Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಹೇಳಿದರು. ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬೋಧಕರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬಹುದು. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾರಣಕ್ಕೂ ನಿಲಕ್ಷ್ಯ ಧೋರಣೆ ಸಲ್ಲದು. ಇಂತಹ ಕಾರ್ಯಾಗಾರಗಳು ಬೋಧನಾ ವೃತ್ತಿಯಲ್ಲಿರುವವರಿಗೆ ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜನ್ನಾಡಿಯ ಫೇವರೇಟ್ ಕ್ಯಾಶ್ಯೂ ಇಂಡಸ್ಟೀಸ್ ನ ಹೊಳ್ಮಗೆ ಶಂಕರ ಹೆಗ್ಡೆ ಅವರು ಮಾತನಾಡಿ, ಬದುಕಿನಲ್ಲಿ ಸವಾಲುಗಳು ಸಾಧನೆಯ ಶಿಖರವೇರಲು ಸಹಾಯ ಮಾಡುತ್ತವೆ;…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಸಾಧನೆ ಸುಲಭದ ಮಾತಲ್ಲ. ಕೇವಲ ಪ್ರತಿಭೆಯಿಂದ ಮಾತ್ರ ಯಶಸ್ಸು ಕಾಣಲಾಗದು. ಕಠಿಣ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ಜಗತ್ತಿನಲ್ಲಿ ಯಾವುದೂ ಕೂಡ ಸುಲಭವಾಗಿ ದಕ್ಕುವುದಿಲ್ಲ. ನಾವು ಸ್ವೀಕರಿಸುವ ರೀತಿ ಮತ್ತು ಸಾಧಿಸುವ ಛಲ. ಸತತ ಪರಿಶ್ರಮ ಬದುಕಿಗೆ ಸಾರ್ಥಕತೆಯನ್ನು ನೀಡುತ್ತದೆ ಎಂದು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಹೇಳಿದರು ಅವರು ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಸಂಘದ ಪ್ರಧಾನ ಕಛೇರಿಯಲ್ಲಿ ಸೊಸೈಟಿ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರಯತ್ನದ ಮೂಲಕ ಬೆಳೆಯಬೇಕು. ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಮಕ್ಕಳು ಸಮಾಜಕ್ಕೆ ಶಕ್ತಿ ತುಂಬುವ ಆಸ್ತಿಯಾಗಬೇಕು. ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ನೀಡುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರಲ್ಲಿ ವಿವಿಧ ಶಾಲೆಗಳಲ್ಲಿ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ನಡೆದ ವಲಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ 14 ವರ್ಷದೊಳಗಿನ ವಯೋಮಿತಿಯ ಕರಾಠೆಯಲ್ಲಿ ರಾಹುಲ್ ಉಳ್ಳೂರ್, ಆತ್ಮಿಕಾ ಉಳ್ಳೂರ್, 17 ವರ್ಷದೊಳಗಿನ ವಯೋಮಿತಿಯಲ್ಲಿ ಶುಭನ್ ಪುತ್ರನ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಟೇಬಲ್ ಟೆನ್ನೀಸ್ ಆಟದಲ್ಲಿ ಭಾಗವಹಿಸಿ 8ನೇ ತರಗತಿಯ ಶುಭಾಂಗಿ ಮತ್ತು 17 ವರ್ಷದೊಳಗಿನ ವಯೋಮಿತಿಯಲ್ಲಿ 9ನೇ ತರಗತಿಯ ಶ್ರೇಯಾ ಟಿ, ಸ್ಪೂರ್ತಿ ಎಸ್ ಪಿ, ಮಹೇಶ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಚೆಸ್ ಆಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಜುನ್ ಕೆ ಶೆಟ್ಟಿ ಮತ್ತು ಕೃಶವ್ ಚಿತ್ತಾಪುರ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಶುಭಾಂಗಿ ಎಸ್ ಮಂಕಿಕರ್ ಮತ್ತು 17 ವರ್ಷದೊಳಗಿನ ವಯೋಮಿತಿಯ ಹುಡುಗಿಯರಲ್ಲಿ ಶ್ರೇಯಾ ಟಿ ಮತ್ತು ಸ್ಫೂರ್ತಿ ಪಾಟೀಲ್ ಹಾಗೂ 17 ವರ್ಷದೊಳಗಿನ ವಯೋಮಿತಿಯ ಹುಡುಗರಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾನದ ಐರೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೋಡಿ ರಸ್ತೆ ಸಮೀಪ ನಿರ್ಮಾಣಗೊಳ್ಳಲಿರುವ ಮದ್ಯದಂಗಡಿಯ ವಿರುದ್ಧ ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ ಸ್ಥಳೀಯವಾಗಿ ಶಿಶುಮಂದಿರ, ಪಶು ಅಸ್ಪತ್ರೆ ಸೇರಿದಂತೆ ಅನೇಕ ಮನೆಗಳು ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ ಎಂದು ಹೋರಾಟ ಸಮಿತಿ ಪ್ರಮುಖರಾದ ರಶಿರಾಜ್ ಸಾಸ್ತಾನ ಮಾಧ್ಯಮಕ್ಕೆ ತಿಳಿಸಿ ಐರೋಡಿ ಗ್ರಾಮಪಂಚಾಯತ್ ಮನವಿ ನೀಡಿದರು. ಈ ಸಂದರ್ಭಗಳಲ್ಲಿ ಪಂಚಾಯತ್ ಅಧ್ಯಕ್ಷೆ ಸಕು, ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಮನವಿ ಸ್ವೀಕರಿಸಿದರು. ಪಂಚಾಯತ್ ಸದಸ್ಯ ನವೀನ್ ಕಾರಂತ್, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿದೆ ಎಂದ ಅವರು, ಪೊಲೀಸ್, ನಕ್ಸಲ್ ನಿಗ್ರಹಪಡೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ವತಿಯಿಂದ ಆಯೋಜನೆಗೊಂಡಿರುವ 15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೊಗ ಮೇಳಕ್ಕೆ ವಿದ್ಯಾಗಿರಿ ಆವರಣ ಸಂಪೂರ್ಣ ಸಿದ್ಧಗೊಂಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ನೇಮಕಾತಿದಾರರಿಗೆ ವ್ಯವಸ್ಥಿತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈವರೆಗೆ 305 ಕಂಪೆನಿಗಳು ನೋಂದಾಯಿಸಿಕೊಂಡು ವಿವಿಧ ಹುದ್ದೆಗಳಿಗೆ 2 ದಿನಗಳೂ ನೇಮಕಾತಿ ನಡೆಸಲಿವೆ. ಈಗಾಗಲೇ 11,509 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಈಗಾಗಲೇ ನೋಂದಾಯಿಸಿಕೊಂಡಿದ್ದು, ಇಂದು ಸ್ಥಳದಲ್ಲೇ ನೇರವಾಗಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಎಐ ಆಧಾರಿತ ವಿಶೇಷ ಚಾಟ್‌ಬೋಟ್:ಈ ಬಾರಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಎಐ ಆಧಾರಿತ ವಿಶೇಷ ಚಾಟ್ ಬೋಟ್ ತಂತ್ರಜ್ಞಾನ ತಯಾರಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ಗಳನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್‌ ಮಾಡಿದಾಗ ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆ ಹಾಗೂ ಕಂಪೆನಿಗಳ ವಿವರವನ್ನು ಪಡೆಯಬಹುದಾಗಿದೆ. ಇದರೊಂದಿಗೆ ಕಂಪೆನಿಗಳ ವಿವರಗಳಿರುವ ಅಭ್ಯರ್ಥಿ ಸಹಾಯಕ ಕೈಪಿಡಿ, ಅಗತ್ಯವಿರುವವರಿಗೆ ವಸತಿ ವ್ಯವಸ್ಥೆ, ಐಟಿಐ, ಡಿಪ್ಲೊಮೊ ಕಾಲೇಜುಗಳಿಗೆ ವಾಹನ ಸೌಲಭ್ಯ ಹಾಗೂ ಅಭ್ಯರ್ಥಿ ಸಹಾಯ ಕೇಂದ್ರಗಳು ಇರಲಿವೆ. ಒರಿಯಂಟೇಶನ್ ಕಾರ್ಯಕ್ರಮ:ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟಿನಲ್ಲಿರುವ ಹೊಸಬದುಕು ಆಶ್ರಮದ ಸಾಮಾಜಿಕ ಕಳಕಳಿಗೆ ಬೆಂಗಳೂರಿನ ಚಿತ್ರಸಂತೆ ಎನ್ನುವ ಸಂಸ್ಥೆ  ಎಕ್ಸ್ಲೆನ್ಸ್ ಸೋಶಿಯಲ್ ಸರ್ವಿಸ್ ಎನ್ನುವ ಅವಾರ್ಡ್ ಅನ್ನು ನೀಡಿ ಗೌರವಿಸಿದೆ. ಕಳೆದ ಸಾಕಷ್ಟು ವರ್ಷಗಳಿಂದ ಅನಾಥರ ಬಾಳಿನ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿದೆ. ಚಲನಚಿತ್ರ ನಿರ್ದೇಶಕರಾದ ಸಾಯಿ ಪ್ರಕಾಶ್ ಈ ಅವಾರ್ಡ್‌ನ್ನು ಹೊಸ ಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರು, ನಟಿಯರು ನಿರ್ದೇಶಕರು, ನಿರ್ಮಾಪಕರುಗಳು ಈ ಕಾರ್ಯಕ್ರಮ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಗುರುವಾರ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕಾರಂತ ಥೀಂ ಪಾಕ್೯ ಅಭಿವೃದ್ಧಿ ಕುರಿತಂತೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಬಳಿ ಚರ್ಚಿಸಿದರಲ್ಲದೆ ಒಂದು ಗ್ರಾಮಪಂಚಾಯತ್ ಸಾಹಿತಿಯೊಬ್ಬರ ಹೆಸರಿನಲ್ಲಿ ಥೀಂ ಪಾರ್ಕ ರಚಿಸಿ ಅದನ್ನು ನಿರ್ವಹಿಸುವ ಕಾರ್ಯವೈಕರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಕಾರಂತ ಥೀಂ ಪಾಕ್೯ ವಿಕ್ಷೀಸಿ ಕಲ್ಮಾಡಿ ಅಂಗನವಾಡಿ ಮಕ್ಕಳೊಂದಿಗೆ ಕೆಲ ಹೊತು ಕಳೆದರು. ಈ ವೇಳೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಂದಾಯ ನಿರೀಕ್ಷಕರಾದ ಮಂಜುನಾಥ ಬಿಲ್ಲವ, ಗ್ರಾಮಾಡಳಿತಧಿಕಾರಿ ಚೆಲುವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಪೂರ್ಣಿಮಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಗತ್ತಿನಲ್ಲಿ ನಮ್ಮ ದೇಶ ಶಕ್ತಿ ಶಾಲಿಯಾಗಿ ಬೆಳೆಯುತ್ತಿದೆ. ನಮ್ಮ ದೇಶ ಉತ್ತಮವಾಗಿದ್ದರೆ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲಿದೆ. ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರಗಳನ್ನು ಉತ್ತೇಜಿಸಿ, ಮಕ್ಕಳಿಗೆ ಇದಕ್ಕೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಶು ಮಂದಿರಗಳು ಸ್ಥಾಪಿತವಾಗಿದೆ. ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾ ಭವನದಲ್ಲಿ ಗುರುವಾರ ಪಾಲಕರ ಮಿಲನ ಕಾರ್ಯಕ್ರಮ ಪಾಲಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. ಕುಟುಂಬ, ಸಮಾಜ, ಗ್ರಾಮ, ರಾಜ್ಯ ಹಾಗೂ ದೇಶದಲ್ಲಿ ನಮ್ಮ ಧರ್ಮ, ಸಂಸ್ಕಾರ, ಸಂಸ್ಕೃತಿಗಳು ಗಟ್ಟಿಯಾಗಿ ಬೇರೂರಿ ಬೆಳೆದು ನಿಲ್ಲಲು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಇದಕ್ಕೆ ಪೂರಕವಾದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥರಾದ ಚಂದ್ರಿಕಾ ಧನ್ಯ, ಕಲ್ಪನಾ…

Read More