ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುರುಕುಲ ಶಾಲೆಯ ಪುಷ್ಪ ವಾಟಿಕಾದಲ್ಲಿ ರಕ್ಷಕ-ಶಿಕ್ಷಕ ಸಭೆ & ಫಾದರ್ಸ್ ಡೇ ಆಚರಣೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಂಪೂರ್ಣ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುತ್ತಿದೆ, ಜೊತೆಗೆ ಪೋಷಕರಿಗಾಗಿ ಕೂಡ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಎಲ್ಲಾ ಚಟುವಟಿಕೆಗಳಲ್ಲಿ ನೀವು ಭಾಗವಹಿಸಿ,ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರದ ಜೊತೆಗೆ ತಂದೆಯ ಪಾತ್ರ ತುಂಬಾ ಮುಖ್ಯ ಎಂದರು. ಪೋಷಕರು ಸಾಧ್ಯವಾದಷ್ಟು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸುವುದರ ಜೊತೆಗೆ ಜವಾಬ್ದಾರಿಯುತ ಪೋಷಕರಾಗಿ ಪ್ರತಿ ಹಂತದಲ್ಲಿ ಅವರನ್ನು ತಿದ್ದುವ ಕೆಲಸವನ್ನು ಮಾಡಿದಾಗ ಮಾತ್ರ ಆ ಮಗುವು ಮುಂದೆ ಸಮಾಜದಲ್ಲಿ ಉತ್ತಮ ಸತ್ಪ್ರಜೆಯಾಗಿ ಸಮಾಜವನ್ನು ಮುನ್ನಡೆಸಲು ಸಾಧ್ಯ ಎಂದರು. ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಶೈಕ್ಷಣಿಕ ಸಾಲಿನ ಕಾರ್ಯ ಚಟುವಟಿಕೆಗಳು ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು. ಅವರು ಇಂದು ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಅಮೃತೇಶ್ವರೀ ದೇಗುಲಕ್ಕೆ ಉಡುಪಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿದ ಸ್ವರೂಪಾ ಟಿ.ಕೆ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಜಿಲ್ಲಾಧಿಕಾರಿ ಅವರನ್ನು ಬರಮಾಡಿಕೊಂಡು ಸ್ವಾಗತಿಸಿದರು. ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿಕೊಂಡ ಜಿಲ್ಲಾಧಿಕಾರಿಯವರನ್ನು ದೇಗುಲದ ವತಿಯಿಂದ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು. ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ಸುಧಾ ಪೂಜಾರಿ, ಜ್ಯೋತಿ ದೇವದಾಸ್, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ರಾಜು ಪೂಜಾರಿ, ಸುಬ್ರಾಯ ಜೋಗಿ, ಸ್ಥಳೀಯ ದೇವೇಂದ್ರ ಗಾಣಿಗ, ಭರತ್ ಗಾಣಿಗ, ಅರ್ಚಕರಾದ ವೀರಭದ್ರ, ರಾಘವೇಂದ್ರ ಜೋಗಿ, ವಿಜಯ ಜೋಗಿ, ದೇಗುದ ವ್ಯವಸ್ಥಾಪಕ ಗಣೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಮಾಹಿತಿ ನೀಡಿದರು. ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಾಡಿ-ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ದಿನಾಚರಣೆಗೆ ಚಾಲನೆ ನೀಡಿದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡುತ್ತಾ “ಜಾಗತಿಕ ಲೋಕಕ್ಕೆ ಯೋಗ ಭಾರತದ ಬಹುದೊಡ್ಡ ಕೊಡುಗೆಯಾಗಿದ್ದು ಹಲವು ರೋಗಗಳಿಗೂ ಉತ್ತಮವಾದ ಔಷಧವಾಗಿ ಪರಿಣಮಿಸಿದೆ. ಪ್ರಾಚೀನ ಕಾಲದಲ್ಲಿಯೇ ಋಷಿ ಮುನಿಗಳಿಂದ ಪರಿಚಿತವಾದ ಯೋಗ ಕಲೆಯು ಇಂದು ನಮ್ಮ ಭಾರತದ ಭವ್ಯ ಸಂಸ್ಕೃತಿಯ ಒಂದು ಅಂಗವಾಗಿದೆ. ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಉತ್ತಮ ಸಾಧನವಾಗಿದ್ದು ಪ್ರತಿನಿತ್ಯ ಯೋಗ ಮಾಡುವುದರಿಂದ ಆರೋಗ್ಯವಂತರಾಗಿ ಉತ್ತಮ ವ್ಯಕ್ತಿತ್ವ ಹೊಂದಬಹುದು. ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಯೋಗ ಅಭ್ಯಾಸ ಮಾಡುವುದರಿಂದ ಕಲಿಕೆಯಲ್ಲಿ ಏಕಾಗ್ರತೆಯನ್ನು ಕಂಡುಕೊಂಡು ಸರ್ವಾಂಗೀಣ ಪ್ರಗತಿಗೆ ಸಹಾಯವಾಗುತ್ತದೆ. ಇಂದು ಆಧುನಿಕ ವೈದ್ಯಕೀಯ ಪದ್ದತಿಯು ಗುಣಪಡಿಸಲಾಗದ ಹಲವಾರು ರೋಗಗಳಿಗೆ ಯೋಗವು ರಾಮಬಾಣವಾಗಿರುವುದರಿಂದ ವಿಶ್ವ ಮಾನ್ಯತೆಯನ್ನು ಪಡೆದಿದೆ”ಎಂದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ತಾಲೂಕಿನ ಅಂಪಾರು ಮೂಡುಬಗೆಯ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾಬ್ಯಾಗ್, ಕೊಡೆ ಮತ್ತು ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸ್ವಯಂಸ್ಫೂರ್ತಿ ಫೌಂಡೇಶನ್ ತಂಡವು ಮಕ್ಕಳಿಗೆ ಶಿಕ್ಷಣಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಿ ಸಹಕರಿಸಿದ್ದಾರೆ ಇವರ ಸೇವೆ ಅಮೂಲ್ಯವಾದದು ಎಂದರು. ಸ್ವಯಂಸ್ಫೂರ್ತಿ ಫೌಂಡೇಶನ್ ಪ್ರವರ್ತಕ ನಾಗರಾಜ ಶೆಟ್ಟಿ ಜಡ್ಕಲ್, ಶಾಲೆಯ ಮುಖ್ಯೋಪಧ್ಯಾಯ ರವೀಂದ್ರ ದೇವಾಡಿಗ, ಶಾಲಾ ಶಿಕ್ಷಕರು ಹಾಗೂ ಸ್ವಯಂಸ್ಪೂರ್ತಿ ತಂಡದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರನ್ನಾಗಿ ಅನಿತಾ ಆರ್.ಕೆ. ಅವರನ್ನು ಆಯ್ಕೆಮಾಡಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ತಕ್ಷಣವೇ ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಚುಣಾವಣಾಧಿಕಾರಿ ರವಿಶಂಕರ್ ಮಿಜಾರು ಪ್ರಕಟಣೆ ಹೊರಟಿಸಿದ್ದಾರೆ. ಅನಿತಾ ಅವರ ಈ ಹಿಂದೆ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮರವಂತೆ ಪಂಚಾಯತ್ ಅಧ್ಯಕ್ಷರಾಗಿಯೂ ಒಂದು ಅವಧಿಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ► ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಾಜೀನಾಮೆ – https://kundapraa.com/?p=86500 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ವಿಜಯ ಕರ್ನಾಟಕ ಮತ್ತು ಟೈಮ್ಸ ಆಫ್ ಇಂಡಿಯಾ ಪತ್ರಿಕೆಗಳ ಸಹಯೋಗದೊಂದಿಗೆ ಶನಿವಾರ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್. ಆರ್. ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೋಗವೆಂದರೆ ಕೇವಲ ಆಸನಗಳಲ್ಲ. ಅಷ್ಟಾಂಗಗಳನ್ನು ಹೊಂದಿದೆ. ನಾವು ಏಕಾಗ್ರತೆಗೆ ತಲುಪಿದರೆ ಮಾತ್ರ ಯೋಗ ಫಲ ನೀಡುವುದು. ಯೋಗಾಸನಗಳ ಅಭ್ಯಾಸ ಮಾಡುವುದು ದೇಹದ ಅಂಗಾಂಗಗಳಿಗೂ ಪುಷ್ಟಿದಾಯಕ. ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಿ ಎಂದರು. ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಬರಹಗಾರರಾದ ಜಾನ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರ ಕನಸಿನ ಕೂಸಾದ ಈ ಶಾಲೆ ಭವ್ಯ ಭಾರತದ ಭವಿಷ್ಯ ನಿರ್ಮಿಸಬೇಕಾದ ಮಕ್ಕಳಿಗೆ ತಾಯಿಯ ಗರ್ಭಗೃಹದಂತೆ ಅಗತ್ಯತೆಗಳನ್ನು ಪೂರೈಸುತ್ತಿದೆ. ಮರಗಿಡಬಳ್ಳಿಗಳ ಮಧ್ಯದಲ್ಲಿ ಶುದ್ಧವಾದ ವಾತಾವರಣದಲ್ಲಿದ್ದು, ಮಕ್ಕಳಿಗೆ ಯೋಗಗಳ ಪೂರ್ಣಪ್ರಯೋಜನ ಪಡೆಯಲು ಸಹಕಾರಿಯಾಗಿದೆ. ಯುವ ಜನರಲ್ಲಿ ಜಾಗೃತಿಮೂಡಿಸಲು ನಾವು ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಬೈಂದೂರು ಮಂಡಲ ಬಿಜೆಪಿ ಹಾಲಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅವರು ಸಲ್ಲಿಸಲಾಗಿದ್ದ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರು ಶನಿವಾರ ಅಂಗೀಕರಿಸಿದ್ದಾರೆ. ಕಳೆದ 5 ವರ್ಷಗಳಿಂದ ಮಂಡಲ ಅಧ್ಯಕ್ಷ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದೇನೆ. ಸಂಘಟನಾ ಪರ್ವ ನಡೆಯುತ್ತಿರುವ ಈ ಸಂದರ್ಭದಲ್ಲಿ ಪಕ್ಷದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಬೇಕಾಗಿರುವುದರಿಂದ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಹೊಸ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ದೀಪಕ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಿ, ನೂತನ ಅಧ್ಯಕ್ಷರನ್ನು ಶೀಘ್ರವಾಗಿ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಮಂಡಲ ಬಿಜೆಪಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿದಿದ್ದರು.
