ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಹಲವಾರು ವರ್ಷಗಳಿಂದ ಸರಕಾರಿ ಶಾಲೆ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ರಂಗ ರಂಗು ರಜಾ ಮೇಳವನ್ನು ಹಮ್ಮಿಕೊಂಡು ಬರುತ್ತಿದೆ. ಆ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪಾಲಿಸುತ್ತಿದೆ. ಇಂತಹ ರಂಗ ಶಿಬಿರದಲ್ಲಿ ವಿದ್ಯಾರ್ಥಿಗಳ ಕಲಿಕೆ ಸಹಜವಾಗಿ ಅರಳುತ್ತದೆ ಅಲ್ಲದೆ ಸದಾ ನೆನಪಿನಲ್ಲಿ ಉಳಿಯುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ, ಸ್ವಯಂಶಿಸ್ತು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ ಮಕ್ಕಳ ಮುಂದಿನ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದು ಕುಂದಾಪುರದ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರಾದ ಕೆ. ಆರ್. ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಅವರು ಹಮ್ಮಿಕೊಂಡಿದ್ದ ಉಚಿತ ರಂಗ ರಂಗು ರಜಾ ಮೇಳ ಉದ್ಘಾಟಿಸಿ ಮಾತನಾಡಿದರು. ರಜಾ ಮೇಳದಲ್ಲಿ ಉಪಸ್ಥಿತರಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಹಿರಿಯ ಮೇಲ್ವಿಚಾರಕಿ ಸುಜಯಾ ಅವರು ರಂಗ ರಂಗು ರಜಾ ಮೇಳಕ್ಕೆ ಶುಭ ಹಾರೈಸಿದರು. …
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಳೆ ಹೂಳು ಕಾಮಗಾರಿ ವೀಕ್ಷಣೆಗೆ ಆಗಮಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ, ರೈತರ ಪರವಾಗಿ ನಿರಂತರ ಸ್ಪಂದಿಸುವುದಾಗಿ ತಿಳಿಸಿದ್ದರು. ನೆರೆ ಹಾವಳಿಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿಗೆ ತೊಂದರೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಬಗ್ಗೆ ಸರ್ಕಾರದಿಂದ ಅನುದಾನ ತರುವಲ್ಲಿ ಪ್ರಯತ್ನ ಚಾಲ್ತಿಯಲ್ಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾಮ ಪಂಚಾಯಿತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು, ಕೋಟ ಗ್ರಾಮ ಪಂಚಾಯಿತಿನ ಸದಸ್ಯರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪ್ರಗತಿಪರ ಕೃಷಿಕರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸತತ 3 ವರ್ಷ ಪದಕ ಪಡೆಯಲಾಗಲಿಲ್ಲ. ಕಳೆದ ಬಾರಿ ಜಮ್ಮುವಿನಲ್ಲಿ ಕಂಚಿನ ಪದಕ ಬಂದಿತ್ತು. ಈ ಬಾರಿ ಚಿನ್ನ ಬಂದಿದೆ. ಪರಿಶ್ರಮ ಮುಖ್ಯ. ದೇವರ ಮೇಲೆ ಭಾರ ಹಾಕಿದರೆ ಸಾಲದು, ಶ್ರಮವೂ ಮುಖ್ಯ ಆಗುತ್ತದೆ ಎಂದು ಪವರ್ ಲಿಪ್ಟರ್ ನಾಗಶ್ರೀ ಗಣೇಶ ಶೇರುಗಾರ್ ಹೇಳಿದರು. ಅವರು ಗುರುವಾರದಂದು ಇಲ್ಲಿನ ಶ್ರೀರಾಮ ಮಂದಿರದಲ್ಲಿ ಉತ್ತರಖಂಡದಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ 3 ಚಿನ್ನ ಒಂದು ರಜತ ಪದಕ ಪಡೆದು ಏಷ್ಯನ್ ಯೂನಿವರ್ಸಿಟಿ ಚಾಂಪಿಯನ್ ಆದ ಪ್ರಯುಕ್ತ ನಡೆದ ಸಮ್ಮಾನ, ಪುರಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದರು. ರಾಮ ಕ್ಷತ್ರಿಯ ಸಂಘದ ಅಧ್ಯಕ್ಷ ಲಕ್ಷ್ಮೀಶ ಹವಾಲ್ದಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಸಾಧಕರಿಗೆ ಪ್ರೋತ್ಸಾಹ ಕೊಡುವುದು ಎಲ್ಲರ ಆದ್ಯ ಕರ್ತವ್ಯ ಎಂದರು. ಕಾರ್ಯದರ್ಶಿ ನಾಗರಾಜ ನಾಯ್ಕ್, ರಕ್ಷಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಬೆಟ್ಟಿನ್, ರಾಮ ಕ್ಷತ್ರಿಯ ಯುವಕ ಮಂಡಳಿ ಅಧ್ಯಕ್ಷ ರಾಜೇಶ್ ರಾವ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿಎಸ್ಇಇಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ, ವಂಶಿ, ಕೆ.ವಿ.ಶರಣ್ಯ, ಪ್ರೇಕ್ಷಾ ಪೂಜಾರಿ, ನಾಗೇಂದ್ರ ಅವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಭಾಗದ ಪ್ರಖ್ಯಾತ ಸರ್ಜಿಕಲ್ಸ್ ಸಂಸ್ಥೆಯಾದ ಗಿರಿಜಾ ಸರ್ಜಿಕಲ್ಸ್ ಮತ್ತು ಸೀನಿಯರ್ ಜೇಸಿ ಟೆಂಪಲ್ ಸಿಟಿ ಉಡುಪಿ ಲಿಜಿನ್ ಇವರ ವತಿಯಿಂದ ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತಿರುವ ದಾದಿಯರನ್ನು ಗುರುತಿಸಿ ಗೌರವಿಸು ನೆಲೆಯಲ್ಲಿ ದಾದಿಯರ (ನರ್ಸಸ್) ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ 5 ಜನ ದಾದಿಯರನ್ನು ಸನ್ಮಾನಿಸಿ ಉಳಿದ ಎಲ್ಲಾ ದಾದಿಯರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯುತು. ಈ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ ಸರ್ಜಿನ್ ಆಗರುವ ಡಾ. ಅಶೋಕ್ ಅವರು, ಆಸ್ಪತ್ರೆಯ ಆರ್‌ಎಮ್‌ಒ ಆಗಿರುವ ಡಾ. ವಾಸುದೇವ, ಸೀನಿಯರ್ ಜೇಸಿಯ ಅಧ್ಯಕ್ಷ ಶಿವಾನಂದ್ ಶೆಟ್ಟಿಗಾರ್ ಮತ್ತು ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ನ ಮೆನೆಜಿಂಗ್ ಡೈರೆಕ್ಟರ್ ಆಗಿರುವ ರವೀಂದ್ರ ಶೆಟ್ಟಿ ಕಡೆಕಾರ್, ಆಸ್ಪತ್ರೆಯ ನರ್ಸಿಂಗ್ ಸುಪಾರಿಟೆಂಡೆಂಟ್ ರತ್ನವತಿ, ಸೀನಿಯರ್ ಜೇಸಿಯ ಸದಸ್ಯರು ಮತ್ತು ಗಿರಿಜಾ ಸರ್ಜಿಕಲ್ಸ್ ನ ಸಹೋದ್ಯೋಗಿ ಗಳು ಉಪಸ್ಥಿತರಿದ್ದರು. ಇದೇ ರೀತಿ ಸಂಸ್ಥೆಯ ವತಿಯಿಂದ ಕುಂದಾಪುರ ಮತ್ತು ಮಂಗಳೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌಕೂರು ಗ್ರಾಮದ ಸುಮಾವತಿ ಅವರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಕಳ್ಳತನ ಮಾಡಿದ್ದಾಗಿ ದೂರಲಾಗಿದೆ. ಕೃಷಿ ಭೂಮಿ, ಮನೆ ಕೆಲಸಕ್ಕೆಂದು ಹಾವೇರಿ ಜಿಲ್ಲೆಯ ಸೋಮಾಪುರದ ಮಂಜುನಾಥ ಕೋಡಿಹಳ್ಳಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದು, ಮದುವೆಗೆಂದು ಮನೆಗೆ ಬೀಗ ಹಾಕಿ ಬೀಗ ಅಡಗಿಸಿಟ್ಟು ಹೋಗಿದ್ದರು. ಆಗ ಮಂಜುನಾಥ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಮರಳಿ ಮನೆಗೆ ಬಂದಾಗೆ ಕೆಲಸದವನೂ ಇರಲಿಲ್ಲ. ಕಪಾಟಿನಲ್ಲಿದ್ದ 60,000 ರೂ. ಇರಲಿಲ್ಲ. ಈ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೇರಳದಿಂದ- ಕೊಲ್ಲೂರು ದೇವಸ್ಥಾನಕ್ಕೆ ಪ್ರವಾಸ ಹೊರಟ್ಟಿದ್ದ ಟಿ.ಟಿ. ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ವಾಹನವು ಬ್ಯಾರಿಕೇಡ್ ಡಿಕ್ಕಿಯಾಗಿ ಅನಂತರ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿದೆ. ವಾಹನದಲ್ಲಿ 13 ಪ್ರಯಾಣಿಸುತ್ತಿದ್ದರು ಚಾಲಕನಿಗೆ ಹೆಚ್ಚಿನ ಗಾಯವಾಗಿದೆ. ಮಿಕ್ಕುಳಿದವರು ಸಣ್ಣ-ಪುಟ್ಟ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಟೋಲ್‌ನ ಆ್ಯಂಬುಲೆನ್ಸ್ ಹಾಗೂ ಸಿಬಂದಿ ಮತ್ತು ಸ್ಥಳೀಯರು ಗಾಯಾನುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೋಟ ಪೋಲೀಸ್ ಠಾಣೆ ಉಪಸಿರೀಕ್ಷಕ ರಾಘವೇಂದ್ರ ಸಿ,. ಕ್ರೈಂ ವಿಭಾಗದ ಪಿ.ಎಸ್.ಐ. ಸುಧಾ ಪ್ರಭು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವ ಬೆಟ್ಟಿಂಗ್ ದಂದೆಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂದು ತಾಲೂಕಿನ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಇವತ್ತು ಆತ್ಮಹತ್ಯೆಗೆ ಶರಣಾದ ಹೆಚ್ಚಿನ ಯುವಕರ ಆತ್ಮಹತ್ಯೆಯ ಕಾರಣದ ಹಿಂದೆ ಬೆಟ್ಟಿಂಗ್ ದಂದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇವತ್ತು ವಿದ್ಯಾರ್ಥಿಗಳು ಹಾಗೂ ಯುವ ಜನತೆ ಹೆಚ್ಚಾಗಿ ಈ ಬೆಟ್ಟಿಂಗ್ ನಲ್ಲಿ ಸಿಕ್ಕಿಹಾಕಿಕೊಂಡು ಲಕ್ಷಗಟ್ಟಲೆ ಹಣದ ಸಾಲ ಮಾಡಿಕೊಂಡು ಹಣ ಮರುಪಾವತಿ ಸಾಧ್ಯವಾಗದೆ ಬೆಟ್ಟಿಂಗ್ ದಂದೆಯವರ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿರುವ ಅದೆಷ್ಟೋ ಪ್ರಕರಣಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಹಬ್ಬಿರುವ ಈ ಬೆಟ್ಟಿಂಗ್ ದಂದೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಭುವನೇಂದ್ರ ಕಾಲೇಜು ಕಾರ್ಕಳ ಇದರ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್‌ನ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ತಂಡವು ಸತತ 20ನೇ ಬಾರಿ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಶ್ರೀ ಭುವನೇಂದ್ರ ಕಾಲೇಜು ತಂಡವನ್ನು ಸೋಲಿಸಿ ಶ್ರೀ ಎಂ.ಕೆ. ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಮಹಿಳೆಯರ ತಂಡವು ಎಸ್.ವಿ.ಟಿ ಮಹಿಳಾ ಕಾಲೇಜು ತಂಡವನ್ನು ಸೋಲಿಸಿ ಫೇಬಿಯನ್ ಬಿ. ಎನ್. ಕುಲೊಸೊ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪ್ರಜ್ವಲ್ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಶ್ರೀನಿವಾಸ್ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ಸಹನಾ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ವೇದಾ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತದೆ ಈ ಹಿನ್ನಲ್ಲೆ ಸ್ಥಳೀಯ ಮಕ್ಕಳು ಇದರ ಪ್ರಯೋಜನವನ್ನು ಅಗತ್ಯವಾಗಿ ಪಡೆದುಕೊಳ್ಳಬೇಕು ಎಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯ ಚಂದ್ರಮೋಹನ್ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗುರುವಾರ ಪಾಂಡೇಶ್ವರ ಗ್ರಾಮಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರುಗಳ ಸಹಭಾಗಿತ್ವದಡಿ 15 ರಿಂದ 21ರ ತನಕ ನಡೆಯಲಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಾತನಾಡಿದರು. ಶಿಬಿರಗಳು ಜ್ಞಾನ ವೃದ್ಧಿಗೆ ಸೀಮಿತಗೊಳ್ಳದೆ ವಿವಿಧ ಕಲಾಪ್ರಕಾರಗಳ ಜೊತೆಗೆ ಸಂಸ್ಕಾರಭರಿತ ಜೀವನಕ್ಕೆ ಮುನ್ನುಡಿ ಬರೆಯಲಿದೆ ಎಂದರು. ಕಾರ್ಯಕ್ರಮವನ್ನು ಪಾಂಡೇಶ್ವರ ಗ್ರಾ.ಪಂ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಅರ್ಪಿತಾ ಬ್ರಹ್ಮಾವರ ಭಾಗವಹಿಸಿದರು. ಮುಖ್ಯ ಅಭ್ಯಾಗತರಾಗಿ ಪಂಚಾಯತ್ ಉಪಾಧ್ಯಕ್ಷ ವೈ ಬಿ. ರಾಘವೇಂದ್ರ, ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ, ಸದಸ್ಯರಾದ ಸಿಲ್ವಸ್ಟಾರ್ ಡಿಸೋಜ, ಸಂಧ್ಯಾ ರಾವ್, ಸಂಜೀವಿನಿ ಒಕ್ಕೂಟದ ಎಂಬಿಕೆ ಉಷಾ ಗಣೇಶ್ ಪೂಜಾರಿ, ವಿಆರ್ ಡಬ್ಲ್ಯೂ ಶಾಂತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…
