ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕರಾವಳಿಯ ಗಾನಕೋಗಿಲೆ ಖ್ಯಾತಿಯ ಭಾಗವತ ಕಾಳಿಂಗ ನಾವಡರ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದ್ದಾರೆ. ಈ ಹಿನ್ನಲ್ಲೆಯಲ್ಲಿ 16ನೇ ವರ್ಷದ 2025ರ ಸಾಲಿನ ಕಾಳಿಂಗ ನಾವಡ ಪ್ರಶಸ್ತಿಯನ್ನು ಸತತ 42 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ಹಾಲಾಡಿ ರಾಘವೇಂದ್ರ ಮಯ್ಯರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 12 ರಂದು ಸಂಜೆ ಬೆಂಗಳೂರಿನ ಬನಶಂಕರಿ 3ನೇ ವಿಭಾಗದಲ್ಲಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುಲ್ಲಿರುವ ಪರಂಪರ ಆಡಿಟೋರಿಯಮ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಅಲ್ಲದೆ ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ಫಲಕ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ಗ್ರಾಮದ ನಿವಾಸಿ ಸ್ವಾತಿ (30) ಅವರು ಇಲಿ ಪಾಷಣ ಸೇವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 9 ವರ್ಷದ ಹಿಂದೆ ಬಸ್ರೂರಿನ ಸತೀಶ್ ಅವರೊಂದಿಗೆ ಮದುವೆಯಾಗಿದ್ದು, ದಂಪತಿಗೆ 8 ವರ್ಷದ ಮಗನಿದ್ದಾನೆ. ಜೂ.27ರಂದು ಬೆಳಗ್ಗೆ ಮನೆಯಲ್ಲಿರುವಾಗ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮೃತರ ತಾಯಿ ನಾಗರತ್ನ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ವೈದ್ಯರ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಸನ್ಮಾನಿಸಲಾಯಿತು. ಡಿಸ್ಟ್ರಿಕ್ಟ್ ಲೀಡರ್ ಕೆ. ರಾಮನಾಥ್ ನಾಯಕ್, ಜೋನಲ್ ಲೀಡರ್ ಪ್ರದೀಪ್ ಡಿ. ಕೆ., ಉಮೇಶ್ ಮೇಸ್ತ, ನಿಕಟಪೂರ್ವ ಅಧ್ಯಕ್ಷೆ ಚಂದ್ರಕಲಾ ತಾಂಡೇಲ್, ಸದಸ್ಯರಾದ ಉದಯಶಂಕರ್ ರಾವ್, ವಾಸುದೇವ್ ಶೇರುಗಾರ್, ದಯಾನಂದ ಗಾಣಿಗ, ಗೋಪಾಲ್ ಬಿಲ್ಲವ, ಟಿ.ದಿನಕರ ಶೆಣೈ, ನಾರಾಯಣ ನಾಯ್ಕ್, ಗಿರೀಶ್ ಖಾರ್ವಿ, ಎಂ. ನಾಗೇಂದ್ರ ಪೈ, ಜಗದೀಶ್ ಪೂಜಾರಿ, ರತ್ನ ದೇವಾಡಿಗ, ಸುಮಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೃಷ್ಣ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. ನವಮಂಗಳೂರು ಬಂದರಿನ ಜೆಎಸ್‌ಡಬ್ಲ್ಯೂ ಕಂಟೇನರ್ ಟರ್ಮಿನಲ್‌ನೊಂದಿಗೆ ಅವರ ಅನುಭವವನ್ನು ಹಂಚಿಕೊಂಡ ಅವರು ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ ಕೊರತೆಯಿಂದ ಅನಿವಾರ್ಯವಾಗಿ ಗುಜರಾತ್ ಮತ್ತು ತಮಿಳುನಾಡಿನ ಸಿಬ್ಬಂದಿಯನ್ನು ನೇಮಿಸಬೇಕಾಯಿತು. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ನವೀನ ಉದ್ಯಮಗಳಿಗೆ ಅನುಗುಣವಾಗಿ ರೂಪಿಸಿಕೊಳ್ಳಬೇಕು, ಎಂದು ಅಭಿಪ್ರಾಯಪಟ್ಟರು. ಮುಖ್ಯವಾಗಿ ಈ ಉದ್ಯಮದಲ್ಲಿ ಕುತೂಹಲ, ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ಸ್ಪಷ್ಟ ಸಂವಹನ ಹಾಗೂ ತಂಡದ ಕಾರ್ಯತಂತ್ರ ಈ ಎಲ್ಲ ಕೌಶಲ್ಯಗಳು ನಿರ್ಣಾಯಕವಾಗಿರುತ್ತವೆ. ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿದ್ಯಾರ್ಥಿಗಳಿಗೆ ಶ್ರೇಷ್ಠ ವಿದ್ಯಾದಾನದ ಮೂಲಕ ಸಾಧನೆಗೈಯ್ಯುತ್ತಾ ಇಂದು ವಿಶ್ವಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿದೆ. ನ್ಯಾಷನಲ್ ಸ್ಕೂಲ್ ಅವಾರ್ಡ್ 2025 ರಲ್ಲಿ ರಾಷ್ಟ್ರೀಯ ಮಟ್ಟದ ಬೆಸ್ಟ್ ಡೇ ಕಮ್ ಬೋರ್ಡಿಂಗ್ ಸ್ಕೂಲ್ ಅವಾರ್ಡ್ ಮತ್ತು ಬೆಸ್ಟ್ ಪ್ರಿನ್ಸಿಪಾಲ್ ಪ್ರಮೋಟ್ಸ್ ಪ್ರೋಗ್ರೇಸ್ಸಿವ್ ಲರ್ನಿಂಗ್ – 2025 ಅವಾರ್ಡ್ ಎಂಬ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು. ಬೆಂಗಳೂರಿನ ಹೆಬ್ಬಾಳದ ಕೋರ್ಟ್ಯಾಟ್ ಮ್ಯಾರಿಯೋಟ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಡಾ. ರಾಜ್ ಕತ್ರೀ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಶಿಖಾ ದಿಲನ್ ಎಕ್ಸಿಕ್ಯೂಟಿವ್ ನಿರ್ದೇಶಕರು, ಅವರಿಂದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪರವಾಗಿ ಸಂಯೋಜಕರಾದ ಲತಾ ದೇವಾಡಿಗ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಐಐಟಿ ಬೆಂಗಳೂರು ಅಧ್ಯಕ್ಷ ಡಾ. ಸೌಮ್ಯ ನಾರಾಯಣನ್, ಟ್ರೇಡ್ ಕಮಿಷನರ್ ಡಾ. ಎಮ್.ಎಸ್. ಪ್ರಕಾಶ್, ಟ್ರಸ್ಟಿಗಳು, ರಾಷ್ಟ್ರೀಯ ಶಿಕ್ಷಣ ಸಮಿತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಶ್ರೀ ಸಿದ್ಧಿ ಶೈಕ್ಷಣಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡಹಡು ಹಿಂದೂ ರುದ್ರ ಭೂಮಿಯ ಮೇಲ್ಛಾವಣಿ ಶಿಥಿಲಗೊಂಡಿರುವುದನ್ನ ಮನಗಂಡ ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಸುಮಾರು 70,000 ವೆಚ್ಚದಲ್ಲಿ ಮೇಲ್ಚಾವಣಿಯೊಂದಿಗೆ ನವೀಕರಣಗೊಳಿಸಿ ಹಿಂದೂ ರುದ್ರ ಭೂಮಿ ಟ್ರಸ್ಟಿಗೆ ಇತ್ತೀಚಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಿಂದೂ ರುದ್ರ ಭೂಮಿಯ ಟ್ರಸ್ಟಿನ ಅಧ್ಯಕ್ಷ ನಾರಾಯಣ ಆಚಾರ್, ಸದಸ್ಯರಾದ ಪ್ರತಾಪ್ ಶೆಟ್ಟಿ, ಶಂಕರ್ ಕುಲಾಲ್ ಹಾಗೂ ಪಾಂಡೇಶ್ವರ ಪಂಚಾಯತಿನ ಅಧ್ಯಕ್ಷ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈ.ಬಿ ರಾಘವೇಂದ್ರ, ಚಂದ್ರಮೋಹನ್ ಪೂಜಾರಿ, ರವೀಶ್ ಶ್ರೀಯಾನ್, ಸುಜಾತ ವೆಂಕಟೇಶ್, ರೋಟರಿ ಕ್ಲಬ್‌ನ ಅಧ್ಯಕ್ಷ ಲೀಲಾವತಿ ಗಂಗಾಧರ ಹಾಗೂ ಕಾರ್ಯದರ್ಶಿ ಸುಲತ ಹೆಗ್ಡೆ, ಉಪಾಧ್ಯಕ್ಷ ರತ್ನ ಜೆ ರಾಜ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಟ್ರಸ್ಟ್ ಹಾಗೂ ಸ್ಥಳೀಯಾಡಳಿತ ರೋಟರಿ ಕ್ಲಬ್‌ಗೆ ಕೃತಜ್ಞತೆ ಸಲ್ಲಿಸಿತು. ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ವತಿಯಿಂದ ಪಾಂಡೇಶ್ವರ ಮೂಡಹಡು ಹಿಂದೂ ರುದ್ರ ಭೂಮಿಯ ನವೀಕರಿಸಿ ಇತ್ತೀಚಿಗೆ ಹಸ್ತಾಂತರಿಸಿತು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್. ಇ ಸ್ಕೂಲ್‌ನಲ್ಲಿ ಮಾದಕ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಪೀಳಿಗೆಯು ಮಾದಕ ವ್ಯಸನದಿಂದ ದೂರವಿದ್ದು ತಮ್ಮ ಅಮೂಲ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಶಾಲಾ ಪ್ರಾಂಶುಪಾಲ ನಿತಿನ್ ಡಿ ಅಲ್ಮೇಡಾ ಅವರು ಮಾದಕ ವ್ಯಸನದ ಬಗ್ಗೆ ವಿವರಿಸಿದರು. ವಿವಿಧ ಮಾದಕ ಪದಾರ್ಥಗಳ ಕುರಿತು ತಿಳಿಸಿ ಅದರ ಸೇವನೆಯಿಂದ ಮನುಷ್ಯನ ಮೆದುಳಿನ ಮೇಲಾಗುವ ಪರಿಣಾಮ ಹಾಗೂ ಅನಾಹುತಗಳ ಬಗ್ಗೆ ನಿದರ್ಶನಗಳೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಇಂತಹ ಮಾದಕ ವಸ್ತುಗಳ ಕುರಿತು ಅರಿವನ್ನು ಹೊಂದಿದ್ದು ಅದರಿಂದ ದೂರವಿರಬೇಕು ಎಂದು ತಿಳಿಸಿದರು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದು ತಿಳಿಸಿದರು. ವಿದ್ಯಾರ್ಥಿಗಳು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರದ 9/11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಮತ್ತು ವಿದ್ಯುತ್ ದರದ ಕುರಿತು ಬಿಜೆಪಿ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸಲಿದ್ದೇವೆ. ಗ್ರಾಮ ಪಂಚಾಯತಿಯ ಮುಂದೆ ಬಿಜೆಪಿ ಸುಳ್ಳು ಹೇಳಿ ನಡೆಸಿದ ಪ್ರತಿಭಟನೆಗೆ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ ಹಮ್ಮಿಕೊಂಡಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು. ಅವರು ಕುಂದಾಪುರ ಪುರಸಭೆ ಎದುರು ನಡೆದ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ ಮೊದಲ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 2 ವರ್ಷದ ಹಿಂದೆ ಬಿಜೆಪಿ ಸರಕಾರ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಸಂದರ್ಭ ಜಾರಿಗೆ ತಂದ 9/ 11 ಏಕ ನಿವೇಶನ , ಅಕ್ರಮ – ಸಕ್ರಮ ಯೋಜನೆಯಲ್ಲಿ 53 ಮತ್ತು 57 ರಲ್ಲಿ ಅರ್ಜಿ ತಿರಸ್ಕರಿಸಲು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉದ್ಯೋಗದಲ್ಲಿ ಇಚ್ಛಾಶಕ್ತಿ ಹಾಗೂ ಪ್ರಾಮಾಣಿಕತೆ ಅತೀ ಮುಖ್ಯವಾದ ಅಂಗಗಳು. ಜೊತೆಗೆ ಶಿಸ್ತು ಪಾಲನೆ ಹಾಗೂ ಸಮಯ ಪ್ರಜ್ಞೆಯನ್ನೂ ಅಳವಡಿಸಿಕೊಂಡಾಗ ಯಶಸ್ವೀ ಉದ್ಯಮಿಯಾಗಿ ಇತರರಿಗೂ ಮಾದರಿಯಾಗಿ ಬೆಳೆಯಬಹುದು. ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದು ಹಿರಿಯ ರಂಗ ಕಲಾವಿದ, ನಿರ್ದೇಶಕ ಕಂಚಿಕಾನ್ ರವೀಂದ್ರ ಕಿಣಿ ಹೇಳಿದರು. ಅವರು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಮಂಗಳವಾರ ನಡೆದ ಬೈಂದೂರು ವಲಯದ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 14ನೇ ವಾರ್ಷಿಕ ಮಹಾಸಭೆಯ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಸದಸ್ಯರ ಸಂಖ್ಯೆ ಹೆಚ್ಚಾದಂತೆ ಸಂಘಟನೆಯ ತಾಕತ್ತು ಬಲಗೊಳ್ಳುತ್ತದೆ. ಈ ಸಂಘಟನೆಯಲ್ಲಿ ಉದ್ಯಮದ ಮಾಲೀಕನೇ ನೌಕರನಾಗಿ ದುಡಿಯುತ್ತಿರುತ್ತಾನೆ. ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭಗಳು ಕಾರ್ಯಗಳು ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಪೈಪೋಟಿಗಿಳಿಯದೇ ಧನಾತ್ಮಕ ಚಿಂತನೆಗಳ ಮೂಲಕ ಸೌಹಾರ್ದಯುತವಾಗಿ ಸಮಾಜಕ್ಕೂ ನ್ಯಾಯ ಸಿಗುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದ ಜನಪ್ರಿಯ ಪೋರ್ಟಲ್ ಗಳಲ್ಲೆಲ್ಲ ಬಳಕೆದಾರ ಸ್ನೇಹಿ ತಂತ್ರಾಂಶ ಭಾಷೆ ಪೈತಾನ್ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಗಳನ್ನೇ ಹೆಚ್ಚಾಗಿ ಬಳಸುತ್ತಾರೆ ಎಂದು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡೀನ್ ಎಕಾಡೆಮಿಕ್ಸ್ ಸಹಾಯಕ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಅವರು ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ವಿಭಾಗ ಆಯೋಜಿಸಿದ ‘ಪೈತಾನ್ ಓರಿಯಂಟೇಶನ್ ‘ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಕಂಪ್ಯೂಟರ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಾಗುತ್ತಿರುವ ಕಲ್ಪನಾತೀತ ಬೆಳವಣಿಗೆ ಆವಿಷ್ಕಾರಗಳು ತಕ್ಷಣದಲ್ಲಿ ಉದ್ಯೋಗಾವಕಾಶಕ್ಕೆ ಧಕ್ಕೆ ಎನಿಸಿದರೂ, ಕಾಲಾಂತರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವುದೂ ಖಚಿತ. ಪ್ರತಿಭೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಬೇರೆ ಕ್ಷೇತ್ರಗಳಿಗಿಂತ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ಷಿಪ್ರವಾಗಿ ಉನ್ನತ ಸ್ಥಾನ ತಲುಪಬಹುದು ಎಂದರು. ಕುಂದಾಪುರದ ಎಮ್‌ಐಸಿಇ ಕಂಪ್ಯೂಟರ್ ಸಂಸ್ಥೆಯ ಪ್ರಾಂಶುಪಾಲರಾದ ವಾಲ್ಟರ್ ಫೆರ್ನಾಂಡೀಸ್ ಅವರು ಕಂಪ್ಯೂಟರ್ ತರಬೇತಿ ನೀಡುವ ತಮ್ಮ ಸುದೀರ್ಘ…
