ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಮತ್ತು ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ “ಕುಸ್ತಿ ಪಂದ್ಯಾಟ”-2026 ಉದ್ಘಾಟನಾ ಸಮಾರಂಭ ನಡೆಯಿತು . “ಕುಸ್ತಿ ಪಂದ್ಯಾಟ-2026″ದ ಅಂತಿಮ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಜಯಗಳಿಸಿತು . ಬ್ರಹ್ಮಾವರದ ಎಸ್.ಎಮ್.ಎಸ್ ಪದವಿಪೂರ್ವ ಕಾಲೇಜು ರನ್ನರ್ ಆಫ್ ಸ್ಥಾನ ಪಡೆಯಿತು ಬ್ರಹ್ಮಾವರ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಸ್ತಿ ಆಟವು ಭಾರತದ ಸಾಂಸ್ಕೃತಿಕ ಕಲೆಯಾಗಿದೆ . ಇಂತಹ ಪಂದ್ಯಾಟಗಳ ಮೂಲಕ ಕುಸ್ತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕರ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕುಂದಾಪುರ ಪದವಿಪೂರ್ವ ವಿಭಾಗದ ಕ್ರೀಡಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್ಕೆಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಎಚ್ ಡುಂಡಿರಾಜ್ ಅವರ 100ನೇ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ 70ನೇ ವರ್ಷದ ಅಭಿನಂದನೆ ಮತ್ತು ಖ್ಯಾತ ಸಾಹಿತಿಗಳಾದ ಬಿಆರ್ ಲಕ್ಷ್ಮಣರಾವ್ ಅವರ ಪುಸ್ತಕ ಬಿಡುಗಡೆ ಹಾಗೂ 80ನೇ ವರ್ಷದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಚ್. ಡುಂಡಿರಾಜ್ ಅವರ ‘ಕಾವ್ಯ ಡುಂಡಿಮ’ ಮತ್ತು ಬಿಆರ್ ಲಕ್ಷ್ಮಣ ರಾವ್ ಅವರ ‘ಸಾವೇ ಬೀಗಬೇಡ’ ಹಾಗೂ ‘ಓಶೋ ರಜನೀಶ್ ನಿಜರೂಪ’ ಎಂಬ ಕೃತಿಗಳು ಲೋಕಾರ್ಪಣೆಗೊಂಡವು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ನಮ್ಮ ಕ್ರಿಯೇಟಿವ್ ಪುಸ್ತಕ ಮನೆ ನಮ್ಮ ನಾಡಿನ ಖ್ಯಾತ ಬರಹಗಾರರ ಕೃತಿಗಳನ್ನು ಪ್ರಕಾಶನ ಮಾಡಲಾಗುತ್ತಿದೆ. ಹೂವಿನಲ್ಲಿ ಹೇಗೆ ದುಂಬಿಗಳಿರುತ್ತವೋ ಹಾಗೆ ಕನ್ನಡ ಸಾಹಿತ್ಯದಲ್ಲಿ ಡುಂಡಿರಾಜರು ಹಾಗೂ ಕನ್ನಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಸೇವೆಗಳನ್ನು ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಪಡೆದಿದ್ದು ಹಲವು ಸಮಯಗಳಿಂದ ಬಾಕಿಯಿದ್ದ ಕಡತಗಳ ಪರಿಶೀಲನೆ ಜೊತೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಮಧ್ಯಾಹ್ನದವರೆಗೂ ಮುಂದುವರೆದಿದ್ದು, ಗ್ರಾ.ಪಂ ಸಂಬಂಧಿತ ಬಾಕಿ ಕಡತಗಳು, ದಾಖಲೆ ಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿದರು.ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ, ಸಿಬ್ಬಂದಿಗಳಾದ ಅರುಣ ಕುಮಾರ್, ಅಬ್ದುಲ್ ಜಲಾಲ್, ಆದರ್ಶ, ಸೂರಜ್ ಕಾಪು ಮೊದಲಾದವರು ಕಾರ್ಯಾಚರಣೆಯಲ್ಲಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸ್ಟೆಲಾ ಮ್ಯಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ವರ್ಷದ ಬಾಲಕ- ಬಾಲಕಿಯರ ನೆಟ್ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಬಾಲಕರ ತಂಡದಲ್ಲಿ ಸಮರ್ಥ್, ಸಮರ್ಥ್ ಖಾರ್ವಿ, ವೈಭವ್, ನಾಗರಾಜ್, ಅರವ್, ವಿಗ್ನೇಶ್, ಯಶ್ವಿಕ್, ಮೌನೇಶ್, ನಿಯಾನ್ ಮತ್ತು ಬಾಲಕಿಯರ ತಂಡದಲ್ಲಿ ಮನ್ವಿತಾ, ಸನ್ನಿಧಿ, ಶ್ರೀ ಲಕ್ಷ್ಮಿ, ಅಪೇಕ್ಷಾ, ಧನ್ಯ ಖಾರ್ವಿ, ಸನ್ನಿಧಿ ಖಾರ್ವಿ, ಶ್ರಾವಣಿ, ಅನ್ವಿತಾ, ಆಶೀತಾ ಖಾರ್ವಿ, ಅದಿತಿ ಪ್ರತಿನಿಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ-ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಗುರುವಾರ ಸಾಲಿಗ್ರಾಮದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ ಪೌರೋಹಿತ್ಯದಲ್ಲಿ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ಯ ದಂಪತಿಗಳ ಸಮ್ಮುಖದಲ್ಲಿ ನೆರವೇರಿತು. ಅಪರಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರಗಿತು. ಈ ಅಂಗವಾಗಿವ .ಅಪರಾಹ್ನ 2.30ರಿಂದ ಎಂ. ಹೆಚ್. ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರಿಂದ ‘ಭೀಷ್ಮ ವಿಜಯ ಯಕ್ಷಗಾನ ಪ್ರಸಂಗ ಅಭಿನಯ.ಅತಿಥಿ ಕಲಾವಿದರಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಭಾಗವತರಾಗಿ ಭಾಗಿಯಾದರು. ರಾತ್ರಿ 9.00 ರಿಂದ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ’ಕಲಾ ವೇದಿಕೆ – 2026ʼ ಸಂಗೀತ, ನೃತ್ಯ ಮತ್ತು ಗಾನ ವೈಭವ ಮನೋರಂಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕರ್ನಾಟಕ ಸಂಘ ಕತಾರ್ (KSQ) ನಿಯೋಗದ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ, ಉಪಾಧ್ಯಕ್ಷರಾದ ಅನಿಲ್ ಭಾಸಗಿ, ಕಾರ್ಯಕಾರಿ ಸಮಿತಿ ಸದಸ್ಯರು, ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ ಶೆಟ್ಟಿ, ಸಲಹೆಗಾರರಾದ ವೀರೇಶ್ ಮಣ್ಣಂಗಿ ಹಾಗೂ ಸಂದೀಪ್ ರೆಡ್ಡಿ (ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಮಿತಿಯಲ್ಲಿ ಕರ್ನಾಟಕದ ಪ್ರತಿನಿಧಿ) ಅವರೊಂದಿಗೆ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿ, ಭಾರತೀಯ ರಾಯಭಾರ ಕಚೇರಿ, ದೋಹಾದ ಉಪ ರಾಯಭಾರ ಮುಖ್ಯಸ್ಥರು (DCM) ಸಂದೀಪ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ ಸಲ್ಲಿಸಿತು. ಈ ಸಂದರ್ಭದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕ ಸಂಘ ಕತಾರ್ಗೆ ನೀಡಿದ ಅತ್ಯುತ್ತಮ ಮಾರ್ಗದರ್ಶನ, ನಿರಂತರ ಪ್ರೋತ್ಸಾಹ ಹಾಗೂ ಅಚಲ ಬೆಂಬಲಕ್ಕಾಗಿ KSQ ನಿಯೋಗವು ಸಂದೀಪ್ ಕುಮಾರ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿತು. ಸಂಘದ ವಿವಿಧ ಸಮುದಾಯ ಉಪಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಹಾಗೂ ನಿರಂತರ ಮಾರ್ಗದರ್ಶನವನ್ನು ನಿಯೋಗವು ವಿಶೇಷವಾಗಿ ಸ್ಮರಿಸಿತು. ಅವರ ಬೆಂಬಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಹಿಳೆಯರ ಆರ್ಥಿಕ ಸಬಲೀಕರಣವು ಕುಟುಂಬದ ಅಭಿವೃದ್ಧಿಯಷ್ಟೇ ಅಲ್ಲದೆ, ಸಮಾಜದ ಪ್ರಗತಿಗೂ ಪ್ರಮುಖ ಆಧಾರವಾಗಿದೆ. ಮಹಿಳೆಯರಲ್ಲಿರುವ ಕೌಶಲ್ಯಕ್ಕೆ ಸೂಕ್ತ ವೇದಿಕೆ ಹಾಗೂ ಮಾರುಕಟ್ಟೆ ದೊರೆತಾಗ ಅದು ಸ್ವಾವಲಂಬನೆ ಮತ್ತು ಆರ್ಥಿಕ ಸ್ವಾತಂತ್ರ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಆಳ್ವಾಸ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ವೇದಿಕೆ ‘ಸಕ್ಷಮಾ’ ಹಾಗೂ ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಸಹಯೋಗದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಆಸಕ್ತ ಗೃಹಿಣಿಯರು, ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ಹಾಗೂ ಹವ್ಯಾಸಿ ಕಸೂತಿ ಕಲಾವಿದೆಯರಿಗಾಗಿ ಆಯೋಜಿಸಿರುವ ‘ಆರಿ ಲಹರಿ’ 15 ದಿನಗಳ ಉಚಿತ ಆರಿ ಕಸೂತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇಂತಹ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಮಹತ್ವದ ಕೊಡುಗೆ ನೀಡುತ್ತವೆ. ಮಹಿಳೆಯರು ತಮ್ಮಲ್ಲಿರುವ ಕೌಶಲ್ಯವನ್ನು ಗುರುತಿಸಿ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಆರ್ಥಿಕ ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು. ಕೌಶಲ್ಯವು ಕೇವಲ ವೈಯಕ್ತಿಕ ಆಸಕ್ತಿಯಾಗಿ ಉಳಿಯದೆ, ಆದಾಯದ ಮೂಲವಾಗಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ/ಕೃಷಿ ಪಂಡಿತ ಯೋಜನೆಯಡಿ ಪ್ರತಿ ಹಂತದಲ್ಲಿ 3 ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಪಡೆಯಲಾಗುತ್ತಿದ್ದು ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್ನಡಿ RSK Loginಅಥವಾ Citizen Loginಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಕೇಂದ್ರ/ಸ್ವತಃ ಆಸಕ್ತ ರೈತ/ರೈತ ಮಹಿಳೆಯರು ಪ್ರತ್ಯೇಕವಾಗಿ ರೈತರ FID ಅನ್ನು ಬಳಸಿಕೊಂಡು ಆನ್ ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಿವಿ ರಿಚಾರ್ಜ್ ಮಾಡುವ ಹೆಸರಿನಲ್ಲಿ ಸೈಬರ್ ಕಳ್ಳರು ಲಿಂಕ್ ಕಳುಹಿಸಿ, ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ವಿವೇಕಾನಂದ ಕೋಟೆಗಾರ್ (61) ಹಾಗೂ ಅವರ ಪತ್ನಿಯ ಬ್ಯಾಂಕ್ ಖಾತೆಯಲ್ಲಿದ್ದ 1.88 ಲಕ್ಷ ರೂ. ಹಣವನ್ನು ಯಾರೋ ಸೈಬರ್ ವಂಚಕರು ಮೋಸ ಮಾಡಿ ಲಪಟಾಯಿಸಿದ ಘಟನೆ ಬೆಳಕಿಗೆ ಬಂದಿದೆ. ವಿವೇಕಾನಂದ ಅವರು ಸೆ.12 ರ ಬೆಳಗ್ಗೆ ಮೊಬೈಲ್ನಲ್ಲಿ ಟಾಟಾ ಸೈ ವೆಬ್ಸೈಟ್ಗೆ ಹೋಗಿ ಹುಡುಕಿದಾಗ 06009616528 ನಂಬರ್ ಇದ್ದು, ಅದಕ್ಕೆ ಕರೆ ಮಾಡಿದ್ದಾರೆ. ಆಗ ಆ ಆರೋಪಿಯು ಟಾಟಾ ಸೈ ಕರೆನ್ಸಿ ದರ ಕಡಿಮೆಯಿದ್ದು, ರಿಚಾರ್ಜ್ ಮಾಡಿಸಿ ಎಂದು ಹೇಳಿದ್ದ. ಅದರಂತೆ ಇವರು ಪತ್ನಿ ಬಳಿ ರಿಚಾರ್ಜ್ ಮಾಡುವಂತೆ ಹೇಳಿದ್ದು, ಅವರು ಈ ಹಿಂದೆ ರಿಚಾರ್ಜ್ ಮಾಡುತ್ತಿದ್ದ 209 ರೂ. ಹಾಕಿದ್ದಾರೆ. ಆಗ ಆ ಆರೋಪಿಯು ನೀವು ಈಗ ರಿಚಾರ್ಜ್ ಮಾಡಿದ ಹಣ ನನ್ನ ಸಿಸ್ಟಮ್ನಲ್ಲಿ ತೋರಿಸಲು ತಡವಾಗುತ್ತದೆ. ಅದಕ್ಕೆ ನಾನು ಲಿಂಕ್ ಕಳುಹಿಸುತ್ತೇನೆ, ಅದರಲ್ಲಿ ರಿಚಾರ್ಜ್ ಮಾಡಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಕೊಡ ಮಾಡುವ 2026ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಪದ್ಮಶ್ರೀ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ. ಕಿತ್ತಳೆ ಹಣ್ಣನ್ನು ಮಾರಿ ತನ್ನ ಊರಿನಲ್ಲಿ ಯಾರು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ತನ್ನ ಊರಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಅಕ್ಟೋಬರ್ 18ರಂದು ನಡೆಯುವ ನಮ್ಮೂರ ದಸರಾ-2026( ಭಕ್ತಿ ಬಣ್ಣದ ಮಾರ್ದನಿ) ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಯುವಕ ಮಂಡಲದ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯದರ್ಶಿ ಸುಧಾಕರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
