ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ಕೋಡಿ ಕನ್ಯಾಣ ಇದರ 2024-258ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀ ದೇವಿ ಮಾರಿಕಾಂಬ ನಾಲ್ಕು ಪಾದದ ಹೈಗುಳಿ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್.ಕೆ. ಮಾತನಾಡಿ, ಕರಾವಳಿ ಭಾಗದಲ್ಲಿ ಸಹಕಾರಿ ಸಂಘಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಸುತ್ತಿದೆ ಅದರಲ್ಲಿ ಶ್ರೀದೇವಿ ಮಾರಿಕಾಂಬ ಸಹಕಾರಿ ಸಂಘ ಜನಸ್ನೇಹಿಯಾಗಿ ಆರ್ಥಿಕ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಿದರು. ಸಂಘವು ವರದಿ ವರ್ಷದಲ್ಲಿ 25,34,946 ರಷ್ಟು ಲಾಭವನ್ನು ಗಳಿಸಿ ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಕೆ. ಸಭೆಯ ಅಧ್ಯಕ್ಷತೆ ವಹಿಸಿ ಘೋಷಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಸಂಪ ಟೀಚರ್ ಹಾಗೂ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡ ಗಣಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2024-5ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 13325 ಸದಸ್ಯರನ್ನು ಮತ್ತು 1.79 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 39.35 ಕೋಟಿ ಠೇವಣಿಯನ್ನು ಹೊಂದಿದ್ದು, 19.63 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬ್ಯಾಂಕ್ 30.36 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಪಾಲು ಮುನಾಫೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ರಾಮ ಮಂದಿರದ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಸೇವೆ ನೀಡಲು ಶ್ರಮಿಸಲಾಗುವುದು. ಹೊರಬಾಕಿ ಸಾಲ ವಸೂಲಾತಿಗೆ ಕ್ರಮಕೈಗೊಂಡು ಬ್ಯಾಂಕ್ ಹೆಚ್ಚಿನ ಲಾಭ ಗಳಿಸಲು ಪ್ರಯತ್ನಿಸಲಾಗುವುದು. ಬ್ಯಾಂಕಿನ ಮೂರು ಶಾಖೆಗಳಲ್ಲಿ ಗ್ರಾಹಕರಿಗೆ ಅಗತ್ಯವಿರುವ ಬ್ಯಾಂಕಿಂಗ್ ಸೌಲಭ್ಯ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.19: ಇಲ್ಲಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಜಗದೀಶ ಪೂಜಾರಿ ಅವರು ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ. 1.10 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 73.95 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 48.52 ಕೋಟಿ ಸಾಲ ನೀಡಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ ಎಂದರು. ಉಪಾಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ, ನಿರ್ದೆಶಕರುಗಳಾದ ನರಸಿಂಹ ದೇವಾಡಿಗ, ಗಣೇಶ ಪೂಜಾರಿ, ಶ್ರೀನಿವಾಸ ಪೂಜಾರಿ, , ಹರಿಶ್ಚಂದ್ರ ಆಚಾರ್ಯ, ಪ್ರಭಾಕರ ಎಂ. ಖಾರ್ವಿ, ಗಣೇಶ ಕೆ. ಪೂಜಾರಿ, ವೀರೇಂದ್ರ ಹೆಗ್ಡೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಇಂಡಿಯನ್ ಪಬ್ಲಿಕ್ ಸ್ಕೂಲ್ ಜ್ಞಾನದೇಗುಲ ಎಸ್.ವಿ ಎಸ್ ಕ್ಯಾಂಪಸ್ ತುರುವೆಕೆರೆ ತುಮಕೂರು ಇವರ ಪ್ರಾಯೋಜಕತ್ವದಲ್ಲಿ ಪಡುಕೋಣೆ ದ್ರಾವಿಡ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್ ಯಲಹಂಕ ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯ 10ನೇ ತರಗತಿಯ ವಿದ್ಯಾರ್ಥಿ ಶುಭನ್ ಪುತ್ರನ್ ಭಾಗವಹಿಸಿ 62 ಕೆಜಿ ವಿಭಾಗದಲ್ಲಿ ಪ್ರಥಮಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಯನ್ನು ಹಾಗೂ ತರಬೇತಿ ನೀಡಿ ಪ್ರೋತ್ಸಾಹಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನೂ, ಅಭಿನಂದನೆ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆಯು ಸುಪ್ತವಾಗಿರುತ್ತದೆ. ಯಾವ ವಿದ್ಯಾರ್ಥಿಯಲ್ಲಿ ಯಾವ ರೀತಿಯ ಪ್ರತಿಭೆ ಇರುವುದೆಂದು ತಿಳಿಯಲು ಅಸಾಧ್ಯ. ಅವರಿಗೆ ಯೋಗ್ಯ ವೇದಿಕೆಯನ್ನು ಒದಗಿಸಿಕೊಡುವುದಷ್ಟೇ ಪೋಷಕರ ಹಾಗೂ ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್a ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ. ಅವರು ಧನ್ಯವಾದ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಹೊಂಡಗಳ ಜೊತೆ ಬಿಜೆಪಿ ನಾಯಕರುಗಳು ಸೆಲ್ಫಿ ತೆಗೆದುಕೊಳ್ಳುವಾಗ ಅವರ ಶಾಸಕರು ಹಾಗೂ ಸಂಸದರನ್ನು ಹೊಂಡದ ಪಕ್ಕದಲ್ಲಿ ನಿಲ್ಲಿಸಿ ಫೋಟೋ ತೆಗೆಯುವುದು ಉತ್ತಮವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಕ್ರಮವಹಿಸಬೇಕಾದದ್ದು ಶಾಸಕರು ಹಾಗೂ ಸಂಸದರ ಕರ್ತವ್ಯ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಮಟ್ಟಿಗೆ ಹೇಳಬೇಕೆಂದರೆ ಕಳೆದ ಆರು ಅವಧಿಯಿಂದ ಇಲ್ಲಿ ಬಿಜೆಪಿ ಶಾಸಕರು ಅಧಿಕಾರಲ್ಲಿದ್ದಾರೆ, ಇವತ್ತು ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ಕೂಡ ಕಾರಣ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷದ ಜನಪ್ರತಿನಿದಿನಗಳ ನಿರ್ಲಕ್ಷದಿಂದ ಕುಳಿ ಬಿದ್ದಿರುವ ರಸ್ತೆಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುವುದು ಬಿಜೆಪಿ ಪಕ್ಷದವರ ರಾಜಕೀಯ ದಿವಾಳಿತನದ ಪರಮಾವದಿಯಾಗಿದೆ. ಬಿಜೆಪಿ ಪಕ್ಷದ ಜನಪ್ರತಿನಿದಿನಗಳಿಗೆ ಅಭಿವೃದ್ಧಿಯ ಚಿಂತನೆಯಿದ್ದರೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ರಾಜ್ಯಕ್ಕೆ ಬಾರದೆ ಇರುವ ನಮ್ಮ ತೆರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಉಡುಪಿ ಜಿಲ್ಲೆ) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಇದರ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಕ್ರೀಡಾ ಸ್ಪೂರ್ತಿಯಿಂದ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕ್ರೀಡೆಯ ಮೆರುಗನ್ನು ಹೆಚ್ಚಿಸುವಂತಾಗಬೇಕು ಎಂದು ಆಶಿಸಿದರು. ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ, ಸೋಲೇ ಗೆಲುವಿನ ಮೆಟ್ಟಿಲು. ಸೋಲು ತಾತ್ಕಾಲಿಕ ಸೋಲು. ಮುಂದಿನ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ದೈಹಿಕ ಶಿಕ್ಷಣ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಲ್ವಾಡಿ ಗ್ರಾಮದ ಅರೆಕಲ್ಲು ಹುಣ್ಣೆಮನೆ ಎಂಬಲ್ಲಿ ನಡೆಯುತ್ತಿದ್ದ ಅಂದರ್-ಬಹರ್ ಇಸ್ಪೀಟ್ ಜುಗಾರಿ ಅಡ್ಡೆಗೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಚಂದ್ರಕಲಾ ಪತ್ತಾರ ಹಾಗೂ ಪೋಲಿಸರು ದಾಳಿ ನಡೆಸಿದ್ದಾರೆ. ಆರೋಪಿಗಳಾದ ಸಮರ್ಥ ಕಾರ್ಕಳ (27), ಕಿಶನ್ ತಗ್ಗರ್ಸೆ (45), ಪ್ರದೀಪ್ ಮಂಗಳೂರು (42), ನಿಸಾರ್ ಶೇಖ್ ಗುಲ್ವಾಡಿ (42) ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟದಲ್ಲಿ ಭಾಗಿಯಾಗಿದ್ದ ಕೆಲವರು ತಪ್ಪಿಸಿಕೊಂಡಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 11,620 ರೂಪಾಯಿ, 4 ಮೊಬೈಲ್, 1 ಕಾರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ನಿವಾಸಿ ನಾರಾಯಣ ಶೆಟ್ಟಿ ಅವರ ಮೊಬೈಲ್ ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಿದ ಬಗ್ಗೆ ಇತ್ತೀಚಿಗೆ ಪ್ರಕರಣ ದಾಖಲಾಗಿದೆ. ಸೆ.17ರಂದು ಮೊಬೈಲ್‌ಗೆ ಬಂದ ಕರೆಯನ್ನು ಸ್ವೀಕರಿಸಿದಾಗ ರಾಹುಲ್ ಎಂಬಾತ ಹಿಂದಿಯಲ್ಲಿ ಮಾತನಾಡಿದ್ದು, ರಾಂಗ್ ನಂಬರ್ ಎಂದು ಕರೆ ಕಟ್ ಮಾಡಲಾಗಿತ್ತು. ಬಳಿಕ ಮೊಬೈಲ್‌ಗೆ ಓಟಿಪಿ ನಂಬ್ರವಿರುವ ಮೆಸೆಜ್ ಬಂದಿತ್ತು. ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಕೇವಲ 54ರೂ. ಇರುವುದಾಗಿ ಹಿಂದಿಯಲ್ಲಿ ಕಂಡುಬಂದಿದೆ. ಖಾತೆಯಲ್ಲಿದ್ದ 1.27ಲಕ್ಷ ಹಣದಲ್ಲಿ 54 ರೂ.ಬಿಟ್ಟು ಉಳಿದ ಹಣ ಬೇರೆಯ ವರ ಬ್ಯಾಂಕ್ ಖಾತೆಗೆ ವರ್ಗಾವಣೆಗೊಂಡಿತ್ತು. 1930 ನಂಬ್ರಕ್ಕೆ ಫೋನ್ ಮಾಡಿದ ಬಳಿಕ 27000 ರೂ. ಹಣ ಖಾತೆಗೆ ಮರು ಜಮೆಯಾಗಿದೆ. ಎಸ್ ಡಿಸಿಸಿ ಬ್ಯಾಂಕ್‌ನಲ್ಲಿರುವ ತಂದೆ ಅವರ ಖಾತೆಗೆ ನನ್ನ ಮೊಬೈಲ್ ಲಿಂಕ್ ಆಗಿದ್ದು ರಾಹುಲ್ ಹೆಸರಿನ ವ್ಯಕ್ತಿ 9008081056 ನಂಬ್ರದಿಂದ ಕರೆ ಮಾಡಿ ನನ್ನ ಮೊಬೈಲ್ ಹ್ಯಾಕ್ ಮಾಡಿ 1ಲಕ್ಷ ರೂ. ಹಣವನ್ನು ಮೋಸದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ (SCTPL)ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ ((TiE),), ಸಿಐಐ ((CII)) ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು. SCTPL ನಿರ್ದೇಶಕ ಹರ್ಷಿತ್…
