ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್.ಪಿ. ಕ್ರಿಯೇಶನ್ ಕ್ಲಬ್‌ನಲ್ಲಿ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಕೋಟ ಪಿಎಸ್‌ಐ ಪ್ರವೀಣ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ನಡೆಸಿದ್ದು, ಆರೋಪಿಗಳಾದ ಹಂಗಳೂರು ಕೋಡಿ ರಸ್ತೆಯ ಶ್ರೀನಿವಾಸ (63), ಬಿದ್ಕಲಕಟ್ಟೆ ಸೂರ್ಯ (51), ಅಂಬಾಗಿಲು ಹನುಮಂತ ನಗರದ ಚಂದ್ರಹಾಸ (40), ಬೀಜಾಡಿ ಗ್ರಾಮದ ಕೃಷ್ಣ (46), ಕುಂಭಾಶಿ ಗ್ರಾಮದ ಕೊರವಾಡಿಯ ಪುರಂದರ (44), ಬ್ರಹ್ಮಾವರ ಕೊಳಂಬೆಯ ರಜಾಕ್ (52), ನೀಲಾವರ ಗ್ರಾಮದ ಸದಾಶಿವ ದೇವಾಡಿಗ (48) ಬಂಧಿತ ಆರೋಪಿಗಳು. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ್ದ ನಗದು 1,130 ರೂ., 7 ಮೊಬೈಲ್ ಫೋನ್‌ಗಳು, 40 ಪ್ಲಾಸ್ಟಿಕ್ ಚೇರ್, 3 ರೌಂಡ್ ಟೇಬಲ್, 5 ಪ್ಲಾಸ್ಟಿಕ್ ಸ್ಟೂಲ್, 1 ಟೇಬಲ್, ಸಿಸಿ ಟಿವಿ ಡಿವಿಆರ್ ಮತ್ತು ಮಾನಿಟರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಎಂಐಟಿಕೆ ಯಲ್ಲಿ ಎಂಪಿಎಲ್ 2025 ( ಎಂಐಟಿ ಕೆ ಪ್ರೀಮಿಯರ್ ಲೀಗ್ ) ಇತ್ತೀಚೆಗೆ ಆಯೋಜಿಸಲಾಗಿತ್ತು. ಇದರಲ್ಲಿ 8 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಹಾವ್ಕ್ ಐಸ್ ತಂಡವು ಎಂಬಿಎ ಡೆಮನ್ಸ್ ತಂಡವನ್ನು ಸೋಲಿಸಿ ವಿಜೇತರಾದರು. ಹುಡುಗಿಯರ ಆರು ತಂಡಗಳಿದ್ದು, ಫೀನಿಕ್ಸ್ ತಂಡ ವಿಜೇತರು ಮತ್ತು ಹಾಕ್ ಐಸ್ ರನ್ನರ್ಸ್ ಆಗಿ ಹೊರಹೊಮ್ಮಿದರು. ಫೈನಲ್ಸ್‌ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ವಿಕಾಸ್ ಬಿ. ಪೂಜಾರಿ, ಬೆಸ್ಟ್ ಬೌಲರ್ ರಜಿಕ್, ಬೆಸ್ಟ್ ಬ್ಯಾಟ್ಸ್‌ಮನ್ ಅಖಿಲ್ ಮತ್ತು ಮ್ಯಾನ್ ಆಫ್ ದಿ ಸೀರೀಸ್ ಸುಜಲ್ ಎಸ್. ಶೆಟ್ಟಿ ವಿಶೇಷ ಕ್ರೀಡಾ ಪ್ರತಿಭೆ ಮೆರೆದರು. ಈ ಪಂದ್ಯಾಟವನ್ನು ಕಾಲೇಜಿನ ವಿದ್ಯಾರ್ಥಿ, ಕ್ರೀಡಾ ಕಾರ್ಯದರ್ಶಿ ಅಶೋಕ್ ಪೂಜಾರಿ, ಹಾಗೂ ದೈಹಿಕ ನಿರ್ದೇಶ ಡಾ. ನವೀನ್ ಕುಮಾರ್ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅಥಿತಿಗಳಾದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸತ್ಯನಾರಾಯಣ, ಉಪಾಧ್ಯಕ್ಷ ದೀಪಕ್ ಕುಮಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಕೋಟೇಶ್ವರ ವೃತ್ತ ಮಟ್ಟದ 14ರ ವಯೋಮಾನದ (ಪ್ರಾಥಮಿಕ ಹಾಗೂ ಪ್ರೌಢಶಾಲಾ) ಬಾಲಕ-ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರದಂದು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವರು ಹಾಗೂ ಸಂಸದರು ಕೆ. ಜಯಪ್ರಕಾಶ್ ಹೆಗ್ಡೆ ಕ್ರೀಡಾಕೂಟವನ್ನು ದೀಪ ಬೆಳಗಿಸಿ, ಉದ್ಘಾಟಿಸಿ, ಮಾತನಾಡಿ, ಕ್ರೀಡೆಯಲ್ಲಿ ನಾವೆಲ್ಲರೂ ಒಂದೇ ಎನ್ನುವ ಮನೋಭಾವ ಬೆಳೆಸಿಕೊಂಡು ನಂತರ ಕಾಲಘಟ್ಟದಲ್ಲಿ ಯಾವುದೇ ಬದಲಾವಣೆಯಾಗಬಾರದು. ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋತರೆ ಎದೆಗುಂದಬಾರದು. ಕ್ರೀಡೆಯಲ್ಲಿ ಸ್ಪರ್ಧಿಸುವುದು ಬಹಳ ಮುಖ್ಯ. ಶಿಕ್ಷಕರು ಪ್ರೋತ್ಸಾಹಿಸಿದ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸದ್ ವಿನಿಯೋಗ ಮಾಡಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕ್ರೀಡಾಳುಗಳಿಗೆ ಉತ್ತಮ ಅವಕಾಶಕ್ಕೆ ಸರಕಾರವೇ ಪ್ರೋತ್ಸಾಹಿಸುತ್ತದೆ ಎಂದರು. ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಉದ್ಘಾಟನೆಗೆ ತಯಾರಿ ನಡೆಸಿರುವ ಘನ ತ್ಯಾಜ್ಯ ಘಟಕ ಕಾನೂನು ಬಾಹಿರವಾಗಿದ್ದು ಇದರ ಉದ್ಘಾಟನೆಗೆ ಪ್ರಯತ್ನಿಸಿದರೆ ಸ್ಥಳೀಯರು ಶಾಂತಿಯುತವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ತಿಳಿಸಿದರು. ಅವರು ಸಾಲಿಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಥಳೀಯರ ಪರವಾಗಿ ಮಾತನಾಡಿದರು. ಈ ಘಟಕಕ್ಕೆ ಸಿ.ಆರ್.ಝಡ್. ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಹೀಗಾಗಿ ಎಲ್ಲಾ ಅನುಮತಿ ಪಡೆಯುವ ತನಕ ಹಾಗೂ ಹೈಕೋರ್ಟ್ ನಲ್ಲಿ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದು ತೀರ್ಪು ಪ್ರಕಟಗೊಳ್ಳುವ ತನಕ ಇದರ ಉದ್ಘಾಟನೆ ನಡೆಸಬಾರದು. ಒಂದು ವೇಳೆ ಕಾನೂನುಬಾಹಿರವಾಗಿ ಉದ್ಘಾಟನೆಗೆ ಮುಂದಾದರೆ ಜನಪ್ರತಿನಿಧಿಗಳು ಇದರಲ್ಲಿ ಭಾಗವಹಿಸಬಾರದು. ಮುಂದೆ ಘಟಕದ ವಿರುದ್ಧವಾಗಿ ತೀರ್ಪು ಬಂದು ಕೋಟ್ಯಾಂತರ ರೂ. ಹಾನಿಯಾದರೆ ಅದಕ್ಕೆ ಅಧಿಕಾರಿಗಳು, ಇಂದಿನ ಜನಪ್ರತಿನಿಧಿಗಳು ನೇರ ಹೊಣೆಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯವನ್ನು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷೆ ಡಾ. ಲೆಸ್ಸಿ ಲುವಿಸ್ ಕರೆ ನೀಡಿದರು. ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣು ಮಕ್ಕಳು ಜೀವಿಸಲು ಅವಕಾಶ ಮಾಡಿಕೊಡಬೇಕು. ಅವುಗಳನ್ನು ಭ್ರೂಣದಲ್ಲಿಯೇ ಹತ್ಯೆ ಮಾಡಿದ್ದಲ್ಲಿ ಲಿಂಗಾನುಪಾತದಲ್ಲಿ ತಾರತಮ್ಯ ಉಂಟಾಗುತ್ತದೆ. ಭ್ರೂಣಲಿಂಗ ಪತ್ತೆ ಮಾಡುವ ವ್ಯಕ್ತಿಗಳು, ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಅವರುಗಳಿಗೆ ಸರಕಾರದ ವತಿಯಿಂದ 50,000 ರೂ. ದಿಂದ 1 ಲಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟ್ರದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿತ್ತೂರು ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಚೆನ್ನಮ್ಮ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಸಂಘಟನ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆಯರ ಸಾಲಿಗೆ ಸೇರ್ಪಡೆಗೊಂಡು ಆದರ್ಶಮಯ ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶದಂತೆ ಕೋಟ ಅಮೃತೇಶ್ವರೀ ದೇಗುಲದಲ್ಲಿ ಗೋ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಲಾಗಿದ್ದು, ದೇಗುಲದ ಅರ್ಚಕರಾದ ಕೃಷ್ಣ ಜೋಗಿ ಗೋ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಸುಬ್ರಾಯ ಜೋಗಿ, ಚಂದ್ರ ಆಚಾರ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ರತನ್ ಐತಾಳ್, ಜ್ಯೋತಿ ಡಿ. ಕಾಂಚನ್, ವ್ಯವಸ್ಥಾಪಕ ಗಣೇಶ್ ಹೊಳ್ಳ, ಹೈನುಗಾರ ಕುಟುಂಬದ ಮಹೇಶ್ ಕಂಭಾಶಿಮನೆ, ಭುಜಂಗ ಗುರಿಕಾರ, ರಮೇಶ್ ಪೂಜಾರಿ, ಸೋಮಶೇಖರ್, ಪ್ರಾಕರ್ ಐತಾಳ್, ಇತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲಾ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾರ್ಯದ ಪ್ರಗತಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ವೀಕ್ಷಿಸಿ ಕಾಮಗಾರಿಯ ಕೆಲವು ನ್ಯೂನ್ಯತೆಗಳ ಬಗ್ಗೆ ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಶೀಘ್ರದಲ್ಲಿ ಉತ್ತಮ ರಿಂಗ್ ರೋಡ್ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಪುರಸಭಾ ಮುಖ್ಯಾಧಿಕಾರಿ ಆನಂದ ಜಿ, ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ಚಂದ್ರಶೇಖರ್ ಖಾರ್ವಿ, ಪಿಡಬ್ಲ್ಯೂಡಿ ಅಧಿಕಾರಿ ರಾಮಣ್ಣಗೌಡ, ಮೆಸ್ಕಾಂ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ನಡೆಸುವ ಪ್ರತಿ ಸಮಾಜಮುಖಿ ಕಾರ್ಯವು ಗ್ರಾಮದ ಪ್ರತಿಯೊಂದು ಸಂಘಟನೆಗೂ ಮಾದರಿಯಾಗಬೇಕು ಈ ಮೂಲಕ ಗ್ರಾಮ ಸುಭಿಕ್ಷೆಯಾಗಲಿದೆ ಎಂದು ಬ್ರಹ್ಮಾವರ ತಾಲೂಕು ದಂಡಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ ಹೇಳಿದರು. ಅವರು ಮಣೂರು ಪಡುಕರೆ ಆನಂದ್ ಸಿ. ಕುಂದರ್ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂಭ್ರಮದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ – 2025 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ, ರಾಜ್ಯೋತ್ಸವ ಕಾರ್ಯಕ್ರಮಗಳು ಕನ್ನಡ ನಾಡುನುಡಿಯ ಧ್ವನಿಯಾಗಲಿ ಎಂದು ಹಾರೈಸಿದರು. ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪಂಚವರ್ಣ ಗೌರವ ಸಲಹೆಗಾರರಾದ ಆನಂದ್ ಸಿ. ಕುಂದರ್ ಮಾತನಾಡಿ, ಸ್ವಚ್ಛತಾ ಅಭಿಯಾನ ಪರಿಸರಸ್ನೇಹಿ ಕಾರ್ಯಕ್ರಮಗಳಿಂದ ಮನೆಮಾತಾದ ಪಂಚವರ್ಣ ಸಂಘಟನೆ ಸಮಾಜದ ಮುಖ್ಯವಾಹಿನಿಯಲ್ಲಿರುವ ಸಾಧಕರನ್ನು ಪ್ರಶಸ್ತಿ ನೀಡುತ್ತಾ ಬಂದಿರುವುದು ಶ್ಲಾಘನೀಯ ಕಾರ್ಯ. ಅದರಲ್ಲೂ ವಿಜಯಲಕ್ಷ್ಮಿ ಶಿಬರೂರು ಎಂಬ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಾಡಿ-ಮತ್ಯಾಡಿಯಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಬುಧವಾರ ಹಾಸ್ಟೆಲ್ ಮಕ್ಕಳಿಗಾಗಿ ದೀಪಾವಳಿಯನ್ನು ಬಹಳ ಅದ್ಧೂರಿಯಾಗಿ ಹಾಗೂ ಶಾಸ್ತ್ರೋಕ್ತಬದ್ಧವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕಲಾಮಾಧ್ಯಮ ಯೂಟ್ಯೂಬ್ ಚಾನೆಲ್‌ನ ಪರಮೇಶ್ವರ್ ಮಾತನಾಡಿ “ಅಕ್ಷರವೆನ್ನುವುದು ದೀಪವಿದ್ದಂತೆ. ಈ ಅಕ್ಷರವೆನ್ನುವ ಜ್ಞಾನದ ಬೆಳಕನ್ನು ಸುಜ್ಞಾನ ಕಾಲೇಜು ಮಕ್ಕಳ ಮನಸ್ಸಿನಲ್ಲಿ ಪಸರಿಸುತ್ತಿದೆ. ಸುಜ್ಞಾನ ಸಂಸ್ಥೆಯು ಉತ್ತಮ ಶಿಕ್ಷಣವನ್ನು ನೀಡುತ್ತಾ ಮಕ್ಕಳ ಮನಸ್ಸಿನಲ್ಲಿ ಸದ್ವಿಚಾರಗಳನ್ನು ಬಿತ್ತುತ್ತಿದೆ ಎಂದರು. ಅತಿಥಿಯಾಗಿದ್ದ ಉದ್ಯಮಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾತನಾಡಿ, “ವಿದ್ಯೆ ಕಲಿಸಿದ ಗುರು ಹಾಗೂ ಜನ್ಮ ನೀಡಿದವರನ್ನು ಎಂದಿಗೂ ಮರೆಯಬಾರದು. ಹಾಗೆಯೇ, ಕೀಳರಿಮೆಯನ್ನಾಗಲಿ ಇಲ್ಲವೆ ಅತಿಯಾದ ಆತ್ಮವಿಶ್ವಾಸವನ್ನಾಗಲಿ ಬೆಳೆಸಿಕೊಳ್ಳಬಾರದು. ಮಾನವೀಯ ಮೌಲ್ಯಗಳ ಪಾಲನೆಗೆ ಬದ್ಧವಾಗಿರುವುದು ಮುಖ್ಯ” ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಮಕ್ಕಳಿಗೆ ಸಹಾಯವಾಗಲೆಂದು ಇಂತಹ ಕಾರ್ಯಕ್ರಮಗಳನ್ನುಸಂಸ್ಥೆಯು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ. ಈ ಕಾರ್ಯಕ್ರಮಗಳು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಹಬ್ಬದ…
