Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢ ಶಾಲೆ ಪ್ರಾಥಮಿಕ ವಿಭಾಗ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಸಹಯೋಗದಲ್ಲಿ ಸಂಭ್ರಮದ ಸಾಗುವಳಿ ಎನ್ನುವ ಕಾರ್ಯಕ್ರಮ ಇತ್ತೀಚಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ “ಕೃಷಿ ನಮ್ಮ ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ” ಅದರ ಮಧುರಾನುಭವ ಪ್ರತಿಯೊಬ್ಬನು ಅನುಭವಿಸಬೇಕು. ಹಾಗಾಗಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಬಹಳ ವಿಚಾರಗಳನ್ನು ತಿಳಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಗೀತಾನಂದ ಸಂಸ್ಥೆಯ ಮುಖ್ಯಸ್ಥರಾದ ದಿವ್ಯಲಕ್ಷ್ಮಿ ಪ್ರಶಾಂತ್ ಕುಂದರ್, ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ ಹೊಳ್ಳ, ಶಾಲಾ ಶಿಕ್ಷಕರು, ಜನತಾ ಸಂಸ್ಥೆಯ ಶ್ರೀನಿವಾಸ ಕುಂದರ್, ರವಿಕಿರಣ, ಪಾಂಡು ಪೂಜಾರಿ, ದೀಕ್ಷಿತಾ, ಅರುಣ್ ಕುಮಾರ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಕಬಡ್ಡಿ ಸ್ಪರ್ಧೆಗಳನ್ನು ಜರುಗಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಕಬಡ್ಡಿ ಆಟ ಯೋಗಕ್ಕೆ ಸಂಬಂಧಿಸಿದ ಆಟ. ಇಲ್ಲಿ ಉಸಿರಾಟದ ಮೇಲೆ ಹಿಡಿತವಿರಬೇಕು. ತಂಡದ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನಬೇಕು. ಏಕಾಗ್ರತೆಯನ್ನೂ ಬೆಳೆಸುವ ಆಟ. ಸ್ಪರ್ಧೆ ಎಂದರೆ ಸೋಲು ಗೆಲುವು ಇದ್ದೇ ಇರುವುದು. ಸ್ಪರ್ಧೆಗಳಲ್ಲಿ ಪ್ರಾಮಾಣಿಕವಾಗಿ ಆಡುವುದೇ ಮುಖ್ಯ. ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. 14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿ ಪ್ರಥಮ ಸ್ಥಾನವನ್ನು,  ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ ದ್ವಿತೀಯ ಸ್ಥಾನವನ್ನು, ಶಾರದಾ ವಸತಿ ಶಾಲೆ, ಕುಂಜಿಬೆಟ್ಟು, ಉಡುಪಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ವಿಷಯಾಧಾರಿತ ಕಾರ್ಯಗಾರವು ನಡೆಯಿತು.  ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೊಟೇರಿಯನ್ ಸತೀಶ್ ಶೆಟ್ಟಿ ಹದಿಹರೆಯದ ಸವಾಲುಗಳು ಮತ್ತು ಎದುರಿಸಬೇಕಾದ ವಿಧಾನಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಪಿ. ಎಸ್. ಐತಾಳ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರ ಸಂಘದಿಂದ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹೊರತರಲಾದ ದ್ವಿತೀಯ ಪಿಯುಸಿ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನದ ಮೂರು ಮಾರ್ಗದರ್ಶಿ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಈ ಪುಸ್ತಕಗಳನ್ನು ಹೊರ ತರುವಲ್ಲಿ ಅಪಾರ ಶ್ರಮವಹಿಸಿದ ಹಿರಿಯ ಉಪನ್ಯಾಸಕಿ ಹೇಮಲತಾ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಅವರು ಈ ಶಾಲೆಯ ಹಳೆವಿದ್ಯಾರ್ಥಿಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ ಶಿಕ್ಷಕಿ ಹಾಗೂ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕರಾವಳಿಯ ಗಾನಕೋಗಿಲೆ ಖ್ಯಾತಿಯ ಭಾಗವತ ಕಾಳಿಂಗ ನಾವಡರ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದಾರೆ. ಈ ಹಿನ್ನಲ್ಲೆಯಲ್ಲಿ 16ನೇ ವರ್ಷದ 2025ರ ಸಾಲಿನ ಕಾಳಿಂಗ ನಾವಡ ಪ್ರಶಸ್ತಿಯನ್ನು ಸತತ 42 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ಹಾಲಾಡಿ ರಾಘವೇಂದ್ರ ಮಯ್ಯರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 12 ರಂದು ಸಂಜೆ ಬೆಂಗಳೂರಿನ ಬನಶಂಕರಿ 3ನೇ ವಿಭಾಗದಲ್ಲಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುಲ್ಲಿರುವ ಪರಂಪರ ಆಡಿಟೋರಿಯಮ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಅಲ್ಲದೆ ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ಫಲಕ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ಗ್ರಾಮದ ನಿವಾಸಿ ಸ್ವಾತಿ (30) ಅವರು ಇಲಿ ಪಾಷಣ ಸೇವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 9 ವರ್ಷದ ಹಿಂದೆ ಬಸ್ರೂರಿನ ಸತೀಶ್ ಅವರೊಂದಿಗೆ ಮದುವೆಯಾಗಿದ್ದು, ದಂಪತಿಗೆ 8 ವರ್ಷದ ಮಗನಿದ್ದಾನೆ. ಜೂ.27ರಂದು ಬೆಳಗ್ಗೆ ಮನೆಯಲ್ಲಿರುವಾಗ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮೃತರ ತಾಯಿ ನಾಗರತ್ನ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ವೈದ್ಯರ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಸನ್ಮಾನಿಸಲಾಯಿತು. ಡಿಸ್ಟ್ರಿಕ್ಟ್ ಲೀಡರ್ ಕೆ. ರಾಮನಾಥ್ ನಾಯಕ್, ಜೋನಲ್ ಲೀಡರ್ ಪ್ರದೀಪ್ ಡಿ. ಕೆ., ಉಮೇಶ್ ಮೇಸ್ತ, ನಿಕಟಪೂರ್ವ ಅಧ್ಯಕ್ಷೆ ಚಂದ್ರಕಲಾ ತಾಂಡೇಲ್, ಸದಸ್ಯರಾದ ಉದಯಶಂಕರ್ ರಾವ್, ವಾಸುದೇವ್ ಶೇರುಗಾರ್, ದಯಾನಂದ ಗಾಣಿಗ, ಗೋಪಾಲ್ ಬಿಲ್ಲವ, ಟಿ.ದಿನಕರ ಶೆಣೈ, ನಾರಾಯಣ ನಾಯ್ಕ್, ಗಿರೀಶ್ ಖಾರ್ವಿ, ಎಂ. ನಾಗೇಂದ್ರ ಪೈ, ಜಗದೀಶ್ ಪೂಜಾರಿ, ರತ್ನ ದೇವಾಡಿಗ, ಸುಮಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೃಷ್ಣ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. ನವಮಂಗಳೂರು ಬಂದರಿನ ಜೆಎಸ್‌ಡಬ್ಲ್ಯೂ ಕಂಟೇನರ್ ಟರ್ಮಿನಲ್‌ನೊಂದಿಗೆ ಅವರ ಅನುಭವವನ್ನು ಹಂಚಿಕೊಂಡ ಅವರು ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ ಕೊರತೆಯಿಂದ ಅನಿವಾರ್ಯವಾಗಿ ಗುಜರಾತ್ ಮತ್ತು ತಮಿಳುನಾಡಿನ ಸಿಬ್ಬಂದಿಯನ್ನು ನೇಮಿಸಬೇಕಾಯಿತು. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ನವೀನ ಉದ್ಯಮಗಳಿಗೆ ಅನುಗುಣವಾಗಿ ರೂಪಿಸಿಕೊಳ್ಳಬೇಕು, ಎಂದು ಅಭಿಪ್ರಾಯಪಟ್ಟರು. ಮುಖ್ಯವಾಗಿ ಈ ಉದ್ಯಮದಲ್ಲಿ ಕುತೂಹಲ, ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ಸ್ಪಷ್ಟ ಸಂವಹನ ಹಾಗೂ ತಂಡದ ಕಾರ್ಯತಂತ್ರ ಈ ಎಲ್ಲ ಕೌಶಲ್ಯಗಳು ನಿರ್ಣಾಯಕವಾಗಿರುತ್ತವೆ. ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿದ್ಯಾರ್ಥಿಗಳಿಗೆ ಶ್ರೇಷ್ಠ ವಿದ್ಯಾದಾನದ ಮೂಲಕ ಸಾಧನೆಗೈಯ್ಯುತ್ತಾ ಇಂದು ವಿಶ್ವಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿದೆ. ನ್ಯಾಷನಲ್ ಸ್ಕೂಲ್ ಅವಾರ್ಡ್ 2025 ರಲ್ಲಿ ರಾಷ್ಟ್ರೀಯ ಮಟ್ಟದ ಬೆಸ್ಟ್ ಡೇ ಕಮ್ ಬೋರ್ಡಿಂಗ್ ಸ್ಕೂಲ್ ಅವಾರ್ಡ್ ಮತ್ತು ಬೆಸ್ಟ್ ಪ್ರಿನ್ಸಿಪಾಲ್ ಪ್ರಮೋಟ್ಸ್ ಪ್ರೋಗ್ರೇಸ್ಸಿವ್ ಲರ್ನಿಂಗ್ – 2025 ಅವಾರ್ಡ್ ಎಂಬ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು. ಬೆಂಗಳೂರಿನ ಹೆಬ್ಬಾಳದ ಕೋರ್ಟ್ಯಾಟ್ ಮ್ಯಾರಿಯೋಟ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಡಾ. ರಾಜ್ ಕತ್ರೀ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಶಿಖಾ ದಿಲನ್ ಎಕ್ಸಿಕ್ಯೂಟಿವ್ ನಿರ್ದೇಶಕರು, ಅವರಿಂದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪರವಾಗಿ ಸಂಯೋಜಕರಾದ ಲತಾ ದೇವಾಡಿಗ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಐಐಟಿ ಬೆಂಗಳೂರು ಅಧ್ಯಕ್ಷ ಡಾ. ಸೌಮ್ಯ ನಾರಾಯಣನ್, ಟ್ರೇಡ್ ಕಮಿಷನರ್ ಡಾ. ಎಮ್.ಎಸ್. ಪ್ರಕಾಶ್, ಟ್ರಸ್ಟಿಗಳು, ರಾಷ್ಟ್ರೀಯ ಶಿಕ್ಷಣ ಸಮಿತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಶ್ರೀ ಸಿದ್ಧಿ ಶೈಕ್ಷಣಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡಹಡು ಹಿಂದೂ ರುದ್ರ ಭೂಮಿಯ ಮೇಲ್ಛಾವಣಿ ಶಿಥಿಲಗೊಂಡಿರುವುದನ್ನ ಮನಗಂಡ ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಸುಮಾರು 70,000 ವೆಚ್ಚದಲ್ಲಿ ಮೇಲ್ಚಾವಣಿಯೊಂದಿಗೆ ನವೀಕರಣಗೊಳಿಸಿ ಹಿಂದೂ ರುದ್ರ ಭೂಮಿ ಟ್ರಸ್ಟಿಗೆ ಇತ್ತೀಚಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಿಂದೂ ರುದ್ರ ಭೂಮಿಯ ಟ್ರಸ್ಟಿನ ಅಧ್ಯಕ್ಷ ನಾರಾಯಣ ಆಚಾರ್, ಸದಸ್ಯರಾದ ಪ್ರತಾಪ್ ಶೆಟ್ಟಿ, ಶಂಕರ್ ಕುಲಾಲ್ ಹಾಗೂ ಪಾಂಡೇಶ್ವರ ಪಂಚಾಯತಿನ ಅಧ್ಯಕ್ಷ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈ.ಬಿ ರಾಘವೇಂದ್ರ, ಚಂದ್ರಮೋಹನ್ ಪೂಜಾರಿ, ರವೀಶ್ ಶ್ರೀಯಾನ್, ಸುಜಾತ ವೆಂಕಟೇಶ್, ರೋಟರಿ ಕ್ಲಬ್‌ನ ಅಧ್ಯಕ್ಷ ಲೀಲಾವತಿ ಗಂಗಾಧರ ಹಾಗೂ ಕಾರ್ಯದರ್ಶಿ ಸುಲತ ಹೆಗ್ಡೆ, ಉಪಾಧ್ಯಕ್ಷ ರತ್ನ ಜೆ ರಾಜ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಟ್ರಸ್ಟ್ ಹಾಗೂ ಸ್ಥಳೀಯಾಡಳಿತ ರೋಟರಿ ಕ್ಲಬ್‌ಗೆ ಕೃತಜ್ಞತೆ ಸಲ್ಲಿಸಿತು. ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ವತಿಯಿಂದ ಪಾಂಡೇಶ್ವರ ಮೂಡಹಡು ಹಿಂದೂ ರುದ್ರ ಭೂಮಿಯ ನವೀಕರಿಸಿ ಇತ್ತೀಚಿಗೆ ಹಸ್ತಾಂತರಿಸಿತು.

Read More