ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇಲ್ಲಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಯಂತ್ರಗಳ ಟ್ರಯಲ್ ರನ್ ನಡೆಯಿತು. ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಪೂಜಾ ವಿಧಿ ವಿಧಾನ ನೆರವೇರಿಸಿ ಡಯಾಲಿಸಿಸ್ ಯಂತ್ರಗಳ ಪರೀಕ್ಷಾರ್ಥ ಪ್ರಯೋಗಕ್ಕೆ ಚಾಲನೆ ನೀಡಿ ಮಾತನಾಡಿ, ಬೈಂದೂರಿನ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೊಂದ ಬಡ ಜನರ ಬೇಡಿಕೆಯಂತೆ ಬೈಂದೂರಿನ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿ ದೇವತಾನುಗೃಹ ವನ್ನು ಕೋರಿದ್ದೇವೆ. ಬೈಂದೂರಿನ ಆರೋಗ್ಯ ಕ್ಷೇತ್ರದಲ್ಲಿ ಹಲವು ಕನಸುಗಳನ್ನು ಕಟ್ಟಿ ಕೊಂಡಿದ್ದೇವೆ ಹಾಗೂ ಅದಕ್ಕಾಗಿ ಪೂರಕ ವಾತಾವರಣ ನಿರ್ಮಾಣಕ್ಕಾಗಿ ಪ್ರಯತ್ನಿಸಲಾಗುತ್ತಿದೆ. ಈ ಹಿಂದೆ ಮಣಿಪಾಲ ಆಸ್ಪತ್ರೆಯ ನೆರವಿನೊಂದಿಗೆ ಪಿ.ಪಿ.ಪಿ ಮಾದರಿಯಲ್ಲಿ ಡಯಾಲಿಸಿಸ್ ಸೇವೆ ಒದಗಿಸಲು ಪ್ರಯತ್ನ ಆಗಿತ್ತಾದರೂ ಸರಕಾರ ಅದಕ್ಕೆ ಅನುಮತಿಯನ್ನು ನೀಡದ ಕಾರಣ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ಮಣಿಪಾಲ ಆಸ್ಪತ್ರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಾಲೇಜಿನಲ್ಲಿ ನಡೆದ ’ಡಿಜಿಟಲ್ ಲೋಕುಡ್ ತುಳು’ಒಂದು ದಿನದ ಬರವಣಿಗೆ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ವಿದ್ಯಾರ್ಥಿ ಸಮ್ಮೇಳನ, ತುಳು ಐಸಿರ, ಒಂಜಿ ದಿನ ಬಲೆ ಓದುಗ ಕೂಟ, ಮಕ್ಕಳ ರಂಗತರಬೇತಿ ಶಿಬಿರ, ತುಳುನಾಡ ಸಿರಿ ಮದಿಪು, ತುಳುಭಾಷ ಬದ್ಕ್ ಗೇನದ ಪೊಲಬು ಮುಂತಾದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತುಳುವಿನ ಕುರಿತು ಆಸಕ್ತಿ ಮೂಡಿಸಲು ಸಹಕಾರಿಯಾಗಿವೆ. ತುಳು ಭಾಷೆಯ ಸಮೃದ್ಧತೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಬೇಕು. ತುಳು ಸಾಹಿತ್ಯ ಓದುವ ಅಭಿರುಚಿಯನ್ನು ಯುವಜನತೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಸೌರ್ಪಣಿಕಾ ನದಿಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಮಹಿಳೆ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಮಾನಿನಕಾರು ಬಳಿ ಹೊಳೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ತ್ಯಾಗರಾಜನಗರ ನಿವಾಸಿಯಾದ ವಸುಧಾ ಅವರು ಆಗಾಗ್ಗೆ ಕೊಲ್ಲೂರು ದೇವಳಕ್ಕೆ ಬರುತ್ತಿದ್ದು, ಆ.27ರಂದು ದೇವಸ್ಥಾನಕ್ಕೆ ಆಗಮಿಸಿದ್ದ ಸಂದರ್ಭ, ಅಕಸ್ಮಿಕವಾಗಿ ಸೌರ್ಪಣಿಕ ನದಿಯಲ್ಲಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದರು ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಹುಡುಕಾಟ ನಡೆಸಿತ್ತು. ನೀರಿನ ರಭಸ ತೀವ್ರವಾಗಿರುವುದರಿಂದ ಹುಡುಕಾಟಕ್ಕೆ ಅಡ್ಡಿಯಾಗಿತ್ತು. ಆದರೂ, ಕಳೆದ ಎರಡು ದಿನಗಳಿಂದ ಈ ತಂಡ ಹುಡುಕಾಟ ನಡೆಸುತ್ತಿದ್ದು ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. ಅಂತಿಮವಾಗಿ ಇಂದು ಮಾವಿನಕಾರು ಬಳಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳೊಂದಿಗೆ ಈಶ್ವರ ಮಲ್ಪೆ ಹಾಗೂ ಸ್ಥಳೀಯ ಪ್ರದೀಪ್ ಭಟ್ ಸಂಪ್ರೆ ಮೊದಲಾದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾರ್ಕೂರು ರಂಗನಕೇರಿ ಶೆಟ್ಟಿಗಾರ್ ಇಂಡಸ್ಟ್ರೀಸ್ 20ನೇ ಸಾರ್ವಜನಿಕ ಗಣೇಶೋತ್ಸವ ಆ. 27ರಿಂದ ಆರಂಭಗೊಂಡು 29ರವರೆಗೆ ವಿಜೃಂಭಣೆಯಿಂದ ನಡೆಯಿತು. ಅಗಸ್ಟ್ 28ರಂದು ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾತಿ ಮತ ಪಂಥಗಳ ಭೇದವಿಲ್ಲದೆ ಧಾರ್ಮಿಕ ಪ್ರಜ್ಞೆ ಮೂಡಿಸಿ ನಾವೆಲ್ಲರೂ ಒಂದೇ ಎನ್ನುವ ಭಾವದಿಂದ ಆಚರಿಸುವ ಗಣೇಶೋತ್ಸವದಲ್ಲಿ ಕಲೆ, ಸಂಸ್ಕೃತಿ ಮತ್ತು ಸಮಾಜದ ಒಗ್ಗಟ್ಟಿಗೆ ಸಹಕಾರಿಯಾಗಿದೆ. ಈ ಮೂಲಕ ದೇವರಲ್ಲಿ ಶೃದ್ಧೆ ಭಕ್ತಿಯಿಂದ ನಂಬಿಕೆ ಇಟ್ಟಾಗ ನಮ್ಮ ಇಷ್ಟಾರ್ಥ ನೆರವೇರುತ್ತದೆ ಎಂದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಉಮೇಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಾರಕೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷ ಬಿ ಶಾಂತರಾಮ್ ಶೆಟ್ಟಿ, ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ) ಇದರ ಅಧ್ಯಕ್ಷರಾದ ರವಿ ಶೆಟ್ಟಿಗಾರ್ ಕಾರ್ಕಳ, ಮಂದಾರ್ತಿ ನಮಸ್ತೆ ಭಾರತ ಟ್ರಸ್ಟ್ ನ ಪ್ರಮೋದ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಂತಸ-ಸಡಗರದಿಂದ ಆಚರಿಸಲಾಯಿತು. ಪ್ರಾತಃಕಾಲದಲ್ಲೇ ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಶ್ರೀ ಗಣೇಶನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪ ವಿದಾರ್ಥಿಗಳನ್ನುದ್ದೇಶಿಸಿ ಗಣೇಶನು ದೇವತಾ ಸಮೂಹಕ್ಕೇ ನಾಯಕನಾಗಿದ್ದು, ವಿಘ್ನಗಳನ್ನು ತರುವ, ದೂರಮಾಡುವ ದೇವನಾಗಿದ್ದಾನೆ. ಆದಿಪೂಜ್ಯನಾಗಿದ್ದು, ಎಲ್ಲಾ ವಿಘ್ನಗಳನ್ನು ನಿವಾರಿಸಿ ನಮ್ಮ ಕಾರ್ಯಗಳಲ್ಲಿ ಯಶಸ್ಸನ್ನು ತಂದು ಕೊಡುವನು. ಅವನಲ್ಲಿ ನಮ್ಮ ವಿದ್ಯಾರ್ಜನೆಯು ಸಾಂಗವಾಗಿ ನಡೆದು, ಜೀವನ ಫಲಪ್ರದವಾಗುವಂತೆ ಪ್ರಾರ್ಥಿಸೋಣ ಎಂದು ಪ್ರಾರ್ಥಿಸಿದರು. ತದನಂತರ ವಿದ್ಯಾರ್ಥಿಗಳಿಗಾಗಿ ಮೆಹಂದಿ ಸ್ಪರ್ಧೆ, ರಂಗೋಲಿ ಸ್ಪರ್ಧೆ ಮತ್ತು ವಿವಿಧ ಮೋಜಿನ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ಧಾರ್ಮಿಕ ಕ್ರಿಯಾ ವಿಧಾನಗಳ ನಂತರ ಅಪರಾಹ್ನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಪ್ರೌಢ ಶಾಲೆಯಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಮತ್ತು ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಹಾಗೂ ಸಂಜಯ ಗಾಂಧಿ ಪ್ರೌಢ ಶಾಲೆಯ ಇವರ ಸಹಯೋಗದೊಂದಿಗೆ “ಹಸಿರು ಹೊನ್ನು” ಶೀರ್ಷಿಕೆಯಡಿಯಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಹಣ್ಣಿನ ಗಿಡ ನೆಡುವ ಮೂಲಕ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಂಪಾರು ಗ್ರಾಮ ಪಂಚಾಯತ್ ಸದಸ್ಯ ಕಿರಣ್ ಹೆಗ್ಡೆ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಸಂಜಯ ಗಾಂಧಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಬಿ., ರೋಟರಿ ಕ್ಲಬ್ ಮಿಡ್ ಟೌನ್ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಬೆಳ್ಳಾಲ, ನಿಕಟಪೂರ್ವ ಅಧ್ಯಕ್ಷ ಶೇಖರ್ ಶೆಟ್ಟಿ, ಮಾಜಿ ಅಧ್ಯಕ್ಷ ಶಂಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎಂಬುದು ಬೆಳಕು. ಆ ಬೆಳಕು ಹಂಚಿದಷ್ಟು ಅದು ಬೆಳೆಗುತ್ತದೆ. ಆ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಗೆದ್ದರೆ ಖುಷಿ ಪಡಿ, ಸೋತರೆ ಅನುಭವದ ಕಿಡಿ ಪ್ರಜ್ವಲಿಸಲಿ ಎಂದು ರಾಷ್ಟ್ರೀಯ ಈಜುಪಟು ಗಿನ್ನಿಸ್ ದಾಖಲೆ ಖ್ಯಾತಿಯ ನಾಗರಾಜ್ ಖಾರ್ವಿ ಕಂಚಗೋಡು ಹೇಳಿದರು. ಅವರು ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಡುಪಿ ಇವರ ಆಸರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಜನತಾ ಪಿಯು ಕಾಲೇಜು ಹಲವಾರು ಕ್ರೀಡಾ ಪಟುಗಳ ಬಾಳಿಗೆ ಬೆಳಕಾಗಿದೆ ಎಂದರು. ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪನಿರ್ದೇಶಕರಾದ ಮಾರುತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯನ್ನು ಕ್ರೀಡಾ ಸ್ಫೂರ್ತಿಯಿಂದ ಆಡಿದರೆ ಅದರ ಸಂತೋಷ ಕ್ರೀಡಾಪಟುವಿಗೆ ಸಿಗುತ್ತದೆ. ಕ್ರೀಡೆಯಿಂದ ಪ್ರಾಮಾಣಿಕತೆ, ಶಿಸ್ತು, ಹೊಂದಾಣಿಕೆ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಬೆಂಗಳೂರು ಮೂಲದ ವಿವಾಹಿತ ಮಹಿಳೆಯೋರ್ವರು ಕೊಲ್ಲೂರಿಗೆ ಆಗಮಿಸಿದ್ದು ಏಕಾಏಕಿ ಸೌಪರ್ಣಿಕಾ ನದಿಯ ಬಳಿ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆ ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ತಿಳಿದುಬಂದಿದೆ. ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ಈಕೆಯ ವಿಳಾಸ ಪತ್ತೆಯಾಗಿದೆ. ಅವರು ಆ. 28ರಂದು ಕೊಲ್ಲೂರಿಗೆ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿಧ ಕಡೆಗಳಿಗೆ ಸಾಗಿ ಸೌಪರ್ಣಿಕಾ ನದಿಯತ್ತ ಆಗಮಿಸಿದ್ದರು. ಸೌಪರ್ಣಿಕಾ ನದಿ ಬಳಿ ಅಳವಡಿಸಲಾದ ಸಿ.ಸಿ.ಕೆಮರಾದಲ್ಲಿ ಈಕೆ ಈಜಿಕೊಂಡು ಹೋಗುತ್ತಿರುವುದು ಸೆರೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ನಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ನಾಪತ್ತೆಯಾದ ಮಹಿಳೆಯ ಪೋಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 6 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
