ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾದ ಶ್ರೀ ಬ್ರಹ್ಮಬೈದರ್ಕಳ ಶ್ರೀ ಕ್ಷೇತ್ರ ಗೋಳಿ ಗರಡಿಯಲ್ಲಿ ಶ್ರೀ ಕ್ಷೇತ್ರದ ವತಿಯಿಂದ 2025-26ನೇ ಸಾಲಿನ ಯಕ್ಷಗಾನಮೇಳ ತಿರುಗಾಟದ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಕ್ಷೇತ್ರದ ವತಿಯಿಂದ ಯಕ್ಷ ಕಲಾವಿದ ನಾಯ್ಕನಕಟ್ಟೆ ಭಾಸ್ಕರ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ. ಕೆ.ಎಸ್. ಕಾರಂತ, ಸಿಎ ದೇವಾನಂದ್, ಪ್ರೊಫೆಸರ್ ಉದಯಕುಮಾರ್ ಶೆಟ್ಟಿ, ಕ್ಷೇತ್ರದ ಪಾತ್ರಿ ಶಂಕರ್ ಪೂಜಾರಿ, ಮೇಳದ ಯಜಮಾನ ಜಿ.ವಿಠ್ಠಲ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣೇಶ್ ಪಾಂಡೇಶ್ವರ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ-2025 ಅನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾಮನೋಭಾವನೆಯನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆಯುತ್ತಿದ್ದಾಗ ದೇಹ ಸುಸ್ಥಿತಿಯಲ್ಲಿರುತ್ತದೆ. ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿರಬೇಕಾಗುತ್ತದೆ. ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡಾಗ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಕಾರಿಗೆ ಅಚಾನಕ್ ಆಗಿ ಬೆಂಕಿ ತಗುಲಿ, ಸಂಪೂರ್ಣ ಕಾರು ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ಮಧ್ಯಾಹ್ನ ನಡೆದಿದೆ. ಕೋಟೇಶ್ವರದಿಂದ – ಉಪ್ಪುಂದ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ನಾವುಂದ ಪೇಟೆ ಬಳಿ ಬರುತ್ತಿದ್ದಂತೆ ಅಚಾನಕ್ ಆಗಿ ಬೆಂಕಿ ತಗುಲಿದೆ. ಕಾರಿನಲ್ಲಿ ಚಾಲಕ ಸಹಿತ ಇಬ್ಬರು ಪ್ರಯಾಣಿಸುತ್ತಿದ್ದು, ಫ್ಲೈಓವರ್ ಮೇಲೆ ಕಾರು ನಿಲ್ಲಿಸಿ ತಕ್ಷಣ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿತೀಶ್ ವಾಹನ ಚಲಾಯಿಸುತ್ತಿದ್ದು, ಅವರ ಅಜ್ಜಿ ಜೊತೆಯಲ್ಲಿದ್ದರು. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಯಿತು. ಹೈವೇ ಪಟ್ರೋಲ್ ಸಿಬ್ಬಂದಿಗಳು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಂಬದಕೋಣೆ ಗ್ರಾಮದ ಹಳಗೇರಿಯ ಶ್ರೀ ಕೊಕ್ಕೇಶ್ವರ ದೇವಸ್ಥಾನದಲ್ಲಿ ರಂಗಪೂಜಾದಿ ದೀಪೋತ್ಸವ ಕಾರ್ಯಕ್ರಮವು ಬುಧವಾರದಂದು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಂಗಳಾರತಿ ಸೇವೆ ಹಾಗೂ ಲಘುಉಪಹಾರ ಸೇವೆ ನಡೆಯಿತು. ಹಳಗೇರಿ ಭಜನಾ ಮಹಿಳೆಯರ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಮೊಕ್ತೇಸರರು, ಭಜನಾ ತಂಡದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಆಡಳಿತ ಮಂಡಳಿ ಪಧಾಧಿಕಾರಿಗಳು ಮತ್ತು ಊರ ಜನರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು 04 ಚಿನ್ನ, 02 ಬೆಳ್ಳಿ ಹಾಗೂ 01 ಕಂಚಿನ ಪದಕಗಳೊಂದಿಗೆ ಒಟ್ಟು 07 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 05 ಚಿನ್ನ, 02 ಬೆಳ್ಳಿ ಹಾಗೂ 01 ಕಂಚು ಒಟ್ಟು 08 ಪದಕ ಪಡೆದು 213 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದರು. ಹುಡುಗರ ವಿಭಾಗದಲ್ಲಿ: 60 ಕೆಜಿ – ರವಿ ಸಿದ್ದಪ್ಪ (ಪ್ರಥಮ), 65 ಕೆಜಿ – ಯಶಸ್ ಜಿ. (ತೃತೀಯ), 71 ಕೆಜಿ – ಹೇಮಂತ್ ಕೆ.ವಿ. (ದ್ವಿತೀಯ), 79 ಕೆಜಿ – ಶ್ರೇಯಸ್ (ದ್ವಿತೀಯ), 88 ಕೆಜಿ – ಶಮಂತ್ ಶೆಟ್ಟಿ (ಪ್ರಥಮ), 94 ಕೆಜಿ – ಪಾರ್ಥರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ನೇಹಕೂಟದ ದಶಮಾನೋತ್ಸವದ ಊರ್ಮನಿ ಹಬ್ಬ ಸಂಭ್ರಮವನ್ನು ತರಲಿ ಜತೆಗೆ ಊರಿನ ಏಕತೆಯ ಸಂಕೇತವಾಗಿಲಿ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಬುಧವಾರ ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ನೇಹಕೂಟ ಇದರ ದಶಮಾನೋತ್ಸವ ಸಂಭ್ರಮ ಊರ್ಮನಿ ಹಬ್ಬ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಸಾಂಸ್ಕೃತಿಕ ಪರಂಪರೆಯನ್ನು ಗಟ್ಟಿಗೊಳಿಸುವ ಸ್ನೇಹಕೂಟದಂತಹ ಸಂಘಟನೆಗಳು ಇನ್ನಷ್ಟು ಹುಟ್ಟಿಕೊಳ್ಳಬೇಕು ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ, ಸಾಧಕರನ್ನು ಗೌರವಿಸುವ ಸ್ನೇಹಕೂಟದ ಕಾರ್ಯವೈಕರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ನೇಹಕೂಟ ಸಂಚಾಲಕಿ ಭಾರತಿ ವಿ. ಮಯ್ಯ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು. ಪೋಸ್ಟರ್ ಬಿಡುಗಡೆಯಲ್ಲಿ ಕ.ಸಾ.ಪ ಉಡುಪಿ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ದಶಮಾನೋತ್ಸವ ಸಮಿತಿಯ ಪ್ರಮುಖರಾದ ವಿಷ್ಣುಮೂರ್ತಿ ಮಯ್ಯ, ಎಂ.ಎನ್ ಮಧ್ಯಸ್ಥ, ಸದಾಶಿವ ಹೊಳ್ಳ, ಸತೀಶ್ ಹೆಚ್. ಕುಂದರ್, ರಾಜೇಂದ್ರ ಉರಾಳ, ಶ್ರೀಕಾಂತ್ ಶೆಣೈ, ಅರುಣಾಚಲ ಮಯ್ಯ, ದಿನೇಶ್ ಆಚಾರ್ ಸ್ನೇಹಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಜಾತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ನವೆಂಬರ್ 3 ರಿಂದ ಡಿಸೆಂಬರ್ 2 ರವರೆಗೆ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದ್ದು, ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರುಗಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು. ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 -28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಸಂಘದ ಚುನಾವಣಾಧಿಕಾರಿ ಆಗಿರುವ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಉಪಾಧ್ಯಕ್ಷರುಗಳಾದ ಉದಯ ಕುಮಾರ್ ಮುಂಡ್ಕೂರು, ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಸುರೇಶ್ ಎರ್ಮಾಳ್, ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ವಿಜಯ ಆಚಾರ್ಯ ಉಚ್ಚಿಲ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರಿಯಾ ಕೆ. ನೂತನ ಮೈಲಿಗಲ್ಲು ಸಾಧಿಸಿ, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ. ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ ಅವರು ಈ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಸ್ಪರ್ಧೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು. ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕ ಶಿಕ್ಷಕಕೇತರ ವೃಂದದವರು ವಿದ್ಯಾರ್ಥಿನಿಯ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
