Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮುಳ್ಳಿಕಟ್ಟೆ ಸಮೀಪ ರಾ. ಹೆ 66ರ ರಿಕ್ಷಾ ನಿಲ್ದಾಣ ಬಳಿ ಬೆಳಗ್ಗೆ ನಡೆದಿದೆ. ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ ರಸ್ತೆಯ ಬದಿ ಬಿದ್ದಿದ್ದು, ಇದರಿಂದ ಕಾರಿನಲ್ಲಿದ್ದ ತಾಜುದ್ದೀನ್ ಹಾಗೂ ಚಾಲಕನ ತಾಜ್ಮುಲ್ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸುದರ್ಶನ್ ಪಿ. ಅವರು ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿ, ಎನ್‌ಎಸ್‌ಎಸ್ ನಮ್ಮ ಜೀವನದ ಪಥವನ್ನೇ ಬದಲಾಯಿಸಬಲ್ಲ ಶಕ್ತಿ ಹೊಂದಿದೆ. ವಿದ್ಯಾರ್ಥಿಗಳು ತಮ್ಮೊಳಗಿನ ಅಧಮ್ಯ ಶಕ್ತಿಯನ್ನು ಗುರುತಿಸಿ, ಸದುಪಯೋಗಪಡಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಜೊತೆಗೆ ಮಾನಸಿಕ ಸ್ವಚ್ಛತೆಯೂ ಅಗತ್ಯ. ಹೃದಯ ಶ್ರೀಮಂತಿಕೆ ಆರ್ಥಿಕ ಶ್ರೀಮಂತಿಕೆಗಿಂತ ಮಿಗಿಲಾದದು ಎಂದರು. ಅಂಬಾನಿಯವರಂತಹ ಉದ್ಯಮಿಗಳೂ ಚಿಕ್ಕಮಟ್ಟದಲ್ಲಿ ಪ್ರಾರಂಭಿಸಿ ಇಂದು ದೊಡ್ಡ ಮಟ್ಟದ ಯಶಸ್ಸನ್ನು ಕಂಡಿದ್ದಾರೆ. ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಸಂವಹನ ಕೌಶಲ್ಯಗಳೊಂದಿಗೆ ಕಾರ್ಯನಿರ್ವಹಿಸಬೇಕು. ಈಗ ನಿಮ್ಹಾನ್ಸ್‌ನಂತಹ ಸಂಸ್ಥೆಗಳು ಮೊಬೈಲ್ ಮಧ್ಯವರ್ಜನ ಶಿಬಿರಗಳನ್ನು ನಡೆಸುವ ಪರಿಸ್ಥಿತಿ ಬಂದೊದಗಿದೆ. ಇದು ಅಪಾಯದ ಸಂಕೇತ. ’ಲೈಫ್ ಇಸ್ ಶಾರ್ಟ್, ಮೇಕ್ ಇಟ್ ಸ್ವೀಟ್ – ಫಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮುದಾಯದೊಳಗಿನ ಉದಾರ ಮನಸ್ಸಿನ ಉಳ್ಳವರಿಂದ ದೇಣಿಗೆಯ ರೂಪದಲ್ಲಿ ಆರ್ಥಿಕ ನೆರವು ಪಡೆದು ಇಲ್ಲದವರಿಗೆ ನೆರವಾಗುವ ಹಂತದಲ್ಲಿ ಸಂಘವು ನಿರ್ವಹಿಸಿರುವ ಕೆಲಸಗಳ ಬಗ್ಗೆ ಆತ್ಮತೃಪ್ತಿಯಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಘವು ತನ್ನಲ್ಲಿರುವ ಮಿತ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಬಡ ಕುಟುಂಬಗಳ ಆರೋಗ್ಯ ಸಮಸ್ಯೆಗಳಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ, ವಿಶೇಷ ಚೇತನರ ನಿರೀಕ್ಷೆಗಳಿಗೆ ಬಹುಮುಖಿಯಾಗಿ ಸ್ಪಂದಿಸಿದೆ ಎಂದು ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ಹೇಳಿದರು. ಅವರು ಯಡ್ತರೆ ಬಂಟರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 30ನೇ ವರ್ಷದ ಸಂಭ್ರಮದ ಕಾರ್ಯ ನಿರ್ವಹಣೆಯ ಅವಧಿ ಹಲವು ಬಗೆಯ ಸವಾಲುಗಳಿಗೆ ಮುಖಾಮುಖಿಯಾದದ್ದು. ಸಂಘದ ಚಟುವಟಿಕೆಗಳನ್ನು ರಚನಾತ್ಮಕವಾಗಿ ಕಟ್ಟುವುದು ಒಂದು ವಿಧದ ಗುಣಾತ್ಮಕ ಸವಲಾಗಿ ಪರಿಣಮಿಸಿತು. ಈ ನಡುವೆಯೂ ಸಮುದಾಯ ಭಾಂದವರ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ, ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೀಡಲಾಗುವುದು. ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ, ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿಯನ್ನು ಆಗಸ್ಟ್ 25 ರ ಒಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನೇಪಾಳ ರಂಗಶೀಲ ಸ್ಟೈಡಿಯಂನಲ್ಲಿ ಜು.26 – 27ರಂದು ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ ಗಾಣಿಗ ಅವರು ಪಾಲ್ಗೊಳ್ಳಲಿದ್ದು ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್‌ನಲ್ಲಿ ಸ್ಪರ್ಧಿಸಲಿದ್ದಾರೆ. ದಿನೇಶ್ ಅವರು ಈ ಹಿಂದೆ ಥೈಲ್ಯಾಂಡ್‌ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸ್‌ನಲ್ಲಿ ದ್ವಿತೀಯ ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ – ಕಂಚು ಪದಕ ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ 2023ರಲ್ಲಿ ಶ್ರೀಲಂಕಾದ ಅಂತಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ : ರೋಟರಿ ಒಂದು ಅಂತಾರಾಷ್ಟ್ರೀಯ ಸಂಸ್ಥೆ ಅದರ ಕಾರ್ಯಚಟುವಟಿಕೆಗಳು ಸಮಾಜದ ಪ್ರತಿ ಹಳ್ಳಿ ಹಳ್ಳಿಗಳನ್ನು ತಲುಪುತ್ತಿದೆ. ಅವರ ಸಾಮಾಜಿಕ ಕಾರ್ಯಗಳು ಅತ್ಯಮೂಲ್ಯವಾದದ್ದು ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಗುರುವಾರ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಹಮ್ಮಿಕೊಂಡ ಹಸಿರು ಅಭಿಯಾನದಡಿ ಕೋಟದ ಪಂಚವರ್ಣ ಸಂಘಟನೆಗೆ ಗಿಡ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟ ಸಿಟಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿದೆ. ಇವರ ಪ್ರಸ್ತುತ ಹಸಿರು ಅಭಿಯಾನ ಪಂಚವರ್ಣದಂತಹ ಸಂಸ್ಥೆಗೆ ಗಿಡ ನೀಡಿ ಅರ್ಥಪೂರ್ಣಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಪಂಚವರ್ಣ ಸಂಘಟನೆಗೆ ನೂರುಕ್ಕೂ ಅಧಿಕ ರಕ್ತಚಂದನ ಗಿಡಗಳನ್ನು ಆನಂದ್ ಸಿ ಕುಂದರ್ ಸಮ್ಮುಖದಲ್ಲಿ ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಪ್ರಕಾಶ್ ಹಂದಟ್ಟು ಹಸ್ತಾಂತರಿಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3182 ವಲಯ 2 ರ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ ಶುಭ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಹಾಗೂ ವಾಣಿಜ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ  ಹಾಗೂ ವೃತ್ತಿ ಪರ ಕುಶಲ ಕರ್ಮಿಗಳಿಗೆ  ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ವೃತ್ತಿ ನಿರತ ಕುಶಲ ಕರ್ಮಿಗಳಿಗೆ ಸ್ವ ಉದ್ಯೋಗ ಸಂಬಂಧ ಸುಧಾರಿತ ಉಪಕರಣಗಳನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿತರಿಸಿದರು. ಶಾಸಕರು ಕಾರ್ಯಕ್ರಮದಲ್ಲಿ ಮಾತನಾಡಿ, ಬೈಂದೂರು ಕ್ಷೇತ್ರವು ಸಾಕಷ್ಟು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು ವಿವಿಧ ವೃತ್ತಿಪರರು ಸ್ವ ಉದ್ಯೋಗ ಮೂಲಕ ತಮ್ಮ ಜೀವನಮಟ್ಟ ಸುಧಾರಿಸಿ ಕೊಂಡು ಗೌರವಯುತ ಜೀವನ ನಡೆಸುತ್ತಿದ್ದಾರೆ ಹಾಗೂ ತಮ್ಮ ಮುಂದಿನ ಪೀಳಿಗೆಯ ಶೈಕ್ಷಣಿಕ ಭವಿಷ್ಯ ಸೇರಿದಂತೆ ಕುಟುಂಬದ ಸುಭದ್ರ ಬದುಕಿಗೆ ಶ್ರಮಿಸುತ್ತಿದ್ದಾರೆ. ಇಂತಹ ವರ್ಗವು ಹೆಚ್ಚು ಹೆಚ್ಚು ಗ್ರಾಮೀಣ ಭಾಗದಲ್ಲಿ ಏಳಿಗೆ ಕಾಣುವುದರಿಂದ ಇಡೀ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಪಡೆದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಾವು ಕಲಿತ ಶಾಲೆಯಲ್ಲಿ ನಿಕಟವಾದ ಸಂಪರ್ಕವನ್ನು ಇಟ್ಟುಕೊಂಡು ಕಳೆದ ಬಹಳ ವರ್ಷಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನೂ ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗುತ್ತದೆ. ಈ ಕಾರ್ಯದಿಂದಾಗಿ ಮತ್ತಷ್ಟು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಬರಲು ಉತ್ತೇಜಿಸುತ್ತಿರುವ ಇವರ ಕಾರ್ಯ ಮೆಚ್ಚುಗೆ ಪಡುವಂತದ್ದು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-03ನೇ ಸಾಲಿನ ಸ್ನೇಹ ಸಂಗಮ ಹಳೆ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್‌ಡಿಎಮ್‌ಸಿ ಸದಸ್ಯ ಅಶೋಕ ಜಿ., ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ, ರಾಘವೇಂದ್ರ ಎಸ್ ಬೀಜಾಡಿ ಉಪಸ್ಥಿತರಿದ್ದರು. ಕಲಿಕೆ,…

Read More