ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪ್ರಧಾನ ಅಂಚೆ ಕಚೇರಿಯಲ್ಲಿ ಪಂಚಗಂಗಾವಳಿ ಶಾಶ್ವತ ಅಂಚೆ ಮೊಹರು ಶುಕ್ರವಾರದಂದು ಬಿಡುಗಡೆಗೊಂಡಿತು. ಉಡುಪಿ ವಿಭಾಗದ ಅಂಚೆ ಇಲಾಖೆಯ ಅಧೀಕ್ಷಕ ರಮೇಶ ಪ್ರಭು ಅಧಿಕೃತವಾಗಿ ಅತಿಥಿಗಳ ಸಮ್ಮುಖದಲ್ಲಿ ಚಾಲನೆ ನೀಡಿದರು. “ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ’ಪಂಚಗಂಗಾವಳಿ’ ಬಗ್ಗೆ ತುಂಬ ಕುತೂಹಲ ಹೊಂದಿದ್ದರು. ಕುಂದಾಪುರದ ಮಹತ್ವ ತಿಳಿಸುವ, ಮೊಹರು ಮಾಡಬೇಕೆಂಬ ಆಶಯ ನಮಗಿತ್ತು. ’ಪಂಚಗಂಗಾವಳಿ’ನದಿಗಳು ಕುಂದಾಪುರ ತಾಲೂಕಿನಲ್ಲಿ ಹರಿಯುತ್ತಿದ್ದು, ದೇಶದಲ್ಲೇ ವಿಶಿಷ್ಟ ಸ್ಥಾನ ಹೊಂದಿದೆ ಎಂದು ಅರಿತ ಮೇಲೆ ಇಲಾಖೆಯ ಒಪ್ಪಿಗೆ ದೊರಕಿತು. ಅಂಚೆ ಚೀಟಿ ಸಂಗ್ರಾಹಕರೂ ಖುಷಿ ಪಟ್ಟರು. ಈ ಮೊಹರನ್ನು ಅಂಚೆ ಕಾರ್ಡು, ಕವರ್‌ಗಳಿಗೆ ಹಾಕಿಸುವ ಮೂಲಕ ಹೆಚ್ಚು ಜನಪ್ರಿಯ ಮಾಡಬಹುದು. ಎಂದು ರಮೇಶ ಪ್ರಭು ತಿಳಿಸಿದರು. ಮೊಹರು ರಚನೆಗೆ ಸಹಕಾರ ನೀಡಿದ ಪಂಚಗಂಗಾವಳಿ ಸಮಿತಿಯ ಸಂಚಾಲಕ ಯು. ಎಸ್. ಶೆಣೈ, ಹಿರಿಯ ಅಂಚೆ ಚೀಟಿ ಸಂಗ್ರಾಹಕ ಕೃಷ್ಣಯ್ಯ ಉಡುಪಿಯವರನ್ನು ಅವರು ಅಭಿನಂದಿಸಿದರು. “ಜಿಲ್ಲೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ, ರಾಜ್ಯ ಮಾಜಿ ಆಯುಕ್ತರು, ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಕರ್ನಾಟಕ ಸರಕಾರ ಇವರಿಂದ ವಿಶೇಷ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವು ಮೇ. 26 ಸೋಮವಾರದಂದು ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಅವರು ವಹಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಸಿ.ಎ ನಾಗರಾಜ್ ಆಚಾರ್ಯ, ಲೆಕ್ಕ ಪರಿಶೋಧಕರು ಮತ್ತು ಕಾನೂನು ತಜ್ಞರು ಬೆಂಗಳೂರು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಕಾರ್ಯಕ್ರಮದಲ್ಲಿ ಉಪಸ್ಥಿತರಲಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಕನ್ನಡ ಭಾಷೆ ಕಲಿತು ಗ್ರಾಹಕರೊಡನೆ ವ್ಯವಹಾರ ಮಾಡುವ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಪ್ರಿಯಾಂಕ ಸಿಂಗ್ ನಾನು ಕನ್ನಡದಲ್ಲಿ ಮಾತನಾಡುವುದಿಲ್ಲ, ಇದು ಭಾರತ ನಾನು ಹಿಂದಿಯಲ್ಲೇ ಮಾತನಾಡುತ್ತೇನೆ, ಬೇಕಿದ್ದರೆ ಬನ್ನಿ ಎಂದು ವಾದ ಮಾಡಿದ್ದು,ರಾಜ್ಯದ ಸರ್ವ ಕನ್ನಡಿಗರಿಗೆ ನೋವುಂಟು ಮಾಡಿದೆ. ಅಲ್ಲದೇ ಬ್ಯಾಂಕ್ ಮ್ಯಾನೇಜರ್ ಉದ್ಧಟತನದಿಂದ ಆಡಿದ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನಮಂತ್ರಿ ಹಲವಾರು ಬಾರಿ ಭಾಷೆಯ ಬಗ್ಗೆ ಪುನರುಚ್ಚರಿಸುತ್ತ, ಕೇಂದ್ರ ಸರಕಾರದ ಎಲ್ಲಾ ಕಚೇರಿಗಳಲ್ಲಿ ಸ್ಥಳೀಯ ಆಡಳಿತಾತ್ಮಕ ಭಾಷೆಯಲ್ಲಿಯೇ ವ್ಯವಹರಿಸಬೇಕೆಂದು ನಿರ್ದೇಶನ ನೀಡಿದ್ದರು. ಆದರೂ ರಾಷ್ಟ್ರೀಕೃತ ಬ್ಯಾಂಕಿನ ಸಿಬ್ಬಂದಿ ಕನ್ನಡದ ಬಗ್ಗೆ ಅಗೌರವವನ್ನು ತೋರಿ ಬ್ಯಾಂಕಿನ ಗ್ರಾಹಕರಿಗೆ ಕಿರುಕುಳವನ್ನು ಕೊಡುತ್ತಿರುವುದು ಬಹಳ ನೋವನ್ನುಂಟು ಮಾಡಿದೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಿಬ್ಬಂದಿಗಳು ಅನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೋಡಾನ್‌ನಲ್ಲಿ ಇರಿಸಲಾದ ಸಾವಿರಾರು ರೂ. ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರುಕಳವು ಮಾಡಿರುವ ಘಟನೆ ಇಲ್ಲಿನ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ನಡೆದಿದೆ. ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್‌ನಲ್ಲಿ ಇಟ್ಟಿದ್ದು, ಮೇ. 15ರಿಂದ ಮೇ. 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರಳುಗಾರಿಕೆಗೆ ಬಳ್ಕೂರು ಉಪ್ಪು ನೀರು ಸಂಗ್ರಹ ಆಣೆಕಟ್ಟು ಮತ್ತು ಕಂಡ್ಲೂರು ಸೇತುವೆ ನಡುವೆ ಅವಕಾಶ ನೀಡಬಾರದು ಎಂದು ಬಸ್ರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಬಳ್ಕೂರು ಬಳಿ ವರಾಹಿ ನೀರಾವರಿ ನಿಗಮದಿಂದ ನಿರ್ಮಾಣಗೊಂಡಿರುವ ಉಪ್ಪು ನೀರು ತಡೆ ಆಣೆಕಟ್ಟುವಿನಿಂದ ಕುಂದಾಪುರ ಪುರಸಭೆ ಮಾತ್ರವಲ್ಲದೆ ಸುಮಾರು ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಗಳಿಗೆ ಶುದ್ಧ ಕುಡಿಯುವ ಸಿಹಿ ನೀರು ದೊರಕುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದಲ್ಲಿ ಈ ಉಪ್ಪು ನೀರು ತಡೆ ಆಣೆಕಟ್ಟುವಿನ ಸ್ವಯಂ ಚಾಲಿತ ಗೇಟ್ ಹಾಗೂ ಪಿಲ್ಲರ್ ಗಳಿಗೆ ಹಾನಿಯಾಗಲಿದೆ. ಹಾಗೂ ಈ ಆಣೆಕಟ್ಟುವಿನ ಮೇಲ್ಬಾಗದಲ್ಲಿ ಕಂಡ್ಲೂರು ಸೇತುವೆಯಿದ್ದು ಅದು ಈಗಾಗಲೇ ಶಿಥಿಲಗೊಂಡಿದ್ದು ಇಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದರೆ ಈ ಸೇತುವೆ ಕೂಡ ಕುಸಿಯುವ ಭೀತಿಯಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ಆಣೆಕಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೇ ಶೇ. 35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ, ಮೂಲ ದಾಖಲೆಯೊಂದಿಗೆ ಸಂಸ್ಥೆಗೆ ಭೇಟಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂರವಾಣಿ ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.40 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ. ನಾಯಕ್ (ಎಐಆರ್ 101), ಟಿ. ಪ್ರದೀಪ್ (ಎಐಆರ್ 117), ಮೋನಿಕಾ ಕೆ. ಎ (ಎಐಆರ್ 140), ಸುಧಾಂಶು ಪಾಲೇಕರ್ (ಎಐಆರ್ 268), ಪ್ರತಿಕ್ ಎನ್. ಶೆಟ್ಟಿ (ಎಐಆರ್ 362), ತ್ರಿಶ್ಲಾ ಗಾಂಧಿ (ಎಐಆರ್ 423), ರೋಹಿತ್ ಜಿ. ಬಿ. (ಎಐಆರ್ 461), ಸಾಚಿ ಶಿವಕುಮಾರ್ (ಎಐಆರ್ 484), ಚಿನ್ಮಯಿ ಆರ್ (ಎಐಆರ್ 519), ಮನೋಜ್ ಎಂ. ಆರ್ (ಎಐಆರ್ 846), ಚೇತನ್ ಗೌಡ (ಎಐಆರ್ 867), ಆಕಾಶ್ ದೇವಾಡಿಗ (ಎಐಆರ್ 980) ಕೆಟಗರಿ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. 500…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಶುಕ್ರವಾರದಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ರಕ್ತನಿಧಿ ಕೇಂದ್ರದ ಕಾರ್ಯವೈಖರಿಯ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷ ಪ್ರಜ್ಞೇಶ ಪ್ರಭು, ಕಾರ್ಯದರ್ಶಿ ಡಾ. ರವೀಂದ್ರ, ಸದಸ್ಯರಾದ ನವೀನ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಡಾ. ಜಯರಾಮ್ ನಂಬಿಯಾರ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ್ ಪುರಾಣಿಕ್, ಖಜಾಂಚಿ ಶಿವರಾಮ್ ಶೆಟ್ಟಿ, ಸದಸ್ಯರಾದ ಸೀತರಾಮ್ ಶೆಟ್ಟಿ, ಎ. ಮುತ್ತಯ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನ ಹೊಂದಿದ್ದಾರೆ. ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು. ಮೃತರು ಮೂವರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂದು ತಪ್ಪಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಅನೇಕ ಕಾಯಿಲೆಗಳು ಬರುತ್ತವೆ ಅದಕ್ಕಾಗಿ ನಮ್ಮ ಸುತ್ತಮುತ್ತಲ ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ಉಪಯೋಗಿಸಬೇಕು. ಅಲ್ಲದೆ ದೀರ್ಘಕಾಲಿನ ಕೆಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಉತ್ತಮ ಪರಿಹಾರಗಳವೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಕಾಲ್ತೋಡು ಆಯುರ್ವೇದ ಆಸ್ಪತ್ರೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಕುಂದಾಪುರ ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೇಮಾನಂದ್ ಹೇಳಿದರು. ಅವರು ಉಡುಪಿಯ ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕಾಲ್ತೋಡು ಗ್ರಾಮ ಪಂಚಾಯತ್ , ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಾಲ್ತೋಡು ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್), ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ತೋಡು ಸರಕಾರಿ…
