Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 109ನೇ ತಿಂಗಳ ಕಾರ್ಯಕ್ರಮದಲ್ಲಿ ಮನ್ವಿತಾ ಎಸ್., ಶ್ರೀಮತಿ ಶೇಖರ್ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2024-25ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ವಸಂತಿ ಪಂಡಿತ್, ಸೂರ್ಯಕಾಂತ್, ಶ್ರೀಮತಿ ಶೇಖರ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಬಾಲ ಪ್ರತಿಭೆ ಮನ್ವಿತಾ ಎಸ್. ಅವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನಂತರ ಏಕನಾಥೇಶ್ವರಿ ಭಜನಾ ಮಂಡಳಿ ಕುಂದೇಶ್ವರ, ಕುಂದಾಪುರ ಇದರ ಸದಸ್ಯರು  ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು.  ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಮನವಿ ಮಾಡಿದರು. 1) ಬಹುಕಾಲದ ಬೇಡಿಕೆಯಾದ ಗಂಗೊಳ್ಳಿ-ಕುಂದಾಪುರ ಸೇತುವೆ ಪ್ರಸ್ತಾವನೆಗೆ ಅನುಮೋದನೆ ನೀಡಿ ಮಂಜೂರು ಮಾಡಲು ಕೋರಿದರು. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಸೇತುವೆಯ ಸಂಪರ್ಕವಿಲ್ಲದೆ ಸುಮಾರು 18 ಕಿ. ಮೀ ಸುತ್ತಿ ಬಳಸಿ ಕುಂದಾಪುರ ತಲುಪಬೇಕಾಗಿದೆ. ಇದರಿಂದ ಇಲ್ಲಿನ ಗ್ರಾಮಸ್ಥರಿಗೆ ತುರ್ತು ಆರೋಗ್ಯ ಸಮಸ್ಯೆಯ ಸಂಧರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸೇತುವೆಯ ನಿರ್ಮಾಣದಿಂದ ವಾಣಿಜ್ಯ ವಹಿವಾಟಿಗೂ ಅನುಕೂಲಕರವಾಗಿ ಆರ್ಥಿಕತೆಗೆ ಬಲ ತುಂಬಲಿದೆ ಎಂದು ಮನವರಿಕೆ ಮಾಡಿದರು. 2) ರಾಷ್ಟ್ರೀಯ ಹೆದ್ದಾರಿ-66 ರ ಅರಾಟೆ ಸೇತುವೆಯು ಶಿಥಿಲಗೊಂಡಿದ್ದು ಕಳೆದ ಹಲವಾರು ತಿಂಗಳಿನಿಂದ ಎಲ್ಲಾ ನಾಲ್ಕು ಪಥದಲ್ಲಿ ಸಂಚರಿಸಬೇಕಾದ ವಾಹನಗಳು ದ್ವಿಪಥದಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಆದಷ್ಟು ಶೀಘ್ರದಲ್ಲಿ ಹಳೆಯ ಅರಾಟೆ ಸೇತುವೆಯನ್ನು ಪುನರ್ ನಿರ್ಮಾಣ ಮಾಡಲು ಇಲಾಖಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತ್ತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಅವಿತಾ ಕೊರೆಯಾ, ಹರೀಶ್ ಬಿ, ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ  ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ, ಸುಜ್ಞಾನ ಎಜುಕೇಶನ್ ಟ್ರಸ್ಟ್‌ನಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ ನಡೆಯಿತು. ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬವೇ ನಾಗರಪಂಚಮಿ. ಇದು ಪರಿಸರದೊಂದಿಗೆ ಜೀವದ ಸಂಬಂಧ ಮತ್ತು ಸಾಂಸ್ಕೃತಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಸಂಭ್ರಮದ ಹಬ್ಬವಾಗಿದೆ. ಆಧುನಿಕ ಜೀವನದತ್ತ ಮುಖ ಮಾಡಿರುವ ಯುವಜನತೆಗೆ ಈಗ ಹಬ್ಬ ಹರಿದಿನಗಳ ಆಚರಣೆ, ಅದರ ಪ್ರಾಮುಖ್ಯದ ಬಗ್ಗೆ ಸರಿಯಾದ ಅರಿವಿಲ್ಲ! ಮಕ್ಕಳು ತಮ್ಮ ದಿನದ ಬಹುಪಾಲು ಸಮಯ ಕಳೆಯುವ ಶಾಲೆಯಲ್ಲಿ ನಮ್ಮ ಹಬ್ಬ ಹರಿದಿನಗಳ ಆಚರಣೆ, ಸಂಸ್ಕೃತಿಯ ಬಗ್ಗೆ ತಿಳಿಸಿಕೊಡುವುದು ಈಗ ಅಗತ್ಯ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರಣ್ಯ ಸ್ಕೂಲ್ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿಯನ್ನು ಅದ್ಧೂರಿಯಾಗಿ ಆಚರಿಸಿ ಮಕ್ಕಳಿಗೆ ನಾಗರಪಂಚಮಿಯ ಮಹತ್ವದ ಅರಿವು ಮೂಡಿಸಿದರು. ಶಾಲೆಯ ವಿದ್ಯಾರ್ಥಿಗಳು ನಾಗರ ಪಂಚಮಿ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮ ಪಟ್ಟರು. ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಖಜಾಂಚಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಅವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳಿಗೆ ಅಬಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿಯೇ ಏಕಾಗ್ರತೆ, ಆಸಕ್ತಿ, ಜೀವನದ ಸಂಸ್ಕಾರ ಮುಂತಾದವುಗಳಿಂದ ಯಶಸ್ಸು ಸಾಧಿಸಲು ಸಾಧ್ಯ ಜೊತೆಗೆ ಲಭ್ಯವಿರುವ ಉತ್ತಮ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಗುರಿಯನ್ನು ತಲುಪಬೇಕು. ಪೋಷಕರ ಕನಸನ್ನು ನನಸಾಗಿಸುವುದೇ ವಿದ್ಯಾರ್ಥಿಗಳ ಗುರಿಯಾಗಿರಬೇಕು. ಯಶಸ್ಸಿಗೆ ಸರಿಯಾದ ಯೋಜನೆಯೊಂದಿಗೆ ಪ್ರಾಮಾಣಿಕ ಪ್ರಯತ್ನವು ಅವಶ್ಯ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಸಂದೀಪ ಕೆ. ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೂರಜ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸೋಮವಾರದಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್‌ನ  ಓರಿಯೆಂಟೇಶನ್  ಕಾರ್ಯಕ್ರಮವು ಜರುಗಿತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಕಷ್ಟವೆಂದುಕೊಂಡರೆ ಎಲ್ಲವೂ ಕಷ್ಟವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯವಾಗುತ್ತದೆ. ಬದುಕಿನಲ್ಲಿ ಪರಿಶ್ರಮ ಅತೀ ಅಗತ್ಯ. ವಿದ್ಯಾರ್ಥಿ ಜೀವನವನ್ನು ಖುಷಿಯಿಂದ ಕಳೆಯುವುದರ ಜೊತೆಗೆ ಪರಿಶ್ರಮದ ಕಡೆ ಗಮನಹರಿಸಿ. ಇದರಿಂದ ನಿಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳಿದರು. ಹಾಗೇ ಸಿಎ, ಸಿಎಸ್ ಕೋರ್ಸ್ ಬಗ್ಗೆ ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಮಾಹಿತಿ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಸಿಎ ಮತ್ತು ಸಿಎಸ್ ಹುದ್ದೆಗಳಿಗೆ ಇರುವ ಬೇಡಿಕೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಸರಿಯಾದ ರೀತಿಯಲ್ಲಿ ಪರಿಶ್ರಮ ವಹಿಸಿದರೆ ಜೀವನದಲ್ಲಿ ಸಾಧನೆ ಮಾಡಬಹುದು. ಸವಾಲುಗಳನ್ನು ಎದುರಿಸಬಹುದು. ವಿದ್ಯಾರ್ಥಿಗಳಲ್ಲಿ ಆ ಶಕ್ತಿ ಇದೆ” ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಜನೆ ಎಂಬ ಮೂರಕ್ಷರಕ್ಕೆ ಬಹಳ ಮಹತ್ವವಿದ್ದು, ನಮ್ಮಿಂದ ಮನಃಪೂರ್ವಕವಾಗಿ ದೇವರಿಗೆ ನೀಡುವಂತಹ ಒಂದು ಭಾವನಾತ್ಮಕ ಸಂಪತ್ತು. ಭಜನೆಯನ್ನು ಭಕ್ತಿಪೂರ್ವಕವಾಗಿ ಅರ್ಪಿಸಿದರೆ ಭಗವಂತನಿಗೆ ಅದಕ್ಕಿಂತ ದೊಡ್ಡ ಹರಕೆಯಿಲ್ಲ ಎಂದು ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ ಕೆ. ಪೂಜಾರಿ ಹೇಳಿದರು. ಅವರು ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಭಾನುವಾರ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಡೆದ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ, ಹಾಗೂ ಭಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಲಿಯುಗದಲ್ಲಿ ಭಜನೆಯಿಂದ ಮಾತ್ರ ದೇವರ ಒಲಿಸಿಕೊಳ್ಳಬಹುದು. ಪ್ರಸ್ತುತ ಹಿರಿಯ ಭಜನಾ ಕಲಾವಿದರು ಭಜನೆಯನ್ನು ಶ್ರೇಷ್ಠತೆಯ ಕಡೆಗೆ ಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇನ್ನು ಮುಂದಕ್ಕೆ ಇಂದಿನ ಯುವ ಪೀಳಿಗೆ ಭಜನೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕಡೆಗೆ ಹಿರಿಯ ಭಜನಾ ಕಲಾವಿದರು ತಮ್ಮ ಸೇವೆಯನ್ನು ಮಡಿಪಾಗಿಡಬೇಕು ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಸಮಸ್ಯೆಗಳಿಗೆ ಅತೀ ದೊಡ್ಡ ಕಾರಣ ಬಿಜೆಪಿ ಶಾಸಕರು ಹಾಗೂ ಸಂಸದರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕಳೆದ ಮೂರು ಅವಧಿಯಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ ಆದರೆ ಇಲ್ಲಿಯ ತನಕ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಲು ಬಿಜೆಪಿ ಜನಪ್ರತಿನಿದಿನಗಳಿಗೆ ಸಾಧ್ಯವಾಗಲೇ ಇಲ್ಲಾ. ಹಿಂದೆ ಆಸ್ಕರ್ ಫೆರ್ನಾಂಡಿಸ್ ಕೇಂದ್ರ ಸಚಿವರಾಗಿರುವಾಗ ಸಂಬಂಧಿತ ಸಚಿವರು ಹಾಗೂ ಇಲಾಖಾ ಮುಖ್ಯಸ್ಥರುಗಳನ್ನು ಸೇರಿಸಿ ಹಲವು ಸಭೆಗಳನ್ನು ನಡೆಸಿ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮೀನುಗಾರಿಕಾ ದೋಣಿ ಹಾಗೂ ಬೊಟ್ ಗಳು ಸಾರಾಗವಾಗಿ ಸಂಚಾರ ಮಾಡಲು ಅಡೆತಡೆಗಳಾಗಿದ್ದ ಮರಳು ದಿಬ್ಬಗಳನ್ನು ತೆರವುಗೊಳಿಸುವುದು. ತೆರವುಗೊಳಿಸಿದ ಮರಳನ್ನು ಸಾರ್ವಜನಿಕ ಉಪಯೋಗಕ್ಕೆ ಮಾರಾಟ ಮಾಡಲು ಕೇಂದ್ರ ಸರ್ಕಾರದ ಮೂಲಕ ಆದೇಶ ಮಾಡಿಸಿದ್ದರು ಆದರೆ ರಾಷ್ಟ್ರೀಯ ಹಸಿರು ಪೀಠದಲ್ಲಿ ಈ ಬಗ್ಗೆ ಒಂದಷ್ಟು ಆಕ್ಷೇಪಗಳು ಸಲ್ಲಿಕೆಯಾಗಿ ಮರಳು ದಿಬ್ಬಗಳ ತೆರವಿಗೆ ತಾತ್ಕಾಲಿಕ ನಿಷೇದ ಬಂದ ನಂತರ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿ ಹಬ್ಬದ ಪೂಜೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಅರ್ಚಕರಾದ ರಾಜು ಭಟ್ಟರು ನಾಗದೇವರನ್ನು ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಮುಖ್ಯಸ್ಥೆ ಇಂದಿರಾ ಸುದರ್ಶನ ಗಾಣಿಗ, ಸದಸ್ಯರಾದ ಶೇಖರ್ ಬೈಂದೂರು, ಪ್ರಸನ್ನ ದೇವಾಡಿಗ ಬೈಂದೂರು ಹಾಗೂ ಯೋಗೇಂದ್ರ  ಗಾಣಿಗ ಉಪಸ್ಥಿತರಿದ್ದರು.

Read More