ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಸ್ವಚ್ಛತಾ ಹಿ ಸೇವಾ – 2026 ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಮಾತನಾಡಿ, ಮಕ್ಕಳಿಗೆ ಸ್ವಚ್ಛತಾ ವಿಷಯದ ಬಗ್ಗೆ ತಿಳಿ ಹೇಳಿ, ಮಕ್ಕಳಾಗಿ ತಮ್ಮ ಜವಾಬ್ದಾರಿ ಬಗ್ಗೆ ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಇ ಒ ವಿವಿರಾಜ್ ಹೆಗ್ಡೆ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ವಿದ್ಯಾರ್ಥಿಗಳು, ಶಿಕ್ಷಕರು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಕೋಡಿ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡವು ಅಮೋಘ ಆಟದ ಪ್ರದರ್ಶನ ನೀಡಿ ಜಯಶಾಲಿಗಳಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ನಿರಂತರ ಪ್ರೋತ್ಸಾಹ ಹಾಗೂ ಸೂಕ್ತ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದಾರೆ. ಯಶಸ್ಸಿನ ಹೆಜ್ಜೆ ಇಟ್ಟಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಜಿಲ್ಲಾ ಮಟ್ಟದಲ್ಲಿಯೂ ಸಾಧನೆ ಮೆರೆಯುವಂತೆ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಯಜ್ಞ – ತಪಸ್ಸು – ವ್ರತಗಳನ್ನು ಮಾಡದೇ ಇದ್ದರೂ ಬಾಯಾರಿದವರಿಗೆ ನೀರನ್ನು ದಾನ ಮಾಡಿದವನು ಸ್ವರ್ಗವನ್ನು ಪಡೆಯುತ್ತಾನೆ. ಬಾಯಾರಿದವರಿಗೆ ನೀರು ನೀಡುವುದು ಮತ್ತೊಬ್ಬರ ಜಠರಾಗ್ನಿಗೆ ಜಲವನ್ನು ಆಹುತಿಯಾಗಿ ನೀಡುವ ಯಜ್ಞದಂತೆ. ಬೇಸಿಗೆಯಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಬಾವಿ ಹಾಗೂ ಕೆರೆಗಳನ್ನು ನಿರ್ಮಿಸುವುದು ಶ್ರೇಷ್ಠ ಕಾರ್ಯ ಎಂದು ಧರ್ಮ ಶಾಸ್ತ್ರವನ್ನು ಆಧರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜೀವನದಲ್ಲಿ ದೊರೆಯುವ ಅಪರೂಪದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಶ್ರೀಗಳು, ಸ್ವಾತಿ ನಕ್ಷತ್ರದ ಮಳೆಯ ನೀರಿನ ಕುರಿತಾಗಿ ವಿವರಿಸುತ್ತಾ, ಇದು ಜೀರ್ಣಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಹಾಯಧನ / ಸಾಲ ಸೌಲಭ್ಯ ಪಡೆಯಲು ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಅದರ ಉಪಜಾತಿಗಳಿಗೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ನಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kaad.karnataka.gov.in , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ ಕಚೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಸ್ತುವಿಗಿಂತ ಪ್ರೀತಿ ಮುಖ್ಯ ಎನ್ನುವುದರ ಜೊತೆಗೆ ವಸ್ತುಗಳಿಗೆ ನೀಡಿದ ಆಕಾರ, ಅದರ ಗುರಿ ತಲುಪುವಲ್ಲಿ ಸಹಾಯವಾಗುತ್ತದೆ ಎನ್ನುವುದನ್ನು ಶ್ರೀಕೃಷ್ಣ ಹೇಳಿದ. ಹೀಗಾಗಿ ವಿದ್ಯಾರ್ಥಿಗಳು ಶ್ರೀಕೃಷ್ಣನ ಬದುಕಿನ ತತ್ವಗಳನ್ನು ಅರ್ಥೈಸಿಕೊಳ್ಳುವ ಮೂಲಕ ಸರಿಯಾದ ಜೀವನವನ್ನು ರೂಪಿಸಿಕೊಳ್ಳಿ ಎಂದು ಉಡುಪಿಯ ಶ್ರೀಕೃಷ್ಣ ಮಠದ ದಿವಾನರಾದ ಡಾ. ಉದಯ್ ಕುಮಾರ್ ಸರಳತ್ತಾಯ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಗಣಕ ವಿಜ್ಞಾನ ವಿಭಾಗದ ಜಂಟಿಯಾಗಿ ಆಯೋಜಿಸಿದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರಾದ ರೇಷ್ಮಾ ಶೆಟ್ಟಿ, ರಶ್ಮಿ ಗಾವಡಿ, ಮೇಘಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಧನೆಯ ಮೂಲಕ ಅವರು ಸೆಪ್ಟೆಂಬರ್ 24 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳು ಮತ್ತು ಪದವಿಗೆ ಸೀಮಿತರಾಗದೆ, ಪರಿಣಾಮಕಾರಿ ಸಂವಹನ ಕೌಶಲ್ಯ, ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಬೇಕು ಎಂದು ಆಳ್ವಾಸ್ ಎಂಬಿಎ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ದಿಶಾ ಸಿ. ಶೆಟ್ಟಿ ನುಡಿದರು. ಅವರು ಆಳ್ವಾಸ್ ಕಾಲೇಜು (ಸ್ವಾಯತ್ತ), ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗವು ಶುಕ್ರವಾರ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ಮಾತನಾಡಿದರು. ವೈಯಕ್ತಿಕ ಬದುಕು ಹಾಗೂ ವೃತ್ತಿಜೀವನದಲ್ಲಿನ ಸಂವಹನದ ಸ್ವರೂಪದಲ್ಲಿ ವ್ಯತ್ಯಾಸವಿದೆ. ವೈಯಕ್ತಿಕ ಜೀವನದಲ್ಲಿ ವ್ಯಕ್ತಿಯು ತನ್ನ ಆಯ್ಕೆಯಂತೆ ಮಾತನಾಡಬಹುದು. ಆದರೆ ವೃತ್ತಿಜೀವನದಲ್ಲಿ ಸಾಂಸ್ಕೃತಿಕ ಭಿನ್ನತೆ, ಭಾಷಾ ವೈವಿಧ್ಯ ಹಾಗೂ ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಸಾಮರ್ಥ್ಯ ಮಹತ್ವದ ಪಾತ್ರ ವಹಿಸುತ್ತದೆ. ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಮುಕ್ತವಾಗಿ ಮಾತನಾಡುವ ಮತ್ತು ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಸಾಮರ್ಥ್ಯವು ವಿದ್ಯಾರ್ಥಿಗಳ ಮುಂದಿನ ಬದುಕಿನಲ್ಲಿ ಹಲವು ಹೊಸ ಅವಕಾಶಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನ ಚೇಂಪಿ ಇಲ್ಲಿ ಗುರುವಾರ ಜರಗಿತು. ಸಭೆಯಲ್ಲಿ ಅಂತರಾಷ್ಟ್ರೀಯ ಅಂದ ಕ್ರಿಕೆಟ್ ಕ್ರೀಡಾಪಟು ಕಾವ್ಯ ವಿ ಆಚಾರ್ ರಿಪ್ಪನ್ ಪೇಟೆ ಅವರನ್ನು ಸನ್ಮಾನಿಸಲಾಯಿತು. ಸಮಾಜ ಸೇವಕ ಕೃಷ್ಣಯ್ಯ ಆಚಾರ್ ಬನ್ನಾಡಿ ಇವರನ್ನು ವಿಶೇಷವಾಗಿ ಗೌರವಿಸಲಾಯಿತು. ಇದೇ ವೇಳೆ ಉತ್ಸವದ ಅಂಗವಾಗಿ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದರಿಗೆ ಬಹುಮಾನ ವಿತರಣೆ. ಹಿರಿಯ ನಾಗರಿಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ, ಗೋಪಾಲಕೃಷ್ಣ ಆಚಾರ್ಯ ದತ್ತಿನಿಧಿ ವಿತರಣೆ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಅಧ್ಯಕ್ಷರ ಮಣೂರು ಸುಬ್ರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವೈದ್ಯರಾದ ಡಾ. ಅಶೋಕ್ ಆಚಾರ್ಯ , ಅಧ್ಯಾಪಕಿ ಶಕುಂತಲಾ ಗಂಗಾಧರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿ (ದ) ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಆಧುನಿಕ ಲ್ಯಾಂಡ್ರಿ (ಪ್ರಸ್ತುತ ಸಾಲಿನ ಹೊಸ ಯೋಜನೆ), ಸ್ವಾವಲಂಬಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಾಲ – ಸಹಾಯಧನ ಸೌಲಭ್ಯ ಪಡೆಯಲು ಮಡಿವಾಳ ಹಾಗೂ ಇದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ನಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmmd.karnataka.gov.in/en , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಪೋಟೋಶಾಪ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
