Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅನುಮತಿ ನೀಡಿದ್ದಾರೆ. ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್‌ ಕಮ್‌ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್‌ ಬಿ. ನಾಯಕ್‌ ಮತ್ತು ಜಿ. ಎನ್‌. ಲಕ್ಷ್ಮೀನಾರಾಯಣ ಅವರ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಕಂಡು ಬಂದಿದೆ. ಹೀಗಾಗಿ ಈ ಹಿಂದೆ ದಾಖಲಾಗಿರುವ ಕ್ರಿಮಿನಲ್‌ಮೊಕದ್ದಮೆಗೆ ಸಂಬಂಧಿಸಿದಂತೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್‌ . ನಾಯ್ಕ ಹಾಗೂ ಜಿ. ಎನ್‌. ಲಕ್ಷ್ಮೀನಾರಾಯಣ ಅವರ ವಿರುದ್ಧ ಕ್ರಿಮಿನಲ್‌ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗೂ ಈ ಇಬ್ಬರು ಅಧಿಕಾರಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಕರ್ನಾಟಕ ರಾಜ್ಯ ಸರಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ “ಯುವ ನಿಧಿ” ಯೋಜನೆಯ ಮಾಹಿತಿಯ ಬ್ಯಾನರ್ ಹಾಗೂ ಪೋಸ್ಟರ್‌ನ್ನು ಹಸ್ತಾಂತರಿಸಲಾಯಿತು. ಈ ಬ್ಯಾನರನ್ನು ಗ್ರಾಮ ಪಂಚಾಯತಿ ಆವರಣದಲ್ಲಿ ಅಳವಡಿಸಲಾಗಿದೆ. ಹಾಗೂ 2024-25 ನೇ ಸಾಲಿನ “ಯುವ ನಿಧಿ”ಯ ನೊಂದಣಿ ಅಭಿಯಾನವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಸಲು ಅನುಮತಿಯನ್ನು ಕೋರಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಕುಂದಾಪುರ ತಾಲೂಕು ಸದಸ್ಯರಾದ ಝಹೀರ್ ನಾಖುದಾ ಗಂಗೊಳ್ಳಿ, ಗ್ರಾಮ ಪಂಚಾಯತ್ ನ ಕಾರ್ಯದರ್ಶಿಯಾದ ಅನೂಪ್ ಶೇಟ್, ಸಿಬ್ಬಂದಿಗಳಾದ ಸಂದೀಪ್, ಕಾರ್ತಿಕ್, ರಂಜಿತ್, ನಫೀಜ್, ಸುನಿಲ್, ಭಾಗ್ಯ, ಚೈತ್ರ ಹಾಗೂ ಇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕವಿಗಳ ಕವಿ ಗೊಪಾಲಕೃಷ್ಣ ಅಡಿಗರ ಹುಟ್ಟು ಪರಿಸರದ ಭಾಷೆ ಬದುಕಿನ ಸೊಗಡನ್ನೊಳಗೊಂಡಿರುವ ಯಾವುದೇ ಉತ್ತಮ ಪುಸ್ತಕಕ್ಕೆ ಮೊಗೇರಿ ಸಮಷ್ಟಿ ವಾರ್ಷಿಕ ಪುಸ್ತಕ ಪುರಸ್ಕಾರವನ್ನು ನೀಡಲಾಗುವುದು ಎಂದು ಮೊಗೇರಿ ಅಡಿಗರ ಸಮಷ್ಟಿ ಬಳಗದ ಮುಖ್ಯಸ್ಥರಾದ ಎಂ. ಜಯರಾಮ ಅಡಿಗರು ಮೊಗೇರಿ ಸ್ವಾಣಿ ಹಬ್ಬದಲ್ಲಿ ಪ್ರಕಟಿಸಿದರು. ಮೊದಲ ಪುರಸ್ಕಾರಕ್ಕೆ ಕೆ. ಪುಂಡಲೀಕ ನಾಯಕ್‌ರ ‘ಭಾವ ಸ್ಮೃತಿ’ ಆತ್ಮಕಥನ ಆಯ್ಕೆ ಆಗಿದೆ ಎಂದರು. ಪ್ರತಿ ವರ್ಷ ಯುಗಾದಿಯ ಮುಂಚೆ ಹಿಂದಿನ ವರ್ಷ ಸಿದ್ಧವಾದ ಹೊಸ ಪುಸ್ತಕದ ಹಸ್ತ ಪ್ರತಿ ಅಥವಾ ಡಿಟಿಪಿ ಪ್ರತಿಗಳನ್ನು ಪ್ರಕಾಶನ ಪೂರ್ವದಲ್ಲಿ ಪರಿಶೀಲಿಸಿ ಮೊಗೇರಿ ಸಮಷ್ಟಿ ಪುರಸ್ಕಾರವನ್ನು ಸ್ವಾಣಿ ಹಬ್ಬದಲ್ಲಿ ಪ್ರಕಟಿಸಲಾಗುತ್ತದೆ. ಮೊಗೇರಿ ಸ್ವಾಣಿ ಹಬ್ಬದ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಲೇಖಕಿ, ಸಂಪನ್ಮೂಲ ವ್ಯಕ್ತಿ ಪೂರ್ಣಿಮಾ ಕಮಲಶಿಲೆ ನಿರ್ದೇಶಕತ್ವದಲ್ಲಿ ಗೃಹಿಣೀ ಶಕ್ತಿ, ಮಕ್ಕಳ ಅಭಿ ವ್ಯಕ್ತಿ ಕಾರ್ಯಕ್ರಮ ಸರಣಿಯನ್ನು ಉದ್ಘಾಟಿಸಲಾಯಿತು. ಅಧ್ಯಕ್ಷತೆ ವಹಿಸಲಿದ್ದ ಶಾಸಕ ಗುರುರಾಜ ಗಂಟಿಹೊಳಿ ಅವರು ಮುಂಜಾನೆ ಧರ್ಮಸ್ಥಳದಲ್ಲಿ ಇರಬೇಕಾದ ಸಂದರ್ಭ ಉಂಟಾದ್ದರಿಂದ ಹಿಂದಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ನೀಡಿದ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಗೀತೆಯ ಸಾರ ನಮ್ಮ ಜೀವನಕ್ಕೆ ಅತ್ಯವಶ್ಯಕವಾಗಿದೆ. ಮಕ್ಕಳು ನಮ್ಮನ್ನು ಅನುಕರಣೆ ಮಾಡುತ್ತಾರೆ, ನೋಡಿ ಕಲಿಯುತ್ತಾರೆ. ಆದ್ದರಿಂದ ಹಿರಿಯರು ಉತ್ತಮ ಸಂಸ್ಕಾರಗಳನ್ನು ಮಕ್ಕಳಿಗೆ ನೀಡಬೇಕು. ಚಂಚಲ ಮನಸ್ಸಿನ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಅವರು ದಾರಿ ತಪ್ಪುದನ್ನು ತಡೆಯಬಹುದು ಮತ್ತು ಅವರ ಜೀವನವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥೆ ಕಲ್ಪನಾ ಭಾಸ್ಕರ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಜೇಸಿಐ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರವಿಠಲ ಸಭಾಗೃಹದಲ್ಲಿ ಶನಿವಾರ ನಡೆದ 39ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿದರು. ಮಕ್ಕಳಲ್ಲಿ ಭಗವಂತನ ಮೇಲೆ ಶ್ರದ್ಧಾ ಭಕ್ತಿಯನ್ನು ಬೆಳೆಸಿದರೆ ಅವರು ಸನ್ಮಾರ್ಗದಲ್ಲಿ ಮುನ್ನಡೆದು ಸತ್ಪ್ರಜೆಗಳಾಗಿ ಸಮಾಜದಲ್ಲಿ ಜೀವಿಸಲು ಸಾಧ್ಯವಿದೆ. ಪರಿಸರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆದೂರು ಸರಕಾರಿ ಪ್ರೌಢಶಾಲೆ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಪ್ರಾಯೋಜಕತ್ವದ ಇಂಟರ‍್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭ ಇತ್ತೀಚಿಗೆ ನೆರವೇರಿತು. ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಇಂಟರ್ಯಾಕ್ಟ್ ನ ನೂತನ ಆಧ್ಯಕ್ಷರಾದ ರಶ್ವಿತಾ ಮತ್ತು ಕಾರ್ಯದರ್ಶಿ ಭವಿಷ್ ಅವರು ಪದ ಪ್ರದಾನ ನೆರವೇರಿಸಿ ಕೊಟ್ಟು ಮಾತನಾಡಿ, ವಿದ್ಯಾರ್ಥಿಗಳು ಎಳವೆಯಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ ಸಮಾಜ ಸೇವೆಯ ಕನಸು ಕಾಣಬೇಕು ಎಂದರು. ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ರಂಜಿತ್ ಕುಮಾರ್ ಶೆಟ್ಟಿ ಮಾತನಾಡಿ, ರೋಟರಿ ಕ್ಲಬ್ ಮತ್ತು ಇಂಟರ್ಯಾಕ್ಟ್ ಕ್ಲಬ್ ನ  ಇತಿಹಾಸ ಹಾಗೂ ಉದ್ದೇಶಗಳನ್ನು ಕುರಿತು ವಿವರಿಸಿದರು.  ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಬಂದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೋಟರಿ ಕ್ಲಬ್ ನ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣವೆಂಬುದು ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಾಗಬಾರದು. ಅದು ವಿದ್ಯಾರ್ಥಿಯೊಳಗಿನ ಅಸಾಧಾರಣ ಸಾಮರ್ಥ್ಯವನ್ನು ಪೋಷಿಸಿ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಕ್ತಿಯಾಗಿ ಕೆಲಸ ಮಾಡಬೇಕು. ಆಳ್ವಾಸ್ ಸಂಸ್ಥೆ ಇಂತಹ ಅವಕಾಶಗಳ ಮಹಾಪೂರವನ್ನು ತನ್ನ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಪ್ರತಿಯೊಬ್ಬರಲ್ಲೂ ಅಡಗಿರುವ ಶಕ್ತಿ ಮತ್ತು ಪ್ರತಿಭೆಯನ್ನು ಹೊರತೆಗೆಯುವುದು ನಿಜವಾದ ಶಿಕ್ಷಣದ ಧ್ಯೇಯವಾಗಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ ಜ್ಞಾನ, ಅನುಭವ ಹಾಗೂ ನವೀನ ಆಲೋಚನೆಗಳ ಹಂಚಿಕೆಗೆಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ವೇದಿಕೆ ’ಟೆಡ್‌ಎಕ್ಸ್ ಎಐಇಟಿ ಕಾರ್ಯಕ್ರಮವನ್ನು ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಮಾನಸದಲ್ಲಿ ನಾವು ಶಿಕ್ಷಣದ ನಿಜವಾದ ಗುರಿಯಿಂದ ನಿಧಾನವಾಗಿ ವಿಮುಖರಾಗುತ್ತಿರುವ ಬೆಳವಣಿಗೆಗಳು ನಡೆಯುತ್ತಿದೆ. ಬಾಹ್ಯ ಸೌಂದರ್ಯಕ್ಕಿಂತ ಅಂತರಂಗದ ಮೌಲ್ಯಗಳು ಹಾಗೂ ಮಾನವೀಯತೆ ಅತಿ ಮುಖ್ಯ. ಶಿಕ್ಷಣವು ಈ ಎರಡನ್ನೂ ಸಮತೋಲನದಿಂದ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.  ಭೂಮಿಯ ಮೇಲಿರುವ ಜೀವಿಗಳಲ್ಲಿ ಕೇವಲ 1% ದಷ್ಟಿರುವ ಮಾನವರು, …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಮಾಜಿಕ, ಸಾಹಿತ್ಯಿಕ, ಶೈಕ್ಷಣಿಕ ಬದುಕಿಗೆ ಸಂತೋಷ್ ಕುಮಾರ್ ಕೋಟ ತನ್ನ ಬದುಕನ್ನು ಸಮರ್ಪಸಿಕೊಂಡಿದ್ದರು ಅವರೊಬ್ಬ ಶಿಕ್ಷಕ ವೃತ್ತಿಗೆ ಸೀಮಿತವಾಗಿದರೆ ಇಡೀ ವ್ಯವಸ್ಥೆಗೆ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿಯ ಪ್ರಧಾನಕಾರ್ಯದರ್ಶಿ ಕೋಟ ದಿನೇಶ್ ಗಾಣಿಗ ಅಭಿಪ್ರಾಯಪಟ್ಟರು. ಅವರು ಭಾನುವಾರ ಮಣೂರು ಪಡುಕರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶ್ರೀ ರಾಮ್ ಫ್ರೆಂಡ್ಸ್ ಸಂಯೋಜನೆಯೊಂದಿಗೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ 267ನೇ ಭಾನುವಾರದ ಅಂಗವಾಗಿ ಇತ್ತೀಚಿಗೆ ಅಗಲಿದ ಸಾಹಿತಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಇವರಿಗೆ ಹಸಿರು ನುಡಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ವ್ಯವಸ್ಥೆಯ ಬಗ್ಗೆ ಸದಾ ತುಡಿತ ಹೊಂದಿದ ಅವರು,ಸಾಂಸ್ಕೃತಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ನಿರೂಪಕರಾಗಿ ಜನಮನವನ್ನು ಗೆದ್ದಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಭಾವನೆಯಡಿ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ನಿಸ್ವಾರ್ಥ ಬದುಕಿನೊಂದಿಗೆ ಸಮಾಜದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರವಾದ್ದದ್ದು, ಕಲಾ ಕ್ಷೇತ್ರಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ಹರ್ತಟ್ಟು ಕೀರ್ತೀಶ್ ಪೂಜಾರಿ ಕೋಟ ಅವರನ್ನು ಕೇಂದ್ರ ಸರಕಾರದ  ಬಿ.ಎಸ್.ಎನ್.ಎಲ್ ಅನುಷ್ಠಾನ ಸಮಿತಿ ಜಿಲ್ಲಾ ನಾಮನಿರ್ದೇಶಿತ ಸದಸ್ಯರನ್ನಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಆಯ್ಕೆಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಆದಿವಾಸಿ ಜೀವನ ಶಿಕ್ಷಣ ಕೇಂದ್ರ ಪೆರ್ನಾಲ್ ನಲ್ಲಿ ಕಾಪು ತಾಲೂಕು ಮಟ್ಟದ ಸಮುದಾಯದ ಯುವಜನತೆಗೆ  ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ಕಾಪು ತಾಲೂಕು ತಹಶೀಲ್ದಾರರಾದ ಪ್ರತಿಭಾ ಅವರು ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಭಾರತ ದೇಶದ ಪ್ರಜೆಗಳಾಗಿ ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ದಾಖಲಾತಿಗಳನ್ನು ಹೊಂದುವುದು ಅತ್ಯವಶ್ಯಕ. ಆರ್ಥಿಕವಾಗಿ ಹಿಂದುಳಿದ ಸಮುದಾಯವನ್ನು ಸರ್ಕಾರದ ಬೇರೆ ಬೇರೆ ಇಲಾಖೆಗಳ ಮುಖಾಂತರ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಸಂದರ್ಭದಲ್ಲಿ ಯೋಜನೆಗಳನ್ನು ಪಡೆಯಲು ಆವಶ್ಯಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವನ್ನು ಪಡೆಯಲು ಶಿಕ್ಷಣ ಹಾಗೂ ತರಬೇತಿಗಳು ಮುಖ್ಯ. ಜ್ಞಾನವೇ ಶಕ್ತಿ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು. ನಂತರ ಗ್ರಾಮ ಸಹಾಯಕರಾದ ಶ್ರೀನಿವಾಸ್ ಅವರು ಕಂದಾಯ ಇಲಾಖೆಯಲ್ಲಿ ಸಿಗುವಂತಹ ಯೋಜನೆಗಳು ವಿವಿಧ ಪಿಂಚಣಿಗಳು ಹಾಗೂ ಭೂಮಿಯ…

Read More