ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳು ಗುರುವಾರ ಜರುಗಿದವು. ಕುಂದಾಪುರ ಮತ್ತು ಬೈಂದೂರು ತಾಲೂಕಿಗೊಳಪಟ್ಟ ಸುಮಾರು 20ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 1000ಕ್ಕೂ ಹೆಚ್ಚು ಸ್ಪರ್ಧಿಗಳು 22 ಸಾಂಸ್ಕೃತಿಕ, 12 ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಕರಾಮತ್ತನ್ನು ಪ್ರದರ್ಶಿಸಿದರು. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಂಜಾನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, 28 ವರ್ಷಗಳಿಂದ ನಡೆದು ಬರುತ್ತಿರುವ ಈ ಕಾರ್ಯಕ್ರಮವನ್ನು ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರು ಆರಂಭಿಸಿದ್ದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನವು ಧಾರ್ಮಿಕ ಕಾರ್ಯಕ್ರಮಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಬಾರಿಕೆರೆ ನಿವಾಸಿ ರಾಘವೇಂದ್ರ ಪೂಜಾರಿ ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದು ಈತನ ನೆರವಿಗೆ ಕೂಲಿ ಕಾರ್ಮಿಕ ಮಂಜುನಾಥ್ ಪೂಜಾರಿ ನೆರವಿನ ಹಸ್ತ ಚಾಚಿದ್ದಾರೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಈ ಮಹಾಕಾರ್ಯವನ್ನು ಮಂಜುನಾಥ್ ಪೂಜಾರಿ ಮಾಡಿದ್ದಾರೆ. ಅವರು ದಿನಂಪ್ರತಿ ಕೂಲಿನಾಲಿ ಮಾಡಿ ಸಂಪಾದಿಸಿದ ಹಣವನ್ನು ಶೇಖರಿಸಿ ಅನಾರೋಗ್ಯಕ್ಕಿಡಾದವರಿಗೆ, ಸ್ಥಳೀಯ ಸರಕಾರಿ, ಅನುದಾನಿತ ಶಾಲೆಗಳಿಗೆ ನೆರವು ನೀಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸೇವಾಕಾರ್ಯ ಮಾಡಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಬಾರಿಕೆರೆ, ಬಾರಿಕೆರೆ ಯುವಕ ಮಂಡಲದ ಅಭಿಜಿತ್ ಕಾಂಚನ್, ವಿಜಯ್ ಪೂಜಾರಿ, ರತ್ನಾಕರ ಪೂಜಾರಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರ ಮತ್ತು ಎಂಎಸ್ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. ಇಂದ್ರವಿಜಯ ಸಿಂಗ್ ಡೀನ್ ಮತ್ತು ವಿಭಾಗ ಮುಖ್ಯಸ್ಥರು ಎಐಎಂಎಲ್ ವಿಭಾಗ ಎಂಐಟಿ ಕುಂದಾಪುರ ಮತ್ತು ಎಂಎಸ್ಡಿಸಿ ಮಣಿಪಾಲದ ಅಧಿಕಾರಿಗಳಾದ ಡಾ. ಅಂಜಯ್ಯ ದೇವಿನೇನಿ, ಡಾ. ಎ ಗಣೇಶ್, ಪ್ರೊ. ನಾಗರಾಜ್, ಡಾ. ರಾಮಸ್ವಾಮಿ, ಪ್ರೊ. ಮಂಗಳಾ ಕೆ. ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರವಾರದಿಂದ ಮಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಅಮಲುಭರಿತ ಚಾಕಲೇಟ್ ನೀಡಿ 4.86 ಲಕ್ಷ ಮೌಲ್ಯದ ಚಿನ್ನಾಭರಣ ನಗದು ದೋಚಿದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ.10 ರಂದು ಬಂಟ್ವಾಳದ ಹರೀಶ ಎಂಬವರು ಕಾರವಾರದಿಂದ ಮಂಗಳೂರಿಗೆ ರೈಲಿನಲ್ಲಿ ಬರುವ ಸಂದರ್ಭದಲ್ಲಿ ಅಪರಿಚಿತ 35 ವರ್ಷದ ವ್ಯಕ್ತಿ ಭಟ್ಕಳದಿಂದ ಬಂದಿದ್ದ. ತನ್ನ ಪರಿಚಯ ಮಾಡಿಕೊಂಡು ಈ ಅಪರಿಚಿತ ವ್ಯಕ್ತಿ ಚಾಕಲೇಟ್ ನೀಡಿದ್ದನು. ಇದರಿಂದ ನಿದ್ದೆಗೆ ಜಾರಿದ ಹರೀಶ್ ಬೆಳಿಗ್ಗೆ ಎದ್ದು ನೋಡುವಾಗ ಕುತ್ತಿಗೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ರೂ 2,35,000 ಬೆಲೆಯ ಸರ, 08 ಗ್ರಾಂ ತೂಕದ ರೂ 70,000/- ಬೆಲೆಯ ಉಂಗುರ, Fast track watch ಬೆಲೆ ಸುಮಾರು 3500/-,ಮೊಬೈಲ್ ಒನ್ ಪ್ಲಸ್ ಸಿಮ್ ನಂ 9686675271 ಬೆಲೆ ಸುಮಾರು 28,000, ಶರ್ಟ ಜೇಬಿನಲ್ಲಿದ್ದ ರೂ 5000 ನಗದು ಮತ್ತು ಬ್ಯಾಗಿನಲ್ಲಿದ್ದ ರೂ 1,45,000/- ನಗದು ಒಟ್ಟು ಮೊತ್ತ 4,86,500/- ರೂ ಮೌಲ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳ ಅಂತರ್ ಕಾಲೇಜು ಕುಂದಗನ್ನಡ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯ ಉದ್ದೇಶದಿಂದ ಚೆನ್ನಿಮಣಿ 2025 – ಎಲ್ಲಾ ಒಂದ್ ಗಳ್ಗಿ ಬನಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಮಾಜಿ ಸಂಸದರು, ಕುಂದಗನ್ನಡ ಅಧ್ಯಯನ ಪೀಠದ ಸದಸ್ಯರಾದ ಕೆ. ಜಯಪ್ರಕಾಶ ಹೆಗ್ಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಇಂದು ಸರಕಾರ ಮಟ್ಟದಲ್ಲಿ ಕುಂದಾಪ್ರ ಕನ್ನಡ ಅಭಿವೃದ್ಧಿಗೆ ಪ್ರೋತ್ಸಾಹ ದೊರಕಿದ್ದು ಈ ನಿಟ್ಟಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಕುಂದಗನ್ನಡ ಅಭಿವೃದ್ಧಿಗೆ ಪೂರಕ ಕ್ರಮ ಕೈಗೊಳ್ಳಲಾಗುತ್ತಿದ್ದು ಕಾಲೇಜು ಮಟ್ಟದಲ್ಲಿ ಹಮ್ಮಿಕೊಂಡ ಇಂತಹ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರಾದ ರಾಜು ಮೊಗವೀರ ಕಾರ್ಯಕ್ರಮದ ಕುರಿತು ಯಾವುದೇ ಒಂದು ಭಾಷೆ ಕಲಿಯುವಾಗ ಅದರ ಹಿನ್ನೆಲೆಯನ್ನು ಅರ್ಥೈಸಿಕೊಂಡರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ಥ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಥ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತೀಯ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದಲ್ಲಿ ತುಮಕೂರಿನ ಬ್ಯಾಡ್ಮಿಂಟನ್ ಅಕಾಡೆಮಿ ಆಯೋಜಿಸಿದ್ದ 28ನೇ ಸೋಮಣ್ಣ ಸ್ಮಾರಕ ಶಟಲ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಮೂಡುಬಿದಿರೆಯ ಡಾ. ವಿನಯ್ ಆಳ್ವ ಹಾಗೂ ಡಾ. ಕಾರ್ತಿಕ್ ಆರ್ ಚಂದ್ರರ ಜೋಡಿ ಪಂದ್ಯಾವಳಿ ಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಜೋಡಿ ಫೈನಲ್ಸ್ನಲ್ಲಿ 21-18, 15-21, 21-10 ಸೆಟ್ಗಳ ಅಂತರದಲ್ಲಿ ಜಯಿಸಿ ಮೊದಲ ಸ್ಥಾನ ಪಡೆಯಿತು. ಕಳೆದ ಸಾಲಿನಲ್ಲಿ ಇದೇ ಜೋಡಿ ಬೆಂಗಳೂರಿನ ಆಕ್ಸ್ಫರ್ಡ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಡಬಲ್ಸ್ ಪಂದ್ಯಾವಳಿಯಲ್ಲಿ ವಿಜಯ ಶಾಲಿಯಾಗಿದ್ದರು. ಡಾ. ಕಾರ್ತಿಕ್ ಆರ್ ಚಂದ್ರ ಅವರು ಜಟ್ಟಿಪಳ್ಳದ ರಾಮಚಂದ್ರ ಪೆಲ್ತಡ್ಕ ಮತ್ತು ಬಿ. ಜೆ. ರಾಧಮಣಿ ದಂಪತಿಗಳ ಸುಪುತ್ರನಾಗಿದ್ದು. ಡಾ ವಿನಯ್ ಆಳ್ವ ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವರ ಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ ತಾಲೂಕಿನ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಕರಾವಳಿಯಲ್ಲಿ ಈ ಭಾರಿ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ವಿಶೇಷವಾಗಿ ಭತ್ತ ಹಾಗೂ ಅಡಿಕೆ ಬೆಳೆಗಳು ಭೀಕರ ಮಳೆಗೆ ಸಂಪೂರ್ಣ ನಾಶಗೊಂಡು ರೈತರು ಅತೀವ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಡಿಕೆ ಕೊಳೆ ರೋಗ ಬಾರದಂತೆ ಔಷಧಿ ಸಿಂಪಡಣೆಯನ್ನು ಹಲವು ಭಾರಿ ಮಾಡಿದರೂ ಕೂಡ ಅತೀವ ಮಳೆಯಿಂದ ಅಡಿಕೆ ಫಸಲು ಸಂಪೂರ್ಣ ನಾಶವಾಗಿದೆ. ಕರಾವಳಿಯ ರೈತರು ಜೀವನೋಪಾಯಕ್ಕೆ ಅಡಿಕೆ, ಭತ್ತ, ತೆಂಗು ಇತ್ಯಾದಿ ಬೆಳೆಗಳನ್ನೇ ಹೆಚ್ಚಾಗಿ ನಂಬಿದ್ದು ಈ ಕೃಷಿ ನಾಶದಿಂದ ಕಂಗಾಲಾಗಿದ್ದಾರೆ. ಆದುದರಿಂದ ಜಿಲ್ಲೆಯ ಶಾಸಕರುಗಳು ಅಧಿವೇಶನದಲ್ಲಿ ಪ್ರಶ್ನೆಗಳಲ್ಲದೆ ಒಂದಷ್ಟು ಅವಧಿಯನ್ನು ಕರಾವಳಿಯ ರೈತರ ಸಮಸ್ಯೆಗಳನ್ನು ಮಾತ್ರ ಚರ್ಚಿಸಲು ಮೀಸಲು ಇಡುವಂತೆ ಹಾಗೂ ಕೃಷಿ ಹಾನಿಗೆ ದೊಡ್ಡ ಪ್ರಮಾಣದ ಪರಿಹಾರ ಮೊತ್ತ ನೀಡುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರಿ ಕ್ಷೇತ್ರದಲ್ಲಿ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ ಅಭಿವೃದ್ಧಿಗೆ ಮುನ್ನುಡಿ ಬರೆದು ಹೊಸ ಮೈಲುಗಲ್ಲು ಸ್ಥಾಪಿಸಲು ಅಣಿಯಾಗಿರುವುದು ಶ್ಲಾಘನೀಯ ಎಂದು ನಾಡೋಜ ಡಾ. ಜಿ. ಶಂಕರ್ ಅಭಿಪ್ರಾಯಪಟ್ಟರು. ಅವರು ಬುಧವಾರ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕೋಡಿ ಇದರ ಸಾಸ್ತಾನ ಶಾಖಾ ಕಛೇರಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಒಂದು ಸಾಮಾನ್ಯವಾಗಿರುವ ಸಹಕಾರಿ ಸಂಘ ಈ ರೀತಿಯಲ್ಲಿ ಯಶಸ್ಸಿನ ಮೆಟ್ಟಿಲೇರಲು ಸಾಧ್ಯವಿದೆ ಎಂಬುವುದನ್ನು ರಾಮಾಂಜನೇಯ ತೊರಿಸಿಕೊಟ್ಟಿದೆ.ಇಂತಹ ಸಂಘಗಳು ಸಮಾಜದ ಒಳಿತಿಗೆ ಮುನ್ನುಡಿ ಬರೆಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಾಂಜನೇಯ ಸಂಘದ ಅಧ್ಯಕ್ಷ ಶಂಭು ಪೂಜಾರಿ ವಹಿಸಿದ್ದರು. ವಿದ್ವಾನ್ ಡಾ. ವಿಜಯ ಮಂಜರ್ ಶುಭಾಶಂಶನೆಗೈದರು. ಭದ್ರತಾಕೋಶವನ್ನು ಉದ್ಯಮಿ ಲಕ್ಷ್ಮೀನಾರಾಯಣ , ಗಣಕೀಕೃತ ಬ್ಯಾಂಕಿಂಗ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್. ಕೆ, ಠೇವಣಿ ಪತ್ರವನ್ನು ಗೋಳಿಗರಡಿ ದೈವಸ್ಥಾನದ ಮುಖ್ಯಸ್ಥ ಜಿ.ವಿಠ್ಠಲ್ ಪೂಜಾರಿ, ಆವರ್ತನ ಠೇವಣಿಯನ್ನು ಕೋಟ ಸಹಕಾರಿ…
