ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಕ್ಷೇತ್ರದಿಂದ ಬಡಗುತಿಟ್ಟಿನ ಹೊಸ ಮೇಳವೊಂದು ತಿರುಗಾಟಕ್ಕೆ ಸಿದ್ಧವಾಗಿದ್ದು, ನ.26ರಂದು ಪ್ರಥಮ ಶ್ರೀ ದೇವರ ಸೇವೆಯಾಟ ಕ್ಷೇತ್ರದ ಆವರಣದಲ್ಲಿ ಜರುಗಲಿದೆ. ತಿರುಗಾಟದ ಮೂಲಕ ಯಕ್ಷಗಾನ ನೂತನವಾಗಿ ತಿರುಗಾಟ ಆರಂಭಿ ಸಲಿರುವ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿಯನ್ನು ಪ್ರೋತ್ಸಾಹಿಸುವಂತೆ ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿಯಗೌರವಾಧ್ಯಕ್ಷ ರಾಜು ಪೂಜಾರಿ, ಅಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕರಾದ ಕೃಷ್ಣಮೂರ್ತಿ ನಾವಡ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ, ಮೇಳದ ವ್ಯವಸ್ಥಾಪಕ ಗುಂಡುಕಾಂಚನ್, ಸಂಚಾಲಕ ಕಿರಣ್ ಆಚಾರ್ಯ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಓದು ಬಳಗ, ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ವಿದ್ಯಾರ್ಥಿ ಕವಿಗೋಷ್ಠಿ’ ಕಾರ್ಯಕ್ರಮಕ್ಕೆ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತೃತೀಯ ಬಿ.ಸಿ.ಎ. ವಿದ್ಯಾರ್ಥಿ ವಿಕಾಸ್ ಎಸ್. ಆರ್. ಅವರ ಕವನ ಆಯ್ಕೆಯಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದ್ದ ಕವನಗಳಲ್ಲಿ ವಿಕಾಸ್ ಅವರ ಕವನ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ. ವಿಕಾಸ್ ಎಸ್. ಆರ್. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಮಂಗಳವಾರ ಸಂಭ್ರಮ ಸಡಗರದಿಂದ ನಡೆಯಿತು. ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಿತು. ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಸದಸ್ಯರು ಮತ್ತು ಜಿ.ಎಸ್.ಬಿ ಸಮಾಜದ ಪ್ರಮುಖರು ಹಾಗೂ ಭಕ್ತಾಧಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳಗಾವಿಯ ಬಂಟರ ಸಂಘದ 42ನೇ ವಾರ್ಷಿಕ ಮಹಾಸಭೆಯು ಬೆಳಗಾವಿ ಬಂಟರ ಭವನದಲ್ಲಿ ಭಾನುವಾರ ನಡೆಯಿತು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ನೂತನ ಅಧ್ಯಕ್ಷರಾಗಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಜಯಶೀಲ್ ಎನ್. ಶೆಟ್ಟಿ ಘಟಪ್ರಭಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಉಳ್ತೂರು ಸಂತೋಷ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷರು ಹಿರಿಯರು, ಗೌರವಾಧ್ಯಕ್ಷರಾದ ವಿಠಲ್ ಎಸ್. ಹೆಗ್ಡೆ ಅವರು ಮತ್ತು ಸಂಘದ ನಿಕಟಪೂರ್ವ ಅಧ್ಯಕ್ಷರು ವಿಜಯ್ ಎಂ ಶೆಟ್ಟಿ ಮತ್ತು ಮಾಜಿ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ ಹಿಡ್ಕಲ್, ಮಾಜಿ ಅಧ್ಯಕ್ಷರು ಚಂದ್ರಶೇಖರ್ ಶೆಟ್ಟಿ ಮಾಜಿ ಪ್ರಧಾನ ಕಾರ್ಯದರ್ಶಿಯವರಾದ ಚೇತನ್ ಶೆಟ್ಟಿ, ಮಾಜಿ ಖಜಾಂಚಿವರಾದ ಪ್ರಣಯ ಆರ್ ಶೆಟ್ಟಿ, ಮಾಜಿ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಶೆಟ್ಟಿ, ಹಿರಿಯ ಸದಸ್ಯರಾದ ಬಾರ್ಕೂರ್ ನಡುಮನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) – 2026ರಲ್ಲಿ ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ರಶ್ಮಿ ಅವರು ವಾಣಿಜ್ಯ (Commerce) ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಅತ್ಯಧಿಕ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಇವರು ಜೂನ್ 2026ರಲ್ಲಿ ನಡೆದ UGC NTA NET ಪರೀಕ್ಷೆಯಲ್ಲಿ ಕೂಡ ತೇರ್ಗಡೆ ಹೊಂದಿರುತ್ತಾರೆ. ಜೊತೆಗೆ ಕಾಲೇಜಿನ ಒಟ್ಟು 6 ವಿದ್ಯಾರ್ಥಿಗಳು KSET ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿದ್ಯಾ, ಪ್ರತಿಮಾ, ವಿದ್ಯಾವತಿ, ಪ್ರತಿಮಾ ಹಾಗೂ ರಕ್ಷಿತಾ ಕ್ರಮವಾಗಿ ರಾಜ್ಯಕ್ಕೆ 14, 21, 23, 25 ಹಾಗೂ 27ನೇ ಅತ್ಯಧಿಕ ಅಂಕಗಳನ್ನು ಗಳಿಸಿ ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ. ಇದು ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇವರ ಈ ಯಶಸ್ಸಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಸೋಮವಾರ ರಾತ್ರಿ ನಡೆದಿದೆ. ಉಪ್ಪುಂದ ಜನತಾ ಕಾಲೋನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಮೃತಪಟ್ಟ ಯುವಕರು. ಪ್ರವೀಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಹಾಗೂ ಅಭಿಷೇಕ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಉಪ್ಪುಂದದ ಕೊಡಿ ಹಬ್ಬಕ್ಕೆ ಆಗಮಿಸಿದ್ದ ಯುವಕರು ಸೋಮವಾರ ರಾತ್ರಿ ಉಪ್ಪುಂದದಿಂದ ಶಿರೂರು ಟೋಲ್ಗೇಟ್ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಡ ರೋಗಿಗಳ ಪಾಲಿಗೆ ಆಯುಷ್ಮಾನ್ ಯೋಜನೆ ಒಂದು ಅದ್ಭುತ ವರದಾನವಾಗಿದೆ. ಅದನ್ನು ಬಳಸಿಕೊಳ್ಳುವುದು ಹೇಗೆ ಎನ್ನುವ ಅರಿವು ನಮ್ಮೆಲ್ಲರಲ್ಲೂ ಸರಿಯಾಗಿ ಇದ್ದಾಗ ಮಾತ್ರ ಆ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಯೋಜನೆಯ ಬಗ್ಗೆ ತಿಳಿದು ಅದನ್ನು ಇತರರಿಗೂ ತಿಳಿಸುವಲ್ಲಿ ನಾವು ಮುಂದಾಗಬೇಕು ಎಂದು ಕೆ.ಎಂ.ಸಿಯ ಆರೋಗ್ಯ ಮಿತ್ರ ವಿಭಾಗದ ಸುಜನ್ಮಾಲಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್ ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಆಯುಷ್ಮಾನ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪನ್ಯಾಸಕಿ ಅಕ್ಷಯ ಆರ್. ಖಾರ್ವಿ ಪ್ರಸ್ತಾವಿಕ ಮಾತುಗಳಾಡಿದರು. ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಸುಗುಣ ಆರ್.ಕೆ. ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿ ಪ್ರತಿನಿಧಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ವಿದ್ಯಾರ್ಥಿಗಳು ಕಂಚಿನ ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೇವನಹಳ್ಳಿ ಟೌನ್ನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ- ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಜನತಾ ಶಾಲೆಯ 8ನೇ ತರಗತಿಯ ಸಾಕ್ಷಿತ್ ಹಾಗೂ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಸಾಯಿನಾಥ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಸ್ಪರ್ಧಿಗಳ ನಡುವೆ ತಮ್ಮ ಕೌಶಲ್ಯ, ಧೈರ್ಯ, ಶಿಸ್ತು ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಈ ಸಾಧನೆ ಮಾಡಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ʼಕುಂದಪ್ರಭʼ ಸಂಸ್ಥೆಯ ಆಶ್ರಯದಲ್ಲಿ ನೀಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಬೆಂಗಳೂರಿನ ಸರಸ್ವತೀ ಸಂಗೀತ ವಿದ್ಯಾಲಯ ರಿ. ಸಂಸ್ಥೆಯ ಕಾರ್ಯ ನಿರ್ದೇಶಕ, ಹಿಂದುಸ್ತಾನಿ ಶಾಸ್ತ್ರೀಯ ಮತ್ತು ಭಕ್ತಿ ಸಂಗೀತ ಗಾಯಕ, ’ನಾದೋಪಾಸಕ’ ಪಂಡಿತ್ ವಾಗೀಶ ಭಟ್ ಕುಂದಾಪುರ ಆಯ್ಕೆಯಾಗಿದ್ದಾರೆ. ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ತಂತ್ರಿಗಳಾಗಿರುವ ಇವರು, ವಿದ್ವತ್ ಪೂರ್ಣ ಭಕ್ತಿ ಗಾಯನದಲ್ಲಿ ಪರಿಣಿತರು. ದೇಶದ ವಿವಿಧ ಕೇಂದ್ರಗಳಲ್ಲಿ ತಮ್ಮ ಗಾಯನ ಕಾರ್ಯಕ್ರಮ ನೀಡಿರುವ ಇವರು ವಿದೇಶಗಳಲ್ಲೂ ಭಾರತೀಯ ಕಲಾ ಕೇಂದ್ರಗಳ ಆಹ್ವಾನದ ಮೇರೆಗೆ ಗಾಯನ ಕಾರ್ಯಕ್ರಮ ನೀಡಿದ್ದಾರೆ. ಇಂಗ್ಲೆಂಡಿನಲ್ಲಿ ನಡೆದ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನದಲ್ಲಿ ಹಾಡಿರುವ ಇವರಿಗೆ ’ನಾದೋಪಾಸಕ’ ಬಿರುದು ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇವರ ಗಾಯನದ ಹಲವು ಧ್ವನಿ ಸುರಳಿಗಳು ಬಿಡುಗಡೆಗೊಂಡಿವೆ. ರಾಜ್ಯದ ಹಾಗೂ ದೇಶದ ಹಲವು ಸಂಸ್ಥೆಗಳಿಂದ ಇವರಿಗೆ ಪ್ರಶಸ್ತಿ ಲಭ್ಯವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು, ಸ್ವಯಂ ನಿವೃತ್ತಿ ಹೊಂದಿ, ಸಂಗೀತದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡವರು. 1987…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಬೇಕಾದರೆ ಪತ್ರಕರ್ತರು ಸತ್ಯ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆಯನ್ನು ವೃತ್ತಿಯ ಮೂಲ ಮೌಲ್ಯಗಳನ್ನಾಗಿಸಿಕೊಂಡು, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ವರದಿ ಮಾಡಬೇಕು ಎಂದು ಟಿವಿ 5 ಕನ್ನಡದ ಮುಖ್ಯ ಸಂಪಾದಕ ರಮಾಕಾಂತ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ‘ಆಳ್ವಾಸ್ ಸಮ್ಮಿಲನ 2026’ ಹಿರಿಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮ ನಶಿಸುತ್ತಿರುವ ವೃತ್ತಿಯಲ್ಲ. ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಪತ್ರಿಕೋದ್ಯಮ ಮಾತ್ರ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ. ಇಂದಿನ ಜನರು ಸ್ವತಂತ್ರ ಹಾಗೂ ಸತ್ಯಾಧಾರಿತ ಮಾಧ್ಯಮಗಳನ್ನು ಬಯಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ವೃತ್ತಿಯ ಮೇಲಿನ ಆಸಕ್ತಿ, ನೈತಿಕತೆ ಮತ್ತು ಬದ್ಧತೆಯನ್ನು ನಿರಂತರವಾಗಿ ಉಳಿಸಿಕೊಳ್ಳಬೇಕು, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ…
