ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೈಂದೂರು ವಲಯ ಇವರ ವತಿಯಿಂದ ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ ಇವರ ಸಹಕಾರದಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ ಜರುಗಿತು. ಉಪ್ಪುಂದ ಚಂದ್ರಶೇಖರ್ ಹೊಳ್ಳ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಾಚ್ಯ ವಸ್ತುಗಳ ಬಗ್ಗೆ ಅರಿವು ಮೂಡಿಸಬೇಕಾದದ್ದು ನಮ್ಮೆಲ್ಲರ ಹೊಣೆಯಾಗಿದೆ. ಆ ಮೂಲಕ ನಮ್ಮ ಸಂಸ್ಕೃತಿಯ ಪರಿಚಯವನ್ನು ಮಾಡುವುದು ಅಗತ್ಯವಾಗಿದೆ ಎಂದರು. ಸಭಾ ಅಧ್ಯಕ್ಷತೆಯನ್ನು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಉದಯ್ ಕುಮಾರ್, ಬೈಂದೂರು ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಗಿರೀಶ್ ಶಾನುಭಾಗ್, ಬೈಂದೂರು ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ, ಹೆಮ್ಮಾಡಿ ಶಿಕ್ಷಣ ಸಂಯೋಜಕರಾದ ಯೋಗಿಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ದೇವಾಡಿಗ, ಮಂಜುನಾಥ ದೇವಾಡಿಗ, ರಾಧಿಕಾ ಬಿಐಆರ್‌ಟಿ, ನಾಗರತ್ನ ಉಪಸ್ಥಿತರಿದ್ದರು. ಕುಂದಾ ಅಧ್ಯಯನ ಕೇಂದ್ರದ ಸಂಚಾಲಕರಾದ ಗಣಪತಿ ಹೋಬಳಿದಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಅನ್ನೋನ್ಯತಾ ಗೂಡ್ಸ್ ವಾಹನ ಚಾಲಕ ಮತ್ತು ಮಾಲಕರು ಸಾಸ್ತಾನ ಮತ್ತು ಚೇತನಾ ಸ್ಪ್ರೀಂಟರ್ಸ್ ಪಾಂಡೇಶ್ವರ ಇವರ ಸಹಯೋಗದೊಂದಿಗೆ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಮ್ಯಾರಥ್ಯಾನ್ ಕಾರ್ಯಕ್ರಮ ಸಾಸ್ತಾನ ಬಸ್ ನಿಲ್ದಾಣದ ಹತ್ತಿರ ಇತ್ತೀಚಿಗೆ ಜರಗಿತು. ಕಾರ್ಯಕ್ರಮವು ಸಾಸ್ತಾನದಿಂದ ಆರಂಭಗೊಂಡ ಪಾಂಡೇಶ್ವರ ಮೂಲಕ ಬೆಣ್ಣೆಕುದ್ರು ಬಾರಕೂರು ಮೂಲಕ ಮರಳಿ ಸಾಸ್ತಾನಕ್ಕೆ ತಲುಪಲಾಯಿತು. ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ್ ಗಾಣಿಗ ಹಾಗೂ ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ನಿರ್ದೇಶಕಿ ಲಿಲಾವತಿ ಗಂಗಾಧರ್, ಉದ್ಯಮಿ ಅನ್ವರ್ ಮಟಪಾಡಿ, ರಾಷ್ಟ್ರೀಯ ಕ್ರೀಡಾಪಟು ವಿಠ್ಠಲ್ ಶೆಟ್ಟಿಗಾರ್, ಅನ್ನೋನ್ಯತಾ ಗೂಡ್ಸ್, ವಾಹನ ಚಾಲಕ ಮತ್ತು ಮಾಲಕರು ಸಾಸ್ತಾನ ಇದರ ಅಧ್ಯಕ್ಷ ಸಂಜೀವ ಪೂಜಾರಿ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ರೋಟರಿ ಕ್ಲಬ್ ಹಂಗಾರಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿಪ್ರಾಯಪಟ್ಟರು. ಅವರು ಅಂದು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ವತಿಯಿಂದ ಮಹಿಳಾ ಸ್ನೇಹಿ ನೀರೆ ಗ್ರಾಮ ಪಂಚಾಯತ್ ನ ನೂತನ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಯನ್ನು ಉದ್ಘಾಟಿಸಿ, ಮಾತನಾಡಿ, , ಭ್ರಷ್ಟಾಚಾರವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಿತ್ತುಹಾಕಬೇಕು, ಆಗಷ್ಟೇ ಜನ ಸಾಮಾನ್ಯರಿಗೆ ನ್ಯಾಯ ಸಿಗುತ್ತದೆ ಎಂದರು. ಉಡುಪಿ ಜಿಲ್ಲೆಯ ಜನರು ಸಾಂಸ್ಕೃತಿಕ ರಾಯಭಾರಿಗಳು, ಬೇರೆ ಊರುಗಳಲ್ಲಿ ನೆಲೆಸಿದ್ದರೂ ಊರ ದೇವಸ್ಥಾನಗಳು, ಶಾಲೆಗಳ, ಹಾಗೂ ಗ್ರಾಮ ಪಂಚಾಯತಿ ಕಟ್ಟಡಗಳ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರದ ಅನುದಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ 2025-26ರ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು ತಂಡ ಹಾಗೂ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು ತಂಡ ಕ್ರಮವಾಗಿ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಟೆನ್ನಿಕಾಯ್ಟ್‌ನಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ತಂಡ ಮತ್ತು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಗಂಗೊಳ್ಳಿಯ ಎಸ್.ವಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಅದನ್ನು ಸಮನಾಗಿ ಸ್ವೀಕರಿಸಿ ಯಶಸ್ಸಿನತ್ತ ಮುನ್ನುಗ್ಗಿ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಪಟುಗಳಿಗೆ ಕರೆ ನೀಡಿದರು. ಅವರು ಗುರುವಾರ ಕೋಡಿ ಕನ್ಯಾಣದ ಸೋಮ ಬಂಗೇರ ಪ್ರೌಢಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿಕನ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಕೂಟ ವಿಕ್ರಾಂತ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿ ಅದೇ ರೀತಿ ಕಬಡ್ಡಿ ದೇಶೀಯ ಕ್ರೀಡೆಯಾಗಿ ಹೊರಹೊಮ್ಮಿದ್ದು ಗ್ರಾಮೀಣ ಹಳ್ಳಿಗಾಡಿನಲ್ಲಿ ಆಯೋಜಿಸಿ ಒಂದಿಷ್ಟು ಪ್ರತಿಭೆಗಳು ಅನಾವರಣಗೊಳ್ಳುವ ವೇದಿಕೆಯಾಗಿದೆ, ಸರಕಾರಗಳು ಕ್ರೀಡೆಗಳಿಗೆ ಸದಾ ಪ್ರೋತ್ಸಾಹಿಸುವ ಕಾರ್ಯಗಳನ್ನು ಮಾಡಬಹುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಸಾಮರ್ಥ್ಯಾಭಿವೃದ್ಧಿ, ಬ್ರಾöಯಂಡ್ ಅಭಿವೃದ್ಧಿ, ವಿನ್ಯಾಸ ಪ್ಯಾಕೇಜಿಂಗ್ ವಿನ್ಯಾಸ ಹಾಗೂ ಮೌಲ್ಯವರ್ಧನೆ ಸರಪಳಿಯಡಿಯಲ್ಲಿನ ಚಟುವಟಿಕೆಗಳ ಬಲವರ್ಧನೆಗೆ ಆರ್ಥಿಕ ನೆರವು ಪಡೆಯಲು ಘಟಕದಡಿ ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು. ಕಾಲೇಜಿನ ಡೀನ್ಸ್‌ಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ, ಕಾರ್ಯಕ್ರಮ ಸಂಯೋಜಕರಾದ ರಜತ್ ಬಂಗೇರ, ವಿಭಾಗದ ಪ್ರಾಧ್ಯಾಪಕರುಗಳಾದ ಪ್ರವೀಣ್ ಮೊಗವೀರ, ಹರೀಶ್ ಬಿ., ಅವಿತಾ ಕೊರೆಯಾ, ವಿಶಾಲಾಕ್ಷಿ ಎಸ್. ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರುಗಳು ವಿದ್ಯಾರ್ಥಿ ಪ್ರತಿನಿಧಿಗಳಾದ ಕಲ್ಪನಾ ಹಾಗೂ ಕಿಶನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಫ್ಲಾಶ್ ಮೊಬ್ ನಡೆಯಿತು. ವಿದ್ಯಾರ್ಥಿಗಳಾದ ಶ್ರೀರಕ್ಷಾ ಹಾಗೂ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಲ್ಫ್: ಕರ್ನಾಟಕ ಜನಪದ ಪರಿಷತ್ ಯುಎಇ ಘಟಕದ ವತಿಯಿಂದ ದುಬೈ ನಾದ್ ಅಲ್ ಶೀಬಾ ಜಿಮ್ಸ್ ಮಾರ್ಡನ್ ಅಕಾಡೆಮಿಯಲ್ಲಿ ಅಂತರಾಷ್ಟ್ರೀಯ ಜಾನಪದ ಉತ್ಸವ – 2025” ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಜನಪದ ಪರಿಷತ್ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಸ್ಥಾಪಿತವಾದ ಯುಎಇ ಘಟಕವು, ರಾಜ್ಯದ ಜೀವಂತ ಜನಪದ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಉಳಿಸಿ ಬೆಳೆಸುವ ಕನಸನ್ನು ಈ ಉತ್ಸವದ ಮೂಲಕ ಯಶಸ್ವಿಯಾಗಿ ಅನಾವರಣಗೊಳಿಸಿತು. ಜಾನಪದ ಪರಿಷತ್ ಬೆಂಗಳೂರು ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜೆರಾಜ್ ಮತ್ತು ಅಧ್ಯಕ್ಷರಾದ ಬೋರಲಿಂಗಯ್ಯನವರು ಯುಎಇ ಘಟಕದ ಲಾಂಛನವನ್ನು ಲೋಕಾರ್ಪಣೆ ಗೊಳಿಸುವುದರ ಮೂಲಕ ಘಟಕವನ್ನು ಉದ್ಘಾಟಿಸಿದರು . ನಂತರ ಮಾತನಾಡಿ, ಜಾನಪದ ಪರಿಷತ್‌ನ ವಿಸ್ತರಣೆಗೆ ಹರ್ಷ ಪಡಿಸುತ್ತಾ ಕೇಂದ್ರ ಸಂಸ್ಥೆಯಿಂದ ಈ ಘಟಕಕ್ಕೆ ಸರ್ವ ವಿಧದ ಸಹಕಾರ ನೀಡುವುದಾಗಿ ಈರ್ವರು ಭರವಸೆ ನೀಡಿದರು. ಅಂತರಾಷ್ಟ್ರೀವ ಜಾನಪದ ಉತ್ಸವವನ್ನು ಸಂಪ್ರಾದಾಯಿಕವಾಗಿ ಸಮೃದ್ಧಿಯ ಸಂಕೇತವಾದ ತೆಂಗಿನ ಸಿಂಗಾರ ಹೂವನ್ನು ಅರಳಿಸುವುದರ ಮೂಲಕ ಅಬುದಾಬಿ ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಹಿಮೇಶ್, ಆತೀಫ್, ರೋಹಿತ್, ಮಾಝ, ಜಾಹೀದ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಹಬ್ಬಹರಿದಿನಗಳು ಜನರ ಧಾರ್ಮಿಕ ಭಾವನೆಗಳನ್ನು ಗಟ್ಟಿಗೊಳಿಸುವ ಆಚರಣೆಯಾಗಿದೆ ಅದರಂತೆ ಶಾರದೋತ್ಸವ ಕಾರ್ಯಕ್ರಮಗಳು ಜನಮಾನಸದಲ್ಲಿ ನೆಲೆಯೂರಿ ಒಗ್ಗಟ್ಟು ಪ್ರದರ್ಶಿಸುವ ಸಂಭ್ರಮವಾಗಲಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ ವತಿಯಿಂದ ನಡೆಸಲ್ಪಡುವ ಇದರ 32ನೇ ವರ್ಷದ ಶಾರದೋತ್ಸವ ಸಂಭ್ರಮ ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಧಾರ್ಮಿಕ ಆಚರಣೆಗಳು ಗ್ರಾಮದಲ್ಲಿ ಸಹಬಾಳ್ವೆ ಹಾಗೂ ಸಾಮರಸ್ಯ ಬೆಸೆಯುವ ಉತ್ಸವಗಳಾಗಿ ಮೂಡಿಬರಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಪಾಂಡೇಶ್ವರ, ಕೂಟಮಹಾಜಗತ್ತು ಅಂಗ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಹೊಳ್ಳ, ಶಾರದೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ,ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಸಮಿತಿಯ ಉಪಾಧ್ಯಕ್ಷ ದೇವದಾಸ್ ಸಾಲ್ಯಾನ್, ಪಿ.…
