Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ತುಂಬಾಡಿ ರಾಮಯ್ಯ ಅವರ “ಜಾಲ್ಗಿರಿ” ಕಾದಂಬರಿಗೆ ದೊರೆತಿದೆ. ತಮ್ಮ ಆತ್ಮಕಥನ ‘ಮಣೆಗಾರ’ದ ಮೂಲಕ ಕನ್ನಡ ಓದುಗರಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ ತುಂಬಾಡಿಯವರ ಅನುಭವ ಪ್ರಪಂಚ ಬಹು ದೊಡ್ಡದು. ‘ಮಣೆಗಾರ’ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಗೆ ಅನುವಾದಗೊಂಡಿದ್ದು, ನಾಟಕವಾಗಿಯೂ ಜನಪ್ರಿಯವಾಗಿದೆ. ‘ಮುತ್ತಿನ ಜೋಳ ‘ ಮಣೆಗಾರ ಕೃತಿಯ ಮುಂದುವರಿದ ಭಾಗ. ‘ಸ್ಪರ್ಶ’ ಮತ್ತು ‘ದಲಿತಕಾರಣ’ ಅವರ ಲೇಖನಗಳ ಸಂಗ್ರಹವಾದರೆ, ‘ಓದೋ ರಂಗ ‘ ಮೊದಲ ಕಾದಂಬರಿ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಆಗಸ್ಟ್ 13ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ, ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ ಬೆಂಗಳೂರು, ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ -2025ರ ವಯೋಮಿತಿ 28 ರಿಂದ 35ರ 3 ವಿಭಾಗದಲ್ಲಿ ಸಂದೀಪ್ ಪೂಜಾರಿ ತ್ರಾಸಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ತ್ರಾಸಿ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಜಿಎಸ್‌ಬಿ ಸಮಾಜದ ಸುಮಂಗಲಿಯರಿಂದ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಊರ ಪರ ಊರಿನ ಜಿಎಸ್‌ಬಿ ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು, ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲ ಆಗುವಂತೆ ಹಾಗೂ ಎಣ್ಣೆಕಾಳು ಬೆಳೆ ಉತ್ತೇಜಿಸಲು ಈ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳಾದ ಎಣ್ಣೆ ತೆಗೆಯುವ ಯಂತ್ರ, ಆಯಿಲ್ ಫಿಲ್ಟರ್, ಡಿಕಾರ್ಟಿಕೇಟರ್, ಆಯಿಲ್ ಪಿಲ್ಲಿಂಗ್ ಮೆಷಿನ್, ಆಯಿಲ್ ಕೇಕ್ ಕಟ್ಟಿಂಗ್ ಮಿಷನ್ ಇತ್ಯಾದಿಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತ್ರತ ಯೋಜನಾ ವರದಿಯೊಂದಿಗೆ ಸೆಪ್ಟಂಬರ್ 4 ರ ಒಳಗಾಗಿ ಕೃಷಿ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನಾ ವರದಿಯ ಶೇ. 33 ರಷ್ಟು ಅಥವಾ ರೂ. 9.99 ಲಕ್ಷ ಮೀರದಂತೆ ಸಹಾಯಧನ ಒದಗಿಸಲಾಗುವುದು. ಈ ಘಟಕದಲ್ಲಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಸಿಕ ಸಭೆಯಲ್ಲಿ ಯುವ ವೇದಿಕೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ದೇವಸ್ಥಾನದ ಕೂಡುಕಟ್ಟಿಗೆ ಸೇರಿದ 5ನೇ ತರಗತಿಯಿಂದ ಪದವಿಯವರೆಗೆ ಮೂರು ವಿಭಾಗದಲ್ಲಿ ಅಂದದ ಕೈಬರಹ ಹಾಗೂ ಪ್ರಬಂಧ ಸ್ಪರ್ಧೆ “ಅಕ್ಷರ ಸಿರಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 23 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಹುಮಾನ ವಿಜೇತರಾದ ಪ್ರಥಮ ವಿಭಾಗದಲ್ಲಿ ಶ್ವೇತಾಂಶ್ ಚೇರ್ಕಾಡಿ, ನಿರೀಕ್ಷಾ ಶೆಟ್ಟಿಗಾರ್, ಕಿಶನ್ ಸಾಸ್ತಾನ. ದ್ವಿತೀಯ ವಿಭಾಗದಲ್ಲಿ ಆರಾಧ್ಯ ಶೆಟ್ಟಿಗಾರ ನೀಲಾವರ, ಹರ್ಷಿತಾ ಬ್ರಹ್ಮಾವರ, ಐಶ್ವರ್ಯ ಜಪ್ತಿ, ತೃತೀಯ ವಿಭಾಗದಲ್ಲಿ ಧನುಶ್ರೀ ಎಡಬೆಟ್ಟು, ಸ್ಮಿತಾ ಕೊಪ್ಪ, ಸಂಜನಾ ರಂಗನಕೇರಿ ಮತ್ತು ಸಮಾಧಾನಕರ ಬಹುಮಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ದೇಗುಲದಲ್ಲಿ 234ನೇ ಮಾಸಿಕ ಸತ್ಯನಾರಾಯಣ ಪೂಜೆ, ಶತರುದ್ರಾಭಿಷೇಕ, ಮೂಡು ಗಣಪತಿ, ಪರಿವಾರ ದೈವಗಳಿಗೆ ವಿಶೇಷ ಪೂಜೆಯನ್ನು ಸೇವಾ ಕರ್ತರಾದ ಬಾರ್ಕೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಂದನ್ ಬಿ.ಎಂ, ಉಸ್ಮಾ, ಪ್ರೇಕ್ಷಾ ಹಾಗೂ ಸಾವನ್ ಶೆಟ್ಟಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಆಯೋಜಿಸಿದ್ದ 48ನೇ ಸರಣಿಯ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಅವರು ತಯಾರಿಸಿದ ಪ್ರಾಜೆಕ್ಟ್‌ಗೆ ’ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿತು.  ಒಟ್ಟು ಈ ವಿಭಾಗದಲ್ಲಿ 496 ಪ್ರಾಜೆಕ್ಟ್‌ಗಳು ಸ್ಪರ್ಧೆಗೆ ಆಗಮಿಸಿದ್ದವು. ಮೆಕ್ಕುಜೋಳದ ಒಣಗಿದ ಸಿಪ್ಪೆಯಿಂದ ಕಪ್ ತಯಾರಿಕಾ ಯಂತ್ರದ ಅಭಿವೃದ್ಧಿಗಾಗಿ ಈ ಪ್ರಶಸ್ತಿ ಪಡೆದುಕೊಂಡರು. ಪರಿಸರ ಸ್ನೇಹಿ ಆವಿ?ರ ಮತ್ತು ದಕ್ಷತೆಯ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ ಮೌಲ್ಯಮಾಪನಾ ಸಮಿತಿಯ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರಾಜೆಕ್ಟ್‌ಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಕೆ. ವಿ. ಸುರೇಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ಗೇಮ್ಸ್ ಮತ್ತು ಸ್ಪೋರ್ಟ್ಸ್- 2025ರ ಅಂಗವಾಗಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನಡೆದ ಪ್ರಾದೇಶಿಕ ಮಟ್ಟದ ಕೇರಮ್ ಟೂರ್ನಮೆಂಟ್ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಮಂಗಳವಾರ ನಡೆಯಿತು. ಈ ಸ್ಪರ್ಧೆಯನ್ನು ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್ ಸಿ. ವೈಜ್ಞಾನಿಕ ರೀತಿಯಲ್ಲಿ ಉದ್ಘಾಟಿಸಿ, ಮಾತನಾಡಿ, ಕ್ರೀಡೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ. ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು. ಇಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ದೀಕ್ಷಿತಾ ಆರ್ ಗೌಡ ಅವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಆಗಿದ್ದಾರೆ. ಅವರ ಸಾಧನೆ ನಮ್ಮ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಸೋಪಾನ. ಸಾಧಕನಿಗೆ ಮುಂದಿನ ಹಂತದಲ್ಲಿ ಅವಕಾಶಗಳು ಇದ್ದೇ ಇರುತ್ತವೆ. ಅವುಗಳನ್ನು ಸಮರ್ಥವಾಗಿ ಎದುರಿಸಲು ಸೋಲೂ ಪಾಠವಾಗಿರುತ್ತದೆ. ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವವನೇ ಸಾಧನೆಯನ್ನು ಮಾಡಲು ಸಾಧ್ಯ ಎಂದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ದೀಕ್ಷಿತಾ ಆರ್ ಗೌಡ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾAಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿ ಪೂರ್ವ ವಿಭಾಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಕ್ರಮ ನಡೆಯಿತು. ಕುಂದಾಪುರ ಭಂಡಾರ್ಕಾಕರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಾಕರಾಚಾರಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕಾದರೆ ಸಂವಿಧಾನದ ಒತ್ತಾಸೆಯಲ್ಲಿ ಜೀವನ ಮಾಡಬೇಕು. ಬಂದಂತಹ ಸವಾಲುಗಳನ್ನು ಮಾತುಕತೆಗಳ ಮೂಲಕ ಉಪನ್ಯಾಸಕರು ಸೇರಿ ಬಗೆಹರಿಸಿ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ರಾಜ್ಯ ಶಾಸ್ತ್ರ ಉಪನ್ಯಾಸಕರು ಎಲ್ಲಾ ವಿದ್ಯಾರ್ಥಿಗಳೊಂದಿಗೆ ಸೇರಿ ಚಿಂತನ-ಮಂಥನ ಮಾಡಿ ಆ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತವಾದ ವ್ಯಕ್ತಿಯಾಗಿ ರೂಪಿಸುವ ಹೊಣೆ ಪ್ರತಿಯೊಬ್ಬ ಉಪನ್ಯಾಸಕರ ಮೇಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಚಂದ್ರನಾಥ್ ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಚೇಳಾರು, ಅವರು ದ್ವಿತೀಯ ಪಿಯುಸಿ ವಿಷಯ ವಸ್ತುವನ್ನು, ಇಂದಿನ ಶೈಕ್ಷಣಿಕ ಸನ್ನಿವೇಶಗಳನ್ನು ಪಿಪಿಟಿಯ…

Read More