ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಮನಿತರ ಧನಿಯಾಗಿ, ಅಸ್ಪೃಶ್ಯತೆ ಮತ್ತು ಜಾತಿ ಪದ್ಧತಿಯನ್ನು ಹೋಗಲಾಡಿಸಿ ನ್ಯಾಯೋಚಿತವಾಗಿ ಬದುಕುವ ಹಕ್ಕನ್ನು ಸಂವಿಧಾನ ರಚನೆಯ ಮೂಲಕ ಕೊಡಮಾಡಿಸಿದ ಹಿರಿಯ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಸಮೃದ್ಧ ಭಾರತದ ಕನಸು ಕಂಡರು. ಸಾಮರಸ್ಯ, ಸಮಾನತೆ, ಸಹಬಾಳ್ವೆ, ಧಾರ್ಮಿಕ ಸೌಹಾರ್ದತೆ ಇಂದಿನ ಅಗತ್ಯವಾಗಿದ್ದು ಯುವ ಜನತೆ ಇದನ್ನು ಅರ್ಥೈಸಿಕೊಂಡು ಅಂಬೇಡ್ಕರ್‌ರವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಭವ್ಯ ಭಾರತದ ಅಭಿವೃದ್ಧಿಗೆ ಪಣತೊಡಬೇಕೆಂದು ನಾಗರಾಜ ವೈದ್ಯ ಎಂ. ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ತಿಳಿಸಿ ಅವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ 2024-25 ನೇ ಸಾಲಿನಲ್ಲಿ ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ ಹಾಗೂ ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕೃತಿಕ ಅಧ್ಯಯನ ಈ ವಿಷಯಗಳ ಕುರಿತು ಕಿರು ಅಧ್ಯಯನ ನಡೆಸಲು ತಲಾ 1.50 ಲಕ್ಷ ರೂ. ಗಳಂತೆ ಫೆಲೋಶಿಪ್ ನೀಡಲಿದ್ದು, ಆಸಕ್ತ ಯುವ ಸಂಶೋಧನಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ 20 ರಿಂದ 55 ವರ್ಷದೊಳಗಿನ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರಗಳ ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಾಗ್ರಿಗಳನ್ನು ಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿ, ಅಧ್ಯಯನ ಕೇಂದ್ರದ ಇ-ಮೇಲ್‌ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯಿಂದ ವ್ಯಕ್ತಿಯ ಜೀವನಕ್ಕೆ ಹಲವು ಉಪಯುಕ್ತ ಸಂದೇಶಗಳು ಸಿಗುತ್ತವೆ. ವೇಗ, ದೂರ ಮತ್ತು ಎತ್ತರ ಇವು ಮೂರು ಯಶಸ್ಸನ್ನು ಪಡೆಯಲು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ಶೆಟ್ಟಿ ಹೇಳಿದರು. ಅವರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರು ಇದರ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಭಾಸ್ಕರ ಶೆಟ್ಟಿ ಸಲ್ವಾಡಿ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವುಕ್ಕಿಂತ ಕ್ರೀಡಾಸ್ಪೂರ್ತಿ ಮುಖ್ಯ. ಶಿಸ್ತಿನ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಹನೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಬೋಧಕ ಬೋಧಕೇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕ ವೀರೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂಬೇಡ್ಕರ್ ಜೀವನ ಚರಿತ್ರೆ ತಳಹದಿ ವಿಶಿಷ್ಟವಾದದ್ದು. ಅವರ ಚಿಂತನೆಗಳು ದೇಶದ ಹಿತಕ್ಕೆ ಪೂರಕವಾಗಿದ್ದವು ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ ಸಹಯೋಗದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಬಡವರ ಹಾಗೂ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಅವರ ಕಣ್ಣಿರೊರೆಸುವ ಮತ್ಕಾರ್ಯಕ್ಕೆ ಆಗಿನ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ನೀಡಿದ ಮಹಾನ್ ಚೇತನರಾಗಿದ್ದಾರೆ. ಅವರ ಸಂವಿಧಾನದಲ್ಲಿ ನೀಡಿದ ಮೀಸಲಾತಿ ಎಲ್ಲಾ ವರ್ಗದವರಿಗೂ ನೀಡಿದ್ದಾರೆ. ಬರೆ ಪರಿಶಿಷ್ಟ ಜಾತಿ ಪಂಗಡಕ್ಕೆ ಸೀಮಿತವಾಗಲಿಲ್ಲ, ಅವರೊಬ್ಬ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ವಿಶ್ವ ನಾಯಕ ಆದರೆ ನೋವಿನ ಸಂಗತಿ ಎಂದರೆ ಅವರಿಗೆ ಈ ಭರತ ಭೂಮಿಯಲ್ಲಿ ಸಂವಿಧಾನ ಶಿಲ್ಪಿ ಎಂಬ ಪಟ್ಟ ಸಿಕಿತು ವಿನಹ ಪಂಡಿತರೆಂಬ ಗೌರವ ಸಿಕ್ಕಿರಲಿಲ್ಲ ಇದೇ ಬೇಸರದ ಸಂಗತಿ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಇವರ ಸಹಭಾಗಿತ್ವದೊಂದಿಗೆ ಅಂಡರ್ 19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ವಿಕ್ರಂ ಟ್ರೋಫಿ – 2025 ಎಪ್ರಿಲ್ 21ರಿಂದ 27ರವರೆಗೆ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಲಿದ್ದು ಸರ್ವ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವಿಕ್ರಂ ಕ್ರಿಕೆಟ್ ಕ್ಲಬ್ ಕಾರ್ಯಕಾರಿ ಸಮಿತಿ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 1975ರಲ್ಲಿ ಲೆದರ್ ಬಾಲ್ ಆಟವಾಡುವ ಯುವಕರ ತಂಡದಿಂದ ಆರಂಭವಾದ ಸಂಸ್ಥೆ ಮುಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಆಟವನ್ನು ನೆಚ್ಚಿಕೊಂಡು ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ನಗದು ಬಹುಮಾನವನ್ನು ಒಳಗೊಂಡ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿತ್ತು. ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹತ್ತು ಹಲವು ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪಾರಿತೋಷಕಗಳನ್ನು ಪಡೆದಿದೆ. ಕಳೆದ ಎರಡು ವರ್ಷಗಳಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿಯನ್ನು ಆರಂಭಿಸಿ ಯುವ ಆಟಗಾರರನ್ನು ಹುಟ್ಟುಹಾಕುತ್ತಿದೆ. ಇದೀಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಮಣೂರು ರಾಜಲಕ್ಷ್ಮೀ ಸಭಾಂಗಣದ ಬಳಿ ಸಂಭವಿಸಿದೆ. ಮೃತ ಪಟ್ಟ ಮಹಿಳೆ ಗಿಳಿಯಾರು ನಿವಾಸಿ ಗಿರಿಜಾ ಎಂದು ಗುರುತಿಸಲಾಗಿದೆ ಇವರು ತಮ್ಮ ಮನೆಯಾದ ಹೊನ್ನಾರಿಯಿಂದ ತಾಯಿ ಮನೆಯಾದ ಮಣೂರಿಗೆ ತೆರಳಲು ಸಭಾ ಭವನದ ಎದುರು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ರಸ್ತೆಗೆ ಬಿದ್ದ ಅವರ ತಲೆಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು ಕೂಡಲೇ ಅವರನ್ನು ಜೀವನ್ ಮಿತ್ತ ಆ್ಯಂಬುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಹಿಂದು ಸಮಾಜದ ಹೆಣ್ಣು ಮಕ್ಕಳನ್ನು ಮೋಸದ ಜಾಲಕ್ಕೆ ಬೀಳಿಸುತ್ತಿರುವ ಘಟನೆಗಳು ಹೆಚ್ಚೆಚ್ಚು ನಡೆಯುತ್ತಿದೆ. ಲವ್ ಜಿಹಾದ್ ಜಾಲಕ್ಕೆ ಸಿಲುಕಿದ ಅದೆಷ್ಟೋ ಹೆಣ್ಣು ಮಕ್ಕಳು, ಮಹಿಳೆಯರು ತಮ್ಮ ಜೀವವನ್ನೇ ಕಳೆದುಕೊಂಡರೆ, ಅನೇಕರು ಈ ಜಾಲದಿಂದ ಹೊರಬರಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಹಿಂದು ಸಮಾಜದ ಹೆಣ್ಣು ಮಕ್ಕಳು ಹಾಗೂ ಮಾತೆಯರಿಗೆ ಈ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿದ ಕಿಶೋರಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದು ಸಮಾಜದ ಯುವ ಜನರಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಮಕ್ಕಳಿಗೆ ಬಾಲ್ಯದಿಂದಲೇ ಸರಿಯಾದ ಸಂಸ್ಕಾರ ನೀಡಿದರೆ, ಅವರು ತಪ್ಪು ದಾರಿ ಹಿಡಿಯದಂತೆ ಮಾರ್ಗದರ್ಶನ ನೀಡಿದರೆ ಇಂತಹ ದುಷ್ಟ ಶಕ್ತಿಗಳನ್ನು ಸೆದೆಬಡಿಯಲು ಸಾಧ್ಯ. ಸಮಾಜದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿ ಸಂಘನೆಗಳ ಆರಂಭ ಮಾಡುವುದರಿಂದ ಕಾರ್ಯ ಪೂರ್ಣವಾಗದು, ಆದರೆ ಸಂಘಟನೆಗಳು ಬಲಿಷ್ಠವಾದಾಗ ಮಾತ್ರ ಅದರ ಉದ್ದೇಶ ಪೂರ್ಣಗೊಳ್ಳಬಹುದು ಹಾಗೂ ಎಲ್ಲರನ್ನು ಒಳಗೊಂಡಾಗ ಮಾತ್ರ ಸಂಘಟನೆಯ ಪರಿಪೂರ್ಣತೆ ಹೊಂದುತ್ತದೆ ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಡಳಿತ ಧರ್ಮದರ್ಶಿ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ ಹೇಳಿದರು. ಅವರು ಉಪ್ಪುಂದ ಪಠೇಲರ ಮನೆಯಲ್ಲಿ ನಡೆಸಿದ ಕುಂದಾಪುರ ತಾಲೂಕು ಹವ್ಯಕ ಸಭಾದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಂಗಳೂರು ಮಂಡಲದ ಉಪಾಧ್ಯಕ್ಷ ಕಾಕುಂಜೆ ರಾಜಶೇಖರ ಭಟ್ ಮಾತನಾಡಿ, ಸಂಘಟನೆಗಳು ಕಾಲಚಕ್ರದಂತೆ ಏರಿಳಿತಗಳು ಸಾಮಾನ್ಯವಾಗಿರುತ್ತದೆ. ಅದರ ಉದ್ದೇಶ ಕಾರ್ಯ ತತ್ಪರತೆ ಬಹಳ ಮುಖ್ಯವಾಗಿದ್ದು ದೃಢ ಸಂಕಲ್ಪವಿದ್ದರೆ ಎಲ್ಲಾ ಸಂಘಟನೆಗಳು ಯಶಸ್ಸು ಪಡೆಯಲು ಸಾದ್ಯ ಎಂದು ಹೇಳಿದರು. ಹವ್ಯಕ ಸಭಾ ಅಧ್ಯಕ್ಷ ಮಕ್ಕಿ ದೇವಸ್ಥಾನ ನಾಗರಾಜ ಭಟ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪ್ಪುಂದ ಶ್ರೀ ದುರ್ಗಪರಮೇಶ್ವರೀ ದೇವಸ್ಥಾನ ಉಪಾದಿವಂತ ಅರ್ಚಕ ಯು. ಶಂಕರನಾರಾಯಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂಬೇಡ್ಕರ್ ಅವರ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂತದ್ದು ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಸಂವಿಧಾನ ನಿರ್ಮಾಣ ಮತ್ತು ದಲಿತೋದ್ಧಾರದ ಆಚೆಗೂ ಅಂಬೇಡ್ಕರ್ ಜೀವನದ ಸಾಧನೆಗಳು ಬಹಳಷ್ಟು ಇವೆ. ಅವರ ರಾಷ್ಟ್ರೀಯ ಚಿಂತನೆಗಳು ಮಾನವತಾವಾದ, ಸಾಮಾಜಿಕ ಮತ್ತು ಆರ್ಥಿಕ ಚಿಂತನೆಗಳನ್ನು, ಬಹುಮುಖಿ ಕೆಲಸಗಳನ್ನು ವಿವರವಾಗಿ ಪರಿಚಯಿಸುವ ಕೆಲಸ ಹೆಚ್ಚು ಆಗಬೇಕಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ aವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್ ಅವರು ಅಂಬೇಡ್ಕರ್ ಅವರ ಹೋರಾಟ, ಸಾಧನೆ ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು.
