ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ. 16 ಸಿ, ಮೌಲಾನಾ ಅಬುಲ್ ಕಲಾಂ ಆಜಾದ್ ಭವನ, ವಸಂತನಗರ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾಥ್‌ಸೆಂಟರ್ ಪುಣೆ, ಮಹಾರಾಷ್ಟ್ರ ಇವರಿಂದ ಆಯೋಜಿಸಲ್ಪಟ್ಟ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಇಲ್ಲಿನ ಮದರ್ ತೆರೇಸಾ ಶಾಲೆಯ ಮೂರನೇ ತರಗತಿಯ ಹೆಮ್ಮೆಯ ವಿದ್ಯಾರ್ಥಿ ಪ್ರಿಯಾಂಶ್ ಶಂಕರ್ ನಾಯ್ಕ್ ಗೆ ಚಿನ್ನದ ಪದಕ ಲಭಿಸಿದೆ. ಈ ಪ್ರತಿಭಾನ್ವಿತ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಆತನ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷಿನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ. 50 ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಸಹಾಯಧನ ಪಡೆಯಲು ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್ ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ. ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೀವ್ರ ಬೆಳೆ ನಷ್ಟದಿಂದ ಬಳಲುತ್ತಿರುವ ಕರ್ನಾಟಕದ ಅಡಿಕೆ ಬೆಳೆಗಾರರಿಗೆ, ಅದರಲ್ಲೂ ವಿಶೇಷವಾಗಿ, ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರ ನೆರವಿಗಾಗಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಲೋಕಸಭೆಯಲ್ಲಿ ಒತ್ತಾಯಿಸಿದರು. ಲೋಕಸಭಾ ಕಲಾಪದಲ್ಲಿ ಶೂನ್ಯ ವೇಳೆ ಪ್ರಸ್ತಾವದ ಮೂಲಕ ವಿಷಯ ಪ್ರಸ್ತಾಪಿಸಿದ ಸಂಸದ ರಾಘವೇಂದ್ರ, ವಿಶೇಷವಾಗಿ ಕರ್ನಾಟಕದ, ಅದರಲ್ಲೂ ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರು, ಹಳದಿ ಎಲೆ ರೋಗ (YLD) ಮತ್ತು ಎಲೆ ಚುಕ್ಕೆ ರೋಗ (LSD) ಹರಡುವಿಕೆಯಿಂದ ಭಾರಿ ಇಳುವರಿ ನಷ್ಟವನ್ನು ಎದುರಿಸುತ್ತಿದ್ದಾರೆ, ಈ ರೋಗಗಳು ಇಡೀ ತೋಟವನ್ನೇ ನಾಶಮಾಡುತ್ತಿವೆ. ಈ ವರ್ಷದ ಮೇ ತಿಂಗಳಿನಿಂದ ನಿರಂತರ ಮಳೆಯಿಂದಾಗಿ ಹೆಚ್ಚಿರುವ ಈ ರೋಗದ ಪರಿಣಾಮದಿಂದಾಗಿ, ಅಡಿಕೆ ಬೆಳೆ ಬಹುತೇಕ ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಅಡಿಕೆ ಉತ್ಪಾದನೆ ತೀವ್ರವಾಗಿ ಕುಸಿದಿದ್ದು, ತಮ್ಮ ಕ್ಷೇತ್ರದ ರೈತರ ಆರ್ಥಿಕ ಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯು ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿ ದ್ದು, ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತ್ತಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಯೋಜಿಸುತ್ತಾ ಬರಲಾಗುತ್ತಿದೆ. ಇದೇ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯನ್ನು ಆಯೋಜಿಸಿದೆ. ಬೈಂದೂರು ಯಡ್ತರೆಯ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ವೇದಿಕೆಯಲ್ಲಿ ಪ್ರತಿದಿನ ಸಂಜೆ 07:00ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ. ಡಿಸೆಂಬರ್ 14ರ ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ “ಚಾಮಚೆಲುವೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಸುಜಾತ ಅಕ್ಕಿ, ನಿರ್ದೇಶನ ವಿಕಾಸ್ ಚಂದ್ರ, ಡಿಸೆಂಬರ್ 15ರ ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ “ನನ… ನನಮ್ ರಸ್ತೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಗಜಾನನ ಶರ್ಮಾ ಬೆಂಗಳೂರು, ನಿರ್ದೇಶಕ ಬಿ.ಆರ್. ರೇಣುಕಪ್ಪ, ಡಿಸೆಂಬರ್ 16ರ ಮಂಗಳವಾರ ಸುಮನಸ ಕೊಡವೂರು ಉಡುಪಿ ಪ್ರಸ್ತುತಿಯ ನಾಟಕ “ಈದಿ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಸಮೀರ್ ಪೇನ್ಕರ್ ಮುಂಬೈ, ಕನ್ನಡಕ್ಕೆ: ಜಯಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇವರ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ವಿಭಾಗೀಯ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ನಳಿನಾಕ್ಷೀ ಎಂ. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಎಚ್.ಐ.ವಿ ಸೋಂಕು ಪ್ರಸ್ತುತ ಗುಣಪಡಿಸಲಾಗದ ಕಾರಣ ಏಡ್ಸ್ ಜಾಗೃತಿ ದಿನದ ಅವಶ್ಯಕತೆ ಇದ್ದು ಎಚ್.ಐ.ವಿ ಸೋಂಕಿತರನ್ನು ಸಮಾನವಾಗಿ ಕಾಣುವ ಮೂಲಕ ಸ್ವಾಸ್ತ್ಯ ಆರೋಗ್ಯಯುತ ಸಮಾಜನ್ನು ನಿರ್ಮಾಣ ಮಾಡುವುದರಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಎಚ್.ಐ.ವಿ ಏಡ್ಸ್ ಹರಡುವಿಕೆ, ತಡೆಗಟ್ಟುವಿಕೆ ಮತ್ತು ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿ, ವಿದ್ಯಾರ್ಥಿನಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಮನವಿ ಕೆ. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು https://sevasindhu.karnataka.gov.in/sevasindhu/departmentservice ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 31ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಘರ್ಷ, ಮನಸ್ತಾಪ, ಕೋಪ, ದ್ವೇಷ ಇವೆಲ್ಲವನ್ನು ಬದುಕಿನಿಂದ ದೂರವಿಟ್ಟು ಪ್ರೀತಿ, ಸೌಹಾರ್ದ, ಸಹಾಯ, ಕಾರುಣ್ಯ ಮತ್ತು ಹಸನ್ಮುಖದಿಂದ ನಡೆಸುವ ಬದುಕು ಸಾರ್ಥಕ ಬದುಕೆಂದು ಕರೆಯಲ್ಪಡುತ್ತದೆ. ಬಾಳಿನಲ್ಲಿ ಕಷ್ಟ-ಕಾರ್ಪಣ್ಯ, ನೋವು-ನಲಿವು, ಆಸೆ-ನಿರಾಸೆ, ಸುಖಃ-ದುಃಖ ಮುಂತಾದ ಏಳು-ಬೀಳುಗಳ ನಡುವೆ ಆಹ್ಲಾದದಿಂದ, ನಾವೆಲ್ಲರೂ ಬದುಕಬೇಕು ಎಂಬೆಲ್ಲಾ ಮೌಲ್ಯಗಳನ್ನು ಸಾಹಿತ್ಯ ಲೋಖದ ಧ್ರುವ ತಾರೆ ಎಸ್.ಎಲ್ ಬೈರಪ್ಪರವರ ಎಲ್ಲಾ ಕೃತಿಗಳಲ್ಲೂ ಹಾಸುಹೊಕ್ಕಾಗಿತ್ತೆಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಹರೀಶ್ ಟಿ.ಜಿ. ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಐಕ್ಯೂಎಸಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಎಸ್.ಎಲ್. ಭೈರಪ್ಪನವರಿಗೆ ನುಡಿ-ನಮನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಈ ನುಡಿಗಳನ್ನಾಡಿದರು ಎಸ್.ಎಲ್. ಭೈರಪ್ಪನವರು ತಮ್ಮ ಆತ್ಮ ವೃತ್ತಾಂತ, ಸಾಹಿತ್ಯ, ಚಿಂತನೆ, ಗ್ರಾಮೀಣ ಸಂಸ್ಕೃತಿ ಮುಂತಾದ ಚಿಂತನಾಶೀಲ ಕೃತಿಗಳಿಂದ ಭಾರತೀಯ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ:8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
