ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಳಗಾವಿ: ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು, ಅತಿಥಿ ದೇವೋಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಸಂಸ್ಕೃತಿ, ಕಲೆಯಲ್ಲಿ ನಿಮ್ಮ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಗಳು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 16ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ದ್ವಿತೀಯ ಪಿಯುಸಿ – 3 ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಜೆ ಘೋಷಿಸುವ ಪೂರ್ವದಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಿರಲಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿತ್ತು. ಭಾನುವಾರ ರಾತ್ರಿ 9 ಗಂಟೆಯ ಬಳಿಕ ಮಳೆ ಪರಿಸ್ಥಿತಿ ಅವಲೋಕಿಸಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ನಾಲ್ಕುದು ದಿನಗಳಿಂದ ರೆಡ್ ಅಲರ್ಟ್ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಉಡುಪಿಯಲ್ಲಿ ಶನಿವಾರ ಸರಾಸರಿ 60 ಮಿ.ಮೀ ಮಳೆ ದಾಖಲಾಗಿದೆ. ಇನ್ನು ಜೂನ್.16ರ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸುವ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಭಾನುವಾರ ರಾತ್ರಿ ರೆಡ್ ಅಲರ್ಟ್ ಇದ್ದು ಸೋಮವಾರ ಬೆಳಿಗ್ಗೆ ಆರೆಂಜ ಅಲರ್ಟ್ ಇರುವುದರಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುತ್ತಿಲ್ಲ. ಆದರೆ ಮಕ್ಕಳ ಸುರಕ್ಷತೆ ಅತ್ಯಂತ ಮಹತ್ವದ್ದು. ಯಾವುದೇ ನಿರ್ಲಕ್ಷ ಮಾಡುವಂತಿಲ್ಲ. ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ. ಶಾಲೆಗೆ ರಜೆಯನ್ನು ನೀಡಿದ ವಿಷಯ ವಿದ್ಯಾರ್ಥಿಗಳಿಗೆ ತಿಳಿಯದೇ ವಿದ್ಯಾರ್ಥಿಗಳು ಶಾಲೆಗೆ ಬರುವ ಸಾಧ್ಯತೆಗಳು ಇದ್ದಲ್ಲಿ ಶಾಲೆಯಲ್ಲಿ ಒಬ್ಬರಾದರೂ ಶಿಕ್ಷಕರಿದ್ದು ಅವರು ಅಂತಹ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಿ.ಇಎಲ್.ಇಡಿ ಕೋರ್ಸ್ನ ದಾಖಲಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ವೆಬ್ಸೈಟ್ www.schooleducation.kar.nic.in ಅನ್ನು ಸಂಪರ್ಕಿಸಿ, ಪ್ರಸಕ್ತ ಸಾಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಡಯಟ್ ಕೇಂದ್ರದಲ್ಲಿ ನಿಗಧಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರುತಿ ಇಂಟರ್ನ್ಯಾಶನಲ್ ಸ್ಕೂಲ್ ಸುಳ್ಯ ಇಲ್ಲಿ ಸಿಐಎಸ್ಸಿಇ ಶಾಲೆಗಳ ನ್ಯಾಷನಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ 2025-26 ವಲಯಮಟ್ಟದ ಯೋಗಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. 14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಅನ್ಮೋಲ್ ಪ್ರಥಮ ಸ್ಥಾನವನ್ನು, ಅಪರಾಜಿತ್ ನಾಲ್ಕನೇ ಸ್ಥಾನವನ್ನೂ ಪಡೆದಿರುತ್ತಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಪ್ರಫುಲ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. 14 ವರ್ಷದೊಳಗಿನ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯಾದ ಮಾನ್ಯತಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಸ್ಥಾನವನ್ನು ಅನ್ಮೋಲ್ ಪಡೆದಿರುತ್ತಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಆರಕ್ಷಕ ಠಾಣೆಗೆ ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಶನಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೋಟ ಪೋಲಿಸ್ ಠಾಣೆಯಲ್ಲಿರುವ ಕಡತಗಳನ್ನು ಪರಿಶೀಲಿಸಿದರಲ್ಲದೆ ಸುಮಾರು ಮುಕಾಲು ಗಂಟೆ ಪೋಲಿಸರು ಇಲಾಖೆಯಾಧಿಕಾರಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ದಲಿತ ಸಮುದಾಯಗಳ ಸಭೆ ಮತ್ತು ಅವರೊಂದಿಗಿನ ಸಮನ್ವಯಗಳ ಕುರಿತು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಬಳಿ ಚರ್ಚಿಸಿದರು. ಕೋಟ ಆರಕ್ಷಕ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಮಾಹಿತಿ ಪಡೆದ ಅವರು ಕೇಸು ದಾಖಲಿಸಿದರನ್ನು ಸಂಪರ್ಕಿಸಿ ಅವರೊಂದಿಗೂ ಫೋನ್ ಮೂಲಕ ಚರ್ಚಿಸಿದರು. ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು. ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯಗಳ ಕುರಿತು ಠಾಣಾ ಉಪನಿರೀಕ್ಷಕ ರಾಘವೇಂದ್ರ ಸಿ. ಬಳಿ ಗೃಹ ಸಚಿವರು ಪ್ರಶ್ನಿಸಿ ಗಮನ ಸೆಳೆದರು. ಅಪಘಾತವನ್ನು ಘೋರ ಪಾತಕ ಕೃತ್ಯಗಳಲ್ಲಿ ಪರಿಗಣಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಉಡುಪಿ ಜಿಲ್ಲಾ ಎಸ್.ಪಿ. ಹರಿರಾಂ ಶಂಕರ್ ಉತ್ತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು, ಜೂ.14: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗೃಹ ಸಚಿವರನ್ನು ದೇವರದ ವತಿಯಿಂದ ಶಾಲುವದಿಸಿ ದೇವಿಯ ಪ್ರಸಾದ ನೀಡಿ ಗೌರವಿಸಿದರು. ಈ ವೇಳೆ ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ , ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಂ.ಎ.ಗಪೂರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಬು ಹೆಗ್ಡೆ ತಗ್ಗರ್ಸೆ, ಸಮಿತಿಯ ಸದಸ್ಯರಾದ ಅಭಿಲಾಷ್ ಪಿ.ವಿ, ಮಹಾಲಿಂಗ ನಾಯ್ಕ್, ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಸುಧಾ ಕೆ, ಧನಾಕ್ಷಿ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾ? ಕೊಡ್ಲಿಕರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗಧಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಅರ್ಜಿ ಅಹ್ವಾನಿಸಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್ಗಾಗಿ ಕನಿಷ್ಟ ಮಾನದಂಡಗಳನ್ನು, ಹೆಚ್ಚಿನ ವಿವರ, ನಿಬಂಧನೆಗಳು ಮತ್ತು ಅರ್ಜಿಗಾಗಿ ವೆಬ್ಸೈಟ್ www.uahs.edu.in ಅನ್ನು ಸಂಪರ್ಕಿಸಬಹುದಾಗಿದೆ. ಅಫಿಲಿಯೇಶನ್ಗಾಗಿ ಅರ್ಜಿ ಸಲ್ಲಿಸಲು ಜುಲೈ…
