Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತಾಶ್ರಯದಲ್ಲಿ ನಡೆದ, ಕುಂದಾಪುರ  ತಾಲೂಕು ಮಟ್ಟದ 17ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.  ವಿದ್ಯಾರ್ಥಿನಿಯಾರಾದ ಮಾನಸ ವಿ. ನಾಯಕ್, ಹರ್ಷಿತ ವಿ. ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ, ಅವರ ವಿಚಾರಧಾರೆಗಳು ಸಾರ್ವಕಾಲೀಕ ಶ್ರೇಷ್ಠವಾಗಿದ್ದು, ಜನರು ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಂಡಾಗ ಸಾರ್ಥಕವಾಗುತ್ತಾರೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಭಾನುವಾರ ಇಲ್ಲಿನ ಜೆ.ಎನ್.ಆರ್ ಸಭಾಭವನದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರಾಗಿದ್ದರು. ಅವರ ವಿಚಾರಧಾರೆಗಳನ್ನು ಯುವ ಪಿಳಿಗಿಗೆ ತಲುಪಿಸಬೇಕು ಎಂಬ ಹಿನ್ನೆಲೆಯಲ್ಲಿ ಅವರ ಜನ್ಮ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಗಿದೆ ಎಂದರು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ಪ್ರಧಾನಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಭಾಷೆಯೆನ್ನುವುದು ಬರಿ ಕಲಿಕೆಯಲ್ಲ ಅದೊಂದು ಸಂವಹನ ಮಾಧ್ಯಮ ಈ ದಿಸೆಯಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆ ಪ್ರಯುಕ್ತ ಮದರ್ ತೆರೆಸಾ ಮೆಮೋರಿಯಲ್  ಸ್ಕೂಲ್ ಶಂಕರನಾರಾಯಣದಲ್ಲಿ ಹಿಂದಿ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಉತ್ತಮವಾದ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ಹಾಗೂ ಆಡಳಿತ ಮಂಡಳಿಯವರು ಹಾಗೂ ಶಾಲಾ ಸಂಸತ್ತಿನ ಸದಸ್ಯರಾದ ವಿದ್ಯಾರ್ಥಿಗಳು ದೀಪಾರಾದನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಿಂದಿ ಭಾಷೆಯ ಮಹತ್ವವನ್ನು ಸಾರುವ ವಿವಿಧ ರೀತಿಯ ನಾಟಕ ನೃತ್ಯ ಪ್ರಹಸನಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಅರ್ಥಪೂರ್ಣವಾದ ಮೆರುಗನ್ನು ನೀಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಹಿಂದಿ ಭಾಷಾ ಶಿಕ್ಷಕಿ ನಯನ ಕಾಮತ್ ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸುವುದರೊಂದಿಗೆ, ಮಕ್ಕಳ ಹಿಂದಿ ಸಂವಹನವನ್ನು ಗುರುತಿಸಿ ಪ್ರಶಂಸಿಸಿದರು. ಬರಿ ಭಾಷೆಗಳಷ್ಟೇ ಜೀವನವಲ್ಲ ಬದಲಾಗಿ ಭಾಷೆಯ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿದರು. ಹಾಗೂ ತಾವು ಸೇವೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ ಸದಸ್ಯರಾದ ಶ್ರೀ ಸುಬ್ರಮಣ್ಯ ಶೆಟ್ಟಿಯವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕ ಜವಾಬ್ದಾರಿ ಹಾಗೂ ಸೇವೆಯ ಮಹತ್ವ ದ ಕುರಿತು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಬಿಸಿ ಟ್ರಸ್ಟ್ ಇದರ ಕಾರ್ಯಕ್ರಮ ಅಧಿಕಾರಿಗಳಾದ ಉಮೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ರೇಂಜರ್ ಲೀಡರ್ ಜೋಸ್ಲಿನ್ ರೇನಿಟಾ ಅಲ್ಮೆಡಾ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮನುಷ್ಯನಿಗೆ ಕಣ್ಣು ಅತ್ಯವಶ್ಯಕ. ಕಣ್ಣಿನ ತೊಂದರೆ ಬರುವ ತನಕ ಕಾಯದೆ ಕಾಲ ಕಾಲಕ್ಕೆ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು. ಕಣ್ಣಿನ ದೋಷಗಳ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ನಿಯಮಿತ ಆಹಾರ, ತಪಾಸಣೆ ಹಾಗೂ ಚಿಕಿತ್ಸೆ ಇವುಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಮರಣಾನಂತರ ಕಣ್ಣುಗಳನ್ನು ದಾನ ಮಾಡಲು ಮುಂದಾಗಬೇಕು. ಆ ಮೂಲಕ ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗಬೇಕು ಎಂದು ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೊ ಫೆರ್ನಾಂಡಿಸ್ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ, ಗ್ರಾಮ ಪಂಚಾಯತ್ ತ್ರಾಸಿ, ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ ಆರೋಗ್ಯ ಆಯೋಗ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ತ್ರಾಸಿ ಮಿಲೇನಿಯಂ ಹಾಲ್‌ನಲ್ಲಿ ಭಾನುವಾರ ನಡೆದ ನೇತ್ರ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಡಿ.ಬಿಜೂರು ಮತ್ತು ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುಂದಾಪುರ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿತು. ಈ ವೇಳೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಕಾರ್ಯಾಧ್ಯಕ್ಷರಾಗಿ ಶ್ರೀನಿವಾಸ ಕೆ. ಅವರು ಅವಿರೋಧವಾಗಿ ಆಯ್ಕೆಯಾದರು. ಅವರು ಹೆಬ್ರಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಹಾಸಂಘದ ಅಧ್ಯಕ್ಷರಾಗಿ ಎಚ್.‌ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪಿ. ಎಸ್ ಅವರು ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ನಾಗರಾಜ ಕಾಮಧೇನು, ಸೀತಾರಾಮ‌ಹಳದಿಪುರ, ಮಂಜುನಾಥ ಕೆ.ಎನ್., ವಾಮನ ರಾವ್ ಬೇಕಲ್, ಬಿ.ಎಂ.‌ನಾಥ್, ಕಾರ್ಯದರ್ಶಿಗಳಾಗಿ ಷಣ್ಮುಕ, ಡಿ. ಸತೀಶ್, ಅಣ್ಣಪ್ಪ ನಾಯ್ಕ್, ಗಣಪತಿ ಹೋಬಳಿದಾರ್, ರಶ್ಮಿರಾಜ್ ಕುಂದಾಪುರ, ಕೋಶಾಧಿಕಾರಿಯಾಗಿ ಕರುಣಾಕರ ಯು, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪಿ. ನಾಯ್ಕ್, ಅನಿಲ್ ಹೊಸನಗರ, ಪದ್ಮನಾಭ ಕೊತ್ವಾಲ್, ಮಂಜುನಾಥ ಎನ್, ಲೆಕ್ಕ ಪರಿಶೋಧಕರಾಗಿ ಗಣಪತಿ ಎನ್. ಶೇರುಗಾರ್, ಕಾನೂನು‌ಸಲಹೆಗಾರರಾಗಿ ಹೂವಯ್ಯ ಶೇರುಗಾರ್, ಸಂಪಾದಕರುಗಳಾಗಿ ರೇಖಾ‌ಸುದೇಶ್ ಆಯ್ಕೆಯಾಗಿದ್ದಾರೆ. ಒಟ್ಟು 45 ಮಂದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾವೆಲ್ಲ ಒಂದೇ ಎನ್ನುವ ಭಾವನೆಯಿಂದ ಸಾಮರ್ಥ್ಯ, ದೌರ್ಬಲ್ಯ, ಅವಕಾಶ, ವಿಪ್ಪತ್ತುಗಳ ಬಗ್ಗೆ ಪರಾಮರ್ಶೆ ಮಾಡಿ ಧನಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಾಧನೆ ಖಂಡಿತ ಸಾಧ್ಯ ಎಂದು ಬೆಂಗಳೂರಿನ ಸೋನಾ ಸಮೂಹ ಸಂಸ್ಥೆಗಳ ಸಿ.ಇ.ಓ ಕಮ್ಮಾಜೆ ಯಜ್ಞನಾರಾಯಣ ಹೇರ್ಳೆ ಹೇಳಿದರು. ಅವರು ಸಾಲಿಗ್ರಾಮ ಗುರುನರಸಿಂಹ ಸಭಾಭವನದ ಡಾ. ಕೋಟ ಶಿವರಾಮ ಕಾರಂತ ವೇದಿಕೆಯಲ್ಲಿ ಭಾನುವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಸಹಯೋಗದಲ್ಲಿ ನಡೆದ ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಕೇಂದ್ರೀಯ ಮಹಾಧಿವೇಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರಲ್ಲಿ ಸಂಘಟನಾ ಶಕ್ತಿ ಹೆಚ್ಚಿದೆ. ಸಂಪನ್ಮೂಲದ ಕೊರತೆ ಇಲ್ಲ. ಆದರೆ ಕಾಲು ಎಳೆಯುವವರ ಸಂಖ್ಯೆ ಹೆಚ್ಚಿದೆ. ಇದನ್ನೆಲ್ಲ ಮೀರಿ ನಾವು ಮುಂದೆ ಬರುವಂತೆ ಯುವ ಜನಾಂಗಕ್ಕೆ ತಿಳಿಸಿಕೊಡುವ ಅಗತ್ಯತೆ ಇದೆ ಎಂದ ಅವರು ನಮ್ಮ ಬ್ಯ್ಯಾಂಡ್‌ನಾವೇ ಸೃಷ್ಟಿಸಬೇಕು. ನಾವು ಕೋಟ ಬ್ರಾಹ್ಮಣರು ಎನ್ನುವುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಇದರಿಂದ ಕೂಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ರೈತಾಪಿ ವರ್ಗಗಳ ಅನುಕೂಲಕ್ಕಾಗಿ ಸ್ಥಾಪನೆಗೊಂಡ ಸಕ್ಕರೆ ಕಾರ್ಖಾನೆಯಾಗಿದೆ. ಕಾರಾವಳಿ ಜಿಲ್ಲೆಯಲ್ಲಿ ಸಾಕಷ್ಟು ಹಡಲು ಭೂಮಿಗಳಿವೆ. ಆ ಭೂಮಿಗಳಲ್ಲಿ ಜಿಲ್ಲೆಯ ರೈತರಿಗೆ ಕಬ್ಬು ಬೆಳೆಯಲು ಉತ್ತೇಜನ ನೀಡುವ ಜತೆಗೆ ಸಾಲ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಬೇಕು ಎಂದು ಕಮಲಶಿಲೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ಹೇಳಿದರು. ಅವರು ನಾಗರಿಕ ಸಮ್ಮಾನ ಸಮಿತಿ ಸಿದ್ದಾಪುರ ಇವರ ವತಿಯಿಂದ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಅಧ್ಯಕ್ಷರಾಗಿ ಚುನಾಯಿತರಾದ ಬಿ. ಸತೀಶ್ ಕಿಣಿ ಬೆಳ್ವೆ ಹಾಗೂ ಉಪಾಧ್ಯಕ್ಷ ಎಸ್. ಸಂಜೀವ ಶೆಟ್ಟಿ ಸಂಪಿಗೇಡಿ ಅವರಿಗೆ ಸಿದ್ದಾಪುರ ಶ್ರೀ ರಂಗನಾಥ ಸಭಾಭವನದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ನೆರವೇರಿಸಿ, ಮಾತನಾಡಿದರು. ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಸತೀಶ್ ಕಿಣಿ ಬೆಳ್ವೆ ಮತ್ತು ಸಂಪಿಗೇಡಿ ಸಂಜೀವ ಶೆಟ್ಟಿ ಅವರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದು ರೈತಾಪಿ ವರ್ಗದಲ್ಲಿ ಆಶಾದಾಯಕಾಗಿದೆ ದ.ಕ.ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಸೈಂಟ್ ಜೋಸೆಫ್ ಸ್ಕೂಲ್ ಹೈದರಾಬಾದಿನ ಹಬ್ಸಿಗೋಡಾದಲ್ಲಿ ನಡೆದ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಕರ್ನಾಟಕ ತಂಡದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಈ ತಂಡದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯ 9ನೇಯ ತರಗತಿಯ ವಿದ್ಯಾರ್ಥಿ ಸಚೇತ್ ಎ ಪಿ ಪಾಲ್ಗೊಂಡಿದ್ದು ಶಾಲೆಗೆ ಕೀರ್ತಿಯನ್ನು ತಂದಿದ್ದಾನೆ. ಅವನು ಬಾಗಲಕೋಟೆಯ ನಿವಾಸಿಗಳಾದ ಅದೀವೆಪ್ಪ ಎಸ್. ಪಡದಾಲಿ ಮತ್ತು ಕಮಲ ಕೆ ದಂಪತಿಗಳ ಸುಪುತ್ರನಾಗಿದ್ದಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಯನ್ನು ಹಾಗೂ ತರಬೇತಿ ನೀಡಿ ಪ್ರೋತ್ಸಾಹಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನೂ, ಅಭಿನಂದನೆ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಾಲೆಯ ಸಾಧನೆ. ಶಾಲೆಯ ಪ್ರತಿಯೊಬ್ಬ ಸದಸ್ಯನೂ ಸದಾ ವಿದ್ಯಾರ್ಥಿಗಳ ಹಿತಚಿಂತನೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಾಧಕರಾದ ಮಿತ್ರರಿಂದ ಸಾಧನೆಯ ಹೆಜ್ಜೆಗಳ ಬಗ್ಗೆ ತಿಳಿದುಕೊಳ್ಳಬೇಕು. ಸಿಕ್ಕ ಅವಕಾಶವನ್ನು ಚೊಕ್ಕವಾಗಿ…

Read More