ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಂಗಳೂರು ಗ್ರಾಮದ ಶ್ರೀನಿವಾಸ ಅವರ ಪುತ್ರ ಶರತ್ (35) ಅವರು ಮಲಗಿದಲ್ಲೇ ಮೃತಪಟ್ಟಿದ್ದಾರೆ. ಜೂ. 23ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದವರು ಜೂ. 24ರಂದು ಬೆಳಗಿನ ಜಾವ ಶರತ್ ತನಗೆ ಎದೆ ನೋವು ಬರುತ್ತಿದೆ ಎಂದು ಹೇಳಿ ವಾಂತಿ ಮಾಡಿಕೊಂಡರು. ಕೂಡಲೇಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಶರತ್ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ’ವಿಶ್ವ ತಂಬಾಕು ರಹಿತ ದಿನದ’ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು. ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳ ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು. ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ 2025-26ನೇ ಸಾಲಿಗೆ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಮನಾಥ ಚಿತ್ತಾಲ್, ಉಪಾಧ್ಯಕ್ಷರಾಗಿ ಉದಯಶಂಕರ ರಾವ್, ಜತೆ ಕಾರ್ಯದರ್ಶಿಯಾಗಿ ಗೋಪಾಲ ಬಿಲ್ಲವ, ಖಜಾಂಚಿ ಜನಾರ್ದನ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ಕ್ಲಬ್ ಲರ್ನಿಂಗ್ ಫೆಸಿಲಿಟಿಸ್ ಎಚ್. ಗಣೇಶ ಕಾಮತ್, ಸಾರ್ಜಂಟ್ ಅಟ್ ಆರ್ಮ್ಸ್ ಬಿ. ಲಕ್ಷ್ಮೀಕಾಂತ ಮಡಿವಾಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಮಾಲಾಶ್ರೀ ಖಾರ್ವಿ, ವೊಕೆಶನಲ್ ಸರ್ವಿಸ್ ಗಿರೀಶ್ ಖಾರ್ವಿ, ಕಮ್ಯುನಿಟಿ ಸರ್ವಿಸ್ ರಾಮನಾಥ ನಾಯಕ್, ಇಂಟರ್ ನ್ಯಾಶನಲ್ ಸರ್ವಿಸ್ ರಾಘವೇಂದ್ರ ಮೇಸ್ತ, ಯೂತ್ ಸರ್ವಿಸ್ ಸುಗುಣ ಆರ್.ಕೆ., ಚೇರ್ಮೆನ್ಗಳಾಗಿ ಉಮೇಶ ಮೇಸ್ತ, ರಾಜೇಶ ಎಂ.ಜಿ., ದಿನಕರ ಶೆಣೈ ಟಿ., ಪ್ರದೀಪ್ ಡಿ.ಕೆ., ನಾಗೇಂದ್ರ ಪೈ, ವಾಸುದೇವ ಶೇರುಗಾರ್, ನಾರಾಯಣ ಇ.ನಾಯ್ಕ್ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (ಐಎಟಿ –2025) ಫಲಿತಾಂಶವನ್ನು ಜೂ. 24 ರಂದು ಪ್ರಕಟಿಸಲಾಗಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಮೋಹಿತ್ ಎಂ. ಅವರು ರಾಷ್ಟ್ರಮಟ್ಟದಲ್ಲಿ 4ನೇ ರ್ಯಾಂಕ್ (ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ್ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (ಐಐಎಸ್ಇಆರ್) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ. ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್. 1718 ( ಕೆಟಗರಿ ರ್ಯಾಂಕ್ 314 ), ತೇಜಸ್ ವಿ. ನಾಯಕ್ 2423 ( ಕೆಟಗರಿ ರ್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಲಕ/ಪೋಷಕರಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಈ ಸಂದರ್ಭದಲ್ಲಿ ಐ.ಸಿ.ಎಸ್.ಇ ಪಠ್ಯಕ್ರಮ, ಪರೀಕ್ಷೆಗಳು, ವಿದ್ಯಾರ್ಥಿಗಳ ಮನೆಗೆಲಸ, ವಿದ್ಯಾರ್ಥಿಗಳ ವರ್ತನೆ ಮತ್ತು ದಿನಚರಿಯ ಕುರಿತು ಶಿಕ್ಷಕಿಯರಾದ ಶ್ರುತಿ, ಫರ್ನಾಜ್, ದೀಪಿಕಾ ಮತ್ತು ಜ್ಯೋತಿ ಜಿ. ಅವರು ಸಂಪೂರ್ಣವಾದ ಮಾಹಿತಿಯನ್ನು ಪಾಲಕರಿಗೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ತಮ್ಮ ನುಡಿಯಲ್ಲಿ ‘ಪೋಷಕರು ಮತ್ತು ಶಾಲೆ ಒಟ್ಟಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಮಕ್ಕಳ ನಿಜವಾದ ಬೆಳವಣಿಗೆ ಸಾಧ್ಯ’ ಎನ್ನುತ್ತಾ ಪಾಲಕ/ಪೋಷಕರ ಶ್ರದ್ಧೆ ಮತ್ತು ಉತ್ಸುಕತೆಯನ್ನು ಶ್ಲಾಘಿಸಿದರು. ಮಕ್ಕಳಿಗೆ ನಾವೇ ಮಾದರಿಯಾಗಿ ಹೇಗೆ ಮಾರ್ಗದರ್ಶನ ಮಾಡಬಹುದೆಂಬುದರ ಬಗ್ಗೆ ಹೇಳುತ್ತಾ ಅವರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದರು. ವೇದಿಕೆಯಲ್ಲಿ ಆಡಳಿತಾಧಿಕಾರಿಯವರಾದ ವೀಣಾರಶ್ಮಿ ಎಂ., ಉಪಪ್ರಾಂಶುಪಾಲರಾದ ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು 300 ಟ್ರೀಸ್ ಉಪಕ್ರಮದ ಅಡಿಯಲ್ಲಿ ಕೆನರಾ ಬ್ಯಾಂಕ್ ಸಿದ್ದಾಪುರ, ಕಾಲಭೈರವೇಶ್ವರ ಎಂಟರ್ಪ್ರೈಸಸ್ ಬೆಂಗಳೂರು, ರೋಟರಿ ಕ್ಲಬ್ ಸಿದ್ದಾಪುರ ಹೊಸಂಗಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳವಾರದಂದು ಹಳ್ಳಿಹೊಳೆ ಗ್ರಾ. ಪಂ. ವ್ಯಾಪ್ತಿಯ ಎಲ್ಲಾ ಶಾಲಾ ಮಕ್ಕಳಿಗೆ ಕೊಡೆ ವಿತರಣೆ ಹಾಗೂ ಕೆರಾಡಿ, ಆಜ್ರಿ, ಭಾಗದ ಆಯ್ದ ಶಾಲೆಗಳಿಗೆ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟೆಹೊಳೆ ಅವರು ಉದ್ಘಾಟನೆ ಮಾಡಿದರು. ಕೆನರಾ ಬ್ಯಾಂಕ್ ನಿಂದ 2 ಲಕ್ಷ ಮೌಲ್ಯದ ಪಿಟೋಪಕರಣ, ಸಂಘ ಸಂಸ್ಥೆ ಗಳಿಂದ 15 ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಕಲಿಕಾ ಸಾಮಗ್ರಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು. ಹಳ್ಳಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ನಾಗೇಶ್ ನಾಯ್ಕ, ಆಜ್ರಿ ಮಾನಂಜೆಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ದೇಗುಲ್ ವ್ಯವಸ್ಥಾಪಕ ಗಣೇಶ್ ಹೊಳ್ಳ, ಯುವ ಕಾಂಗ್ರೆಸ್ ಯುವ ಮುಖಂಡ ಅಜಿತ್ ಶೆಟ್ಟಿ ಯಾಳಹಕ್ಲು, ಕಾಂಗ್ರೆಸ್ ಸ್ಥಳೀಯ ಮುಖಂಡರಾದ ದೇವೇಂದ್ರ ಗಾಣಿಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿಕ್ಷಣ ತಜ್ಞ, ನಿವೃತ್ತ, ಪ್ರಾಂಶುಪಾಲ ಡಾ. ಜಿ. ಹೆಚ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಅಕ್ಷರಾಭ್ಯಾಸದ ಜೊತೆ ಸಂಸ್ಕಾರವನ್ನು ಕೊಟ್ಟು ಮಕ್ಕಳನ್ನು ಬೆಳೆಸಬೇಕು. ಪೋಷಕರು ಮಕ್ಕಳ ಆಸಕ್ತಿಯನ್ನು ತಿಳಿದು ಆ ವಿಷಯದಲ್ಲಿ ಶಿಕ್ಷಣವನ್ನು ನೀಡಬೇಕೆ ಹೊರತು ಮಾನಸಿಕ ಒತ್ತಡವನ್ನು ಹಾಕಬಾರದು ಎಂದು ತಿಳಿಸಿದರು. ಮಕ್ಕಳ ಮಾನಸಿಕ ಬೆಳವಣಿಗೆಯ ಜೊತೆಗೆ ಮಕ್ಕಳ ದೈಹಿಕ ಬೆಳವಣಿಗೆಗೆ ಪೂರಕವಾದ ಪೌಷ್ಠಿಕ ಆಹಾರದ ಬಗ್ಗೆ ಪೋಷಕರಿಗೆ ಅರಿವಿರಬೇಕು. ಮಾರುಕಟ್ಟೆಯಲ್ಲಿ ದೊರಯುವ ವಿವಿಧ ಪಾನೀಯಗಳು ಹಾಗೂ ವಿಷಯುಕ್ತ ಕಲಬೆರಕೆ ಆಹಾರದಿಂದ ಮಕ್ಕಳ ಆರೋಗ್ಯದ ಮೇಲಾಗುವ ಪರಿಣಾಮ ಹಾಗೂ ಕಾಯಿಲೆಗಳನ್ನು ನಿದರ್ಶಗಳೊಂದಿಗೆ ತಿಳಿಸಿ ಪೋಷಕರನ್ನು ಎಚ್ಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪೋಷಕರ ಸಹಕಾರಕ್ಕೆ ಕೃತಜ್ಷತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಇನ್ನಷ್ಟು ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಯುವ ಕಾಂಗ್ರೆಸ್ ಸಮಿತಿ ಬೈಂದೂರು ವಿಧಾನಸಭಾ ಕ್ಷೇತ್ರ’ ಇದರ ವತಿಯಿಂದ ‘ಯುವ ಸಂಕಲ್ಪ’ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಐರ್ಬೈಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಶೆಟ್ಟಿ ಮಾತನಾಡಿದರು. ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ, ಸಿದ್ದಾಪುರ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಲಾಲ್ ಜನ್ಸಾಲೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸವಿತಾ ಪೂಜಾರಿ, ಸಂಜೀವ್ ಪೂಜಾರಿ (ಗಾಂಧಿ ಪೂಜಾರಿ), ಕಿರಣ್ ಜನ್ಸಾಲೆ, ಆಕಾಶ್, ಕೃಷ್ಣ ಪೂಜಾರಿ, ಹರೀಶ್ ಪೂಜಾರಿ, ಸುರೇಶ್ ಪೂಜಾರಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
