ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ 8ನೇ ತರಗತಿ ವಿದ್ಯಾರ್ಥಿಗಳಾದ ಸನ್ವಿತ್ ಮತ್ತು ತನೀಶ್ ವಿಜಯರಾಗಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ ► ಕರಾಟೆ ಸ್ಪರ್ಧೆಯಲ್ಲಿ ಜನತಾ ಕಿರಿಮಂಜೇಶ್ವರದ ವಿದ್ಯಾರ್ಥಿ ರಜತ್ ರಾಜ್ಯಮಟ್ಟಕ್ಕೆ ಆಯ್ಕೆ – https://kundapraa.com/?p=88807 .
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಳೆದ ಹಲವು ವರ್ಷಗಳಿಂದ ಕೋಟ ಸೇರಿದಂತೆ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ಗೋವುಗಳ ಅಪಘಾತ ಹೆಚ್ಚುತ್ತಿದ್ದು ಈ ಹಿನ್ನಲ್ಲೆಯಲ್ಲಿ ಮಂಗಳವಾರ ನಡುರಾತ್ರಿ ಬಾರಿ ಗಾತ್ರದ ಎನ್ನಲಾದ ವಾಹನವೊಂದು ಎರಡು ಬೀದಿಯಲ್ಲಿರುವ ಬೀಡಾಡಿ ಗೋವುಗಳಿಗೆ ಡಿಕ್ಕಿ ಸಂಭವಿಸಿದ್ದು ಎನ್ನಲಾಗಿದ್ದು ಎರಡು ಗೋವುಗಳ ದೇಹಗಳು ತುಂಡು ತುಂಡಾಗಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿಕೊಂಡಿದೆ. ಈ ಹಿನ್ನಲ್ಲೆಯಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದ ಹಿನ್ನಲ್ಲೆ ಕೋಟದ ಕೀರ್ತೀಶ ಪೂಜಾರಿ ಮತ್ತು ತಂಡ ಅವುಗಳನ್ನು ಸ್ಥಳೀಯ ಸ್ಥಳವೊಂದರಲ್ಲಿ ಮಣ್ಣು ಮಾಡಿದೆ. ರಾತ್ರಿ ಹೊತ್ತಿನಲ್ಲಿ ಜೆಸಿಬಿ ನೀಡಿದ ನವೀನ್ ಪೂಜಾರಿ ಬಣ್ಣದಬೈಲು ಹಾಗೂ ಸ್ಥಳೀಯ ಯುವಕರಾದ ಸುಮಂತ ದೇವಾಡಿಗ ಹರ್ತಟ್ಟು, ಮನು ಶೆಟ್ಟಿ ಮೊಗೆಬೆಟ್ಟು, ಸುಕಾಂತ ಹರ್ತಟ್ಟು, ನಾಗೇಶ್ ಕಾಂಚನ್ ಹರ್ತಟ್ಟು, ನಾಗೇಶ್ ಬತ್ತಡ ಗುಳ್ಳಾಡಿ ಮತ್ತಿತರರು ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸೈಂಟ್ ಫ್ರಾನ್ಸಿಸ್ ಕ್ಷೀವಿಯರ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಇರ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಇಬ್ಬರು ಬಾಲಕಿಯರು ಹಾಗೂ ಒಬ್ಬ ಬಾಲಕ ಸೇರಿದ್ದಾರೆ. 17 ವಯೋಮಾನದ ಬಾಲಕಿಯರ 56ಕೆಜಿ ವಿಭಾಗದಲ್ಲಿ 10ನೇ ತರಗತಿಯ ಪ್ರತೀಕ್ಷಾ ಪಿ. ಮತ್ತು 10ನೇ ತರಗತಿಯ ಪ್ರೀತಂ ಕುಲಾಲ್ 17 ವಯೋಮಾನದ 58 ಕೆಜಿ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಜಯ ಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ, 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ 9ನೇ ತರಗತಿಯ ಶ್ರಾವಣಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಪಾರಿತೋಷಕ, ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹದ ನುಡಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವದಂದು ‘ನಾರಿ ತರಂಗ್’ ಕಾರ್ಯಕ್ರಮದೊಂದಿಗೆ ಕಾಲೇಜಿನ ಮಹಿಳಾ ವೇದಿಕೆಯ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಭಾಗವಾಗಿ, ದೇಶ ಭಕ್ತಿ ಗೀತೆಗಳು, ಮಹಿಳಾ ಸ್ವಾತಂತ್ರ್ಯ ಹೋರಾಟಗಾರ ಕುರಿತು ಭಾಷಣ ಹಾಗೂ ಅವರ ತ್ಯಾಗ, ಧೈರ್ಯವನ್ನು ಚಿತ್ರಿಸುವ ಚಿತ್ರಪಟ ತಯಾರಿ ಚಟುವಟಿಕೆಗಳನ್ನು ಒಳಗೊಂಡಿತ್ತು. ಕಾಲೇಜಿನ ಮಹಿಳಾ ವೇದಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೃಜನಶೀಲತೆ ಮತ್ತು ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀಮತಿ ಮಾಲತಿ, , ಬಿಸಿಎ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅರ್ಚನಾ ಉಪಾಧ್ಯ, ಮಹಿಳಾ ವೇದಿಕೆಯ ಸಂಯೋಜಕರಾದ ಗಣಕಶಾಸ್ತ್ರದ ಉಪನ್ಯಾಸಕರಾದ ನಾಫಿಯಾ ಅಖ್ತಾರಿ ಮತ್ತು ಐಶ್ವರ್ಯ ಕುಲಾಲ್, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿಸಿಎ ವಿದ್ಯಾರ್ಥಿನಿ ದೀಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಾತಂತ್ರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೆಸರಾಂತ ರಂಗ ಸಂಸ್ಥೆ ಲಾವಣ್ಯದ ಸ್ಥಾಪಕಾಧ್ಯಕ್ಷರಾದ ಯು. ಶ್ರೀನಿವಾಸ ಪ್ರಭು (73) ಅವರು ಬುಧವಾರ ನಿಧನರಾಗಿದ್ದಾರೆ. ಬ್ಯಾಂಕ್ ಉದ್ಯೋಗಿಯಾಗಿದ್ದಾ ಅವರು ಹತ್ತು ಹಲವು ನಾಟಕ ರಚನೆ, ನಿರ್ದೇಶನ, ಸಂಗೀತ ನಿರ್ದೇಶನ ಸೇರಿದಂತೆ ರಂಗಭೂಮಿ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಕೆಲ ಕಾಲ ಅಸೌಖ್ಯದಿಂದಾಗಿ ರಂಗಭೂಮಿ ಚಟುವಟಿಕೆಯಿಂದ ವಿಶ್ರಾಂತಿ ಪಡೆದಿದ್ದರು. ಉಪ್ಪುಂದದ ಶ್ರೀನಿವಾಸ ಪ್ರಭು ಅವರು ತನ್ನ ಬಾಲ್ಯದಿಂದಲೇ ಹರಿಕಥೆ, ಭಜನೆ, ಯಕ್ಷಗಾನ, ನಾಟಕಗಳ ಕಡೆಗೆ ಆಕರ್ಷಿತರಾಗಿ ವಿದ್ಯಾರ್ಥಿ ಜೀವನದಲ್ಲಿಯೇ ಸಣ್ಣಪುಟ್ಟ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದಾಗ ಊರಿನ ಸ್ನೇಹಿತರನ್ನು, ಸಹೋದ್ಯೋಗಿಗಳನ್ನು ಕೂಡಿಸಿಕೊಂಡು ಕನ್ನಡ, ಕೊಂಕಣಿ ನಾಟಕಗಳನ್ನು ಆಡುವ ಹವ್ಯಾಸ ಬೆಳೆಸಿಕೊಂಡರು. ಇದರ ಜೊತೆಗೆ ಸಂಗೀತ ಶಾಲೆ ಸೇರಿ ಸಂಗೀತ ಉಪಕರಣಗಳನ್ನು ನುಡಿಸಲು ಕಲಿತರು. ನಾಟಕಗಳಲ್ಲಿ ನಟನೆ, ನಿರ್ದೇಶನ, ಸಂಗೀತ ಸಂಯೋಜನೆಯನ್ನು ಹವ್ಯಾಸವಾಗಿ ಬೆಳೆಸಿಕೊಂಡರು. ಉಸ್ತಾದ್ ಕೆ. ಎಲ್. ಜಮಾದಾರ್‌ರಿಂದ ತಬಲಾವನ್ನು ಕಲಿತ ಪ್ರಭುಗಳು, ದಿ. ಕೆ.ಎಸ್. ಮಧ್ಯಸ್ಥ ಇವರಲ್ಲಿ ಭರತನಾಟ್ಯವನ್ನು, ಡಾ. ವೈ. ಚಂದ್ರಶೇಖರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು, ಪಾಂಡೇಶ್ವರ ವಲಯದ ಗುಂಡ್ಮಿ ಕಾರ್ಯ ಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಒಕ್ಕೂಟದ ನೂತನ ಅಧ್ಯಕ್ಷ ಜಗದೀಶ್ ವಹಿಸಿದರು. ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿ ಕಾರ್ಯಕ್ರಮದಿಂದ ಯಾವ ತರ ಮಳೆ ನೀರನ್ನು ಸಂಗ್ರಹಣೆ ಮಾಡಬಹುದು, ಅಂತರ ಜಲವನ್ನು ಹೇಗೆ ಕಾಪಾಡಿಕೊಂಡು ಹೋಗಬಹುದು ಅದರಿಂದ ಏನೆಲ್ಲ ಪ್ರಯೋಜನೆಗಳಿವೆ ಎಂಬುದರ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬಗ್ಗೆ ತಾಲೂಕಿನ ಕೃಷಿ ಅಧಿಕಾರಿ ರಾಘವೇಂದ್ರ ಪ್ರಾತ್ಯಕ್ಷಿತೆಯ ಮೂಲಕ ಯಾವು ತರದಲ್ಲಿ ಮಳೆ ನೀರನ್ನು ಸಂಗ್ರಹಣೆ ಮಾಡಬಹುದು, ಅಲ್ಲದೆ, ಅದರ ಪ್ರಯೋಜನ ಹಾಗೂ ಮಳೆ ನೀರನ್ನು ಯಾವ ತರದಲ್ಲಿ ಸಂಗ್ರಹಣೆ ಮಾಡಿ , ಬೇಕಾದ ವಿಧಗಳನ್ನು ವಿವಿಧ ರೀತಿಯಲ್ಲಿ ತೋರಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಲಾಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿ ಹಬ್ಬದ ವರ್ಷದ ಅಂಗವಾಗಿ “ರಜತಯಾನ-2025” ಇದರ ಸವಿ ನೆನಪಿಗಾಗಿ ರಾಜ್ಯ ಮಟ್ಟದಲ್ಲಿ ನಡೆಸುತ್ತಿರುವ ಕಥಾ ಸ್ಪರ್ಧೆಯ ಸ್ಪರ್ಧಾ ನೀತಿಯನ್ನೊಳಗೊಂಡ ಮಾಹಿತಿ ಪತ್ರದ ಬಿಡುಗಡೆ ಸಮಾರಂಭವನ್ನು ನಡೆಸಲಾಯಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಕ.ಸಾ.ಪ.ದ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ, ಪ್ರಸ್ತುತ ವ್ಯವಸ್ಥೆಯಲ್ಲಿ ಕಥಾಸ್ಪರ್ಧೆಯ ಅಗತ್ಯತೆ ಬಗ್ಗೆ ಮತ್ತು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸಾಹಿತ್ಯದ ಪಾತ್ರವನ್ನು ತಿಳಿಸಿದರು. ಸುರಭಿ ರಿ ಬೈಂದೂರು ಅಧ್ಯಕ್ಷ ಆನಂದ ಮದ್ದೂಡಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದು, ಕಥಾಸ್ಪರ್ಧೆಯ ಬಗ್ಗೆಮಾಹಿತಿ ನೀಡಿದರು. ವೇದಿಕೆಯಲ್ಲಿ ಸುರಭಿಯ ರಂಗ ನಿರ್ದೇಶಕ ಗಣೇಶ್ ಮಂದಾರ್ತಿ, ಖಜಾಂಚಿ ರಾಘವೇಂದ್ರ ಕೆ. ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಕುದ್ರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ 14ರ ವಯೋಮಾನದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನ ವ್ಯಕ್ತಿಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಕಾಯ್ದೆಯ ಸೆಕ್ಷನ್ 50, 51 ಮತ್ತು 52 ರ ಪ್ರಕಾರ ಸೇವಾಸಿಂಧು ತಂತ್ರಾಂಶದ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಈ ರೀತಿ ನೋಂದಣಿಯಾದ ಸಂಸ್ಥೆಗಳು ತಮ್ಮ ನೋಂದಣಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕಾಗಿರುತ್ತದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಪ್ರಕಾರ ನೋಂದಣಿಯಾಗದೆ ವಿಕಲಚೇತನ ವ್ಯಕ್ತಿಗಳಿಗೆ ಕಾರ್ಯನಿರ್ವಹಿಸುತ್ತಿದ್ದು, ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ/ ನವೀಕರಣ ಚಾಲ್ತಿಯಲ್ಲಿ ಇಲ್ಲದಿರುವ ಸಂಸ್ಥೆಗಳ ವಿರುದ್ಧ ನೇರವಾಗಿ ಸಂಬಂಧಪಟ್ಟ ಆರಕ್ಷಕ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಲು ಅವಕಾಶವಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ವಿಕಲಚೇತನ ಮಕ್ಕಳು ಮತ್ತು ವ್ಯಕ್ತಿಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ರ ಕಾಯ್ದೆಯ ಅಡಿ ಸೇವಾಸಿಂಧು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಿಂದ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸಿ.ಎಮ್.ಎ. (Cost and Management Accounting) ಕೋರ್ಸ್‌ನ ಮಹತ್ವದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಬೆಂಗಳೂರು ಜಿ.ಸಿ, ರಾವ್ ಅಕಾಡೆಮಿ ಇದರ ಮುಖ್ಯಸ್ಥರಾದ ಸಿ.ಎ, ಸಿ.ಎಮ್‌ಎ, ಜಿ.ಸಿ. ರಾವ್ ಅವರು ಮಾತನಾಡಿ, ಉದ್ಯೋಗಕ್ಕಾಗಿ ಪೈಪೋಟಿ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಕೇವಲ ಸರಕಾರಿ ಉದ್ಯೋಗಕ್ಕಾಗಿ ಕಾಯದೇ ವೃತ್ತಿಪರ ಕೋರ್ಸ್ ಆದ ಕೋಸ್ಟ್ ಎಂಡ್ ಮ್ಯಾನೇಜ್‌ಮೆಂಟ್ ಅಕೌಂಟಿಂಗ್ ನತ್ತ ಗಮನ ಹರಿಸಿದರೆ ಉತ್ತಮ ಸಂಪಾದನೆ ಜೊತೆಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವನ್ನು ಗಳಿಸಬಹುದು ಎಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನಾಡಿದರು. ಇನ್ನೋರ್ವ ಅತಿಥಿ ಬೆಂಗಳೂರು ಜಿ.ಸಿ. ರಾವ್ ಅಕಾಡೆಮಿ ಅಧ್ಯಾಪಕ ನರೇಶ್ ಅವರು ಮಾತನಾಡಿ, ಕಠಿಣ ಪರಿಶ್ರಮದಿಂದ ಸಿಎಮ್‌ಎ ಕೋರ್ಸ್‌ನ್ನು ಸುಲಭವಾಗಿ ತೇರ್ಗಡೆಗೊಳ್ಳಬಹುದು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು…
