Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ  ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರದ ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ನ್ಯೂ  ಹೊರಿಜಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ  ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಗೌರವವನ್ನು ಹೆಚ್ಚಿಸುತ್ತಾರೆ. ಆರ್. ನವೀನ್ ಪಾಟಿಲ್, ನೇತ್ರಾವತಿ, ಯಶಸ್ವಿನಿ, ನಿಹಾರಿಕಾ, ಮೇಘಶ್ರೀ ಮತ್ತು ಶಶಾಂಕ್ ಒಳಗೊಂಡ ತಂಡವು ತಮ್ಮ ಸೃಜನಶೀಲ ಚಿಂತನೆ, ನವೀನ ಕಲ್ಪನೆ ಹಾಗೂ ತಾಂತ್ರಿಕ ನೈಪುಣ್ಯದಿಂದ ತೀರ್ಪುಗಾರರನ್ನು ಮೆಚ್ಚಿಸಿ, ₹5000 ದೊಂದಿಗೆ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದೆ. ವಿಭಾಗದ ಮುಖ್ಯಸ್ಥರಾದ ಡಾ. ಜೇ. ಪ್ರಕಾಶ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಟ್ಟ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಈ ಸಾಧನೆಗೆ ವಿದ್ಯಾರ್ಥಿಗಳನ್ನು ಮತ್ತು  ಸಹಕಾರ ನೀಡಿದ ಎಲ್ಲ ಪ್ರಾಧ್ಯಾಪಕರನ್ನು ಅಭಿನಂದಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಕತೆಯಲ್ಲಿ ಬಲವಿದೆ. ಏಕತೆಯಲ್ಲಿ ಬದುಕಿನ ಸಾರ್ಥಕತೆ ಇದೆ ಎಂದು ಎ.ಎಸ್. ಭಂಡಾರ್ಕರ್ ಅವರು ಮೊಮ್ಮಗಳು ಡಾ. ಗಾಯತ್ರಿ ಭಂಡಾರ್ಕರ್ ಮತ್ತು ಅಮೇರಿಕಾದಲ್ಲಿ ಚರ್ಮರೋಗ ವೈದ್ಯರಾಗಿರುವ ಡಾ. ಸುಲೋಚನಾ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶುಕ್ರವಾರದಂದು ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಇವರೀರ್ವರು ಜೊತೆಯಲ್ಲಿ ಮಾತನಾಡಿದರು. ಪರರ ಕುರಿತು ಟೀಕೆ ಮಾಡುವುದು, ಹೋಲಿಕೆ ಮಾಡುವುದು ಹಾಗು ದೂರು ಹೇಳುವುದು ಈ ಮೂರು ಅನಗತ್ಯ ಯೋಚನೆಗಳನ್ನು ತೊಡೆದುಹಾಕಿ ಏಕತೆಯ ಬೀಜವನ್ನು ನೆಟ್ಟು ಬೆಳೆಯೋಣ. ಇನ್ನೊಬ್ಬರ ಬದುಕಿನ ಯಶಸ್ಸು ಮತ್ತು ಸಂತೋಷ ನಾವು ಪಾಲ್ಗೊಳ್ಳುವಿಕೆಯಲ್ಲಿ ಶಕ್ತಿ ಇದೆ. ಪರಸ್ಪರ ಜೊತೆಯಲ್ಲಿ ಏಕತೆಯ ಕುರಿತು ಯೋಚಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪರಮಪೂಜ್ಯ ಶಾಂತಾರಾಮ್ ಭಂಡಾರ್ಕಾರ್ ಮಾತನಾಡಿ, ದೇವರ ಭಯವೇ ಜ್ಞಾನದ ಮೂಲ. ಜ್ಞಾನದ ಜೊತೆಗೆ ಒಳ್ಳೆಯದನ್ನು ಯೋಚಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜು ಆರಂಭಗೊಂಡ ದಿನಗಳಿಂದಲೂ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ದೈಹಿಕ ಸದೃಢತೆಯೊಂದಿಗೆ ಮಾನಸಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಶುಭ ಹಾರೈಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಪ್ರಸ್ತಾವಿಸಿ, ಕ್ರೀಡಾ ಕಾರ್ಯದರ್ಶಿ ಆರ್ಯ ಪುತ್ರನ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಶ್ರೀಶಾಂತ್ ಪ್ರಾರ್ಥಿಸಿದರು. ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಶ್ರೀ ಕೊಗ್ಗ ದೇವಣ್ಣ ಕಾಮತ್‌ರ ಹೆಸರಿನಲ್ಲಿ ನೀಡುವ 2025-26ರ ಸಾಲಿನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನ್‌ದಾಸ್ ಶೆಣೈ ಅವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಿದೆ. ದಿ. ಗೋವಿಂದರಾಯ ಶೆಣೈ ಹಾಗೂ ದಿ. ಮುಕ್ತಾ ಶೆಣೈ ಅವರ ಸುಪುತ್ರರಾಗಿ 1950 ಫೆಬ್ರವರಿ 10 ರಂದು ಜನಿಸಿದ ಅವರು ಶಂಕರನಾರಾಯಣ ಜೂನಿಯರ್ ಕಾಲೇಜಿನಲ್ಲಿ ಪಿ.ಯು.ಸಿ ತನಕ ವಿದ್ಯಾಭ್ಯಾಸ ಪಡೆದರು. ನಂತರ ಮೆ. ಬೈಲೂರು ರಾಮರಾಯ ಮಂಜುನಾಥ ಶ್ಯಾನುಭಾಗ್ ರಲ್ಲಿ ಬರ್ಮಾಶೆಲ್ ಡಿಪೋದಲ್ಲಿ ಕ್ಲರ್ಕ್ ಆಗಿ ಸೇರ್ಪಡೆಗೊಂಡರು. ಶ್ರೀಯುತರಿಗೆ ತಂದೆಯವರೇ ಯಕ್ಷಗಾನದ ಪ್ರಪ್ರಥಮ ಗುರುಗಳು. ನಂತರ ಹಿರಿಯಡಕ, ಪೆರ್ಡೂರು, ಮೂಲ್ಕಿ, ಸಾಲಿಗ್ರಾಮ, ಕಮಲಶಿಲೆ, ಮಂದರ್ತಿ, ಅಮೃತೇಶ್ವರಿ ಮೇಳಗಳಲ್ಲಿ ವೇಷಧಾರಿಗಳಾಗಿ ತಿರುಗಾಟ ನಡೆಸಿದರು. ಸುಧನ್ವ, ಶ್ರೀ ರಾಮ, ಕೃಷ್ಣ, ಜಾಂಬವ, ಕೌರವ, ದಶರಥ, ವಾಲಿ, ರಾವಣ, ನಾರದ, ಅಕ್ರೂರ, ಋತುಪರ್ಣ, ಬಾಹುಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಂಗೊಳ್ಳಿ ಮಹಿಳೆಯೊಬ್ಬರು ಬಸ್‌ನಲ್ಲಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ನಡೆದಿದೆ. ಗಂಗೊಳ್ಳಿ ಬಂದರು ರಸ್ತೆ ದೊಡ್ಡಹಿತ್ತು ಪದ್ಮಾವತಿ (67) ಅವರು ಮೃತಪಟ್ಟವರು. ಅವರು ಮೀನು ವ್ಯಾಪಾರ ಮಾಡಿಕೊಂಡಿದ್ದು, ಸುಮಾರು 10 ವರ್ಷಗಳ ಹಿಂದೆ ಹೃದಯಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು ಎಂದು ಹೇಳಲಾಗಿದೆ. ಗಂಗೊಳ್ಳಿಯಿಂದ ಪ್ರತೀ ದಿನ ಮೀನು ತೆಗೆದುಕೊಂಡು ಬರುವಾಗ ಕುಂದಾಪುರದ ಶಾಸ್ತ್ರಿ ಪಾರ್ಕ್‌ನ ಹತ್ತಿರ ಬಸ್ಸಿನಲ್ಲಿ ಕುಸಿದು ಬಿದ್ದರು.ಕೂಡಲೇ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಸರಕಾರಿ ಆಸ್ಪತ್ರೆಗೆ ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ  ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂಸುದ್ದಿ.ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ವಿಕ್ಷೀಸಿ, ಮಾತನಾಡಿ ಇಡೀ ದೇಶವೇ ಹೆಮ್ಮೆ ಪಡುವ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಇವರ ಕಾರ್ಯವೈಕರಿಯ ಬಗ್ಗೆ ಪ್ರಶಂಸಿದರು. ಈ ವೇಳೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಗೌರವಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ. 16 ಸಿ, ಮೌಲಾನಾ ಅಬುಲ್ ಕಲಾಂ ಆಜಾದ್ ಭವನ, ವಸಂತನಗರ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾಥ್‌ಸೆಂಟರ್ ಪುಣೆ, ಮಹಾರಾಷ್ಟ್ರ ಇವರಿಂದ ಆಯೋಜಿಸಲ್ಪಟ್ಟ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಇಲ್ಲಿನ ಮದರ್ ತೆರೇಸಾ ಶಾಲೆಯ ಮೂರನೇ ತರಗತಿಯ ಹೆಮ್ಮೆಯ ವಿದ್ಯಾರ್ಥಿ ಪ್ರಿಯಾಂಶ್ ಶಂಕರ್ ನಾಯ್ಕ್ ಗೆ ಚಿನ್ನದ ಪದಕ ಲಭಿಸಿದೆ. ಈ ಪ್ರತಿಭಾನ್ವಿತ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಆತನ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷಿನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ. 50 ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಸಹಾಯಧನ ಪಡೆಯಲು ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್ ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ. ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ…

Read More