Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸಡಗರದಿಂದ ಸಂಪನ್ನಗೊಂಡಿತು. ಮಕ್ಕಳ ಪ್ರಾರಂಭಿಕ ವಿದ್ಯಾಭ್ಯಾಸದ ಪಯಣವನ್ನು ಸಂಭ್ರಮಿಸುವ ಈ ಸಮಾರಂಭದಲ್ಲಿ ಪುಟಾಣಿ ವಿದ್ಯಾರ್ಥಿಗಳು ಅಭಿನಂದನೆಗೆ ಪಾತ್ರರಾದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ದೀಪಿಕಾ ಸುಭಾಷ್ ಶೆಟ್ಟಿ, ಅವರು ಮಕ್ಕಳಿಗೆ ಪದವಿ ಪ್ರಮಾಣಪತ್ರ ವಿತರಿಸಿ, ಅವರ ಶೈಕ್ಷಣಿಕ ಪ್ರಗತಿಯು ಸುಗಮವಾಗಲೆಂದು ಶುಭ ಹಾರೈಸಿದರು. ತಮ್ಮ ಅತಿಥಿ ಭಾಷಣದಲ್ಲಿ, “ಮನೆಯೇ ಮೊದಲ ಪಾಠಶಾಲೆ, ಮಕ್ಕಳಿಗೆ ಸಂಸ್ಕಾರ ಕಲಿಸುವುದರಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಶಿಸ್ತು, ಸಂಯಮ, ಭಕ್ತಿ-ಭಾವ, ಗುರು ಹಿರಿಯರನ್ನು ಗೌರವಿಸುವುದು ಮುಂತಾದ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರೊಂದಿಗೆ ಎಲ್ಲಾ ಪಾಲಕ/ಪೋಷಕರು ಕೈ ಜೋಡಿಸಿದರೆ ಮಾತ್ರ ಸಂಸ್ಕಾರಭರಿತ ಮಗುವೊಂದು ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಪೋಷಕರ ಜವಾಬ್ದಾರಿ ಮುಗಿಯಿತೆಂದು ಭಾವಿಸದೇ, ಆ ಕ್ಷಣದಿಂದಲೇ ಪೋಷಕರ ಜವಾಬ್ದಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬ್ಯಾಂಕುಗಳು ಆರ್ಥಿಕ ವರ್ಷದಲ್ಲಿ ಆರ್.ಬಿ.ಐ ಮಾರ್ಗಸೂಚಿ ಅನ್ವಯ ನೀಡಿರುವ ಗುರಿಗಳನ್ನು ಸಾಧಿಸುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಆರ್.ಬಿ.ಐ ಎ.ಜಿ.ಎಂ ನಿಶಾ ಠಾಕೂರ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹೆಬ್ರಿ ತಾಲೂಕಿಗೆ ಸಂಬಂಧಿಸಿದಂತೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಹಾಗೂ ಬ್ಯಾಂಕ್‌ಗಳ ಶಾಖೆಗಳ ಸಂಖ್ಯೆ ಕಡಿಮೆ ಇದೆ. ಈ ವ್ಯಾಪ್ತಿಯ ಬ್ಯಾಂಕ್‌ನ ಅಧಿಕಾರಿಗಳು ವ್ಯವಹಾರವನ್ನು ಹೆಚ್ಚಿಸಲು ಗಮನಹರಿಸಬೇಕು. ಬ್ಯಾಂಕಿನಿಂದ ದೊರೆಯುವ ಸಾಲ, ಸಹಾಯಧನ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ ಬ್ಯಾಂಕಿಂಗ್ ವ್ಯವಹಾರದ ವಿಸ್ತರಣೆಗೆ ಮುಂದಾಗಬೇಕು ಎಂದರು. ಬ್ಯಾಂಕಿಂಗ್ ಠೇವಣಿ ಅನುಪಾತವು ಕಳೆದ ಬಾರಿ ಶೇ.48.47 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.49.54 ರಷ್ಟು ಹೆಚ್ಚಾಳವಾಗುದರೊಂದಿಗೆ ಶೇ. 1.07 ರಷ್ಟು ಏರಿಕೆ ಕಂಡಿದೆ ಎಂದ ಅವರು, ಮುಂದಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ  ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ  ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಆಯ್ಕೆಯಾಗಿದ್ದಾನೆ. ಸಂಜಿತ್ ರಸ್ತೆ ಅಪಘಾತ ತಡೆ ಮತ್ತು ಸುರಕ್ಷತಾ ಕ್ರಮಗಳ ಮಾಡೆಲ್ ಪ್ರದರ್ಶಿಸಿದ್ದ. ಈತ ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಇವರ ಸಹಕಾರದೊಂದಿಗೆ ಸ್ವಯಂ ಪ್ರೇರಿತ “ಬೃಹತ್ ರಕ್ತದಾನ ಶಿಬಿರ” ಜರುಗಿತು. ರಕ್ತದಾನವು ಮಾನವೀಯತೆಯ ಅತ್ತ್ಯುತ್ತಮ ಸೇವೆಯಾಗಿದೆ. ಅನೇಕರ ಜೀವನಗಳಿಗೆ ಆಶಯಗಳನ್ನು ಒದಗಿಸುವಂತದ್ದು. ಜ್ಯೋತಿ ಬೆಳಗಿಸಿ, ಪ್ರಾರ್ಥನಾ ಗೀತೆ ಹಾಡುವ ಮುಖಾಂತರ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಜಯಶಂಕರ್ ಶೆಟ್ಟಿ ಅವರು ವಿದ್ಯರ್ಥಿಗಳಿಗೆ ರಕ್ತದಾನದ ಮಹತ್ವ ಮತ್ತು ಅದರಿಂದ ಆರೋಗ್ಯಕ್ಕಾಗುವ ಉಪಯೋಗಗಳನ್ನು ತಿಳಿಸಿದರು. ಜೊತೆಗೆ ನಾವು ಈ ಕಾಲೇಜಿನಲ್ಲಿ ಸತತ 10 ವರ್ಷ ಗಳಿಂದ ರಕ್ತದಾನ ಶಿಬಿರವನ್ನು ನಡೆಸುತ್ತ ಬಂದಿದ್ದೇವೆ ಎಂದು ಸಂತಸಪಟ್ಟರು. ನೀವು ನೀಡುವ ರಕ್ತವು ಎಷ್ಟೋ ರೋಗಿಗಳಿಗೆ ಹಾಗೂ ಸೈನಿಕರಿಗೆ ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಮತ್ತೊರ್ವ ಅತಿಥಿಯಾಗಿದ್ದ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅವರು ರಕ್ತದಾನ ಶ್ರೇಷ್ಠದಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮೋಹನ್ ಪೂಜಾರಿ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿದಿ ಬಗ್ಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಜನೆಯ ಮಾಹಿತಿ ಹಾಗು ಅದರ ಸದುಪಯೋಗವನ್ನು ವಿಸ್ತಾರವಾಗಿ ತಿಳಿಸಿದರು. ಪದವಿ ನಂತರ ಯೋಜನೆಯಲ್ಲಿ ಅಹ೯ ಅಭ್ಯರ್ಥಿಗಳು ನೋಂದಣಿಯಾಗುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷರು ಮೋಹನ್ ಪೂಜಾರಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂಧಿ ಪೃಥ್ವಿರಾಜ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಗ್ಯಾರಂಟಿ ಸಮಿತಿ ಸದಸ್ಯರಾದ ಮಾಲತಿ, ಸೂರ್ಯಕಾಂತಿ ನಾಗೇಶ್, ರಾಮಚಂದ್ರ ಖಾರ್ವಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕಿ ಸುಚಿತ್ರ ಸ್ವಾಗತಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ಅಧಿವೇಶನನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಹಲವಾರು ದಶಕಗಳಿಂದ ಸಾರ್ವಜನಿಕರಿಂದ ಬೇಡಿಕೆ ಇರುವ ವಿಚಾರ  ಸರಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ  ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಸರಕಾರದ ನಿಲುವೇನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್  ಆರ್. ಪಾಟೀಲ್ ಅವರು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಬೇಡಿಕೆ ಇರುವ ವಿಚಾರ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿರುತ್ತದೆ. ಉಡುಪಿ ಜಿಲ್ಲೆಯೂ ಸೇರಿದಂತೆ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವ ಭಾವಿ ಸಭೆಯನ್ನು  ನಡೆಸಲಾಗಿದ್ದು, iDECK ಸಂಸ್ಥೆಯನ್ನು Transaction Advisor…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಿಸಿ ಕ್ಯಾಮೆರಾ ಅಳವಡಿಕೆ ವಿಚಾರವಾಗಿ ಉಂಟಾದ ನೆರೆಹೊರೆಯ ಕಲಹ ತೀವ್ರ ಸ್ವರೂಪ ಪಡೆದುಕೊಂಡು, ವೃದ್ಧೆಯೊಬ್ಬರ ಮೇಲೆ ದಾಳಿ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದಲ್ಲಿ ನಡೆದಿದೆ. ರಾಧು ಪೂಜಾರ್ತಿ (65) ಎಂಬುವರ ಮನೆಯ ಎದುರು ವಾಸವಾಗಿರುವ ಪ್ರೇಮ ಪೂಜಾರಿ ಅವರು ಮನೆಗೆ ಮುಖ ಮಾಡಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಇದರಿಂದ ಅಸೌಕರ್ಯ ಉಂಟಾಗುತ್ತಿದೆ ಎಂದು ಅವರು ದಿನಾಂಕ 09/03/2026ರಂದು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿಗಳಾದ ಪ್ರೇಮ ಪೂಜಾರಿ, ಪ್ರವೀಣ್ ಟಿ. ಪೂಜಾರಿ, ಯಶ್ವಿತಾ, ಪೂರ್ಣಿಮಾ, ಶಾಂತ, ಪ್ರಮೀಳಾ ಮತ್ತು ತಮ್ಮಯ್ಯ ಅವರು ದಿನಾಂಕ 13/03/2026ರಂದು ಬೆಳಿಗ್ಗೆ 08:25 ಗಂಟೆ ಸುಮಾರಿಗೆ ರಾಧು ಪೂಜಾರ್ತಿ ಮನೆಯ ಬಳಿ ಏಕಾಏಕಿ ಪ್ರವೇಶಿಸಿ, ಅವರನ್ನು ಸುತ್ತುವರಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಮನೆಯ ಸುತ್ತಮುತ್ತ ಸಂಚರಿಸಲು ಬಿಡುವುದಿಲ್ಲ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯಿಂದ ದೈಹಿಕ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ (ಉಡುಪಿ ವಲಯ)ವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಬೆಳೆಸುತ್ತದೆ. ಶಾರೀರಿಕ ಸದೃಢತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ದ್ವಿತೀಯ ಸೆಮಿಸ್ಟರ್ ನ ಪ್ರಥಮ ಪಂದ್ಯಾಟದಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಸಾಧನೆ ಮಾಡಿ ಎಂದು ಹೇಳಿದರು. ಇನ್ನೋರ್ವ ಅತಿಥಿ ರಾಘವೇಂದ್ರ ಶೆಟ್ಟಿ ಲೆಕ್ಕ ಪರಿಶೋಧಕರು, ಬೆಂಗಳೂರು ಅವರು ಮಾತನಾಡಿ ಕಾಲೇಜಿನ ಗುರುಗಳನ್ನು ನೆನಪಿಸಿಕೊಂಡರು. ಮತ್ತೋರ್ವ ಅತಿಥಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಮೊಬೈಲ್ ಗೆ ಮಾರು ಹೋಗಬೇಡಿ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಬೇಕು. ಶಿಕ್ಷಣದ ಹಾದಿಯಲ್ಲಿ ಎದುರಾಗುವ ಸೋಲುಗಳನ್ನು ಮೆಟ್ಟಿ ನಿಂತು ಯಶಸ್ಸಿನತ್ತ ಸಾಗಬೇಕು. ಸಾಧಕ ವಿದ್ಯಾರ್ಥಿಗಳೇ ಸಮಾಜದ ಅಮೂಲ್ಯ ಆಸ್ತಿಯಾಗಬೇಕು ಎಂದು ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಹೇಳಿದರು. ಅವರು ಮಂಗಳವಾರ ಇಲ್ಲಿನ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ “ಮಧುರಂ ಸ್ಮರಣಂ” ಎಂಬ ವಿನೂತನ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ಜೀವನವೆಂಬುದು ದೀರ್ಘ ಪ್ರಯಾಣವಾಗಿದ್ದು, ಅದರಲ್ಲಿನ ಸಿಹಿ-ಕಹಿ ಅನುಭವಗಳು ಸಹಜ. ಕಲಿಕೆಯ ಹಾದಿಯಲ್ಲಿ ಪಡೆದ ಧನಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಬೀಳ್ಕೊಡುಗೆ ಒಂದು ಸಿಹಿ ಕ್ಷಣವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಸಮಾಜಕ್ಕೆ ಗೌರವ ತರುವಂತಾಗಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ಶೈಕ್ಷಣಿಕ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಗೆ ವಿದ್ಯಾರ್ಥಿಗಳಿಂದ ಸುಮಾರು 20 ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJISC) ಯೋಗ ಮತ್ತು ಆಧ್ಯಾತ್ಮ ಸಂಘವು ಭಾರತದ ರಾಷ್ಟ್ರಗೀತೆಯಾದ ವಂದೇ ಮಾತರಂನ ಹಿನ್ನೆಲೆ, ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತಮ್ಮ ಪ್ರಸ್ತುತಿಯಲ್ಲಿ, ಅವರು ವಂದೇ ಮಾತರಂ ಗೀತೆಯ ಮೂಲ, ಹಿನ್ನೆಲೆ, ರಚನೆ ಮತ್ತು ಸಾಹಿತ್ಯದ ಆಳವಾದ ಅರ್ಥವನ್ನು ವಿವರಿಸಿದರು. ಭಾರತದ ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ಈ ಗೀತೆಯು ಹೇಗೆ ಪ್ರಬಲ ದೇಶಭಕ್ತಿಯ ಭಾವನೆಯೊಂದಿಗೆ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆ ನೀಡಿತು ಎಂಬುದನ್ನು ಅವರು ಎತ್ತಿ ತೋರಿಸಿದರು.ಅವರು ಈ ಗೀತೆಯಲ್ಲಿ ಪ್ರತಿಬಿಂಬಿತವಾಗಿರುವ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿವರಿಸಿ, ಅದನ್ನು ಭಾರತದ ಸೌಂದರ್ಯ, ಶ್ರೀಮಂತಿಕೆ ಮತ್ತು ಏಕತೆಯ ಸಂಕೇತವೆಂದು ಬಣ್ಣಿಸಿದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಅಪೂರ್ವ ನಿರೂಪಿಸಿದರು.

Read More