Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಂದು ಪತಿ ಓಡಿ ಹೋದ ಘಟನೆ ಗುರುವಾರ ತಡರಾತ್ರಿ ತಾಲೂಕಿನ ಹಿಲಿಯಾಣ ಎಂಬಲ್ಲಿ ನಡೆದಿದೆ. ಇಲ್ಲಿನ ದರ್ಕಾಸು ನಿವಾಸಿ ಗಣೇಶ್ ಪೂಜಾರಿ (43) ಎಂಬಾತನೇ ಪತ್ನಿಯನ್ನು ಕೊಂದ ಆರೋಪಿ. ಗಣೇಶ್ ಪೂಜಾರಿ ಪತ್ನಿ ರೇಖಾ ಪೂಜಾರಿ (26) ಪತಿಯಿಂದ ಕೊಲೆಯಾದ ದುರ್ದೈವಿ. ಗುರುವಾರ ತಡರಾತ್ರಿ ಮನೆಗೆ ಬಂದ ಗಣೇಶ್‌, ಹೆಂಡತಿಯೊಂದಿಗೆ ತಕರಾರು ತೆಗೆದು ಗಲಾಟೆ ನಡೆಸಿ ಮಾತಿಗೆ ಮಾತು ಬೆಳೆದು ಸಿಟ್ಟುಗೊಂಡು ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಗಣೇಶ್ ಪೂಜಾರಿ ಹೊಡೆದಿದ್ದು ತಲೆಗೆ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಹುಡುಕಾಡಿ ಕೊನೆಗೆ ಶಂಕರನಾರಾಯಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಪೂಜಾರಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ. ದಂಪತಿಗಳಿಗೆ ಒಬ್ಬ 6 ವರ್ಷ ಮತ್ತು ಇನ್ನೊಬ್ಬ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಮಕ್ಕಳು ಆದರ್ಶ ವಿದ್ಯಾರ್ಥಿಯಾಗಿ ಬೆಳೆಯುತ್ತಾರೆ. ಯಾವುದೇ ವಿಷಯವನ್ನು ಅಧ್ಯಯನ ಮಾಡುವಾಗ ಅದರ ಬಗ್ಗೆ ಚಿಂತನೆ ಮಾಡಬೇಕು ಆಗ ನಿರ್ದಿಷ್ಟ ಗುರಿ ಯಶಸ್ವಿಯಾಗುತ್ತದೆ ಎಂದು ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡುತ್ತಾ ಹೇಳಿದರು. ಅವರು ಗುರುವಾರ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪಪೂ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿ, ಕುಂದಾಪುರ ಇಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿ ವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡವನ್ನು ದೀಪ ಪ್ರಜ್ವಲನಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ಮಗುವಿನಲ್ಲಿಯೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿದಾಗ, ಆ ಮಗು ಹಾಗೂ ಸಮಾಜ ಅದರ ಪ್ರಯೋಜನ ಪಡೆಯಲು ಸಹಕಾರಿಯಾಗಬಲ್ಲದು ಎಂದರು. ಇದೇ ಸಂದರ್ಭದಲ್ಲಿ ಶಾಲಾ ಕಟ್ಟಡದಲ್ಲಿ  ಶಾರದ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿಶೇಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಫಲಾನುಭವಿಗಳ ಮಾಹಿತಿಯನ್ನು ಸರ್ಕಾರ ಪಡೆಯುತ್ತಿರುವುದು ಈ ಯೋಜನೆಯನ್ನು ನಿಲ್ಲಿಸುವ ಉದ್ದೇಶದಿಂದಲ್ಲ. ಆದರೆ ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಸಾಮಾಜಿಕ ಪಿಂಚಣಿ ನಿಲ್ಲಿಸುವ ಹುನ್ನಾರ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವುದರ ಮೂಲಕ ಜನರ ದಾರಿ ತಪ್ಪುಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈಗ ಪ್ರಸ್ತುತ 60 ರಿಂದ 63 ವರ್ಷ ಪ್ರಾಯದವರಿಗೆ 600 ರೂಪಾಯಿ ಪಿಂಚಣಿ, 63 ರಿಂದ 65 ವರ್ಷ ಪ್ರಾಯದವರಿಗೆ 800 ಹಾಗೂ 65 ವರ್ಷ ಪ್ರಾಯ ಮೇಲ್ಪಟ್ಟವರಿಗೆ 1200 ರೂಪಾಯಿ ಪಿಂಚಣಿ ದೊರಕುತ್ತಿದೆ. ಆದರೆ ಪ್ರಾಯ ಹಾಗೂ ಇತರೆ ದಾಖಲೆಗಳಲ್ಲಿನ ಗೊಂದಲಗಳಿಂದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿಯಲ್ಲಿ ಒಂದಷ್ಟು ಗೊಂದಲಗಳು ಏರ್ಪಟ್ಟ ಕಾರಣ ಅಂದರೆ 600 ರೂಪಾಯಿ ಪಿಂಚಣಿ ಪಡೆಯುವವರಿಗೆ 1200 ರೂಪಾಯಿ ಪಿಂಚಣಿ ಅವರ ಖಾತೆಗೆ ಹೋಗುತ್ತಿದ್ದು, 1200 ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳ ಖಾತೆಗೆ 600 ರೂಪಾಯಿ ಬರುತ್ತಿರುವ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ಹುಲ್ಲು ಕೊಯ್ಯಲು ಹೋಗಿದ್ದ ಯುವತಿ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಎಂಬಲ್ಲಿ ನಡೆದಿದೆ. ಜಡ್ಡಿನಗದ್ದೆಯ ಸಂಜೀವ ನಾಯ್ಕ ಮತ್ತು ನರ್ಸಿ ದಂಪತಿಯ ಪುತ್ರಿ ಮೂಕಾಂಬಿಕಾ (24) ಮೃತಪಟ್ಟವರು. ಮೂಕಾಂಬಿಕಾ ಅಮಾಸೆಬೈಲಿನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಬೆಳಿಗ್ಗೆ ಹುಲ್ಲು ತರಲು ಅತ್ತಿಗೆ ಅಶ್ವಿನಿ ಅವರೊಂದಿಗೆ ತೋಟಕ್ಕೆ ಹೋಗಿದ್ದರು. ಮರಳುವಾಗ ಅಶ್ವಿನಿ ಅವರು ಹುಲ್ಲಿನ ಹೊರೆಯನ್ನು ಹೊತ್ತುಕೊಂಡು ಮನೆಯ ಕಡೆಗೆ ಬರುವಾಗ ಕಾಣೆಯಾಗಿದ್ದರು. ಅಶ್ವಿನಿ ಅವರು ಹಿಂದಿರುಗಿ ಹುಡುಕುತ್ತಾ ಹೋದಾಗ ಅಣೆಕಟ್ಟಿನ ದಂಡೆಯ ಮೇಲೆ ಹುಲ್ಲು ಕೊಯ್ಯುವ ಕತ್ತಿ ಕಾಣಿಸಿತು. ಭಯದಿಂದ ಅಶ್ವಿನಿ ಅವರು ಬೊಬ್ಬೆ ಹಾಕಿದಾಗ ಮನೆಯವರು ಬಂದು ಅಣೆಕಟ್ಟಿನಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಯಿತು. ಮೃತರು ತಂದೆ, ತಾಯಿ ಹಾಗೂ 6 ಮಂದಿ ಸಹೋದರಿಯರು ಮತ್ತು ಸಹೋದರರನ್ನು ಅಗಲಿದ್ದಾರೆ ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯೋಗದಲ್ಲಿ ಮುಖ್ಯವಾಗಿ ಎರಡು ಅಂಶಗಳು. ಒಂದು ತತ್ವಶಾಸ್ತ್ರ ಇನ್ನೊಂದು ಅಭ್ಯಾಸ. ಆದರೆ ಈ ಎರಡು ಅಂಶಗಳು ಒಟ್ಟಿಗೆ ಮೇಳೈಸಬೇಕಾದಾಗ, ಮೊದಲು ತತ್ತ್ವಶಾಸ್ತ್ರಕ್ಕೆ  ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಭ್ಯಾಸ ಮಾಡಲು ಮೊದಲು ಯೋಗವನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು ಎಂದು ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಉಪಪ್ರಾಂಶುಪಾಲೆ ಹಾಗೂ ಡೀನ್ ಡಾ. ಸುಜಾತ ದಿನೇಶ್ ಹೇಳಿದರು. ಅವರು ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಪರಿಷತ್ತು, ಭಾರತ ಸರ್ಕಾರದ ಆಯುಷ್ಯ ಸಚಿವಾಲಯ ಇವುಗಳ ಜಂಟಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 16 ರಿಂದ 19 ರವರೆಗೆ ‘ಯೂತ್ ಯೋಗ ಫೆಸ್ಟಿವಲ್’ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನ್ಯಾಚುರೋಪಥಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬರುವ ಅಡೆತಡೆಗಳನ್ನು ಯೋಗತತ್ವಶಾಸ್ತ್ರ ಸಿದ್ಧಾಂತಗಳ ನೆಲೆಯಲ್ಲಿ ಪರಿಹರಿಸಿಕೊಳ್ಳಬೇಕು. ನಮ್ಮ ಭವಿಷ್ಯವನ್ನು ನಮ್ಮ ವರ್ತಮಾನ ನಿರ್ಧರಿಸುತ್ತದೆ. ಆದುದರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902, ಇ-ಮೇಲ್ postmetrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 42 ವರ್ಷಗಳ ಸುದೀರ್ಘ ಇತಿಹಾಸ ಇರುವ ಪ್ರತಿಷ್ಠಿತ ಬೈಂದೂರು ರೋಟರಿ ಕ್ಲಬ್ ನ 2025- 26ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದರಾದ ಸುಬ್ರಮಣ್ಯ ಜಿ. ಉಪ್ಪುಂದ ಆಯ್ಕೆಯಾದರು. ಉತ್ತಮ ಸಂಘಟಕರೂ ಆಗಿರುವ ಸುಬ್ರಹ್ಮಣ್ಯ ಜಿ ಅವರು ಉಪ್ಪುಂದ ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ರೋಟರಿ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 9 ರಂದು ರೋಟರಿ ಸಮುದಾಯ ಭವನ ಬೈಂದೂರು ಇಲ್ಲಿ ನಡೆಯಲಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ  ನೂತನವಾಗಿ ಸ್ಥಾಪಿಸಲ್ಪಟ್ಟ ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೂಡಬಿದಿರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ.  ದಕ್ಷಿಣ ಕನ್ನಡದ ಜಿಲ್ಲೆಯ  8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯನಿರ್ವಹಿಸುತ್ತಿದೆ. ಇಂದು ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು.   ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ…

Read More