ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ‘ಸುರಭಿ ಸಂಸ್ಥೆ ಮಕ್ಕಳಿಗೆ` ಕಲಾ ಶಿಕ್ಷಣ ನೀಡುವುದರ ಮೂಲಕ ಸಮಾಜಕ್ಕೂ ಕಲಾ ಸೇವೆ ನೀಡುತ್ತಿದೆ. ಇದಕ್ಕೆ ಪ್ರತಿಫಲವಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ವಿಷಯ’ ಎಂದು ವಿಜಯ -ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ವಸಂತ ಹೆಗ್ಡೆ ಹೇಳಿದರು. ಅವರು ಇಲ್ಲಿನ ಸೇನೇಶ್ವರ ದೇವಾಲಯದ ವೇದಿಕೆಯಲ್ಲಿ ಕನ್ನಡ ಶಾರದಾ- ರಾಜ್ಯೋತ್ಸವ ಅಂಗವಾಗಿ ನಡೆದ ಕನ್ನಡ ನುಡಿ ಹಬ್ಬ, ರಾಜ್ಯಮಟ್ಟದ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಕಥಾ ಸ್ಪರ್ಧೆಯಲ್ಲಿ ರಂಜಿನಿ ಅಡಿಗ, ಕುಮಾರಸ್ವಾಮಿ ಲೇಔಟ್ ಬೆಂಗಳೂರು ಸುರಭಿ ಸಂಸ್ಥೆಗೆ ದೊರೆತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ವಸಂತ ಹೆಗ್ಡೆ ಅನಾವರಣಗೊಳಿಸಿದರು. ಅವರ ‘ಮುಸಾಫಿರ್ ಹೂಂ ಯಾರೋಂ’ ಕಥೆ ಪ್ರಥಮ, ಸದಾಶಿವ ಸೊರಟೂರು ಹೊನ್ನಾಳಿ, ದಾವಣಗೆರೆ ಅವರ ‘ಬ್ಲಾಕ್ ಅಂಡ್ ವೈಟ್’ ದ್ವಿತೀಯ, ಲಕ್ಷ್ಮಣ ಶೆರೆಗಾರ ಗೋಕಾಕ್ ಬೆಳಗಾವಿ ಅವರ ‘ಬಿಡುಗಡೆ’ ತೃತೀಯ ಬಹುಮಾನ ಪಡೆದರು. ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಸ್ತುತ ದಿನಗಳಲ್ಲಿ ಮೊಬೈಲ್ ಗೀಳಿನಿಂದ ಮಕ್ಕಳು ಹೊರಬರಬೇಕು ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ಅನಂತ ಪದ್ಮನಾಭ ಐತಾಳ್ ಹೇಳಿದರು. ಅವರು ಮಂಗಳವಾರ ನ್ಯೂ ಕಾರ್ಕಡ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ರಹ್ಮಾವರ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಹಭಾಗಿತ್ವದಲ್ಲಿ, 2025-26 ಕಾರ್ಕಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವಿಕೆ ಬಹುಮುಖ್ಯವಾಗಿದೆ, ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪ್ರತಿಭೆ ಅನಾವರಣಗೊಳ್ಳುವ ವೇದಿಕೆಯಾಗಿದೆ ಎಂದರಲ್ಲದೆ ಗುರು ಹಿರಿಯರ ಬಗ್ಗೆ ಭಯದ ನೆರಳಲ್ಲಿ ಬದುಕಿದ ಅನುಭವಗಳನ್ನು ಹಂಚಿಕೊಂಡ ಅವರು ಸ್ಪರ್ಧೆಯಲ್ಲಿ ಭಾಗವಹಿಸುವಿಕೆಯ ಮೂಲಕ ತಮ್ಮಲ್ಲಿರುವ ವಿವಿಧ ಸಾರ್ಮಥ್ಯವನ್ನು ತೊರ್ಪಡಿಸಿ ಎಂದು ಕರೆಕೊಟ್ಟರು. ಕಾರ್ಯಕ್ರಮದಲ್ಲಿ ಮಕ್ಕಳು ರಚಿಸಿದ ಚಿಟ್ಟೆಯನ್ನು ವೇದಿಕೆಯಲ್ಲಿದ್ದ ಗಣ್ಯರು ಅನಾವರಣಗೊಳಿಸಿದರು. ಸಭೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 104ನೇ ಶ್ರೀರಾಮ ಭಜನಾ ಸಂಕೀರ್ತನಾ ಸಪ್ತಾಹವು ಮಂಗಳವಾರದಂದು ಬೆಳಿಗ್ಗೆ ಆರಂಭಗೊಂಡಿತು. ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ದೀಪ ಬೆಳಗಿಸಿ ಸಪ್ತಾಹಕ್ಕೆ ಚಾಲನೆ ನೀಡಿದರು. ಜತೆ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು, ಭಜನಾ ಮಂಡಳಿಯವರು, ಅರ್ಚಕ ವೃಂದದವರು ಪಾಲ್ಗೊಂಡಿದ್ದರು. ಡಿಸೆಂಬರ್ 2ರ ತನಕ ಸಪ್ತಾಹ ನಡೆಯಲಿದ್ದು, ಊರ, ಪರವೂರ ಸಂತ ಮಂಡಳಿಯವರು ಏಳು ದಿನ ಹಗಲು ರಾತ್ರಿ ನಡೆಯುವ ಭಜನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2025 ನವೆಂಬರ್‌ನಲ್ಲಿ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ವರ್ಷಾ ಕೋಟ್ಯಾನ್, ರ್ಯಾನ್ ಮಾಸ್ಕರೇನ್ಹಸ್, ಸುಪ್ರೀತಾ ಎಂ. ಕೆ., ಸಿಂಚನಾ, ವೀಕ್ಷಾ, ಮನೀಷಾ, ರಿಯಾ ಅಂಜುಮ್, ಸಿ. ಜ್ನಾನಿಕಾ ಶೆಟ್ಟಿ, ವೈಷ್ಣವಿ ರಾಜೇಶ್ ರೇನಕೆ ಹಾಗೂ ಅಭಿಷ್ ಆಚಾರ್ಯ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಆಳ್ವಾಸ್ ಕಾಲೇಜು 77% ದಷ್ಟು ಫಲಿತಾಂಶ ದಾಖಲಿಸಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕರಾದ ಅಶೋಕ ಕೆ.ಜಿ ಹಾಗೂ ಸಿ.ಎಸ್. ಸಂಯೋಜಕರಾದ ದೀಕ್ಷಾ ಅಸ್ರಣ್ಣ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ದೂ.ಸಂಖ್ಯೆ: 0820-2574882 ಅಥವಾ ನಿಗಮ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜನರು ನಮ್ಮ ಬಗ್ಗೆ ಅನವಶ್ಯಕವಾಗಿ ಮಾಡುವ ಟೀಕೆಗಳು ಶಾಶ್ವತವಲ್ಲ ಅವುಗಳು ಇಂದು ಹುಟ್ಟಿ ನಾಳೆ ಸಾಯುತ್ತವೆ. ಆದರೆ ಜನರಿಗಾಗಿ ನಾವು ಮಾಡುವ ಒಳ್ಳೆ ಕೆಲಸಗಳಿಗೆ ಅಳಿವಿಲ್ಲ. ಅದು ಶಾಶ್ವತವಾಗಿ ನಮಗೆ ಒಳ್ಳೆ ಹೆಸರು ತರುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಎಸ್‌ಡಿಎಂ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧಕ ಕೇಂದ್ರ ಕುತ್ಪಾಡಿ ಇವರ ಸಹಯೋಗದೊಂದಿಗೆ ಎಸ್.ಡಿ.ಎಂ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರಿಂದ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ಆರೋಗ್ಯ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಾಮಾಜಿಕ ಕಾಳಜಿಯ ಕಾರ್ಯಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಅವರ ಕನಸುಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ನೇತೃತ್ವದಲ್ಲಿ ಕೊಡಮಾಡುವ 2025ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಸುರಭಿ ಬೈಂದೂರು ಇದರ ಬಾಲ ಕಲಾವಿದೆ, ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಪಾ ದಿನೇಶ ಕುಂದರ್ ಆಯ್ಕೆಯಾಗಿದ್ದಾರೆ. ಈಕೆ ಸ್ವಾತಿ ಮತ್ತು ದಿನೇಶ ಕುಂದರ್ ಅವರ ಪುತ್ರಿ. ಅವರು ಯಕ್ಷಗಾನ, ರ೦ಗಭೂಮಿಯಲ್ಲಿ ಅಭ್ಯಾಸ ಮಾಡುತ್ತಾ, ವಿವಿಧೆಡೆ ಪ್ರದರ್ಶನವನ್ನು ನೀಡಿದ್ದಾರೆ. ಯಕ್ಷಗಾನ ಹೆಜ್ಜೆ ಅಭ್ಯಾಸ ಮಾಡುತ್ತಿರುವ ದೀಪ್ತಾ ಹಲವಾರು ವೇದಿಕೆಗಳಲ್ಲಿ ಯಕ್ಷಗಾನ ನೃತ್ಯ ಪ್ರದರ್ಶನ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್ ಅವರ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ರಾಜ್ಯ ಎರಡನೇ ಬಿಎಸ್‌ಸಿ ಟ್ರೋಫಿಯ ಸಮಾರೋಪ ಸಮಾರಂಭವು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ಶೆಟ್ಟಿ, ಇವರುಗಳು ಉಪಸ್ಥಿತರಿದ್ದು, ವಿಜೇತರಿಗೆ ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ಟ್ರಾಫಿಗಳನ್ನು ನೀಡಿ ಶುಭಕೋರಿದರು ಹಾಗೂ ಬ್ರಹ್ಮಾವರ ಸ್ಫೋರ್ಟ್ಸ್ ಕ್ಲಬ್ಬಿನ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನ ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಬಿಜು ಜಿ. ನಾಯರ್ ಅವರು ವಹಿಸಿ, ಸರ್ವರನ್ನು ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಎಂ. ಚಂದ್ರಶೇಖರ್ ಹೆಗ್ಡೆ ಮತ್ತು ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರು , ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್, ಅಧ್ಯಕ್ಷ ಉಮಾನಾಥ ಠಾಕೂರ್, ಮುಖ್ಯ ತೀರ್ಪುಗಾರರಾಗಿ ಸಾಕ್ಷಾತ್ ಯು.ಕೆ. ಅವರುಗಳು ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ಅನಿಶ್ ಎಸ್. ಸಿ. ಉಡುಪಿ, ಮೂಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಂಜುಮನ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಧನ್ಯ ಯು. (ಚರ್ಚಾ ಸ್ಪರ್ಧೆ ಪ್ರಥಮ), ಝುವೈನಾ ಯೂಸುಫ್ (ಗಜಲ್ ಪ್ರಥಮ) ಪ್ರಾರ್ಥನಾ ಪೈ (ಸಂಸ್ಕೃತ ಭಾಷಣ ದ್ವಿತೀಯ) ಅದಿತಿ ಖಾರ್ವಿ (ಭರತನಾಟ್ಯ ದ್ವಿತೀಯ) ಮತ್ತು ಆಯಿಷಾ ನಿಫಾ (ಉರ್ದು ಭಾಷಣ ತೃತೀಯ) ಬಹುಮಾನಗಳನ್ನು ಪಡೆದಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಭೋದಕ ಬೋಧಕೇತರ ಬಳಗವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಯಣ: ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ. ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಮದರ್ ತೆರೇಸಾ ಶಾಲೆಯ 8ನೇ ತರಗತಿಯ ಅತ್ಯುತ್ತಮ ಚಂಡೆ ಹಾಗೂ ಕೊಳಲು ವಾದಕ ಪನ್ನಗ ಕೆ. ಆರೂರು ಅವರು ಪ್ರಶಸ್ತಿ ಪಡೆದಿದ್ದಾರೆ. ಕೋಟ ಕಾರಂತ ಥೀಮ್ ಪಾರ್ಕಿನಲ್ಲಿ ಇದೇ ದಿನಾಂಕ 30 ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಲಿರುವ ಈ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು,…
