Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜೀವನದಲ್ಲಿ ಸಾಧನೆಗೆ ಗಳಿಸಬೇಕಾದೆರೆ ಗುರಿ ಇರಬೇಕು ಆಗ ಮಾತ್ರ ಯಶಸ್ಸು ತಮ್ಮತ್ತ ಮುಖ ಮಾಡಲು ಸಾಧ್ಯ ಎಂದು ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ಕಲಾವಿದೆ ವಿದೂಷಿ ದಿಕ್ಷಾ ಬ್ರಹ್ಮಾವರ ಹೇಳಿದರು. ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ವತಿಯಿಂದ ವಿಶ್ವಸಾಧಕಿ ದಿಕ್ಷಾ ಬ್ರಹ್ಮಾವರ ಇವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರತಿಯೊಬ್ಬರಲ್ಲೂ ಕಲೆ ಇರುತ್ತದೆ ಅದು ಹೊರಸೂಸಲು ಪೋಷಕರ ಪ್ರೋತ್ಸಾಹ ಅತ್ಯಗತ್ಯ ಈ ನಿಟ್ಟಿನಲ್ಲಿ ನನ್ನ ಈ ಸಾಧನೆಗೆ ಪತಿ ಹಾಗೂ ಕುಟುಂಬಿಕರು,ಗುರುಗಳ ಶ್ರೀ ರಕ್ಷೆ ಜತೆಗೆ ನನ್ನ ಪರಿಶ್ರಮ ಈ ಹಂತಕ್ಕೆ ತಲುಪಲು ಸಾಧ್ಯವಾಗಿದೆ ಎಂದು ಪರಿಸರಸ್ನೇಹಿ ಪಂಚವರ್ಣ ಸಂಘಟನೆಯಿಂದ ಸ್ವೀಕರಿಸುವ ಭಾಗ್ಯ ಧನ್ಯತೆಯನ್ನು ಕಾಣುವಂತ್ತಾಗಿದೆ ಎಂದರು. ಈ ಸಂದರ್ಭದಲ್ಲಿ ಕೋಟದ ಅಮೃತೇಶ್ವರೀ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ ಮತ್ತು ಗಣೇಶ್ ನೆಲ್ಲಿಬೆಟ್ಟು ಇವರು ದಿಕ್ಷಾ ಬ್ರಹ್ಮಾವರ ಇವರನ್ನು ಸನ್ಮಾನಿಸಿದರು. ದಿಕ್ಷಾ ಇವರ ಪತಿ ರಾಹುಲ್,ಪಂಚವರ್ಣದ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಎಲ್.ಕೆ.ಜಿ., ಯು. ಕೆ. ಜಿ.ಹಾಗೂ ದ್ವಿಭಾಷಾ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಹುತೇಕ ಪದವೀಧರ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ನೀಡಿದ ಕೊಡುಗೆಗಳನ್ನು ಮಕ್ಕಳಿಗೆ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಅಡಿಗ, ಎಸ್‌ಡಿಎಂಸಿ ಸಮನ್ವಯ ವೇದಿಕೆ ಬ್ರಹ್ಮಾವರ ತಾಲೂಕಿನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉದ್ಯಮಿ ಸುರೇಶ್ ಕುಂದರ್ ಐರೋಡಿ, ಪಟ್ಟಣ ಪಂಚಾಯತ್ ಸಾಲಿಗ್ರಾಮದ ಸದಸ್ಯೆ ಸುಲತಾ ಹೆಗ್ಡೆ, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ್. ಜಿ.,ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮೀನಾರಾಯಣ, ದಾನಿಗಳಾದ ಪ್ರತಾಪ್ ಖಾರ್ವಿ ಹಾಗೂ ಅಮಿತ್ ಕುಮಾರ್. ಸಾಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ,  ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್  ಗಂಗೊಳ್ಳಿ,  ರೋಟರಿ ಕ್ಲಬ್ ಗಂಗೊಳ್ಳಿ,  ಮತ್ತು ಎಸ್. ವಿ. ಹಳೆ ವಿದ್ಯಾರ್ಥಿಗಳ ಸಂಘ  ಟ್ರಸ್ಟ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ  ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್  ಮತ್ತು ಟೆನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ನಾಲ್ಕು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಬಾಲಕರ ಬಾಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಟೆನ್ನಿಕಾಯ್ಟ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕರ ಟೆನಿಕಾಯ್ಟ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ   ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು ಎಂದು  ಕಾಲ್ತೋಡು ಸ.ಆ.ಚಿ ವೈದ್ಯಾಧಿಕಾರಿ  ಡಾ. ವೀಣಾ ಕಾರಂತ್ ಹೇಳಿದರು. ಅವರು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – ಅಂಗನವಾಡಿ ಕೇಂದ್ರ ಹೇರಂಜಾಲು, ಆರೋಗ್ಯ ಇಲಾಖೆ – ಉಪಕೇಂದ್ರ ಹೇರಂಜಾಲು ಇವರ ಸಂಯುಕ್ತ ಆಶ್ರಯದಲ್ಲಿಅಂಗನವಾಡಿ ಕೇಂದ್ರ ಹೇರಂಜಾಲಿನಲ್ಲಿ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು. ಪೌಷ್ಟಿಕ ಆಹಾರ ಹೇಗಿರಬೇಕು ಎಂದು ತಿಳಿಸುತ್ತಾ ಅನೇಕ ಔಷಧೀಯ ಸಸ್ಯಗಳನ್ನು ಪರಿಚಯಿಸಿ, ಆಹಾರವಾಗಿ ಹಾಗೂ ಔಷಧವಾಗಿ ಹೇಗೆ ಬಳಸಬೇಕು, ಜೊತೆಯಲ್ಲಿ ನಮ್ಮ ಸಾಂಪ್ರದಾಯಿಕ ತಿನಿಸುಗಳ ಮಹತ್ವವನ್ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು.  ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರ ಗ್ರಾಹಕರಾದ ಸಂತೋಷ್ ಕುಂದೇಶ್ವರ್ ಅವರ ಛಾಯಾಚಿತ್ರ ಪ್ರದರ್ಶನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಅವರ 30ಕ್ಕೂ ಹೆಚ್ಚಿನ ಪ್ರಶಸ್ತಿ ಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಕರ್ನಾಟಕ ದಿನಪತ್ರಿಕೆಯ ಹಿರಿಯ ಸಂಪಾದಕರಾದ ಜಾನ್ ಡಿಸೋಜ ಅವರು ಮಾತನಾಡಿ, ಫೋಟೋಗ್ರಾಫಿ ಕುರಿತ ಆಸಕ್ತಿ ಮತ್ತು ಅನುಭವವನ್ನು ಹಂಚಿಕೊಂಡರು. ಅಂತರಾಷ್ಟ್ರೀಯ ಮಟ್ಟದಲ್ಲಿ ವನ್ಯಜೀವಿ ಛಾಯಾಚಿತ್ರ ಗ್ರಹಣದಲ್ಲಿ ಸಾಕಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.  ಗಂಗೊಳ್ಳಿ: ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು  ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್‌.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು ಬಿಡುಗಡೆಗೊಳಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್‌.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪಿ  ಪೈ ಮತ್ತು ಮುಖ್ಯ ಅತಿಥಿ ಪತ್ರಕರ್ತ ಬಿ ರಾಘವೇಂದ್ರ ಪೈ ಶುಭ ಹಾರೈಸಿದರು. ಎಸ್. ವಿ.ಕಾಮರ್ಸ್ ಕ್ಲಬ್ ಸಂಯೋಜಕ  ನರೇಂದ್ರ ಎಸ್ ಗಂಗೊಳ್ಳಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಬಿಸಿಯೂಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಾದ ಜಲಜ ಪೂಜಾರಿ, ಪದ್ಮಾವತಿ, ಶಾರದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ  ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿನಿಯರಾದ ಅಪೂರ್ವ ಮತ್ತು ರಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ  ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ 2025-26ನೇ ಶೈಕ್ಷಣಿಕ ವ?ದ ಚಟುವಟಿಕೆಗಳಿಗೆ ಶುಕ್ರವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತ ಧನಂಜಯ ಮೂಡಬಿದಿರೆ ಮಾತನಾಡಿ, ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಭೀಕರ, ಭಯಂಕರ, ರುದ್ರ ಎಂಬ ಅರ್ಥದಲ್ಲಿ ಕಾಣಲಾಗುತ್ತದಾದರೂ, ಅದು ಮುಗ್ದತೆಯ ಸಂಕೇತವೂ ಹೌದು. ಆ ಮುಗ್ದತೆಯೊಳಗೆ ಸೇವಾ ಮನೋಭಾವವನ್ನು ರಕ್ತಗತ ಮಾಡಿಕೊಂಡಿರುವುದೇ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆ ಎಂದರು. ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯವಾದ ಮಾನವೀಯತೆ, ನಿಷ್ಪಕ್ಷಪಾತತೆ, ತಟಸ್ಥತೆ, ಸ್ವಯಂಸೇವೆ, ಸ್ವಾತಂತ್ರ್ಯ, ಏಕತೆ, ಶಾಂತಿ-ಸ್ನೇಹ ಹಾಗೂ ಪ್ರಾಮಾಣಿಕತೆಗಳನ್ನು ಪ್ರತಿಯೊಬ್ಬ ಸದಸ್ಯರೂ ಪಾಲಿಸಬೇಕು. ಪ್ರೀತಿ-ಸ್ನೇಹವನ್ನು ಉತ್ತೇಜಿಸುವ ಕಾರ್ಯಕ್ರಮಗಳ ಮೂಲಕ ಈ ಸಂಸ್ಥೆ ಜನಾನುರಾಗಿಯಾಗಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಮತ್ತು ಸಹಕಾರವನ್ನು ಕಾಪಾಡುವಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರು, ಜವಾಬ್ದಾರಿ ಹೊಂದಿದ ನಾಯಕರು ಮತ್ತು ನಿಜವಾದ ಮಾನವೀಯತೆಯ ಸೇವಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಇತರೆ ಪಕ್ಷದವರು ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾರ್ಕಳದ ಮಂಜುನಾಥ್ ಪೈ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲೂಕು ಆಶ್ರಯದಲ್ಲಿ ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಹಾಗೂ ಗ್ಯಾರಂಟಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಮಾಡೆಲ್ ಯೋಜನೆಗಳನ್ನು ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಬದಲಿಸಿಕೊಂಡಿದ್ದಾರೆ ಎಂದರು. ಕರ್ನಾಟಕದ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಸಂದಾಯ ಆಗುತ್ತಿದೆ. ಆದರೆ, ಜಿಎಸ್ಟಿ, ಆದಾಯ ತೆರಿಗೆ ಸಮಸ್ಯೆಯಿಂದ ಸುಮಾರ ಎರಡು ಲಕ್ಷ ಮಹಿಳೆಯರಿಗೆ ಹಣ ಸಂದಾಯ ಆಗುತ್ತಿಲ್ಲ. ಈ ಪೈಕಿ 50 ಸಾವಿರ ಮಹಿಳೆಯರಿಗಿದ್ದ ಜಿಎಸ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಿ., ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ”ವನ್ನು ಆಯೋಜಿಸಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ ‘ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿ ಮಾತುಗಳನ್ನು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಅವರು ಮಾತನಾಡಿ, ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ‘ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ  ಡಾ. ಬಿ. ಗಣನಾಥ ಶೆಟ್ಟಿ ಅವರು ‘ ಜಾಗೃತಿಯ…

Read More