ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024 ನೇ ಸಾಲಿನ Tenzing Norjy National Adventure (T.N.N.A.A) ಪ್ರಶಸ್ತಿಗಾಗಿ 2022 ರಿಂದ 2024 ನೇ ಸಾಲಿನ ವರೆಗೆ ಜಲಸಾಹಸ, ವಾಯುಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://awards.gov.in/ ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 01123386898 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿವೃತ್ತ ಮುಖ್ಯ ಶಿಕ್ಷಕ, ರಾಜ್ಯ ಮಟ್ಟದ ಯೋಗ ಸಂಪನ್ಮೂಲ ವ್ಯಕ್ತಿ ನಾರಾಯಣ ದೇವಾಡಿಗ ಅವರ ನೇತೃತ್ವದಲ್ಲಿ ಹಿರಿಯ ನಾಗರಿಕರ ವೇದಿಕೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ವೇದಿಕೆಯ ಅಧ್ಯಕ್ಷ ಗಿರೀಶ್ ಶ್ಯಾನುಭಾಗರ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ, ಯೋಗಗುರುಗಳಾದ ನಾರಾಯಣ ದೇವಾಡಿಗ ಅವರಿಗೆ ಸನ್ಮಾನಿಸಲಾಯಿತು. ಸದಸ್ಯ ವೆಂಕಟರಮಣರು ಲಯಬದ್ಧವಾಗಿ ಯೋಗ ಗೀತೆ ಹಾಡಿದರು. ನಿಕಟ ಪೂರ್ವ ಅಧ್ಯಕ್ಷ ಪುಂಡಲೀಕ ನಾಯಕರು ಯೋಗದ ಮಹತ್ವವನ್ನು ವಿವರಿಸಿ ಸ್ವರಚಿತ ಯೋಗ ಕವನ ವಾಚಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಉಮೇಶ ರಾಯ್ಕರ್ ಅವರಿಂದ ಪ್ರಾರ್ಥನೆ, ಕಾರ್ಯದರ್ಶಿ ಗೋವಿಂದ ಬಿಲ್ಲವರಿಂದ ಗತಸಭೆಯ ವರದಿವಾಚನ, ಕಾರ್ಯಕ್ರಮ ನಿರೂಪಣೆ ನಡೆಯಿತು. ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಸೀನಿಯರ್ ಛೇಂಬರ್ ವತಿಯಿಂದ ಉಪಹಾರ ವ್ಯವಸ್ಥೆ ಮಾಡಲಾಯಿತು. ವೇದಿಕೆ ಉಪಾಧ್ಯಕ್ಷ ಜಿ. ಈಶ್ವರ, ಸೀನಿಯರ್ ಛೇಂಬರ್’ನ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಜಯಾನಂದ ಪಟಗಾರರು ಉಪಸ್ಥಿತರಿದ್ದು ಶುಭಕೋರಿದರು. ಉಭಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಚಂದಗಾಣಿಸಿದರು. ವೇದಿಕೆಯ ನೋಂದಣಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯಿಂದ ನೀಡಲಾಗಿರುವ ಯೋಗದ ಸಮವಸ್ತ್ರದಲ್ಲಿ ಶಿಸ್ತು ಬದ್ಧರಾಗಿ ಭಾಗವಹಿಸಿದ್ದರು. ಸಂಸ್ಥೆಯ ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಹಾಗೂ ರಾಜ್ಯಮಟ್ಟದ ಯೋಗ ಪರಿಣಿತಿರಾದ ಸಂತೋಷ್ ಕುಮಾರ್ ಹಾಗೂ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ದೈನಂದಿನ ತರಗತಿಗಳಲ್ಲಿ ಯೋಗ ಅಭ್ಯಾಸವನ್ನು ನೀಡುತ್ತಿರುವ ಯೋಗ ಶಿಕ್ಷಕಿ ಜಯಲಕ್ಷಿ ಅವರು, ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು ಮಾಡಿಸುವ ಮೂಲಕ ಅವರಿಗೆ ಯೋಗದ ಮಹತ್ವವನ್ನು ಅದರ ಪರಿಣಾಮವನ್ನು ತಿಳಿಸಿಕೊಟ್ಟು, ಯೋಗವು ಸ್ವಯಂ ಅನ್ವೇಷಣೆ ಮತ್ತು ಸ್ವಯಂ ಸುಧಾರಣೆಯ ಒಂದು ಮಾರ್ಗ ಎಂಬುದರ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ತಮ್ಮ ದೈನಂದಿನ ತರಗತಿಗಳಲ್ಲಿ ಮಾಡುವ ಯೋಗಭ್ಯಾಸದಿಂದ ಆಗುವ ಉಪಯುಕ್ತತೆಯ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಪ್ರಯುಕ್ತ ʼಮನಃಶಾಂತಿಗೆ ಯೋಗ’ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎನ್ನುತ್ತಾ ಯೋಗದ ಮಹತ್ವವನ್ನು ಕುರಿತು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ಅವರು ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕುಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದ ಜೊತೆಗೆ ಜನ ಸ್ನೇಹಿಯಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಆರ್ಥಿಕ ನೆರವು ಸೌಲಭ್ಯಗಳು ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಿಗುವಂತಾಗಬೇಕು. ಪ್ರಧಾನಮಂತ್ರಿ ಜೀವನಜ್ಯೋತಿ, ಸುರಕ್ಷಾ ಭೀಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳು ಲಾಭ ಪಡೆಯುವಂತಾಗಬೇಕು. ಶೈಕ್ಷಣಿಕ ಯೋಜನೆಗಳಿಗೆ ಸಾಲ ನೀಡುವ ನಿಯಮಗಳು ಸರಳೀಕರಣ ಆಗಬೇಕು ಎಂದ ಅವರು, ಸರಕಾರದ ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಆ ಯೋಜನೆಯ ಲಾಭಗಳು ಸಿಗಬೇಕು. ಇಲಾಖೆಯಿಂದ ಆಯ್ಕೆ ಆಗಿ ಬಂದ ಅರ್ಜಿಗಳನ್ನು ತಿರಸ್ಕೃತವಾಗದಂತೆ ನೋಡಿಕೊಳ್ಳಬೇಕು. ಆರ್ಥಿಕ ನೆರವು ನೀಡುವಾಗ ಯಾವುದೇ ಕುಂದು ಕೊರತೆಗಳು ಎದುರಾದಲ್ಲಿ ಅದನ್ನು ಸರಿಪಡಿಸಿ, ನಿಗಧಿತ ಗುರಿ ಸಾಧನೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುರುಕುಲ ಶಾಲೆಯ ಪುಷ್ಪ ವಾಟಿಕಾದಲ್ಲಿ ರಕ್ಷಕ-ಶಿಕ್ಷಕ ಸಭೆ & ಫಾದರ್ಸ್ ಡೇ ಆಚರಣೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಂಪೂರ್ಣ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುತ್ತಿದೆ, ಜೊತೆಗೆ ಪೋಷಕರಿಗಾಗಿ ಕೂಡ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಎಲ್ಲಾ ಚಟುವಟಿಕೆಗಳಲ್ಲಿ ನೀವು ಭಾಗವಹಿಸಿ,ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರದ ಜೊತೆಗೆ ತಂದೆಯ ಪಾತ್ರ ತುಂಬಾ ಮುಖ್ಯ ಎಂದರು. ಪೋಷಕರು ಸಾಧ್ಯವಾದಷ್ಟು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸುವುದರ ಜೊತೆಗೆ ಜವಾಬ್ದಾರಿಯುತ ಪೋಷಕರಾಗಿ ಪ್ರತಿ ಹಂತದಲ್ಲಿ ಅವರನ್ನು ತಿದ್ದುವ ಕೆಲಸವನ್ನು ಮಾಡಿದಾಗ ಮಾತ್ರ ಆ ಮಗುವು ಮುಂದೆ ಸಮಾಜದಲ್ಲಿ ಉತ್ತಮ ಸತ್ಪ್ರಜೆಯಾಗಿ ಸಮಾಜವನ್ನು ಮುನ್ನಡೆಸಲು ಸಾಧ್ಯ ಎಂದರು. ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಶೈಕ್ಷಣಿಕ ಸಾಲಿನ ಕಾರ್ಯ ಚಟುವಟಿಕೆಗಳು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು. ಅವರು ಇಂದು ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಅಮೃತೇಶ್ವರೀ ದೇಗುಲಕ್ಕೆ ಉಡುಪಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿದ ಸ್ವರೂಪಾ ಟಿ.ಕೆ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಜಿಲ್ಲಾಧಿಕಾರಿ ಅವರನ್ನು ಬರಮಾಡಿಕೊಂಡು ಸ್ವಾಗತಿಸಿದರು. ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿಕೊಂಡ ಜಿಲ್ಲಾಧಿಕಾರಿಯವರನ್ನು ದೇಗುಲದ ವತಿಯಿಂದ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು. ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ಸುಧಾ ಪೂಜಾರಿ, ಜ್ಯೋತಿ ದೇವದಾಸ್, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ರಾಜು ಪೂಜಾರಿ, ಸುಬ್ರಾಯ ಜೋಗಿ, ಸ್ಥಳೀಯ ದೇವೇಂದ್ರ ಗಾಣಿಗ, ಭರತ್ ಗಾಣಿಗ, ಅರ್ಚಕರಾದ ವೀರಭದ್ರ, ರಾಘವೇಂದ್ರ ಜೋಗಿ, ವಿಜಯ ಜೋಗಿ, ದೇಗುದ ವ್ಯವಸ್ಥಾಪಕ ಗಣೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಮಾಹಿತಿ ನೀಡಿದರು. ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು…
