ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಐದಾರು ವರ್ಷಗಳಿಂದ ಟೀಮ್ ಊರ್ಮನಿ ಮಕ್ಕಳ್ ತಂಡವು ಸಮಾಜಕ್ಕೆ ಮಾದರಿಯಾಗುತ್ತಿದೆ. ಕಲಾವಿದರ ಪ್ರೊತ್ಸಾಹ ಜೊತೆಗೆ ಸಮಾಜ ಸೇವೆಯಲ್ಲಿ ತನ್ನದೆ ಆದಂತ ವಿಶಿಷ್ಟ ಕಾರ್ಯಗಳನ್ನು ಈ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನಾಲೈದು ತಿಂಗಳ ಹಿಂದೆಯಷ್ಟೆ ವಯೋವೃದ್ದ ಸುಮಾರು ಹದಿಮೂರು ಜನಕ್ಕೆ ವಾಕರ್ ಸ್ಟಿಕ್ ಹಂಚಿಕೆ ಮಾಡಿದ್ದಾರೆ. ಈ ಬಾರಿ ಸುಮಾರು ಹದಿನೈದಕ್ಕೂ ಹೆಚ್ಚು ಆಯ್ದ ಬಡ ಕೂಲಿಕಾರ್ಮಿಕರ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸಂಪೂರ್ಣ ನೊಟ್ಸ್ ಪುಸ್ತಕ, ಪೆನ್ನು ಡ್ರಾಯಿಂಗ್ ಬುಕ್, ಪೆನ್ಸಿಲ್, ಕಾಪಿಬುಕ್, ಮಗ್ಗಿಪುಸ್ತಕ, ಸ್ಕೆಚ್ ಪೆನ್ನು ಮತ್ತು ಇತರ ಕಲಿಕಾ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳ ಮನೆಗಳಿಗೆ ಹೋಗಿ ವಿತರಿಸಿ, ಒಂದಿಷ್ಟು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗುವಲ್ಲಿ ಕಾರಣಿಕರ್ತರಾದರು. ಟೀಮ್ ಊರ್ಮನಿ ಮಕ್ಕಳ್ ತಂಡದ ನಿರ್ವಾಹಕರೂ ಹಾಗೂ ಆಟೊ ಚಾಲಕರು ಆದಂತಹ ನಾಗೇಶ್ ಗಾವಳಿ ಅವರು ತಮ್ಮ ಸ್ವಂತ ಸಂಪಾದನೆಯಲ್ಲಿ ಒಂದಿಷ್ಟು ಹಣವನ್ನು ಕೂಡಿಟ್ಟು ಇಂದು ವಿದ್ಯಾರ್ಥಿಗಳಿಗೆ ನೋಟ್ಸ್ ಹಂಚಿಕೆಗೆ ಸಂಪೂರ್ಣ ಸಹಕಾರ ನೀಡಿದ್ದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದರೊಂದಿಗೆ ಮಕ್ಕಳು ಸಮಾಜದಲ್ಲಿ ಆರೋಗ್ಯಯುತ ಜೀವನ ನಡೆಸಿ, ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಅಗತ್ಯವಿರುವ ಪೂರಕ ವಾತಾವರಣ ಅಧಿಕಾರಿಗಳು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಭಿಕ್ಷಾಟಣೆ ಮಾಡುತ್ತಿರುವ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಮಾದಕವ್ಯಸನಿಯ ಮಕ್ಕಳು, ಪರಿತ್ಯಕ್ತ ಮಕ್ಕಳು, ಬಾಲ್ಯವಿವಾಹವಾದ ಮಕ್ಕಳು, ಹಿಂಸೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶಿಕ್ಷಣದಿಂದ ವಂಚಿತರಾದ ಮಕ್ಕಳು ಕಂಡುಬಂದಲ್ಲಿ ಅಂತಹ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆ 1098/ 112 ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು. ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ವೆಬ್ಸೈಟ್ cara.wcd.gov.in ಮುಖಾಂತರ ಅರ್ಜಿಯನ್ನು ಸಲ್ಲಿಸಿ ಕಾನೂನು ಬದ್ಧವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: STAIRS ನ್ಯಾಶನಲ್ ಗೇಮ್ಸ್ – 2025 ಅವರು ಮೇ. 19 ರಿಂದ ಮೇ.22ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣ ನವದೆಹಲಿಯಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಯೂನಿವರ್ಸಿಟಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜು ಸತತ 24ನೇ ಬಾರಿ ಪುರುಷ ಹಾಗೂ ಮಹಿಳಾ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಹಿಳಾ ವಿಭಾಗದಲ್ಲಿ 4 ಚಿನ್ನ, 3 ಬೆಳ್ಳಿ ಪುರುಷರ ವಿಭಾಗದಲ್ಲಿ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚಿನ ಪದಕ ಪಡೆಯುವುದರೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ಮಹಿಳಾ ವಿಭಾಗದ 47ಕೆಜಿ ದೇಹತೂಕ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರಾವ್ಯ ಚಿನ್ನ, ಚಂದ್ರಿಕ ಬೆಳ್ಳಿ, ಅನುಷಾ ಚಿನ್ನ, ಸೀಮಾ ಚಿನ್ನ, ಮಲ್ಲಮ್ಮ ಬೆಳ್ಳಿ, ವಿತಶ್ರೀ ಬೆಳ್ಳಿ ಮತ್ತು ನಾಗಶ್ರೀ ಚಿನ್ನದ ಪದಕವನ್ನು ಗಳಿಸಿದ್ದಾರೆ. ಪುರುಷರ ವಿಭಾಗದಲ್ಲಿ ವಿದ್ಯಾರ್ಥಿ ಹಾಲೇಶ್ ಚಿನ್ನ, ರಮೇಶ್ ಬೆಳ್ಳಿ, ಸಂತೋಷ್ ಚಿನ್ನ, ಗಣೇಶ್ ಕಂಚು, ಪ್ರತ್ಯುಶ್ ಬೆಳ್ಳಿ, ಶಶಾಂಕ್ ಕಂಚು, ನಾಗೇಂದ್ರ ಅಣ್ಣಪ್ಪ ಚಿನ್ನ ಮತ್ತು ಜೋಶುವ ರಾಜಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದೊಂದಿಗೆ ಗ್ರಾಮೀಣ ಪ್ರದೇಶದ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸಿ.ಎ., ಸಿ.ಎಸ್., ಸಿ.ಎಮ್.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉಡುಪಿಯ ವಿ-ರೀಚ್ ಸಂಸ್ಥೆಯ ಸ್ಥಾಪಕರು ಹಾಗೂ ತರಬೇತುದಾರರಾದ ಸಿ.ಎಸ್. ಸಂತೋಷ್ ಪ್ರಭು ಅವರು ಉದ್ಘಾಟಿಸಿ, ವರ್ತಮಾನದಲ್ಲಿ ಸಿ.ಎ., ಸಿ.ಎಸ್., ಸಿ.ಎಮ್.ಎ. ಪ್ರೊಫೆಷನಲ್ ಕೋರ್ಸ್ಗಳ ಮಹತ್ವ ಹಾಗೂ ವಿದ್ಯಾರ್ಥಿಗಳ ಓದಿನ ಕ್ರಮದ ಕುರಿತು ಮಾತನಾಡಿದರು. ಇದೇ ಸಂದರ್ಭ ಈ ಹಿಂದೆ ನಡೆದ ಸಿ.ಎ., ಸಿ.ಎಸ್., ಸಿ.ಎಮ್.ಎ. ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರೊಫೆಷನಲ್ ಕೋರ್ಸ್ ಅಭ್ಯಾಸದ ಪೂರ್ವದಲ್ಲಿ ಇರಬೇಕಾದ ಛಲ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತೆ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕೆ ಇದ್ದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ನೀಡುವ ಕಾರ್ಯ ಶಿಕ್ಷಕರ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಕರೆ ನೀಡಿದರು. ಅವರು ಅಂದು ನಗರದ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ, ಮಾರ್ಚ್ 2022-23 ಮತ್ತು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರುಗಳು ತಮ್ಮ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆತಿದೆ ಎಂದರು. ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ವೃತ್ತಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯನು ಹೊಂದಿರುವ ಜ್ಞಾನವನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡಾಗ ಆತನಲ್ಲಿನ ಜ್ಞಾನ ವೃದ್ಧಿಸುವ ಹಾಗೆಯೇ ನೆತ್ತರನ್ನು ಕೂಡ ದಾನ ಮಡಿದರೆ ಕ್ಷಣ ಮಾತ್ರದಲ್ಲಿ ದಾನ ನೀಡಿದವನ ದೇಹದಲ್ಲಿ ಮೂರು ಪಟ್ಟು ಹೆಚ್ಚು ಉತ್ಪತ್ತಿಯಾಗುತ್ತದೆ. ಜ್ಞಾನ ದೇಗುಲವಾದರೆ ರಕ್ತ ಜೀವರಕ್ಷಕ ಸಂಜೀವಿನಿ. ಈ ನೆಲೆಯಲ್ಲಿ ಇವೆರಡನ್ನೂ ಕೂಡ ಇನ್ನೊಬ್ಬರಿಗೆ ದಾನ ಮಾಡಬಹುದು ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ದಿ. ನರಸಿಂಹ ರಾಮ ಪ್ರಭು ಜನ್ಮಶತಮಾನೋತ್ಸವ ಪ್ರಯುಕ್ತ ಕಾರ್ಯನಿಯಾ ಅಂಧತ್ವ ಮುಕ್ತ ಭಾರತ ಅಭಿಯಾನ (ಕಾಂ) ಯೋಜನೆಯಡಿ ನಯನಾ ನೇತ್ರಾಲಯ ಮಂಗಳೂರು ಮತ್ತು ಭಾರತೀಯ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ನೇತ್ರದಾನ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಾನವ ಕುಲಕ್ಕೆ ಸಹಾಯ ಮಾಡುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಪವಿತ್ರವಾದ ಸಂವಿಧಾನದ ಅಡಿಯಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಗೆದ್ದು ಶಾಸಕರಾಗಿ ಸಂವಿಧಾನದಲ್ಲಿ ಹೇಳಿರುವ ಕರ್ತವ್ಯಗಳನ್ನು ಪಾಲಿಸುವುದಾಗಿ ಸಂವಿಧಾನದ ಹೆಸರಿನಲ್ಲಿಯೇ ಪ್ರಮಾಣವಚನ ಸ್ವೀಕರಿಸಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು, ಸಂವಿಧಾನದಲ್ಲಿ ಉಲ್ಲೇಖವಾಗಿರುವ ಅತ್ಯಂತ ಪವಿತ್ರ ಹಾಗೂ ಅತ್ಯಂತ ಗೌರವಾನ್ವಿತ ಹುದ್ದೆಯಾದ ವಿಧಾನಸಭೆಯ ಸಭಾಧ್ಯಕ್ಷದ ತೀರ್ಮಾನಗಳನ್ನೆ ಸಾರ್ವಜನಿಕವಾಗಿ ಪ್ರಶ್ನಿಸುವ ಮೂಲಕ ಅಸಂವಿಧಾನಿಕ ನಡವಳಿಕೆಯನ್ನು ತೋರುತ್ತಿರುವುದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಸಮಯದಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕಾದ ಒಬ್ಬ ಜನಪ್ರತಿನಿಧಿಯಾಗಿದ್ದ ಅವರು, ಸಭಾಧ್ಯಕ್ಷರ ಪೀಠವನ್ನು ಏರಿ, ಅಧ್ಯಕ್ಷರ ಹಾಗೂ ಪೀಠದ ಮೇಲೆಯೇ ಕಾಗದ ಪತ್ರಗಳನ್ನು ಹರಿದು, ಸಭೆಗೆ ಅಗೌರವ ತೋರಿದ ನೆಲೆಯಲ್ಲಿ ವಿಧಾನಸಭೆಯಿಂದ ಅಮಾನತುಗೊಂಡಿದ್ದ ಅವರು, ಇದೀಗ ಅಮಾನತು ಆದೇಶ ರದ್ದಾದ ಬಳಿಕವೂ ತಮ್ಮ ಹಿಂದಿನ ನಡವಳಿಕೆಯನ್ನೆ ಮುಂದುವರೆಸಿರುವುದು ದುರದೃಷ್ಟಕರ. ಅಧಿವೇಶನದಲ್ಲಿ ಅಮಾನತುಗೊಂಡ ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ದುಂಬಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 107ನೇ ತಿಂಗಳ ಕಾರ್ಯಕ್ರಮ ಇತ್ತೀಚಿಗೆ ವಸಂತಿ ಆರ್. ಪಂಡಿತ್ ಮತ್ತು ದೇವಕಿ ಸುರೇಶ್ ಪ್ರಭು ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ವೇದಿಕೆಯಲ್ಲಿ ಅಧ್ಯಕ್ಷರಾಗಿ ಗೊಂಬೆಯಾಟ ಪ್ರೋತ್ಸಾಹಕರಾದ ರಾಧಾಕೃಷ್ಣ ಪ್ರಭು, ಮುಖ್ಯ ಅತಿಥಿಗಳಾಗಿ ಉಡುಪಿ ಯಕ್ಷಗಾನ ಕೇಂದ್ರದ ಗುರು ಹಾಗೂ ಉಪ್ಪಿನಕುದ್ರು ಗೊಂಬೆಯಾಟ ಮಂಡಳಿಯ ಭಾಗವತರಾದ ಉಮೇಶ್ ಸುವರ್ಣ, ರಮೇಶ್ ಕಾಮತ್, ವಿ. ಶ್ರೀನಿವಾಸ ಪೈ, ಆಡಿಟರ್ ವಾಸುದೇವ ಶ್ಯಾನುಭಾಗ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. 2024-25ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಹಾಗೂ ಕಲಾವಿದೆ ಆಕಾಂಕ್ಷಾ ಎಸ್. ಪೈ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಕೊನೆಯಲ್ಲಿ ಆಕಾಂಕ್ಷಾ ಎಸ್, ಪೈ ಹಾಗೂ ಅವನಿ ಶ್ಯಾನುಭಾಗ್ ಅವರು ನಡೆಸಿಕೊಟ್ಟ ಸುಗಮ ಸಂಗೀತ ಎಲ್ಲರ ಮನ ರಂಜಿಸಿತು. ರಾಜೇಂದ್ರ ಪೈ, ಉಪ್ಪಿನಕುದ್ರು ಅವರು…
