Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಹೊಸನಗರ ತಾಲೂಕಿನ ಕೋಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅವರು ಶಿವಮೊಗ್ಗ ಕಡೆಗೆ ತೆರಳುವ ವೇಳೆ ಅಪಘಾತ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿದೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಚಾಲಕ ಜಾನುವಾರು ಅಡ್ಡ ಬಂದ ಕಾರಣ ಹಠಾಟ್‌ ಬ್ರೇಕ್‌ ಹಾಕಿ ಕಾರು ನಿಲ್ಲಿಸಿದ್ದಾರೆ. ಇದರಿಂದ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇದೇ ವೇಳೆ ಶಾಸಕರೂ ಕೂಡ ತಮ್ಮ ಸ್ನೇಹಿತರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಸರಣಿ ಅಪಘಾತದಿಂದಲೇ ಪಾರಾಗಿದ್ದಾರೆ. /ಕುಂದಾಪ್ರ ಡಾಟ್‌ ಕಾಂ/ ಅವರು ಉಡುಪಿಯಲ್ಲಿ ಸಭೆ ಮುಗಿಸಿ, ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದರು. ಘಟನೆಯ ಬಳಿಕ ಪ್ರಯಾಣ ಮೊಟಕುಗೊಳಿಸಿ ಹಿಂದಿರುಗಿದ್ದಾರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು. ಕಾಪು ತಾಲೂಕಿನ ಹೆಜ್ಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ಒತ್ತು:ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಒಕ್ಕೂಟ ಮತ್ತು ಪಾಂಡೇಶ್ವರ ವಲಯ ಶೌರ್ಯ ಆಶ್ರಯದಲ್ಲಿ ರುದ್ರ ಭೂಮಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರುದ್ರ ಭೂಮಿ ಅಭಿವೃದ್ಧಿಯ ಸಮಿತಿ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಸಾಸ್ತಾನ ಚಾಲನೆ ನೀಡಿದರು. ಈ ಸಂದಭರ್ಭದಲ್ಲಿ ಪಾಂಡೇಶ್ವರ ಗ್ರಾ.ಪಂ ಸದಸ್ಯೆ ಸುಜಾತ ವೆಂಕಟೇಶ್ ಪೂಜಾರಿ, ಪಾಂಡೇಶ್ವರ ವಲಯದ ಶೌರ್ಯ ಟೀಮ್‌ನ ಸದಸ್ಯರಾದ ಕಾಳಿಂಗ ಪೂಜಾರಿ, ರವಿ ಪೂಜಾರಿ, ನಾಗೇಶ್, ರಾಜೇಶ್ ಸಾಸ್ತಾನ, ಚಂದ್ರ ಆಚಾರ್ಯ, ಸುರೇಶ್, ಸತೀಶ್, ರೇಣುಕಾ, ಯಶೋಧ, ಘಟಕ ಸೇವಾ ಪ್ರತಿನಿಧಿ  ಶೋಭಾ ಮತ್ತು ಪಾಂಡೇಶ್ವರ ಒಕ್ಕೂಟದ ಸದಸ್ಯರಾದ ವಿಶ್ವನಾಥ್ ಆಚಾರ್ಯ, ವೆಂಕಟೇಶ್, ವಿಜಯ್, ನಾಗೇಂದ್ರ, ಚಂದ್ರ, ಪಾರ್ವತಿ ಮತ್ತು ಸೇವಾ ಪ್ರತಿನಿಧಿ ಅಕ್ಷಯ ಹಾಗೂ ಮಂಜುನಾಥ್, ಯೋಗೀಶ್, ವಲಯದ ಮೇಲ್ವಿಚಾರಕರಾದ ಜಯಲಕ್ಷ್ಮಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಕ್ತದಾನಿ ಬಳಗ ಮರವಂತೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ‌ರಿ. ಉಡುಪಿ, ರೆಡ್ ಕ್ರಾಸ್ ಕುಂದಾಪುರ ‌ಸಹಕಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ‌ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರಕ್ತದ ಆಪತ್ಭಾಂದವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ್  ಉದ್ಘಾಟಿಸಿದರು. ಕಳೆದ ಹಲವು ವರ್ಷಗಳಿಂದ ರಕ್ತದಾನ ಕ್ಷೇತ್ರದಲ್ಲಿ ಸಲ್ಲಿಸಿದ ‌ಸೇವೆಯನ್ನು ಗುರುತಿಸಿ ಅಭಯಹಸ್ತ ‌ಉಡುಪಿ ಇದರ ಸದಸ್ಯರಾದ ಪ್ರಶಾಂತ್ ತಲ್ಲೂರು ಹಾಗೂ ದಿನೇಶ್ ಕಾಂಚನ್ ಬಾರಿಕೆರೆ ಅವರನ್ನು ವೇದಿಕೆಯಲ್ಲಿರುವ ಗಣ್ಯರ ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ‌ 86 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಳೆದ 6 ವರ್ಷಗಳಿಂದ ಯಶಸ್ವಿ ರಕ್ತದಾನ ಶಿಬಿರವನ್ಮು ಆಯೋಜನೆ ಮಾಡುತ್ತಿರುವ ವಿಘ್ನೇಶ್ ಮರವಂತೆ ಅವರಿಗೆ ಧನ್ಯವಾದ ಅರ್ಪಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು‌. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು. ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ:ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ.‌ ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್‌ಗಳು, ಆಟೋ ರಿಕ್ಷಾ ಮತ್ತು ಇತರ ವಾಹನಗಳು ಸೇರಿದಂತೆ ಮಕ್ಕಳನ್ನು ಶಾಲೆಗೆ ಸಾಗಿಸುವ ಎಲ್ಲ ವಾಹನಗಳನ್ನು ಪರಿಶೀಲಿಸಲು ಇಡೀ ಜಿಲ್ಲೆಯಲ್ಲಿ ಗುರುವಾರ ನಡೆದ ವಿಶೇಷ ಕಾರ್ಯಾಚರಣೆ ಅಂಗವಾಗಿ ಕುಂದಾಪುರ, ಬೈಂದೂರು, ಹೆಬ್ರಿ ಪ್ರದೇಶಗಳಲ್ಲಿ ತಪಾಸಣೆ ನಡೆಯಿತು. ಎಸ್ಪಿ ಹರಿರಾಮ್‌ ಶಂಕರ್‌ ಮಾಹಿತಿ ನೀಡಿದಂತೆ, ಬೈಂದೂರು ಠಾಣೆಯಲ್ಲಿ 45 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 1,500 ರೂ. ದಂಡ ವಿಧಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ 28 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 2,000 ರೂ. ದಂಡ, ಗಂಗೊಳ್ಳಿ ಠಾಣೆಯಲ್ಲಿ 25 ವಾಹನಗಳ ತಪಾಸಣೆ ನಡೆಸಿ 3 ಕೇಸು ದಾಖಲಿಸಿ 1,200 ರೂ. ದಂಡ, ಕುಂದಾಪುರ ಠಾಣೆಯಲ್ಲಿ 23 ವಾಹನಗಳ ತಪಾಸಣೆ ನಡೆಸಿ 13 ಕೇಸು ದಾಖಲಿಸಿ 5,300 ರೂ. ದಂಡ, ಕುಂದಾಪುರ ಸಂಚಾರ ಠಾಣೆಯಲ್ಲಿ 62 ವಾಹನಗಳ ತಪಾಸಣೆ ನಡೆಸಿ 23 ಕೇಸು ದಾಖಲಿಸಿ 9,000 ರೂ. ದಂಡ, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಂದು ಪತಿ ಓಡಿ ಹೋದ ಘಟನೆ ಗುರುವಾರ ತಡರಾತ್ರಿ ತಾಲೂಕಿನ ಹಿಲಿಯಾಣ ಎಂಬಲ್ಲಿ ನಡೆದಿದೆ. ಇಲ್ಲಿನ ದರ್ಕಾಸು ನಿವಾಸಿ ಗಣೇಶ್ ಪೂಜಾರಿ (43) ಎಂಬಾತನೇ ಪತ್ನಿಯನ್ನು ಕೊಂದ ಆರೋಪಿ. ಗಣೇಶ್ ಪೂಜಾರಿ ಪತ್ನಿ ರೇಖಾ ಪೂಜಾರಿ (26) ಪತಿಯಿಂದ ಕೊಲೆಯಾದ ದುರ್ದೈವಿ. ಗುರುವಾರ ತಡರಾತ್ರಿ ಮನೆಗೆ ಬಂದ ಗಣೇಶ್‌, ಹೆಂಡತಿಯೊಂದಿಗೆ ತಕರಾರು ತೆಗೆದು ಗಲಾಟೆ ನಡೆಸಿ ಮಾತಿಗೆ ಮಾತು ಬೆಳೆದು ಸಿಟ್ಟುಗೊಂಡು ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಗಣೇಶ್ ಪೂಜಾರಿ ಹೊಡೆದಿದ್ದು ತಲೆಗೆ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಹುಡುಕಾಡಿ ಕೊನೆಗೆ ಶಂಕರನಾರಾಯಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಪೂಜಾರಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ. ದಂಪತಿಗಳಿಗೆ ಒಬ್ಬ 6 ವರ್ಷ ಮತ್ತು ಇನ್ನೊಬ್ಬ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಮಕ್ಕಳು ಆದರ್ಶ ವಿದ್ಯಾರ್ಥಿಯಾಗಿ ಬೆಳೆಯುತ್ತಾರೆ. ಯಾವುದೇ ವಿಷಯವನ್ನು ಅಧ್ಯಯನ ಮಾಡುವಾಗ ಅದರ ಬಗ್ಗೆ ಚಿಂತನೆ ಮಾಡಬೇಕು ಆಗ ನಿರ್ದಿಷ್ಟ ಗುರಿ ಯಶಸ್ವಿಯಾಗುತ್ತದೆ ಎಂದು ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡುತ್ತಾ ಹೇಳಿದರು. ಅವರು ಗುರುವಾರ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪಪೂ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿ, ಕುಂದಾಪುರ ಇಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿ ವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡವನ್ನು ದೀಪ ಪ್ರಜ್ವಲನಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ಮಗುವಿನಲ್ಲಿಯೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿದಾಗ, ಆ ಮಗು ಹಾಗೂ ಸಮಾಜ ಅದರ ಪ್ರಯೋಜನ ಪಡೆಯಲು ಸಹಕಾರಿಯಾಗಬಲ್ಲದು ಎಂದರು. ಇದೇ ಸಂದರ್ಭದಲ್ಲಿ ಶಾಲಾ ಕಟ್ಟಡದಲ್ಲಿ  ಶಾರದ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿಶೇಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಫಲಾನುಭವಿಗಳ ಮಾಹಿತಿಯನ್ನು ಸರ್ಕಾರ ಪಡೆಯುತ್ತಿರುವುದು ಈ ಯೋಜನೆಯನ್ನು ನಿಲ್ಲಿಸುವ ಉದ್ದೇಶದಿಂದಲ್ಲ. ಆದರೆ ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಸಾಮಾಜಿಕ ಪಿಂಚಣಿ ನಿಲ್ಲಿಸುವ ಹುನ್ನಾರ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವುದರ ಮೂಲಕ ಜನರ ದಾರಿ ತಪ್ಪುಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈಗ ಪ್ರಸ್ತುತ 60 ರಿಂದ 63 ವರ್ಷ ಪ್ರಾಯದವರಿಗೆ 600 ರೂಪಾಯಿ ಪಿಂಚಣಿ, 63 ರಿಂದ 65 ವರ್ಷ ಪ್ರಾಯದವರಿಗೆ 800 ಹಾಗೂ 65 ವರ್ಷ ಪ್ರಾಯ ಮೇಲ್ಪಟ್ಟವರಿಗೆ 1200 ರೂಪಾಯಿ ಪಿಂಚಣಿ ದೊರಕುತ್ತಿದೆ. ಆದರೆ ಪ್ರಾಯ ಹಾಗೂ ಇತರೆ ದಾಖಲೆಗಳಲ್ಲಿನ ಗೊಂದಲಗಳಿಂದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿಯಲ್ಲಿ ಒಂದಷ್ಟು ಗೊಂದಲಗಳು ಏರ್ಪಟ್ಟ ಕಾರಣ ಅಂದರೆ 600 ರೂಪಾಯಿ ಪಿಂಚಣಿ ಪಡೆಯುವವರಿಗೆ 1200 ರೂಪಾಯಿ ಪಿಂಚಣಿ ಅವರ ಖಾತೆಗೆ ಹೋಗುತ್ತಿದ್ದು, 1200 ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳ ಖಾತೆಗೆ 600 ರೂಪಾಯಿ ಬರುತ್ತಿರುವ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More