Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಕೃತಿ ಸಂಜೀವಿನಿ ಕೋಟ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಉಡುಪಿ ಅವರಿಂದ ಉಚಿತ ನೇತ್ರ ತಪಾಸಣೆ ಶಿಬಿರವು ಇಲ್ಲಿನ ಪಂಚಾಯತ್ ಸಭಾಭವನದಲ್ಲಿ ಜರಗಿತು. ಪ್ರಕೃತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ಶೇಖರ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ. ಪ್ರೇಮ್ ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಣೇಶ್ ಹಾಗೂ ಬಿ.ಆರ್.ಪಿ.ಪಿ.ಆರ್.ಐ ರೀತಾ, ಎನ್.ಎಲ್.ಆರ್.ಎಂ. ಸಿಬ್ಬಂದಿಗಳು, ಪದಾಧಿಕಾರಿಗಳು ಇದ್ದರು. ಕೋಟ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಲಜ ಪ್ರಸ್ತಾವನೆ ಸಲ್ಲಿಸಿದರು. ಎಂಬಿಕೆ ಪ್ರೇಮ ಆಚಾರ್ ನಿರೂಪಿಸಿ, ಒಕ್ಕೂಟದ ಎಲ್ ಸಿ.ಆರ್.ಪಿ ಲಲಿತಾ ಸ್ವಾಗತಿಸಿ, ಎಲ್.ಸಿ.ಆರ್.ಪಿ. ಪ್ರತಿಮಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯ ಕಾರಣದಿಂದ ಅನೇಕ ರೋಗಗಳು ನಮ್ಮನ್ನು ಸುತ್ತಿಕೊಳ್ಳುತ್ತಿದೆ. ಪ್ರತಿನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಹಾಗೂ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗದ ಮಹತ್ವನ್ನು ಅರಿತು, ಯೋಗವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಜೇಸಿಐ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 15 ದಿನಗಳ ಉಚಿತ ಯೋಗ ತರಬೇತಿ ಶಿಬಿರವನ್ನು ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮೊಹಮ್ಮದ್ ನೂರ್ ಫಾಜಿಲ್ ಮತ್ತು ಯೋಗ ತರಬೇತುದಾರ ಸುಕೇಶ್ ಆಚಾರ್ಯ ಶುಭ ಹಾರೈಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮದ್ದುಗುಡ್ಡೆ ಬಳಿ ಸಾರ್ವಜನಿಕರ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದವರನ್ನು  ಕುಂದಾಪುರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ್‌ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳಾದ ಮಿಥುನ ಖಾರ್ವಿ, ಚಂದ್ರ ಪೂಜಾರಿ, ರೆಹಮತ್‌, ನಿರಂಜನ್‌ ನಾಯಕ್‌ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು 2,660 ರೂ, ಬಿಳಿ ಬಣ್ಣದ ಪಾಲೀಥಿನ್ ಚೀಲ, ಡೈಮಾನ್‌, ಆಟಿನ್‌, ಇಸ್ಪೀಟ್‌ ಕಳವಾರ್‌ ಚಿತ್ರಗಳಿರುವ 52 ಇಸ್ಪೀಟ್‌ ಎಲೆಗಳು ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮದ ಹೊಸ್ತಿಲಲ್ಲಿದೆ, ಪುರಸಭೆಯಿಂದ ಪಟ್ಟಣಪಂಚಾಯತ್ ನಡೆದು ಬಂದ ಹಾದಿ ಅತ್ಯದ್ಭುತ, ಈ ಹಿನ್ನಲ್ಲೆಯಲ್ಲಿ ಇದೀಗ ಸಂಭ್ರಮಾಚರಣೆಗೆ ಸ್ವಚ್ಛತಾ ಅಭಿಯಾನ ಮುನ್ನುಡಿ ಬರೆದಿದೆ ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ನುಡಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾಮಂಡಲ ಇವರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಗೆಳೆಯರ ಬಳಗ ಕಾರ್ಕಡ, ಆಶ್ರಿತ ಕಾಲೇಜು ಕೋಟ ಸಹಯೋಗದೊಂದಿಗೆ ಸಾಲಿಗ್ರಾಮ ಪಟ್ಟಣಪಂಚಾಯತ್ ಸಂಯೋಜನೆಯೊಂದಿಗೆ 275ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಸುವರ್ಣ ಮಹೋತ್ಸವ ಸಮರ್ಪಿತ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಎರಡು ದಿಕ್ಕುಗಳನ್ನು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪಂಚವರ್ಣ ಸಂಘಟನೆ ಸಾಲಿಗ್ರಾಮ ಪಟ್ಟಣಪಂಚಾಯತ್ ಕೃತಜ್ಞತೆಗಳನ್ನು ಸಲ್ಲಿಸಿದ್ದು ಅಕ್ಟೋಬರ್ 25ರಂದು ನಡೆಯಲಿರುವ ಕಾರ್ಯಕ್ರಮಸಲ್ಲಿ ಭಾಗಿಯಾಗಲು ಕರೆ ನೀಡಿದರು. ಪಟ್ಟಣಪಂಚಾಯತ್ ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಆರೋಗ್ಯ ನಿರೀಕ್ಷಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಸರ್ಕಲ್ ಕಡೆಗೆ ಸರ್ವಿಸ್ ರಸ್ತೆ ಬದಿ ಅ. 3 ರಂದು ಸಂಜೆ ನಡೆದುಕೊಂಡು ಹೋಗುತ್ತಿದ್ದ ಜ್ಯೋತಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಬೈಕ್‌ನಲ್ಲಿ ಬಂದು ಕಳ್ಳತನಗೈದು ಪರಾರಿಯಾಗಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಸಂಜಯ ಎಲ್. (33) ಹಾಗೂ ದಾವಣಗೆರೆ ಜಿಲ್ಲೆಯ ವಿನೋಬಾ ನಗರ ನಿವಾಸಿ ವಸಂತ ಕುಮಾರ್ (30) ಬಂಧಿತರು.3 ಲಕ್ಷ ರೂ. ಮೌಲ್ಯದ ಸರ, ಕಾರು, ಬೈಕನ್ನು ವಶಕ್ಕೆ ಪಡೆದಿದ್ದಾರೆ. ಅ.03ರ ಸಂಜೆ 04:35ರ ವೇಳೆ ಕುಂದಾಪುರ  ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್‌ ಕಡೆಗೆ ಸರ್ವಿಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬಿ.ಎಸ್‌.ಎನ್‌.ಎಲ್‌ ಕಛೇರಿ ಬಳಿ ಹಿಂದಿನಿಂದ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖಾಧಿಕಾರಿಯಾದ ಪ್ರಭಾರ ಪೊಲೀಸ್‌ ನಿರೀಕ್ಷಕ ಜಯರಾಮ ಡಿ. ಗೌಡ ಅವರು ತನಿಖೆಯನ್ನು ಕೈಗೊಂಡು, ವಿವಿಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅದೆಷ್ಟೇ ಆವಿಷ್ಕಾರ, ಸಂಶೋಧನೆಗಳು ನಡೆದರೂ ರಕ್ತವನ್ನು ಮಾತ್ರ ಸಂಶೋಧಿಸಲು ಈವರೆಗೆ ಸಾಧ್ಯವಿಲ್ಲ. ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ ಎಂದು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್ ಹೇಳಿದರು. ಅವರು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಜನ್ಮ ದಿನೋತ್ಸವದ ಅಂಗವಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಗೃಹದಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ರಕ್ತವನ್ನು ಪೂರೈಕೆ ಮಾಡಿ ರೋಗಿಯ ಪ್ರಾಣ ಉಳಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂಪ್ರೇರಿತ ರಕ್ತದಾನ ಮಾಡಿ ರೋಗಿಗಳ ಪ್ರಾಣ ಉಳಿಸುವ ಪುಣ್ಯದ ಕಾರ್ಯದಲ್ಲಿ ಕೈಜೋಡಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ 11 ಚಿನ್ನ, 07 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಫಲಿತಾಂಶ:ಪುರುಷರ ವಿಭಾಗದಲ್ಲಿ:ದೇವರಾಜು – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್ – 65 ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ – 70 ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ – 74 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – 79 ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ – 86 ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ – 86 ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ – 92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – 97 ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್ – 97+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ  ಪಡೆದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಭಾನುವಾರ ಸಂಜೆ ಸಹಬಾಳ್ವೆ ಸಂಘಟನೆ ಕುಂದಾಪುರ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕ್ಯಾಥೋಲಿಕ್ ಒಕ್ಕೂಟ, ಸೌಹಾರ್ದ ಕರ್ನಾಟಕ ಕುಂದಾಪುರ, ಸಿಐಟಿಯು ಕುಂದಾಪುರ ಸಹಯೋಗದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಶೂ ಎಸೆದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆತನನ್ನು ಗಡೀಪಾರು ಮಾಡಬೇಕು. ದೇಶದ್ರೋಹದ ಷಡ್ಯಂತ್ರ ಪ್ರಕರಣ ದಾಖಲಿಸಬೇಕು. ಕೃತ್ಯದ ಹಿಂದಿರುವ ಷಡ್ಯಂತ್ರ ಬೇಧಿಸಬೇಕು ಎಂದು ಸಂಸ್ಥೆಗಳ ಮುಖಂಡರು ಆಗ್ರಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಸಹಾಯಧನ ಚೆಕ್ ವಿತರಣೆ ಕಾರ್ಯಕ್ರಮ ಕೊರಗರ ಕಾಲೋನಿಯಲ್ಲಿ ನಡೆಯಿತು. ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷ ಪ್ರಕಾಶ್ ಹಂದಟ್ಟು ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ ನಮ್ಮ ರೋಟರಿ ಕ್ಲಬ್ ಕೋಟ ಸಿಟಿ ಸದಸ್ಯರ ಸಹಕಾರದೊಂದಿಗೆ ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್ ಇತರ ಗ್ರಾಮ ಪಂಚಾಯತ್‌ಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗುಜರಾತ್‌ನ ಸೂರತ್‌ನಲ್ಲಿ ನಡೆದ 4ನೇ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ತಾಲೂಕಿನ ಗೋಳಿಬೇರು ಗ್ರಾಮದ ಗೋಕುಲ್ ಪೂಜಾರಿ ಅವರು 4*400 ಮೀಟರ್ ರಿಲೇಯಲ್ಲಿ ಚಿನ್ನ, ಶಾಟ್‌ಪುಟ್‌, 400 ಮೀಟರ್, 200 ಮೀಟರ್ ಓಟ ಮತ್ತು 4*100 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

Read More