ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಯಾಗಿದ್ದು, ಅದನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳು ಮಕ್ಕಳು ಬಾಲ್ಯಾವ್ಯವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರಾಗುತ್ತಾರೆ. ಒತ್ತಾಯ ಪೂರ್ವಕವಾಗಿ ಮಕ್ಕಳು ದುಡಿಮೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತವಾಗುವುದರ ಜೊತೆಗೆ ಮಗು ಅನೇಕ ಪರಿಣಾಮವನ್ನು ಎದುರಿಸಿ, ಮುಂದೆ ಸಮಾಜಘಾತುಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.12: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 13ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಭಯ ತಿಟ್ಟುಗಳ ಮೇರು ಕಲಾವಿದ, ಕಟೀಲು ಮೇಳದಲ್ಲಿ 2 ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ್ದ ಕೋಡಿ ಕುಷ್ಟ ಗಾಣಿಗ (78) ಅಲ್ಪಕಾಲ ದ ಅಸೌಖ್ಯದಿಂದ ಜೂ.12ರ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮಿಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದ್ರೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾ ಪೂತನಿ, ಮಾಯಾ ಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀ ಪಾತ್ರದ ನವರಸಗಳಲ್ಲಿಯೂ ನಿಸ್ಸೀಮರಾಗಿದ್ದರು. ಪುರುಷ ವೇಷಗಳಾದ ಪರಶುರಾಮ, ವಿಷ್ಣು, ಕೃಷ್ಣ ಪಾತ್ರಗಳನ್ನು ಮಾಡುತ್ತಿದ್ದರು. ಅವರು ಅಮೃತೇಶ್ವರಿ, ಮಾರಣಕಟ್ಟೆ, ಕಲಾವಿಹಾರ ಮೇಳ, ರಾಜರಾಜೇಶ್ವರೀ ಮೇಳ ಹಾಗೂ ಸುದೀರ್ಘವಾಗಿ ಕಟೀಲು ಮೇಳದಲ್ಲಿ ಒಟ್ಟು ಸುಮಾರು ಮೂರುವರೆ ದಶಕಗಳ ಕಾಲ ತಿರುಗಾಟ ಮಾಡಿದ್ದಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಐರೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಬುಕಳದ ಸಮೀಪ ದೂಳಂಗಡಿ ಎಂಬಲ್ಲಿ ಹರಿಯುವ ನೀರಿಗೆ ತಡೆಯಾಗಿದ್ದ ಕಂಪೌಂಡ್ ತೆರವು ಕಾರ್ಯಚರಣೆ ನಡೆಸಲಾಯಿತು. ದೂಳಂಗಡಿಯ ಸಾವಿತ್ರಿ ಗಾಣಿಗರ ಮನೆಗೆ ಬಾರಿ ಮಳೆಗೆ ನೀರು ನುಗ್ಗಿದ ಪರಿಣಾಮ ಮನೆ ವಠಾರ ನೀರಿನಿಂದ ಆವೃತವಾಗಿದ್ದು ಮನೆಯಾಕೆ ಈ ಬಗ್ಗೆ ಬ್ರಹ್ಮಾವರದ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ದೂರು ನೀಡಿದ ಹಿನ್ನಲ್ಲೆಯಲ್ಲಿ ಸ್ಥಳಕ್ಕೆ ಕೋಟ ಕಂದಾಯ ನಿರೀಕ್ಷಕ ಮಂಜು ಬಿಲ್ಲವ ಹಾಗೂ ಐರೋಡಿ ಗ್ರಾಮ ಲೆಕ್ಕಿಗ ಚಲುವರಾಜು ಬಾರಿ ಮಳೆಯ ನಡುವೆಯೂ ಪರಿಶೀಲಿಸಿದ್ದು ಸನಿಹದ ಒಂದೇರಡು ಮನೆಯವರು ಸರಾಗವಾಗಿ ಹರಿಯುವ ನೀರಿಗೆ ಕಂಪೌಂಡ್ ಕಟ್ಟಿ ತಡೆಯೊಡ್ಡಿದ್ದರು. ಈ ದಿಸೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ತೆರವು ಗೊಳಿಸಿ ನೀರು ಸರಗವಾಗಿ ಹರಿದು ಹೋಗುಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಸ್ಥಳದಲ್ಲಿದ್ದ ಸುತ್ತಮುತ್ತಲಿನ ಮನೆಯವರು ನಿಟ್ಟುಸಿರು ಬೀಡುವಂತ್ತಾಗಿದೆ. ಅಧಿಕಾರಿ ದಿಢೀರ್ ಕಾರ್ಯಾಚರಣೆಗೆ ವ್ಯಾಪಕಪ್ರಶಂಸೆ ವ್ಯಕ್ತವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಥಬೀದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ಗುರುರಾಜ ಗಂಟಿಹೊಳೆ ಅವರು ಇತ್ತಿಚಿಗೆ ಉದ್ಘಾಟಿಸಿದರು. ಈ ಹಿಂದೆ ಅಂಗನವಾಡಿ ಕೇಂದ್ರ ಸ್ಥಾಪನೆ ಮಾಡಲು ಕಾರಣಿಕರ್ತರಾದ ದಿ. ಚಂದು ಗಾಣಿಗ ಅವರ ಪರವಾಗಿ ಮಗನಾದ ರಾಧಾಕೃಷ್ಣ ಗಾಣಿಗ ಅವರನ್ನು ಹಾಗೂ ಅಂಗನವಾಡಿಯ ಕುಂದು ಕೊರತೆಗಳಿಗೆ ಎಲ್ಲಾ ಕೆಲಸ ಕಾರ್ಯಗಳಿಗೆ ನಿರಂತರ ಶ್ರಮಿಸಿದ ಶ್ರೀ ದುರ್ಗಾ ಫ್ರೆಂಡ್ಸ್ ಸಂಸ್ಥೆಯ ಪರವಾಗಿ ಸಂಸ್ಥೆಯ ಅಧ್ಯಕ್ಷರಾದ ಮಂಜುನಾಥ ದೇವಾಡಿಗ ಹಾಗೂ ಅಂಗನವಾಡಿಯ ಕಾರ್ಯಕರ್ತೆ ಸುಗುಣ ಮತ್ತು ಸಹಾಯಕಿ ಭಾರತಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಥಬೀದಿ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ದುರ್ಗಾ ಫ್ರೆಂಡ್ಸ್ ಸಂಸ್ಥೆ ಅವರು ನೀಡಿದ ಪುಸ್ತಕ ವನ್ನು ಮಾನ್ಯ ಶಾಸಕರು ಮಕ್ಕಳಿಗೆ ವಿತರಿಸಿದರು ಹಾಗೆ ಅಂಗನವಾಡಿಯ ಕಾರ್ಯಕ್ರಮ ಗಳಿಗೆ ಸಹಕಾರ ನೀಡಿದ ಮಹನೀಯರನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಪುಟಾಣಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಉಪ್ಪುಂದ ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷರಾದ ಮೋಹನಚಂದ್ರ, ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಸಮಾಜ ಮತ್ತು ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್ https://www.kaushalkar.com/ ನಲ್ಲಿ ಆನ್ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.govt.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡದ ಕವಿ ಮತ್ತು ಬರಹಗಾರರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ಕನ್ನಡ ಸರಸ್ವತ ಲೋಕಕ್ಕೆ ತಮ್ಮದೇ ಆದ ಚಾಪನ್ನು ಮೂಡಿಸಿರುವ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿಯವರಿಗೆ ಭಾವಪೂರಕವಾಗಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಪಾರ ಕೊಡುಗೆಯನ್ನು, ನಮ್ಮನ್ನು ಅಗಲಿದ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರ ಸಾಧನೆಯನ್ನು ಕುರಿತು ಬಿಇಡಿ ಪ್ರಶಿಕ್ಷಣಾರ್ಥಿಗಳು ಮಾತನಾಡಿದರು. ಇನ್ನು ಕೆಲವು ವಿದ್ಯಾರ್ಥಿಗಳು ಅವರು ರಚಿಸಿದ ಭಾವಗೀತೆಗಳನ್ನು ಹಾಡುವ ಮೂಲಕ ಗೀತ ಗೌರವವನ್ನೂ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಿದ್ದಪ್ಪ ಕೆ. ಎಸ್. ಅವರು ಭಾಗವಹಿಸಿ ಮಾತನಾಡಿ, ಮರಣಿಸಿರುವ ವ್ಯಕ್ತಿಗಳನ್ನು ಅಂದರೆ ಸಾಧಕರನ್ನು ಸ್ಮರಿಸಿಕೊಳ್ಳಬೇಕು ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿಸ್ ಸಮೂಹ ಶಿಕ್ಷಣದ ಅಧ್ಯಕ್ಷರು ಆದ ಅಬ್ದುಲ್ ರೆಹಮಾನ್ ಅವರು ವಹಿಸಿದ್ದರು. ಪ್ರವೀಣ್ ಕುಮಾರ್ ಕೆಪಿ ಉಪ ಪ್ರಾಂಶುಪಾಲರು ಮತ್ತು ದಾಖಲಾತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಭಕ್ತರೋರ್ವರು ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ) ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಲಾಯಿತು. ತುಮಕೂರು ಜಿಲ್ಲೆಯಶಿರಾದ ಡಾ| ಕೆ. ಲಕ್ಷ್ಮೀನಾರಾಯಣ ಕುಟುಂಬ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಬೆಳಗ್ಗೆ ರಥಬೀದಿಯಿಂದ ವಾದ್ಯಘೋಷ ಗಳೊಡನೆ ಚಿನ್ನದ ಮುಖವಾಡವನ್ನು ದೇಗುಲಕ್ಕೆ ತರಲಾಯಿತು. ಅರ್ಚಕ ಕೆ.ಎನ್. ಸುಬ್ರಹ್ಮಣ್ಯ ಅಡಿಗ, ನರಸಿಂಹ ಭಟ್, ಕಾಳಿದಾಸ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀದೇವಿಗೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತಕುಮಾರ್ ಶೆಟ್ಟಿ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ ಸುಧಾ ಮತ್ತಿತರರು ಇದ್ದರು. ಜೂ. 10ರಂದು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರ ನೇತೃತ್ವದಲ್ಲಿ ಈ ಮುಖವಾಡಕ್ಕೆ ಶೃಂಗೇರಿ ದೇಗುಲದಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆಯುರ್ವೇದ ವೈದ್ಯ ಡಾ। ಕೆ.ಲಕ್ಷ್ಮೀನಾರಾಯಣ ಅವರು 45 ವರ್ಷಗಳ ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಹತ್ಮಾ ಜ್ಯೋತಿಬಾಪುಲೆ ಕೊರಗರ ಕಲಾ ವೇದಿಕೆ ನೇತೃತ್ವದಲ್ಲಿ ತಾಲೂಕಿನ ಕೊರಗರ ಭೂಮಿ ಸಮಸ್ಯೆ ಮತ್ತು ಇತರ ಬೇಡಿಕೆ ಆಗ್ರಹಿಸಿ ನಮ್ಮ ಭೂಮಿ ನಮ್ಮ ಹಕ್ಕು ಪ್ರತಿಭಟನಾ ರ್ಯಾಲಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯಿತು. ಈ ಸಂದರ್ಭ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿ, ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಲಾಯಿತು. ತಾಲೂಕಿನ ಕೊರಗ ಸಮುದಾಯದ ಹಲವು ಕುಟುಂಬಗಳು ಭೂಮಿಯಿಂದ ವಂಚಿತರಾಗಿದ್ದಾರೆ. ಕೊರಗರಿಗೆ ಭೂಮಿ ನೀಡುವ ಬಗ್ಗೆ ಹಲವು ಬಾರಿ ಸಭೆ ನಡೆದಿದ್ದರೂ ಕೂಡ ಈವರೆಗೆ ಯಾವ ಕುಟುಂಬಗಳಿಗೂ ಭೂಮಿ ನೀಡುವ ಕಾರ್ಯ ನಡೆದಿಲ್ಲ ಶೀಘ್ರ, ಕೊರಗ ಸಮುದಾಯದವರಿಗೆ ಕೃಷಿ ಚಟುವಟಿಕೆಗಳಿಗೆ ಯೋಗ್ಯವಾದ ಭೂಮಿ ನೀಡಬೇಕು ಹಾಗೂ ಮೂಲ ಸೌಕರ್ಯ ಕಲಿಸಬೇಕು ಎಂದು ಆಗ್ರಹಿಸಿದರು. ಪ್ರತೀ ಎರಡು ತಿಂಗಳಿಗೊಮ್ಮೆ ಕೊರಗರ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಕೊರಗರ ಭೂಮಿ ಹಾಗೂ ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆಯನ್ನು ಕರೆಯಬೇಕು. ಆ ಸಭೆಯಲ್ಲಿ ಕಂದಾಯ ಇಲಾಖೆಯ ಗ್ರಾಮಆಡಳಿತಾಧಿಕಾರಿ,…
