ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ವಾಸುದೇವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಬೈಲೂರು ಸಂಯೋಜನೆಯಲ್ಲಿ ಮಾಹೆ ಮಣಿಪಾಲ ಇಲ್ಲಿಯ ಎಂ.ಐ.ಟಿ ಈಜು ಕೊಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಈಜು ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ದಿಗಂತ ಕೋಟತಟ್ಟು ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ್ ಬಾರಿಕೆರೆ 50 ಮೀಟರ್ ಬ್ರೆಸ್ಟ್ರೋಕ್, 100 ಮೀಟರ್ ಬ್ರೆಸ್ಟ್ರೋಕ್, 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶ್ರೀಧರ್ ಉಳಿತಾಯ ಹಾಗೂ ರಾಜರಾಮ ನಾವಡ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾಸಾಧನೆಯನ್ನು ಗೀತಾನಂದ ಪೌಂಢೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಅಧ್ಯಕ್ಷರು ಸರ್ವಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ರಿದಾ ಪರ್ವಿನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕವಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಹೆಚ್ಚುವರಿಯಾಗಿ ಆರಂಭವಾದ ಕಿರಿಯ ಪ್ರಾಥಮಿಕ ವಿಭಾಗಗಳ ವಿದ್ಯಾರ್ಥಿಗಳ ಹೊಸ ಬ್ಲಾಕ್ಗೆ ಸತೀಶ್ ಪೂಜಾರಿ ಹಾಗೂ ರಾಧಿಕಾ ಪೂಜಾರಿ ಅವರು ಕುಡಿಯುವ ನೀರಿನ ಘಟಕವನ್ನು ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. ಕೊಡುಗೆಯನ್ನು ಸ್ವೀಕರಿಸಿದ ಆಡಳಿತ ನಿರ್ದೇಶಕರಾದ ರೆನಿಟಾ ಲೋಬೋ ಅವರು ದಾನಿಗಳಿಗೆ ಕೃತಜ್ಞತಾ ಪೂರ್ವಕ ಮಾತುಗಳ ಮೂಲಕ ಧನ್ಯವಾದ ಅರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಾನಿಗಳಿಗೆ ಶುಭ ಹಾರೈಸಿದರು. ಈ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮವು ಯಶಸ್ವಿಗೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್ವಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಶ್ರೀಲತಾ ನಾಯಕ್ ಅವರು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿ ಸಂಘ, ಪೋಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭಾ ವ್ಯಾಪ್ತಿಯ ಖಾರ್ವಿಕೇರಿಯ ಪರಿಸರದ ನಿವಾಸಿಗಳು ಹಲವು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ನಡೆಸಿದ ಹೋರಾಟಕ್ಕೆ ಫಲ ದೊರೆತಿದ್ದು, ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಸತತ ಪ್ರಯತ್ನದ ಪುರಸಭಾ ವ್ಯಾಪ್ತಿಯಲ್ಲಿ ಹಕ್ಕು ಪತ್ರ ನೀಡಲು ಕಾನೂನಿನ ಅಭ್ಯಂತರ ಇಲ್ಲ ಎಂದು ಕಂದಾಯ ಆಯುಕ್ತರಿಂದ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಲಿಖಿತ ಆದೇಶ ದೊರೆತಿದೆ. ಖಾರ್ವಿಕೇರಿ ಜನರ ಸಮಸ್ಯೆ ಬಗೆಹರಿಯಲು ಶ್ರಮಿಸಿದ ಶಾಸಕರಿಗೆ ನಿವಾಸಿಗಳು ಪುಷ್ಪಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಕೊಂಕಣ ಮಹಾಜನ ಸಂಘದ ಅಧ್ಯಕ್ಷ ರವಿ ಟಿ.ನಾಯ್ಕ, ಜಿ. ಮಾಜಿ ಅಧ್ಯಕ್ಷ ಕೆ.ಬಿ. ಖಾರ್ವಿ, ಕೊಂಕಣ ಖಾರ್ವಿ ಸಮಾಜದ ಪ್ರಮುಖರಾದ ಉಮಾನಾಥ ಖಾರ್ವಿ, ಪ್ರಕಾಶ್ ಖಾರ್ವಿ, ಸಂದೀಪ ಖಾರ್ವಿ, ದಿನಕರ ಖಾರ್ವಿ, ರವಿ ಖಾರ್ವಿ, ಲಕ್ಷ್ಮಣ ಖಾರ್ವಿ, ರಾಜು ಖಾರ್ವಿ, ಶೇಖರ್ ಖಾರ್ವಿ, ರತ್ನಾಕರ್ ಖಾರ್ವಿ, ಸದಾನಂದ ಖಾರ್ವಿ,, ಸದಾನಂದ ಮದುಗುಡ್ಡೆ,, ರಾಘವೇಂದ್ರ ಖಾರ್ವಿ, ಅಮೃತ ಪಾಂಡೆ,,ಸಂದೀಪ ಎಸ್. ಎಸ್., ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ವತಿಯಿಂದ ಶನಿವಾರ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ ಸ್ಪೆಕ್ಟರ್ ಹಾಗೂ ಸಿಬ್ಬಂದಿಯವರಿಗೆ ಮತ್ತು ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಕಚೇರಿಗೆ ಭೇಟಿ ನೀಡಿ, ಅವರಿಗೆ ರಕ್ಷೆಯನ್ನ ಕಟ್ಟಿ ರಕ್ಷಾ ಬಂಧನವನ್ನು ಆಚರಿಸಿಲಾಯಿತು. ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಧ್ಯಾ ಸಾಲಿಯಾನ್, ಶ್ವೇತಾ ಶ್ರೀನಿಧಿ ಉಪಾಧ್ಯಾಯ, ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ. ಎಸ್. ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ಒಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಎಸ್.ಸಿ. ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಪಕ್ಷದ ಪ್ರಮುಖರಾದ ದಿವಾಕರ್ ಕಡ್ಗಿ, ಹಾಗೂ ಮಹಿಳಾ ಮೋರ್ಚಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು. ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೈಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ’ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ಕಾರ್ಯಕ್ರಮದಲ್ಲಿ ಮಾತನಾಡಿದರು. ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು ಶ್ರಮಿಸಿದರೆ, ಉಳಿದ ಹತ್ತು ತಿಂಗಳು ಇತರ ಚಟುವಟಿಕೆಗಳಿಗೆ ಮೀಸಲಿಡಲು ಸಾಧ್ಯ. ಎಲ್ಲಾ ವೃತ್ತಿಗಳಿಗಿಂತಲೂ ಕೃಷಿಯೇ ಹೆಚ್ಚು ಸಂತಸ ಮತ್ತು ತೃಪ್ತಿ ನೀಡುವ ಉದ್ಯೋಗವಾಗಿದೆ ಎಂದು ಅವರು ಹೇಳಿದರು. ಬಂಜರು ಭೂಮಿಯನ್ನು ಸಮೃದ್ಧ ಕೃಷಿಭೂಮಿಯಾಗಿಸಿದ ಪರಿ ಮಂಗಳೂರಿನ ಸಮೀಪ ಒಡ್ಡೂರಿನಲ್ಲಿರುವ 150 ಎಕರೆ ಬಂಜರು ಭೂಮಿಯನ್ನು ಸಾವಯವ ಕೃಷಿ ತೋಟವನ್ನಾಗಿ ಪರಿವರ್ತಿಸಿದ ಪರಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಹಲವಾರು ಸವಾಲುಗಳನ್ನು ಎದುರಿಸಿದರೂ, ನಿರಂತರ ಶ್ರಮ, ಹೋರಾಟ ಮನೋಭಾವ ಮತ್ತು ಸದಾ ಆಶಾವಾದೊಂದಿಗಿನ ಮನಸ್ಥಿತಿಯಿಂದ ಈ ಸಾಧನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನೆಣೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಗುರು ರಾಘವೇಂದ್ರ ಟ್ರಸ್ಟ್ ಉಸ್ತುವಾರಿಯಲ್ಲಿ ಸೇವಾ ಸಂಗಮ ಶಿಶು ಮಂದಿರದ ಸಹಯೋಗದಲ್ಲಿ ಅರಣ್ಯ ಇಲಾಖೆಯ ನೆರವಿನೊಂದಿಗೆ ಶ್ರೀ ಗುರು ರಾಘವೇಂದ್ರ ವನದಲ್ಲಿ ಶಿಶುಮಂದಿರದ ಪುಟಾಣಿಗಳಿಂದ ವೈವಿದ್ಯಮಯ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಟ್ರಸ್ಟ್ನ ಅಧ್ಯಕ್ಷರಾದ ಸೂಲಿಯಣ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರಾದ ರಾಜು ಪೂಜಾರಿ ಅವರು, ಕಾರ್ಯದರ್ಶಿ ಮಂಜುನಾಥ್ ಶೆಟ್ಟಿ, ಸದಸ್ಯರುಗಳಾದ ದಿನೇಶ್, ರವೀಂದ್ರ ಶ್ಯಾನುಭಾಗ್, ದಿನಕರ್ ಶೆಟ್ಟಿ,ರಾಜು, ಪ್ರಕಾಶ್ ಮಾಕೋಡ್, ಸುಧಾಕರ ಪಿ ಹಾಗೂ ಅರ್ಚಕರಾದ ಮುರುಳಿ ಭಟ್, ರವೀಂದ್ರ ಕಿಣಿ ಸೇವಾ ಸಂಗಮ ಶಿಶು ಮಂದಿರದ ಸೌಮ್ಯ ಮಾತಾಜಿ, ಸುಮಾ, ಮಠದ ಸಿಬ್ಬಂದಿ ವರ್ಗ, ಶಿಶು ಮಂದಿರದ ಪುಟಾಣಿಗಳು, ಪದಾಧಿಕಾರಿಗಳು ಹಾಗೂ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಅವರು ಆಗಮಿಸಲಿದ್ದಾರೆ. ಜೊತೆಗೆ ಕಾರ್ಕಳ ತಾಲೂಕಿನ ಕ.ಸಾ.ಪ ಸಾಹಿತಿಗಳು ಮತ್ತು ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಮಂಡ್ಯ ಮಹಾಕಾವ್ಯಗಳ ಲೇಖಕರಾದ ಡಾ. ಪ್ರದೀಪ ಕುಮಾರ ಹೆಬ್ರಿ, ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. ಅನಾವರಣಗೊಳ್ಳಲಿರುವ ಕೃತಿಗಳು: • ಯಾತ್ರೆ – ಚಂದ್ರಕಾಂತ ಪೋಕಳೆ • ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ • ಹರ್ಷ ರಾಗ – ಪೌಝಿಯಾ ಸಲೀಂ • ಹಿತಶತ್ರು -…
