ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡAತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಹೊಸ ಯೋಜನೆಯಾಗಿ ಸರ್ಕಾರವು ಘೋಷಿಸಿದ್ದು, ಈ ಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅಕಾಡೆಮಿಯ ವೆಬ್ಸೈಟ್ https://janapada.karnataka.gov.in/ ನಲ್ಲಿ ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 16 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ –ಮೇಲ್ registrar.janapada@gmail.com ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣದ ಜತೆಗೆ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗೆ ಆದ್ಯತೆ ನೀಡುತ್ತಿರುವ ಆಳ್ವಾಸ್ನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಸಂಸ್ಥೆ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಉಪಕ್ರಮದಡಿ ₹6.28 ಲಕ್ಷ ಆರ್ಥಿಕ ನೆರವು ನೀಡಿದೆ. ಆಳ್ವಾಸ್ನ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ತಂಡಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 628 ವಿದ್ಯಾರ್ಥಿಗಳಿಗೆ ತಲಾ ₹1,000ರಂತೆ ಒಟ್ಟು ₹6,28,000 ನೆರವನ್ನು ನೀಡಲಾಗಿದ್ದು, ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ನೆರವಿನ ಮೊತ್ತವನ್ನು ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಆಳ್ವಾಸ್ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಸಿ ಎಸ್ ಆರ್ ಉಪಕ್ರಮವನ್ನು ಶ್ಲಾಘಿಸಿ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಂಸ್ಥೆಯು ನೀಡುತ್ತಿರುವ ಬೆಂಬಲವು ಶ್ಲಾಘನೀಯ. ಸಮಾಜದಲ್ಲಿ ಸಂಪತ್ತು ಹೊಂದಿರುವವರು ತಮ್ಮ ಸಂಪತ್ತಿನ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ವಿನಿಯೋಗಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: :ಬ್ರಹ್ಮಾವರ ತಾಲೂಕು ಐದನೇ ಸಾಹಿತ್ಯ ಸಮ್ಮೇಳನವು ಅ.4 ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು. ಕಸಾಪ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು. ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು. ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ / ಝೀಗ್ ಝ್ಯಾಗ್ ಯೋಜನೆಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848 / 7899899039…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತೆಂಗಿನ ಮರದಿಂದ ಕಾಯಿ ಕೀಳಲು ಮರ ಹತ್ತಿದ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದ ಯೋಜನಾ ನಗರದಲ್ಲಿ ಸಂಭವಿಸಿದೆ.ನಾಗೂರು ನಿವಾಸಿ ವಸಂತ (48) ಮೃತ ಕಾರ್ಮಿಕ. ಅವರು ಯಡ್ತರೆ ಗ್ರಾಮದ ಯೋಜನಾ ನಗರದ ಪ್ರದೇಶದಲ್ಲಿ ಮರದಿಂದ ಕಾಯಿ ಕೀಳುತ್ತಿದ್ದಾಗ ಕಾಲು ಜಾರಿ ನೆಲಕ್ಕೆ ಬಿದ್ದು ಗಂಬೀರ ಗಾಯಗೊಂಡರು. ಕೂಡಲೇ ಚಿಕಿತ್ಸೆಗಾಗಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅವರು ಚಿಕಿತ್ಸೆಗೆ ಸ್ವಂದಿಸದೆ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್ ಸವಾರರೊಬ್ಬರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಹಂಗಳೂರು ಗ್ರಾಮದ ಅಂಕದಕಟ್ಟೆ ಬಳಿ ಸಂಭವಿಸಿದೆ. ಮಣೂರು ಗ್ರಾಮದ ಕಂಬಳಗದ್ದೆಬೆಟ್ಟು ನಿವಾಸಿ ರಾಜು ಎಂ.ಎಸ್. ಗಾಯಗೊಂಡವರು. ಅವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಹಂಗಳೂರಿನ ಅಂಕದಕಟ್ಟೆ ಬಳಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದರು. ವೈದ್ಯರ ಸಲಹೆಯಂತೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಅವರು, ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.5ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್ಶಿಪ್ನಲ್ಲಿ ಪುರುಷರ ಕುಮಿಟೆ – 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಅತ್ಯಂತ ಪೈಪೋಟಿಯಿಂದ ಕೂಡಿದ್ದ ಈ ಚಾಂಪಿಯನ್ಶಿಪ್ನಲ್ಲಿ ಅಬ್ದುಲ್ ಮಲ್ಲಿಕ್ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆ ಸಂಸ್ಥೆಗೆ ಕೀರ್ತಿ ತಂದಿದ್ದು, ಕ್ರೀಡಾ ಕ್ಷೇತ್ರದಲ್ಲಿನ ಅವರ ಸಮರ್ಪಣಾ ಭಾವವನ್ನು ಎತ್ತಿ ತೋರಿಸಿದೆ. ಅಬ್ದುಲ್ ಮಲ್ಲಿಕ್ ಅವರ ಈ ಸಾಧನೆಗಾಗಿ ಐಎಂಜೆಐಎಸ್ಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಅವರ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅವರು ಅಧ್ಯಕ್ಷತೆಯನ್ನು ವಹಿಸಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತನ್ನ ಅಧ್ಯಕ್ಷೀಯ ನುಡಿ ನುಡಿದರು. ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವಿಸ್ತರಣಾಧಿಕಾರಿಗಳಾದ ವಾಸುದೇವ ಪುರಾಣಿಕ ಇವರು ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿಸಿ, ಅದರ ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು. ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು. ವರಿಧಿ ವರ್ಷದಲ್ಲಿ ಸಂಘವು ರೂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 99ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿ 2025-26ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ವರದಿ ಸಾಲಿನಲ್ಲಿ ರೂ. 329.20 ಕೋಟಿ ಠೇವಣಿ, ರೂ. 263.57 ಕೋಟಿ ಸಾಲ ಹೊರಬಾಕಿಯಿದ್ದು, ರೂ. 2061.00 ಕೋಟಿ ವ್ಯವಹಾರ ಮಾಡಿ ರೂ.5.88 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.16ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿ 2026ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ(ಪಡು) ಇಲ್ಲಿನ ಮುಖ್ಯ ಶಿಕ್ಷಕಿಯಾದ ಪಾರ್ವತಿ ಎಮ್, ಶ್ರೀ ಗುರುಭ್ಯೋ ನಮಃ ಪುರಸ್ಕೃತ ನರೇಂದ್ರ ಕುಮಾರ್, 2026ನೇ ಸಾಲಿನ ಆದರ್ಶ ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಕ್ಸ್ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಂಜನಾ, ಸನ್ವಿತಾ ಹಾಗೂ ದಿವ್ಯ ಮೂವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಾಲಿಬಾಲ್ ನಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ. ಕ್ರೀಡಾ ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಪ್ರಶಂಸಿಸಿದ್ದಾರೆ.
