ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯೋಗದಲ್ಲಿ ಮುಖ್ಯವಾಗಿ ಎರಡು ಅಂಶಗಳು. ಒಂದು ತತ್ವಶಾಸ್ತ್ರ ಇನ್ನೊಂದು ಅಭ್ಯಾಸ. ಆದರೆ ಈ ಎರಡು ಅಂಶಗಳು ಒಟ್ಟಿಗೆ ಮೇಳೈಸಬೇಕಾದಾಗ, ಮೊದಲು ತತ್ತ್ವಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಭ್ಯಾಸ ಮಾಡಲು ಮೊದಲು ಯೋಗವನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು ಎಂದು ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಉಪಪ್ರಾಂಶುಪಾಲೆ ಹಾಗೂ ಡೀನ್ ಡಾ. ಸುಜಾತ ದಿನೇಶ್ ಹೇಳಿದರು. ಅವರು ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಪರಿಷತ್ತು, ಭಾರತ ಸರ್ಕಾರದ ಆಯುಷ್ಯ ಸಚಿವಾಲಯ ಇವುಗಳ ಜಂಟಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 16 ರಿಂದ 19 ರವರೆಗೆ ‘ಯೂತ್ ಯೋಗ ಫೆಸ್ಟಿವಲ್’ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನ್ಯಾಚುರೋಪಥಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬರುವ ಅಡೆತಡೆಗಳನ್ನು ಯೋಗತತ್ವಶಾಸ್ತ್ರ ಸಿದ್ಧಾಂತಗಳ ನೆಲೆಯಲ್ಲಿ ಪರಿಹರಿಸಿಕೊಳ್ಳಬೇಕು. ನಮ್ಮ ಭವಿಷ್ಯವನ್ನು ನಮ್ಮ ವರ್ತಮಾನ ನಿರ್ಧರಿಸುತ್ತದೆ. ಆದುದರಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902, ಇ-ಮೇಲ್ postmetrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 42 ವರ್ಷಗಳ ಸುದೀರ್ಘ ಇತಿಹಾಸ ಇರುವ ಪ್ರತಿಷ್ಠಿತ ಬೈಂದೂರು ರೋಟರಿ ಕ್ಲಬ್ ನ 2025- 26ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದರಾದ ಸುಬ್ರಮಣ್ಯ ಜಿ. ಉಪ್ಪುಂದ ಆಯ್ಕೆಯಾದರು. ಉತ್ತಮ ಸಂಘಟಕರೂ ಆಗಿರುವ ಸುಬ್ರಹ್ಮಣ್ಯ ಜಿ ಅವರು ಉಪ್ಪುಂದ ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ರೋಟರಿ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 9 ರಂದು ರೋಟರಿ ಸಮುದಾಯ ಭವನ ಬೈಂದೂರು ಇಲ್ಲಿ ನಡೆಯಲಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ. ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೂಡಬಿದಿರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ. ದಕ್ಷಿಣ ಕನ್ನಡದ ಜಿಲ್ಲೆಯ 8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯನಿರ್ವಹಿಸುತ್ತಿದೆ. ಇಂದು ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು. ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ 2025-26ನೇ ವರ್ಷದಲ್ಲಿ ದಾಖಲಾತಿ ಪಡೆದುಕೊಂಡು ಅಧ್ಯಯನಕ್ಕೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಶಿಕ್ಷಕ-ಸಹಪಾಠಿಗಳೊಂದಿಗೆ ಹಂಚಿಕೊಳ್ಳಲು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ನಡೆಸಲಾಯಿತು. ಜೂ.16 ರಂದು ವಸತಿನಿಲಯದ ವಿದ್ಯಾರ್ಥಿಗಳ ಹಾಗೂ ಜೂ.18 ರಂದು ಉಳಿದ ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ನಡೆಸಲಾಯಿತು. ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳಲ್ಲಿರುವ ಪ್ರತಿಭೆಯನ್ನು ಅರಿತು ಅವರೊಂದಿಗೆ ಬೆರೆಯಲು ಇದು ಸಹಕಾರಿ. ವೇದಿಕೆಯ ಅಥವಾ ಶಾಲೆಯ ಭಯದಿಂದ ಮಗು ದೂರವಿದ್ದು, ತನ್ನ ಪ್ರತಿಭೆಯನ್ನು ಅನಾವರಣಗೊಳಿಸದಿದ್ದರೆ ಆ ಪ್ರತಿಭೆ ಸುಪ್ತವಾಗುವುದು. ಮಕ್ಕಳನ್ನು ಲವಲವಿಕೆಯಿಂದ ಕೂಡುವಂತೆ ಮಾಡಲು ಈ ಕಾರ್ಯಕ್ರಮ ಬಹಳ ಸಹಕಾರಿಯಾಗಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕಪಠಣ, ಕರಾಟೆ, ಯೋಗ, ಭಜನೆ, ಏಕಪಾತ್ರಾಭಿನಯ, ಪಿಯೋನವಾದನ, ಸಮೂಹಗಾಯನ, ಕಿರುನಾಟಕ, ಸಮೂಹನೃತ್ಯವೇ ಮೊದಲಾದ ತಮ್ಮ ಆಸಕ್ತಿಯ ಹವ್ಯಾಸಿ ಚಟುವಟಿಕೆಗಳ ಪ್ರದರ್ಶನವನ್ನು ನಡೆಸಿದರು. 8ನೇ ತರಗತಿಯ ಗಿರೀಶ, ಪೂರ್ವೀ, ಶುಭಾಂಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 27 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಮೊ.ನಂ: 9108241342 ಅಥವಾ 9686405090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್‌ನ ಪಡುಕರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿ ನಡೆಯುವ ಸ್ಥಳ ಹಾಗೂ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು.. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರ ಯೋಗಕ್ಷೇಮ ವಿಚಾರಿಸಿ ಈ ಉತ್ತಮ ಕಾರ್ಯಕ್ಕೆ ತುಂಬು ಹೃದಯದಿಂದ ಶ್ಲಾಘಿಸಿದರು. ಇದೇ ವೇಳೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಗೈಯುತ್ತಿರುವ ಮಹಿಳೆಯರು, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತವನ್ನು ಹೆಚ್ಚಿಸುವ ಬೇಡಿಕೆಯನ್ನು ಪ್ರಸ್ತಾಪಿಸಿದರು, ಸಂಸದರು ಈಡೇರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ಅಶ್ವಿನಿ ದಿನೇಶ್, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ರಾಬರ್ಟ್ ರೋಡ್ರಿಗಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಿಬ್ಬಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಬ್ರಿಗೇಡ್ ವತಿಯಿಂದ ಕುಂದಾಪುರದಲ್ಲಿ ಆಯೋಜಿಸಲಾಗಿರುವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣಕ್ಕೆ ಅವಕಾಶ ನೀಡದಂತೆ ಕುಂದಾಪುರ ಯುವ ಕಾಂಗ್ರೆಸ್ ಹಾಗೂ ಎನ್ಎಸ್‌ಯುಐ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. “ಯುವಬ್ರಿಗೇಡ್”ಎಂಬ ಸಂಸ್ಥೆಯ ವತಿಯಿಂದ ಇದೇ ತಿಂಗಳ ಜೂ. 20, 21 ಮತ್ತು 22 ಒಟ್ಟು ಮೂರು ದಿನಗಳ ಕಾಲ “ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ” ಎಂಬ ವಿಚಾರದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಕುಂದಾಪುರದ ಚಿಕ್ಕನ್ಸಾಲ್ ರಸ್ತೆಯ ಮೊಗವೀರ ಭವನದಲ್ಲಿ ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿಯು ಉಪನ್ಯಾಸ ನೀಡಲಿದ್ದಾರೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಮತ್ತು ಈ ಕುರಿತಾಗಿ ಪ್ಲೆಕ್ಸ್ಗಳು ಕುಂದಾಪುರ ಪೇಟೆಯಾದ್ಯಂತ ಅಲ್ಲಲ್ಲಿ ಅಳವಡಿಸಲಾಗಿದೆ. ಈ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿಯ ಮೇಲೆ “ದ್ವೇಷ ಭಾಷಣ ಮಾಡಿ ಹಿಂದೂ ಮುಸಲ್ಮಾನರ ನಡುವಿನ ಸೌಹಾರ್ಧತೆಯನ್ನು ಕೆಡಿಸಿದ”ಕುರಿತು ರಾಜ್ಯದ ವಿವಿಧ ಪೋಲಿಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು ಅವರ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.18: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.
