ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು, ಐಶ್ವರ್ಯ ಸ್ವಾಗತಿಸಿದರು. ರಶ್ಮಿತಾ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು, ಶ್ರೀರಕ್ಷಾ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ, ಆಶೀರ್ವಾದದೊಂದಿಗೆ ಪ್ರಾರಂಭಗೊಂಡ ’ಅಖಂಡ ಭಜನಾ ಸಪ್ತಾಹ ಮಹೋತ್ಸವʼ ಬುಧವಾರದಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಬೆಳಿಗ್ಗೆ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ಅನಂತಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಮಧ್ಯಾಹ್ನ ಮಹಾಪೂಜೆ, ಪಂಚಭಕ್ಷ ನೈವೇದ್ಯ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಭಜಕರ ಸೇವೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ಸುಮಾರು 60ಕ್ಕೂ ಮಿಕ್ಕಿ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಜನಾ ಸಪ್ತಾಹ ಸಮಿತಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಜಕರು ಮತ್ತಿತರರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಉಂಟಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿಯ ಜಂಟಿ ಸರ್ವೇ ಕಾರ್ಯಗಳನ್ನು ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದರು. ಹೆಚ್ಚಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗಗಳು ಕಂಡುಬರುತ್ತಿದೆ. ಇವುಗಳ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು, ಸಂಶೋಧಕರು ಒಳಗೊಂಡ ತಂಡವು ರೈತರ ತೋಟಗಳಿಗೆ ಭೇಟಿ ನೀಡಿ, ರೋಗ ನಿಯಂತ್ರಣಕ್ಕೆ ಕಂಡುಕೊಳ್ಳಬಹುದಾದ ಪರಿಹಾರ ಕ್ರಮಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ಬಿ ಬ್ಲಾಕ್, ರಜತಾದ್ರಿ, ಕೊಠಡಿ ಸಂಖ್ಯೆ: 304, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಮತ್ತು ಬಸ್ರೂರು ಇಂಟರಾಕ್ಟ್ ಕ್ಲಬ್ ನಿವೇದಿತಾ ಪ್ರೌಢಶಾಲೆ ಇದರ ಸಹಯೋಗದೊಂದಿಗೆ ಬುಧವಾರದಂದು ಬಸ್ರೂರಿನ ನಿವೇದಿತಾ ಪ್ರೌಢಶಾಲೆ ದಿ. ವೀರ ರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಹೇರಿಕುದ್ರು ಕೊರಗಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಸುಬ್ಬ ಕೆ. ವಹಿಸಿದ್ದರು. ಲಯನ್ಸ್ ಕ್ಲಬ್ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ರಟ್ಟಾಡಿ, ನಿರ್ದೇಶಕರಾದ ಸುಕುಮಾರಶೆಟ್ಟಿ ಹೇರಿಕುದ್ರು, ಲ. ಪ್ರಭಾಕರ ಶೆಟ್ಟಿ ಕೋಟೇಶ್ವರ, ಲ. ಪ್ರಶಾಂತ್ ಶೆಟ್ಟಿ ಶಿರೂರು, ಲ. ಪ್ರತೀಶ್ ಶೆಟ್ಟಿ ಕೊಕ್ಕರ್ಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿ ಶಾಲೆಯ ಇಂಟರ್ ಆಕ್ಟ್ ಕ್ಲಬ್ ನ ನಿರ್ದೇಶಕರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಾಲಾ ಶಿಕ್ಷಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾನ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಓ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದರು. ಜಿಲ್ಲೆಯಲ್ಲಿ ಪಿ.ಓ.ಪಿ ಯಿಂದ ಗಣೇಶ ಮೂರ್ತಿಗಳ ತಯಾರಿ ಅಥವಾ ಹೊರ ಜಿಲ್ಲೆಗಳಿಂದ ಪಿ.ಓ.ಪಿ ವಿಗ್ರಹಗಳು ಬರುವ ಸಾಧ್ಯತೆ ಇರುವ ಹಿನ್ನೆಲೆ, ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಪಿ.ಓ.ಪಿ ಗಣೇಶ ಮೂರ್ತಿಗಳು ಬಳಕೆಯಾಗದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಆ.11 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ವೆಬ್ಸೈಟ್ http://www.mysore.nic.in ಮತ್ತು http://www.cavamysore.karnataka.gov.in ಅಥವಾ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಅವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್ಶಿಪ್ 2025ರ ಡಾ. ಬಿ.ಆರ್ ಅಂಬೇಡ್ಕರ್ ತಾಲೂಕ್ ರೌಂಡ್ ಯೋಗ ಮಂದಿರ ಕಡೂರಿನಲ್ಲಿ ನಡೆಯಿತು. ಈ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಅವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಆದೇಶವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಸುರಿದ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಆದೇಶಿಸಿದ್ದಾರೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ:ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ-52 ರಸ್ತೆಯ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ- ರಾವೆ ಕಾನುಗೋಡು ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಅವರು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.
