೆ 3,300 ಕಿಮೀ ಯಾತ್ರೆಯನ್ನು ಸತತ 11 ತಿಂಗಳು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ ತಾಲೂಕಿನ ಕಮಲಶಿಲೆ ಹಳ್ಳೀಹೊಳೆ ಸಮೀಪದ ಪಾರ್ವತಿ ಮತ್ತು ಶೇಷು ಬೋವಿ ದಂಪತಿಯ ಪುತ್ರ ದಿನೇಶ್ ಬೋವಿ ಇದೀಗ ಹುಟ್ಟೂರಿಗೆ ಮರಳಿದ್ದಾರೆ. ಅಪ್ರತಿಮ ಸಾಧನೆ ತೋರಿ ಊರಿಗೆ ಮರಳಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ದಿನೇಶ್ ಅವರಿಗೆ ಶನಿವಾರ ಕಾಲೇಜಿನ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ವೇಳೆ ಮಲ್ಪೆ ಪೊಲೀಸ್ ಠಾಣೆಯ ಎಸ್ಸೈ ಅನಿಲ್ ಕುಮಾರ್, ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಜಯರಾಮ ಶೆಟ್ಟಿಗಾರ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಆಲನ್ ಲೂವಿಸ್, ಶೇಖರ ಗುಜ್ಜರಬೆಟ್ಟು, ಶಾಲೆಟ್ ಮಥಾಯಸ್, ಶಿಕ್ಷಕ ರಕ್ಷಕ ಸಂಘದ ಗಣೇಶ್ ಮೇಸ್ತ ಹಾಗೂ ಇತರರು ಉಪಸ್ಥಿತರಿದ್ದರು. ಅವರು 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದು 2025ರ ಸೆ.15ರಂದು ಲಡಾಖ್ ತಲುಪುವುದರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ 3 ದಿನಗಳ ಮೈಸೂರು ವಿಭಾಗ ಮಟ್ಟದ ಅಂಡರ್ 14/17 ಬಾಲಕ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಅಂಡರ್ 17 ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕೊಡಗು ಮತ್ತು ಉಡುಪಿ ಇವುಗಳ ನಡುವಿನ ನಡೆದ ಹಣಾಹಣಿ ಪಂದ್ಯಾಟದಲ್ಲಿ ಉಡುಪಿ ಬಾಲಕಿಯರ ತಂಡ ವಿಜಯ ಸಾಧಿಸಿತು. ಅಂಡರ್ 17 ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ವರ್ಸಸ್ ಉಡುಪಿ ಇವುಗಳ ನಡುವಿನ ನಡೆದ ರೋಚಕ ಪಂದ್ಯಾಟದಲ್ಲಿ ಉಡುಪಿ ತಂಡವು ವಿಜಯ ಸಾಧಿಸಿತು. ಅಂಡರ್ 14 ಬಾಲಕರ ವಿಭಾಗದಲ್ಲಿ ಹಾಸನ ವರ್ಸಸ್ ಮೈಸೂರು ಇವುಗಳ ನಡುವೆ ನಡೆದ ರೋಚಕವಾದ ಪಂದ್ಯಾಟದಲ್ಲಿ ಮೈಸೂರು ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
