ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪಿದ ಘಟನೆ ಗುರುವಾರ ಸಂಭವಿಸಿದೆ. ಕೊಲ್ಲೂರು ನಿವಾಸಿ, ನರಸಿಂಹ ಬಾಳಿಗ ಅವರ ಪುತ್ರರಾಗಿರುವ ನಟೇಶ್ ಬಾಳಿಗ (36) ಮೃತಪಟ್ಟವರು. ಪಶ್ಚಿಮ ಘಟ್ಟ ತಪ್ಪಲುಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳೆಲ್ಲವೂ ಉಕ್ಕಿ ಹರಿಯುತ್ತಿವೆ ನೀರಿನ ಸೆಳೆತವು ಜಾಸ್ತಿಯಾಗಿದೆ. ಗುರುವಾರ ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಈ ಘಟನೆ ನಡೆದಿದೆ. ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ವ್ಯಕ್ತಿಯ ಮೃತ ದೇಹವು ಮಾವಿನಕಾರು ಸೇತುವೆ ಸಮೀಪ ನದಿಯಲ್ಲಿ ಪತ್ತೆಯಾಗಿದೆ. ನಟೇಶ್ ಅವರು ದೇವಸ್ಥಾನದ ವಾಹನಗಳ ನಿಲುಗಡೆ ಪರಿಸರದಲ್ಲಿ ತಿಂಡಿ ಅಂಗಡಿ ನಡೆಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ತಂದೆ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ಸಂದರ್ಭದಲ್ಲಿಯೂ ಕೂಡ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತಹ ತೀರಾ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಲು ಹೋಗಬಾರದು. ಈ ಬಗ್ಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನಾವು ಅರಿತುಕೊಂಡು ಎಲ್ಲರಿಗೂ ತಿಳಿಸುವ ಪ್ರಯತ್ನಗಳನ್ನು ಕೂಡ ಮಾಡಬೇಕು ಎಂದು ಗಂಗೊಳ್ಳಿಯ ಕೆನರಾ ಬ್ಯಾಂಕಿನ ಆಫೀಸರ್ ಸಾಗರ್ ಕೆ ಶಿವದಾಸ್ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಕೆನರಾ ಬ್ಯಾಂಕ್, ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ರಮ ಅಕೌಂಟ್ ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು. ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ವಾಸು ದೇವಾಡಿಗ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಬಿ. ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠ ಮೇಸ್ತ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನದಲ್ಲಿ ಮೋಕ್ಷ ಸಾಧನೆ ಪಡೆಯುವುದೇ ಪ್ರಧಾನ ಅಂಶವಾಗಿದ್ದು ಮೋಕ್ಷ ಸಾಧನೆಗೆ ಭಗವಂತನ ಸಾಕ್ಷಾತ್ಕಾರ ಆಗಬೇಕಾಗಿದ್ದು ಇದಕ್ಕೆ ಪುಣ್ಯಕ್ಷೇತ್ರಗಳ ಯಾತ್ರೆ ಮಾಡಿ ದೇಶವನ್ನು ಸುತ್ತುವುದರೊಂದಿಗೆ ಜೀವನದನುಭವವವು ಮೋಕ್ಷ ಸಾಧಿಸಲು ಸಾಧ್ಯ ಎಂದು ವಿದ್ವಾನ್ ಮಂಜುನಾಥ ಭಟ್ ಹರೆಗೋಡು ಹೇಳಿದರು. ಅವರು ಕಿರಿಮಂಜೇಶ್ವರದ ಶ್ರೀ ಗುರುನರಸಿಂಹ ಸಭಾಭವನದಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ರಿ. ಉಪ್ಪುಂದ ವಲಯ ಇದರ ಶ್ರಾವಣ ಸಂದ್ಯಾ ಕಾರ್ಯಕ್ರಮ ಹಾಗೂ ಕಾಶಿ ಸಮಾರಾಧನೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಹುಟ್ಟಿನಿಂದ ಯಾರು ಬ್ರಾಹ್ಮಣನಾಗಲು ಸಾಧ್ಯವಿಲ್ಲ ಶೋಡಷಕರ್ಮ ನೀಡಿ, ವೇದಗಳ ಅದ್ಯಯನ ಮೂಲಕ ಎಲ್ಲಾ ವಿದ್ಯಗಳನ್ನು ಕಲಿತು ಸಂಸ್ಕಾರಗಳನ್ನು ಪಡೆದಿದ್ದರೆ ಮಾತ್ರ ಬ್ರಾಹ್ಮಣನಾಗುತ್ತಾನೆ ಎಂದರು. ನಿವೃತ್ತ ಉಪನ್ಯಾಸಕ ಕೊಡೇರಿ ವಾಸುದೇವ ಕಾರಂತರು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ್ಪುಂದ ವಲಯಾದ್ಯಕ್ಷ ಯು. ಸಂದೇಶ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್ ಕುಂಭಾಶಿ, ತಾಲೂಕು ಉಪಾಧ್ಯಕ್ಷ ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲದ ಪ್ರಗತಿನಗರದಲ್ಲಿರುವ ಸರಕಾರಿ ಐ.ಟಿ.ಐ ಯಲ್ಲಿ ಉದ್ಯೋಗ ಖಾತರಿಯುಳ್ಳ ಆರ್.ಎ.ಸಿ ಕಂಪ್ಯೂಟರ್, ಫಿಟ್ಟರ್ ಹಾಗೂ ಆಟೋ ಮೊಬೈಲ್ ಕೋರ್ಸುಗಳಲ್ಲಿ ಕೆಲವೇ ಕೆಲವು ಸೀಟುಗಳು ಬಾಕಿ ಉಳಿದಿದ್ದು, ಆಸಕ್ತ ಎಸ್.ಎಸ್.ಎಲ್.ಸಿ /ಪಿ.ಯು.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಮೂಲ ದಾಖಲೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸ್ಥಳದಲ್ಲೇ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ ದೂ.ಸಂಖ್ಯೆ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ ವಿಕಿಮೇನಿಯಾ 2025 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ವಿಕಿಪೀಡಿಯಾದ ಮೂಲಕ ಮುಕ್ತ ಜ್ಞಾನ ವಿಸ್ತರಣೆಗೆ ಮಹತ್ತರವಾದ ಕೊಡುಗೆ ನೀಡುತ್ತಿದ್ದು, ಈ ಆಮಂತ್ರಣವು ಅವರ ಸೇವೆಯ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ. ಆಗಸ್ಟ್ 6ರಿಂದ 9ರವರೆಗೆ ನಡೆಯುವ ಈ ಚರ್ಚಾ ವೇದಿಕೆಯಲ್ಲಿ ಯಕ್ಷಿತಾ ವಿವಿಧ ದೇಶಗಳ ವಿಕಿಪೀಡಿಯನ್‌ಗಳೊಂದಿಗೆ ಜ್ಞಾನ ವಿನಿಮಯದಲ್ಲಿ ತೊಡಗಿಕೊಂಡು ತಮ್ಮ ಅನುಭವ ಹಾಗೂ ಕಲಿಕೆಯನ್ನು ಭಾರತೀಯ ವಿಕಿಪೀಡಿಯಾ ಸಮುದಾಯದ ಪೈಕಿ ಹಂಚಿಕೊಳ್ಳುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಯಕ್ಷಿತಾ ವಿಕಿಪೀಡಿಯಾ ಹಾಗೂ ವಿಕಿಮೀಡಿಯಾ ಪ್ರಾಜೆಕ್ಟ್‌ಗಳಲ್ಲಿ ಹಲವಾರು ತರಬೇತಿ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದು, ಅವರ ಸಕ್ರಿಯ ಪಾಲ್ಗೊಳ್ಳುವಿಕೆಯ ಸಲುವಾಗಿ 2020ರಲ್ಲಿ ಪ್ರಾಜೆಕ್ಟ್ ಟೈಗರ್ 2.0 ಯೊಜನೆಯಡಿಯಲ್ಲಿ ಎಸರ್ ಲ್ಯಾಪ್‌ಟಾಪ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರಿಗೆ ಜನನ, ಮರಣ ದಾಖಲೆಗಳು ತಮ್ಮ ಶೈಕ್ಷಣಿಕ ಹಾಗೂ ಆರ್ಥಿಕ ವ್ಯವಹಾರಗಳು ಸೇರಿದಂತೆ ಮತ್ತಿತರ ಕೆಲಸ ಕಾರ್ಯಗಳಿಗೆ ಅತ್ಯವಶ್ಯಕ. ಇವುಗಳ ನಿರ್ವಹಣೆ ಸಮರ್ಪಕವಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ನಾಗರಿಕ ನೋಂದಣಿ ಪದ್ಧತಿಯಲ್ಲಿ ಪ್ರತಿಯೊಬ್ಬ ನಾಗರಿಕರ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಲು ಕಾನೂನು ಜಾರಿಗೆ ತಂದಿದ್ದು, ಅದರನ್ವಯ ಪ್ರತಿಶತಃ ನೂರರಷ್ಟು ನೋಂದಣಿ ಕಾರ್ಯಗಳು ಆಗುವಂತೆ ಜನನ, ಮರಣ ನೋಂದಣಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದರು. ಜನನ, ಮರಣ ಹಾಗೂ ನಿರ್ಜೀವ ಜನನಗಳ ಘಟನೆ ಸಂಭವಿಸಿದ 21 ದಿವಸಗಳ ಒಳಗಾಗಿ ಯಾವುದೇ ಶುಲ್ಕವಿಲ್ಲದೇ 21 ರಿಂದ ನಂತರ 30 ದಿನಗಳೊಳಗಾಗಿ ಶುಲ್ಕ 20 ರೂ. ಗಳನ್ನು ನೀಡಿ, ನಂತರ ಒಂದು ವರ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರಸ್ತೆ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮ ಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ನಿವಾಸಿ ಮೊಹಮ್ಮದ್ ಅನ್ಸಾರ್ ಯಾನೆ ಅನ್ಸಾರ್ ತೋಡಾರ್ (32) ಬಂಧಿತ ಆರೋಪಿ. ಈತನ ಮೇಲೆ ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳಿವೆ. ಜುಲೈ 31ರಂದು ಗಂಗೊಳ್ಳಿ ಗ್ರಾಮದ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮೇಲ್ ಗಂಗೊಳ್ಳಿ ಸಮೀಪ ತೆರಳುತ್ತಿದ್ದಾಗ ಬಿಳಿ ಬಣ್ಣದ ಕ್ರೆಟಾ ಕಾರನಲ್ಲಿ ರಸ್ತೆಯ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದ ಗಮನಕ್ಕೆ ಬಂಧಿದೆ. ಗಸ್ತಿನಲಿದ್ದ ಪೊಲೀಸರು ಗಮನಿಸಿದಾಗ ಕಾರನ್ನು ವೇಗವಾಗಿ ತ್ರಾಸಿ ಕಡೆಗೆ ಚಲಾಯಿಸಿದ್ದಾರೆ. ಪೊಲೀಸರು ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದು ಅಲ್ಲಿಂದ ಪರಾರಿಯಾಗಿದ್ದರು. ಜಾನುವಾರು ವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ ಕೊಂಡೊಯ್ದ ಬಗ್ಗೆ ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯೂ ಕೂಡ ಜೀವನಕ್ಕೆ ಅವಶ್ಯವಾದ ಒಂದು ಪಾಠ. ಭಾರತೀಯ ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆಗೆ ಮಾತ್ರ ಕಾರಣವಾಗದೇ ಬೌದ್ಧಿಕ ಕ್ರಿಯಾಶೀಲತೆಗೂ ಕಾರಣವಾಗುವುವು ಎಂದು ಸುಳ್ಯದ ಸಂಪಾಜೆ ಮಾರುತಿ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲರಾದ ಶೋಭಾ ಎಮ್. ಹೇಳಿದರು. ಅವರು ಸಿಐಎಸ್‌ಸಿಇ ಗೇಮ್ಸ್ ಮತ್ತು ಸ್ಪೋರ್ಟ್ಸ್- 2025ರ ಅಂಗವಾಗಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ನಡೆದ ಪ್ರಾದೇಶಿಕ ಮಟ್ಟದ ಕೇರಮ್ ಟೂರ್ನಮೆಂಟ್ ಸ್ಪರ್ಧೆಯ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕೇರಮ್ ಆಟದಲ್ಲಿ ಎದುರಾಳಿಯನ್ನು ಎದುರಿಸುವಾಗ ಅವನ ದೌರ್ಬಲ್ಯವನ್ನು ಅರಿತು ಅದರಂತೆ ಆಡಬೇಕಾಗುತ್ತದೆ. ಇದರಿಂದ ಜೀವನದಲ್ಲಿ ಎದುರಾಳಿಯನ್ನು ಮಣಿಸುವ ಬುದ್ಧಿವಂತಿಕೆಯನ್ನೂ ತಿಳಿಸಿಕೊಡುತ್ತದೆ. ಕೆಲವು ಬಾರಿ ಲೆಕ್ಕಾಚಾರದ ವಿಷಯಗಳು ಅತ್ಯವಶ್ಯವಾಗಿದ್ದು, ಗಣಿತದ ವಿಚಾರಗಳ ಅಧ್ಯಯನವಾದಂತಾಗುತ್ತದೆ. ಎನ್ನುತ್ತಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರನ್ನು ಹುರುದುಂಬಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಮಾತನಾಡಿ, ಕೇರಮ್ ಜೀವನಕ್ಕೆ ಪಾಠವಾಗಿದ್ದು, ಶಾಲೆಗೆ ಸಿಕ್ಕ ಅವಕಾಶವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು, ಐಶ್ವರ್ಯ ಸ್ವಾಗತಿಸಿದರು. ರಶ್ಮಿತಾ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು, ಶ್ರೀರಕ್ಷಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ, ಆಶೀರ್ವಾದದೊಂದಿಗೆ ಪ್ರಾರಂಭಗೊಂಡ ’ಅಖಂಡ ಭಜನಾ ಸಪ್ತಾಹ ಮಹೋತ್ಸವʼ ಬುಧವಾರದಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಬೆಳಿಗ್ಗೆ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ಅನಂತಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಮಧ್ಯಾಹ್ನ ಮಹಾಪೂಜೆ, ಪಂಚಭಕ್ಷ ನೈವೇದ್ಯ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಭಜಕರ ಸೇವೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ಸುಮಾರು 60ಕ್ಕೂ ಮಿಕ್ಕಿ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಜನಾ ಸಪ್ತಾಹ ಸಮಿತಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಜಕರು ಮತ್ತಿತರರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ…
