ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಟ್ರಕ್‌ವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೋಟೇಶ್ವರ ಕಿನಾರಾ ಜಂಕ್ಷನ್ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾರ ಮಧ್ಯಾಹ್ನದ ಸುಮಾರಿಗೆ ಸಂಭವಿಸಿದೆ. ಇಡೂರು-ಕುಂಜ್ಞಾಡಿ ಜನ್ನಾಲು ಸಮೀಪದ ಕೊಳ್ತ ನಿವಾಸಿ ಭರತ್ ಶೆಟ್ಟಿ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೇರಳದಿಂದ ನಾಸಿಕ್ ಕಡೆಗೆ ಫ್ಲೈವುಡ್ ಸಾಗಿಸುತ್ತಿದ್ದ ಟ್ರಕ್ ಉಡುಪಿಯಿಂದ ಕುಂದಾಪುರದೆಡೆಗೆ ಸಾಗುವಾಗ ಅದೇ ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ಭರತ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಭರತ್ ಕೋಟೇಶ್ವರ ಸಮೀಪದಲ್ಲಿನ ಪೈಂಟ್ ಶೋರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ವರ್ಷವಷ್ಟೇ ವಿವಾಹವಾಗಿತ್ತು ಎನ್ನಲಾಗಿದೆ. ಮನೆಯಿಂದ ಕೆಲಸಕ್ಕೆ ಬಹುತೇಕ ಕಾರಿನಲ್ಲಿ ಬಂದುಹೋಗುತ್ತಿದ್ದ ಭರತ್ ಗುರುವಾರ ಬೈಕಿನಲ್ಲಿ ಬಂದಿದ್ದರು. ಟ್ರಕ್ ಚಾಲಕನ ಅಜಾಗರುಕತೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಜೀವವೊಂದನ್ನು ಬಲಿಪಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಂದಾಪುರ ಸಂಚಾರ ಠಾಣೆ ಉಪನಿರೀಕ್ಷಕರಾದ ಅನೂಪ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಆಜ್ರಿ ಗ್ರಾಮದ ಎಡ್ನಳಿ, ಹಕ್ಲ್ ಮನೆ ಹಾಗೂ ಮಕ್ಕಿಮನೆ ಭಾಗಗಳಲ್ಲಿ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದ ಅಡಿಕೆ, ತೆಂಗು ಹಾಗೂ ಬಾಳೆ ಬೆಳೆಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಂತ್ರಸ್ತ ರೈತರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ ಧೈರ್ಯ ತುಂಬಿದರು. ಈ ವೇಳೆ ಸಂಬಂಧಿತ ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹಾಗೂ ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ಶೀಘ್ರ ಪರಿಹಾರ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿಗೆ ನಡೆದ ‘ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್’ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುಜೀತ್ ಯು. ನಾಯಕ್ (296),ಆದ್ಯ ಎಸ್. ಪಾಡ್ರೆ (292), ಭೂಮಿಕ ಸುಬ್ಬರಾಯ್ ಹೆಗ್ಡೆ (282),ವರುಣ್ ಚಂದ್ರಶೇಖರ್ ಕಚತ್ತಿ(280), ಅಕ್ಷರ್ ಎಸ್ ನಾಯಕ್(270), ಅನಿರುದ್ಧ ಕೆ.ಕೆ (270), ಸೃಷ್ಠಿ (252), ಹಿತ ರವಿ ಶೆಟ್ಟಿ (240), ಅನ್ವಿತ್ ಪ್ರಶಾಂತ್ ಮೂಲೆ (230), ಸಮೃತಿ ಎಂ. ಗೌಡ (230), ಚಿನ್ಮಯ್(226), ಅನ್ನಿಕ(224), ವೃದ್ಧಿ ಎಸ್. ಶೆಟ್ಟಿ (208), ಅನುಷ್ಕ ಶರಣಗೌಡ ಬಿರದಾರ್ (200) ಅಂಕ ಪಡೆದು ಅರ್ಹತೆಗಳಿಸಿದ್ದಾರೆ. ಒಟ್ಟು 18 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 14 ಮಂದಿ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಈ ಬಾರಿ ಸಿಎಂಎ ಫೌಂಡೇಶನ್ ತೇರ್ಗಡೆ ಫಲಿತಾಂಶ ಪ್ರಮಾಣ ಶೇ. 25% ರಷ್ಟಿದ್ದರೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ.77.77%ರಷ್ಟು ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಸುರಿದ ಬಾರಿ ಗಾಳಿ ಮಳೆಗೆ ಸಾಸ್ತಾನದ ಸಮೀಪ ಗುಂಡ್ಮಿ ಪಾತಾಳ ಬೆಟ್ಟು ಪರಿಸರದಲ್ಲಿ ಬೃಹತ್ ಗಾತ್ರದ ಮರದ ಕೊಂಬೆ ವಿದ್ಯುತ್ ಕಂಬದ ಮೇಲೆರಗಿ ರಸ್ತೆ ಸಂಪರ್ಕ ಕಡಿತಗೊಂಡು ಸಾರ್ವಜನಿಕರಿಗೆ ಸಮಸ್ಯೆ ತಂದೊಡ್ಡಿತು. ಈ ಹಿನ್ನಲ್ಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಶೌರ್ಯ ಟೀಮ್‌ನ ಸದಸ್ಯರು ಮತ್ತು ಮೆಸ್ಕಾಂ ಸಿಬ್ಬಂದಿಗಳ ಮೂಲಕ ತೆರವುಗೊಳಿಸಿ, ವಿದ್ಯುತ್ ತಂತಿ ಹಾಗೂ ರಸ್ತೆ ಸರಿಪಡಿಸಿ, ವಾಹನಗಳು ಸಂಚಾರ ಮುಕ್ತ ಅವಕಾಶ ಕಲ್ಪಿಸಲಾಯಿತು. ಈ ಸೇವಾ ಕಾರ್ಯದಲ್ಲಿ ಶೌರ್ಯ ತಂಡದ ಕಾಳಿಂಗ ಪೂಜಾರಿ, ರವಿ ಪೂಜಾರಿ, ಯೋಗೀಶ ಆಚಾರ್ಯ, ಸತೀಶ್, ರೇಣುಕಾ, ವಿಜಯಶ್ರೀ, ಘಟಕ ಪ್ರತಿನಿಧಿ ಶೋಭಾ ಮತ್ತು ಮೆಸ್ಕಾಂ ಸಿಬ್ಬಂದಿ ಅನಿಲ್, ಕುಮಾರ ಹಾಗೂ ಸ್ಥಳೀಯರಾದ ಸುಂದರ, ಸಂತೋಷ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 202-27ರ ಸ್ಪರ್ಧೆಗಳ ಅಂಗವಾಗಿ ಶಿವಮೊಗ್ಗದ ಸೈಂಟ್ ಜೋಸೆಪ್ಸ್ ಅಕ್ಷರಧಾಮ ಸಿಐಎಸ್‌ಸಿ ನೆಹರೂ ಕ್ರೀಡಾಂಗಣದಲ್ಲಿ ವಲಯಮಟ್ಟದ ಖೋ ಖೋ ಸ್ಪರ್ಧೆಗಳು ನಡೆದಿದ್ದವು. ಈ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 18 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. 14 ವರ್ಷದೊಳಗಿನ ವಯೋಮಿತಿಯ ಹುಡುಗ ಮತ್ತು ಹುಡುಗಿಯರ ವಿಭಾಗದಲ್ಲಿ, 17 ವರ್ಷದೊಳಗಿನ ವಯೋಮಿತಿಯ ಹುಡುಗರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಹರ್ಷವನ್ನು ವ್ಯಕ್ತಪಡಿಸಿ ಮಾತನಾಡಿ, ನಮ್ಮ ಶಾಲೆಯ ದೈಹಿಕ ಶಿಕ್ಷಕರಿಂದ ತರಬೇತಿಗೊಂಡ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದು, ಅವರು ಹೀಗೆ ಉತ್ತಮವಾಗಿ ಸಾಧಿಸಿ ಶಾಲೆಗೂ ಹೆತ್ತವರಿಗೂ ಕೀರ್ತಿತರುವಂತವರಾಗಲಿ ಎಂದು ಹಾರೈಸಿದರು. ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತಾಧಿಕಾರಿಗಳಾದ ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ/ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶಾತಿಯ ಅವಧಿ ಶೀಘ್ರವೇ ಮುಗಿಯಲಿದ್ದು, ಸೀಮಿತ ಸಂಖ್ಯೆಯ ಸೀಟುಗಳು ಮಾತ್ರ ಸಂಸ್ಥೆಯಲ್ಲಿ ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ಮೊ.ನಂ: 8124489163, ದೂ.ಸಂಖ್ಯೆ: 0821-2516322 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ವಿವೇಕ ವಿದ್ಯಾ ಸಂಸ್ಥೆಯ 2026ನೇ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದ ಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿದ 145 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾರ್ಯ ಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಹೊಳ್ಳ ಮಿತ್ರನ್ ಕೋ ಲಿಮಿಟೆಡ್ ಫೌಂಡರ್ ಸಿ.ಎ ಅಮರೀಶ ಹೊಳ್ಳ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ನಿಖರ ಗುರಿ ಹೊಂದಿರಬೇಕು. ಏಕಾಗ್ರತೆ, ಸ್ವ ಅಧ್ಯಯನ, ನಿರಂತರ ಪರಿಶ್ರಮ ದಿಂದ ಗುರಿಯನ್ನು ತಲುಪಲು ಸಾಧ್ಯ. ನಮಗೆ ಎದುರಾಗುವ ಸಮಸ್ಯೆ ಗಳನ್ನು ಬಗೆಹರಿಸುವ ಕೌಶಲ ಹೊಂದಿರಬೇಕೆಂದು ತಿಳಿಸಿದರು. ಕಾರ್ಯ ಕ್ರಮ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಅಧ್ಯಕ್ಷ ಪಿ. ಭಾಸ್ಕರ ಹಂದೆ ವಹಿಸಿದ್ದರು. ಆಡಳಿತ ಮಮಡಳಿಯ ಸದಸ್ಯರಾದ ಶ್ರೀಪತಿ ಹೇರ್ಳೆ ಶುಭಾಶಂಸನೆ ಗೈದರು. ವೇದಿಕೆ ಮೇಲೆ ಜೊತೆ ಕಾರ್ಯದರ್ಶಿ ಪಿ. ಮಂಜುನಾಥ ಉಪಾಧ್ಯ, ವಸಂತ ಶೆಟ್ಟಿ, ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೆಂಪಿ ರಮಾನಂದ ಭಟ್ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಮೇ.2026ರ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾತ್ವಿಕಾ ಶ್ರೀಯಾನ್, ಸಾನಿಕಾ, ವರುಣ್ ಆರ್. ಭಟ್, ಸ್ಪೂರ್ತಿ ಎಸ್., ಪ್ರೀತಲ್ ಬಿ. ದೇವಾಡಿಗ ಹಾಗೂ ನೇಹಾ ಶೆಟ್ಟಿ ಅವರು ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮವು ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಯ ಅಂಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸುತ್ತಿದ್ದಾರೆ ಮತ್ತು ಸಂಗ್ರಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,63,876 ಎನ್ಯುಮರೇಷನ್ ಫಾರ್ಮ್ಗಳನ್ನು ಮುದ್ರಿಸಲಾಗಿದ್ದು, ಈವರೆಗೆ (ಜುಲೈ 7) 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,81,451 ಮತದಾರರಿಗೆ, 119-ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,59,874 ಮತದಾರರಿಗೆ, 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,31,693 ಮತದಾರರಿಗೆ, 121-ಕಾಪು ವಿಧಾನಸಭಾ ಕ್ಷೇತ್ರದಲ್ಲಿ 1,28,356 ಮತದಾರರಿಗೆ ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 1,39,208 ಮತದಾರರಿಗೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 7,40,582 ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ. 39,469 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 282 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬAದಿರುತ್ತದೆ. 154 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 45 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ. ಸಾರ್ವಜನಿಕರು…
