ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಳಮದ್ದಳೆ ಜ್ಞಾನಯಜ್ಞ ಕಾರ್ಯಕ್ರಮಕ್ಕೆ ಹೆಚ್ಚು ಹೆಚ್ಚು ಯುವಪೀಳಿಗೆಯನ್ನು ಕರೆತರುವ ಪ್ರಯತ್ನ ಮಾಡಿದರೆ ಇದು ಇನ್ನಷ್ಟು ಜನಪ್ರೀಯತೆ ಪಡೆದುಕೊಳ್ಳಬಹುದು. ನಮ್ಮ ಬದುಕಿಗೆ ಬೇಕಾದ ಪ್ರತಿಯೊಂದು ಜೀವನ ಸಂದೇಶಗಳು ಈ ಯಕ್ಷಗಾನ ತಾಳಮದ್ದಳೆಯಲ್ಲಿ ದೊರೆಯುತ್ತದೆ. ಎಂದು ಮಾಜಿ ಸಚಿವ ಪ್ರಮೋದ ಮಧ್ವರಾಜ್ ಹೇಳಿದರು. ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಪ್ರಸ್ತುತಿಯಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯ್ಕರ ಸ್ಮರಣ ವೇದಿಕೆಯಲ್ಲಿ ನಡೆದ ೮ನೇ ವರ್ಷದ ಯಕ್ಷಗಾನ ತಾಳಮದ್ದಲೆ ಸಮಾರೋಪದಲ್ಲಿ ಅವರು ಮಾತನಾಡಿದರು. ಧಾರೇಶ್ವರರಂತಹ ಪ್ರತಿಭಾವಂತ ಮತ್ತು ಅನುಭವಿ ವೃತ್ತಿ ಕಲಾವಿದರು ಯಕ್ಷಗಾನ ಸಂಘಟನೆ, ಪ್ರಸಾರದಲ್ಲಿ ತೊಡಗಿರುವುದು ಆಶಾದಾಯಕ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟರು. ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರು ಮಾತನಾಡಿ, ನಮ್ಮ ಸಮಾಜವು ಉತ್ತಮ ಸಂಸ್ಕಾರಯುತವಾಗಿ ಮೂಡಿಬಂದು ನಮ್ಮ ಸಂಸ್ಕೃತಿ, ಪರಂಪರೆ, ಧರ್ಮ, ಆಧ್ಯಾತ್ಮಿಕತೆಗಳ ಏಳಿಗೆಗಳು ಯಕ್ಷಗಾನದಿಂದಲೇ ಉಳಿದು ಬೆಳೆಯಬಲ್ಲದು. ಇಂದು ಪರಿಶುದ್ಧ ಕನ್ನಡ ಭಾಷೆ ಉಳಿದು ಅಭಿವೃದ್ಧಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಕರ್ನಾಟಕ ಮುಸ್ಲಿಂ ಜಮಾಅತ್ ಬೈಂದೂರು ತಾಲೂಕು ಅಧ್ಯಕ್ಷರಾಗಿ ನ್ಯಾಯವಾದಿ ಇಲ್ಯಾಸ್ ಕೆ. ಎಂ., ಪ್ರಧಾನ ಕಾರ್ಯದರ್ಶಿಯಾಗಿ ಶಭ್ಬೀರ್ ಬೈಂದೂರು ಆಯ್ಕೆಯಾಗಿದ್ದಾರೆ. ನೂತನ ಸಮಿತಿ ಪದಾಧಿಕಾರಿಗಳಾಗಿ ಕೋಶಾಧಿಕಾರಿ ಸಯ್ಯಿದ್ ಅಜ್ಮಲ್ ಶಿರೂರು, ಸಂ.ಕಾರ್ಯದರ್ಶಿಯಾಗಿ ಮುಸ್ತಫ ಬಡಾಕೆರೆ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಬಡಾಕೆರೆ, ಅಂದು ಕಾಯಿ ಹಾಜಿ ಚಾತನಕೆರೆ, ಅಬ್ದುಲ್ ಗಫ್ಫಾರ್ ಶಿರೂರು, ಸುಲ್ತಾನ್ ಬೈಂದೂರು, ಕಾರ್ಯದರ್ಶಿಗಳಾಗಿ ಕೊಂಬಾಳಿ ಕೆ.ಎಂ.ಎಚ್ ಝುಹುರಿ, ಖಾಸಿಂ ನಾವುಂದ, ಜಾಫರ್ ಬೈಂದೂರು, ಅಬ್ಬಾಸ್ ಮರವಂತೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಡಬೇಕು. ಎಲ್ಲವನ್ನೂ ಕೊಟ್ಟ ಸಮಾಜದ ಋಣವನ್ನು ತೀರಿಸುವ ನೆಲೆಯಲ್ಲಿ ಜಿಸಿಐನಂತಹ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳು ನಡೆಯುವಂತಾಗಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ಜೀವನ ಉತ್ತಮವಾಗಲು ಸಾಧ್ಯ ಎಂದು ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಉಪ್ಪುಂದ ಮಾತೃಸ್ರೀ ಸಭಾಭವನದಲ್ಲಿ ಒಂದು ವಾರಗಳ ಕಾಲ ನಡೆದ ಜೇಸಿಐ ಸಪ್ತಾಹ ಸಮ್ಮಿಲನದ ಸಮಾರೋಪದಲ್ಲಿ ಮಾತನಾಡಿದರು. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಲು ಜೆಸಿಐ ವತಿಯಿಂದ ಕಾರ್ಯಗಾರಗಳನ್ನು ಆಯೋಜಿಸಬೇಕು. ಹುಟ್ಟುವಾಗ ಏನನ್ನೂ ತರದ ನಾವುಗಳು ಸಾಯುವಾಗಲೂ ಬರಿಕೈಯಲ್ಲಿ ಹೋಗುತ್ತೇವೆ. ಹುಟ್ಟು ಸಾವಿನ ನಡುವಿನ ನಮ್ಮ ಬದುಕಿನಲ್ಲಿ ಸಮಾಜಕ್ಕೆ ಒಳ್ಳೆಯದ್ದನ್ನೇ ಮಾಡಬೇಕಿದೆ. ಇದು ಭಗವಂತನಿಗೆ ನಾವು ಸಲ್ಲಿಸುತ್ತಿರುವ ತೆರಿಗೆಯಾಗಿದೆ ಎಂದರು. ಉಪ್ಪುಂದ ಜೆಸಿಐ ಘಟಕದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಅನುಪಮ ಸೇವೆ ನೀಡಿದ ರಾಜಕೀಯ ಪರಿಣಿತರ ಆಡಳಿತ ವ್ಯವಸ್ಥೆ, ನ್ಯಾಯಾಂಗ ತಜ್ಞರನ್ನು ಸ್ಮರಿಸುವುದು, ಅವರು ನೀಡಿದ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಆದರ್ಶವಗುವಂತೆ ನೆನಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕೆಂದು ಸಂಕಲ್ಪ ಕೈಗೊಳ್ಳಲು ಇದು ಸಕಾಲ ಎಂದು ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ನಾಗೂರು ಒಡೆಯರ ಮಠಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಬೈಂದೂರು ತಾಲೂಕು ಆಡಳಿತದ ವತಿಯಿಂದ ಭಾನುವಾರ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ರಜತ ಸಂಭ್ರಮದಲ್ಲಿ ನಾವು ಜಿಲ್ಲೆಯ ಹಳೆಯ ನೆನಪುಗಳನ್ನು ಮೆಲುಕು ಹಾಕುವುದರೊಂದಿಗೆ ಹೊಸ ದೃಷ್ಠಿಕೋನದಿಂದ ಹೊಸ ವಿಚಾರಗಳನ್ನು ಯೋಚಿಸಬೇಕಾಗಿದೆ. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆ ಆರೋಗ್ಯ, ಪ್ರವಾಸೋದ್ಯಮ, ಬೀಚ್ ಟೂರಿಸಂ, ಕೃಷಿ, ಸಹಕಾರ, ಬ್ಯಾಂಕಿಂಗ್, ಧಾರ್ಮಿಕ ಹಾಗೂ ಆಧ್ಯಾತ್ಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕಾಂಗ್ರೆಸ್ ಮುಖಂಡ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಅವರ ಶಿಪಾರಸ್ಸಿನಂತೆ ನೂತನ ಸಮಿತಿಯನ್ನೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 45ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 45 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.853 ಕೋಟಿ ವ್ಯವಹಾರ ನಡೆಸಿ, ರೂ 4.69 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ. ಸತತ 18 ವರ್ಷಗಳಿಂದ ‘ಎ’ ವರ್ಗದ ಆಡಿಟ್ ವರ್ಗೀಕರಣದಲ್ಲಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 193.47 ಕೋಟಿ ಠೇವಣಿ ಸಂಗ್ರಹಿಸಿ, ರೂ. 161.46 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 82.08 ಕೋಟಿ ಹೂಡಿಕೆ ಮಾಡಿದೆ. ರೂ.27.02 ಕೋಟಿ ನಿಧಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ವಲಯದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜರಗಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕರಾಗಿ ಗುರುತಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯಗುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯ ನೀಡುತ್ತಿದೆ. ಜನರು ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿರಬೇಕು ಎಂದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಕುಂದಾಪುರ ತಾಲೂಕು ಆಸ್ಪತ್ರೆಯ…
ಕುಂದಾಪುರದಲ್ಲಿ ಹುಲಿವೇಷದ ಉಳಿವು | ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಚಿಂತನ – ಮಂಥನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಈ ಭಾರಿ ನಟ, ನಿರ್ದೇಶಕ ಡಾ. ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಸಾಲಿನಲ್ಲಿ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ, ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯನ್ನು ಈ ತನಕ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ…
ರಿಷಬ್ ಅವರಿಗೆ ಸ್ವರ್ಣಕಮಲ ಸುಮ್ನೆ ಬಂದಿಲ್ಲ | ಕಾಂತಾರ ಕಟ್ಟಿದ ರೀತಿಯೇ ಅದ್ಭುತ – ನಟ ಯೋಗೀಶ್ ಬಂಕೇಶ್ವರ
