Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ ಆಶ್ರಯದಲ್ಲಿ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 35ನೇ ಸಂಸ್ಥಾಪನಾ ದಿನಾಚರಣೆ ಮತ್ತು ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಕಾರ್ಯಕ್ರಮವು ನವಂಬರ್ 4ರಂದು ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 6.30ರಿಂದ ಕನ್ನಡ ಗ್ರಾಮದಲ್ಲಿ ಸುಪ್ರಭಾತ ಗಾಯನ, ಬೆಳಗ್ಗೆ 10.00ಕ್ಕೆ ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ರಾಷ್ಟ್ರ ಧ್ವಜಾರೋಹಣ ಗೈಯಲಿದ್ದಾರೆ. ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಾರಾಧನೆ ಗೈಯುವರು. 10.30ಕ್ಕೆ ಡಾ| ಕನ್ಯಾನ ಸದಾಶಿವ ಶೆಟ್ಟಿ, ಸೇವಾ ಬಳಗ ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ, ಚಾರ್ಲ ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಅನಾವರಣಗೊಳಿಸುವರು. 11.00ಕ್ಕೆ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸಲಿರುವರು. ಅಖಿಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ  ಕುಂದಾಪುರ ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟ ಗುರುವಾರದಂದು ನಡೆಯಿತು. ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕರ ಗುಂಡು ಎಸೆತ ಮತ್ತು ಜಾವೆಲಿನ್ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಪ್ರಥಮ ಸ್ಥಾನ ಗಳಿಸಿ ಎರಡು ಚಿನ್ನದ ಪದಕದೊಂದಿಗೆ ಉಡುಪಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾನೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಮತ್ತು ಕಾವ್ಯ ಶೆಟ್ಟಿ ತಂಡ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮದ ದೀಪಿಕಾ ಶ್ಯಾನುಭಾಗ್ ಯು. ಅವರು ಮಂಡಿಸಿದ ’ಇನ್ವೆಸ್ಟಿಗೇಶನ್ ಆಫ್ ಥರ್ಮೋಎಲೆಕ್ಟ್ರಿಕ್ ಪರ್ಫೋರ್ಮೆನ್ಸ್ ಆಫ್ ರೇರ್ ಅರ್ತ್ ಆಂಡ್ ಚಾಲ್ಕೋಜಿನೈಡ್ ಬೇಸ್ಡ್ ಸಿಸ್ಟಮ್ಸ್’ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಪಿಎಚ್‌ಡಿ ಪದವಿ ನೀಡಿದ್ದಾರೆ. ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲೋಜಿ ಮಾಹೆ ಮಣಿಪಾಲದ ಭೌತಶಾಸ್ತ್ರ ವಿಭಾಗದ ಸೀನಿಯರ್ ಪ್ರೊಫೆಸರ್ ಡಾ. ಅಶೋಕ್ ರಾವ್ ಅವರಿಗೆ ಮಾರ್ಗದರ್ಶನ ನೀಡಿದ್ದರು. ಅವರು ಗಂಗೊಳ್ಳಿಯ ಯು. ಪುಂಡಲೀಕ ಶ್ಯಾನುಭಾಗ್ ಮತ್ತು ಉಷಾ ಪಿ. ಶ್ಯಾನುಭಾಗ್ ದಂಪತಿ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಪ್ರಧಾನ ಕಛೇರಿಗೆ ತಮಿಳುನಾಡು ರಾಜ್ಯದ ಇಲಾಖಾ 25 ಲೆಕ್ಕಪರಿಶೋಧಕರ ಅಧ್ಯಯನ ತಂಡವು ಗುರುವಾರ ಭೇಟಿ ನೀಡಿದರು. ಸಂಘದ ವ್ಯವಹಾರ ಚಟುವಟಿಕೆಗಳ ವೈವಿದ್ದೀಕರಣ, ಕ್ರೆಡಿಟ್ ಮೊನಿಟರಿಂಗ್, ಕೃಷಿ ಸಾಲ, ವ್ಯವಹಾರಿಕ ಸಾಲ, ಸದಸ್ಯರೊಂದಿಗಿರುವ ವ್ಯವಹಾರಿಕ ವಿನಿಮಯ ಇನ್ನಿತರ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಸಂಘದ ಮುಂದಿನ ಯೋಜನೆಗಳ ಕಾರ್ಯವೈಕರಿಗಳ ಮಾಹಿತಿ ಪಡೆದುಕೊಂಡರು. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಸಂಘವು ಸಾವಿರ ಕೋಟಿಗೂ ಮಿಕ್ಕಿ ವಹಿವಾಟು ನಡೆಸುತ್ತಿದ್ದು ಸಂಘದ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಉತ್ತಮ ರೀತಿಯ ಸೇವೆಯನ್ನು ನೀಡುತ್ತಾ ಬಂದಿದೆ. ಸಂಘವು ಆರ್ಥಿಕ ವಹಿವಾಟಿನ ಜೊತೆಗೆ ರೈತರಿಗೆ ಬಲತುಂಬುವ ನಿಟ್ಟಿನಲ್ಲಿ ಹಾಗೂ ಯುವ ರೈತರನ್ನು ಹುಟ್ಟುಹಾಕುವ ನೆಲೆಯಲ್ಲಿ ಅವರ ಅಪೇಕ್ಷೆಯಂತೆ ಮಾಹಿತಿ ಕಾರ್ಯಗಾರ, ಪ್ರಾತ್ಯಕ್ಷಿತೆ, ಕೃಷಿ ಪೂರಕ ಉತ್ಪನ್ನಗಳು ಹಾಗೂ ಸಲಕರಣೆಗಳ ಒದಗಿಸುವಿಕೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಂಘದ ಸದಸ್ಯರಿಗೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ಗೋಪಾಡಿಯ ಶ್ರೀರಾಮ ಗ್ರಾನೈಟ್ ಬಳಿಯ ರಸ್ತೆಯಲ್ಲಿ ಸೈಕಲ್‌ಗೆ ಸ್ಕೂಟರ್ ಢಿಕ್ಕಿಯಾಗಿ ಸೈಕಲ್ ಸವಾರ ಬಾಬು ಹಾಗೂ ಸ್ಕೂಟರ್ ಸವಾರ ಕಾರ್ತಿಕ್ ಗಾಯಗೊಂಡ ಘಟನೆ ಇತ್ತೀಚಿಗೆ ಸಂಭವಿಸಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ, ಬಳಿಕ ಸೈಕಲ್ ಸವಾರ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ಲೇಸ್ಟೋರ್ ನಿಂದ ಯಾವುದೇ ಆ್ಯಪ್ ಡೌನ್ಲೋಡ್ ಮಾಡುವಾಗ  ವೈಯುಕ್ತಿಕ ಮಾಹಿತಿ ಮತ್ತು ಪಾಸ್ ವರ್ಡ್ ನೀಡುವಲ್ಲಿ ನಾವು ಜಾಗರೂಕರಾಗಿರಬೇಕು. ಸಾಮಾಜಿಕ ಜಾಲತಾಣಗಳ ಸ್ನೇಹ ಸಂಪರ್ಕಗಳ ಬಗ್ಗೆ ಎಚ್ಚರವಹಿಸಿ ಸೈಬರ್ ಮೋಸಜಾಲಕ್ಕೆ ಬಲಿಪಶುಗಳಾಗದಂತೆ  ನೋಡಿಕೊಳ್ಳಬೇಕು ಎಂದು ಕುಂದಾಪುರ ಟೌನ್ ಪೊಲೀಸ್ ಸ್ಟೇಶನ್ ಠಾಣಾಧಿಕಾರಿ ನಂಜಾ ನಾಯ್ಕ ಕರೆ ನೀಡಿದರು. ಅವರು ಇಲ್ಲಿನ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಸೈಬರ್ ಕ್ರೈಮ್ ತಡೆಗಟ್ಟುವಿಕೆ ವಿಷಯಾಧಾರಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರಾಗ ತರಂಗ ಮಂಗಳೂರು, ಭಾರತೀಯ ವಿದ್ಯಾ ಭವನ ಮಂಗಳೂರು ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ನಡೆಸಿದ ’ಬಾಲಪ್ರತಿಭಾ ಅನ್ವೇಷಣೆ -2025’ ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿಂದುಸ್ತಾನಿ ವಾದ್ಯ ಸಂಗೀತ (ಕೊಳಲು) ದಲ್ಲಿ ಗಂಗೊಳ್ಳಿಯ ಎಸ್. ವಿ. ಇಂಗ್ಲೀಷ್ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಹಾಗೂ ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಗಳಿಸಿ ಗುಲಾಬಿ ಶಿವರಾಮ ನೊಂಡ ಪರ್ಯಾಯ ಪಾರಿತೋಷಕವನ್ನು ಪಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತಾಯ, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಕಶ್ವಿ ಚೆಸ್ ಸ್ಕೂಲ್‌ನ ಆಡಳಿತ ನಿರ್ದೇಶಕ ನರೇಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಪ್ರತಿ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ. ಆದರೆ ಇಂದಿನ ಜೀವನ ಶೈಲಿಯಲ್ಲಿ ನಾವು ಇಂದ್ರಿಯ ಉಪಕಾರವನ್ನು ಮರೆತು, ಅವುಗಳಿಗೆ ಹಿತವಲ್ಲದ ವಿಷಯಗಳಲ್ಲಿ ತೊಡಗಿಕೊಂಡಿದ್ದೇವೆ. ಕಣ್ಣು ಸೌಂದರ್ಯವನ್ನು, ಕಿವಿ ಸುಶ್ರಾವ್ಯತೆಯನ್ನು, ನಾಸಿಕ ಸುವಾಸನೆಯನ್ನು, ನಾಲಿಗೆ ರುಚಿಯನ್ನು ಹಾಗೂ ತ್ವಚೆ ಕೋಮಲತೆಯನ್ನು ಬಯಸುತ್ತದೆ. ಈ ಪಂಚೇಂದ್ರಿಯಗಳ ಪ್ರಜ್ಞಾಪೂರ್ವಕ ಸಂತೃಪ್ತಿಯ ಮೂಲಕ ಸಮಗ್ರ ಆರೋಗ್ಯವನ್ನು ಪಡೆಯಬಹುದು ಎಂದು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಹೇಳಿದರು. ಅವರು ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ‘ಪ್ರಾಣ’ ಪ್ರಕೃತಿ ಚಿಕಿತ್ಸಾ ಸ್ಪಾ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಭೂತಗಳ ಸಮನ್ವಯ ಹಾಗೂ ಇಂದ್ರಿಯಗಳ ಸಾತ್ವಿಕ ಶಾಂತಿ ದೈಹಿಕ ವಿಶ್ರಾಂತಿಯ ಜೊತೆಗೆ ಮಾನಸಿಕ ಸ್ಥಿತಪ್ರಜ್ಞೆಗೂ ದಾರಿ ಮಾಡುತ್ತದೆ. ಈ ಕೇಂದ್ರದ ಮೂಲಕ ಸಮೃದ್ಧ ಸಮುದಾಯದ ಆರೋಗ್ಯದ ಬೆಳವಣಿಗೆ ಸಾಧ್ಯವಾಗಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ 2025ಕ್ಕೆ ಸಂಬಂಧಿಸಿದಂತೆ ಭಾವಚಿತ್ರವಿಲ್ಲದ 20 ವಾರ್ಡಿನ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಕಛೇರಿಯಲ್ಲಿ, ಬೈಂದೂರು ತಾಲೂಕು ಕಛೇರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಕಛೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧೀಕೃತ ವೆಬ್‌ಸೈಟ್ https://udupi.nic.in/en/ ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 6ರ ಒಳಗಾಗಿ ಬೈಂದೂರು ತಾಲೂಕು ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More