Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಆದ್ಯತೆ ನೀಡಿ ಬಳಿಕ ಆ ಪ್ರದೇಶಕ್ಕೆ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಚಿಂತನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ಬೆಂಗಳೂರಿನಲ್ಲಿ ಹಮ್ಮಿಕೊಂಡ ಎರಡು ದಿನಗಳ “ಕುಂದಾಪ್ರ ಕನ್ನಡ ಹಬ್ಬ-2025″ರ ಸಮಾರೋಪ ಸಮಾರಂಭ ದಿನವಾದ ಭಾನುವಾರ ಅವರು ಮಾತನಾಡಿದರು. ಇದೇ ವೇಳೆ ಖ್ಯಾತ ಸಿನಿಮಾ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಡಿಸಿಎಂ ಸಮ್ಮುಖದಲ್ಲಿ ʼಊರ ಗೌರವʼ ಎನ್ನುವ ವಿಶೇಷ ಪುರಸ್ಕಾರ ಮಾಡಲಾಯಿತು. ‘ಕುಂದಾಪುರಕ್ಕೆ ಒಂದು ಸುಸಜ್ಜಿತ ಕುಂದಾಪ್ರ ಭವನ, ಒಂದು ವೈದ್ಯಕೀಯ ಕಾಲೇಜು ಹಾಗೂ ಕುಂದಾಪ್ರ ಸಮೀಪದ ಬೈಂದೂರಿನಲ್ಲಿ ಒಂದು ವಿಮಾನ ನಿಲ್ದಾಣ ಆಗಬೇಕು’ ಎಂದು ‘ಕುಂದಾಪುರ ಕನ್ನಡ ಪ್ರತಿಷ್ಠಾನ’ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಡಿಸಿಎಂ, “340 ಕಿ.ಮೀ. ಉದ್ದದ ಕರಾವಳಿಗೆ ಪ್ರತ್ಯೇಕ ಪ್ರವಾಸ ನೀತಿ ರೂಪಿಸುವ ಚಿಂತನೆ ಸರ್ಕಾರಕ್ಕಿದೆ, ಈ ನೀತಿ ಜಾರಿ ಬಳಿಕ ವಿಮಾನ ನಿಲ್ದಾಣದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕುಂದಾಪ್ರ ಕನ್ನಡ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುವ ಮೂಲಕ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ವನ್ನು ಮತ್ತಷ್ಟು ಬಲಗೊಳಿಸುವ ಪ್ರಯತ್ನ ನಡೆಯಬೇಕು ಎಂದು ಮಾಜಿ ಸಂಸದ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯರೂ ಆಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಕರೆ ನೀಡಿದರು. ಕುಂದಾಪ್ರ ಕನ್ನಡ ಪ್ರತಿಷ್ಠಾನ ರಿ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ “ಕುಂದಾಪ್ರ ಕನ್ನಡ ಹಬ್ಬ-2025” ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಾಲ್ಕು ವರ್ಷಗಳ ಹಿಂದೆ ಕುಂದಾಪ್ರ ಕನ್ನಡ ಹಬ್ಬದಲ್ಲಿ ಈ ಅಧ್ಯಯನ ಪೀಠಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅದಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾತ್ರವಲ್ಲದೆ ಸರ್ಕಾರ ಕೂಡ ಒಪ್ಪಿಗೆ ನೀಡಿತು. ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಈ ಪೀಠಕ್ಕೆ 1.5 ಕೋಟಿ ರೂ. ಮಂಜೂರು ಮಾಡಿದರು ಎಂದು ಹೆಗ್ಡೆ ತಿಳಿಸಿದರು. ಕುಂದಾಪ್ರ ಕನ್ನಡ ಬಗ್ಗೆ ಹಳ್ಳಿಯ ಮಹಿಳೆಯರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು  ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ತಿಳಿಸಿದರು. ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬೇಡಿ ಎಂದರು. ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸಲು ಅನುಕೂಲವಾಗುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವುದಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸರಕಾರದ ಕಾರ್ಯವೈಕರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿನ ಕೆರೆಗಡಿ ಅಂಚಿನಿಂದ 30 ಮೀಟರ್ ಬಫರ್ ಜೋನ್ ಇರುವುದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿ ಅತಿ ಕಡಿಮೆ ಜಾಗ ಹೊಂದಿರುವವರಿಗೆ ಮನೆ ನಿರ್ಮಾಣ ಹಾಗೂ ಇತರೆ ಅಭಿವೃದ್ಧಿ ಕೈಗೊಳ್ಳಲು ತುಂಬಾ ತೊಂದರೆ ಉಂಟಾಗುತ್ತಿದ್ದು ಈ ನಿಟ್ಟಿನಲ್ಲಿ ಶಾಸಕರು ಇಲಾಖಾ ಸಚಿವರು ಹಾಗೂ ಕಾರ್ಯದರ್ಶಿಗಳ ನಿರಂತರ ಸಂಪರ್ಕದಲ್ಲಿದ್ದು ಪ್ರಯತ್ನ ಫಲಪ್ರದ ಕಂಡಿದೆ. ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಯಾದಲ್ಲಿ ತುಂಡು ಭೂಮಿ ಹೊಂದಿದವರಿಗೆ ತುಂಬಾ ಅನುಕೂಲವಾಗಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಇವರ  ವತಿಯಿಂದ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಐದು ದಿನಗಳ  ಸಾಫ್ಟ್ ಸ್ಕಿಲ್  ತರಬೇತಿ   ಕಾರ್ಯಕ್ರಮದ ಸಮಾರೋಪ ಸಮಾರಂಭವು  ಕಾಲೇಜಿನ ರಾಧಾ ಭಾಯಿ ಸಭಾಂಗಣದಲ್ಲಿ  ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕಿಗಳಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಮ್ಯಾಜಿಕ್ ಬಸ್ ಫೌಂಡೇಶನ್ ನ ನವೀನ್, ಭಾರ್ಗವ್ ಮತ್ತು ರಾಹುಲ್, ಗಣಕಯಂತ್ರ ವಿಭಾಗ ಮುಖ್ಯಸ್ಥರು ಗಣೇಶ್ ಕೆ., ಗಣಕ ವಿಜ್ಞಾನ ವಿಭಾಗದ ಉಪನ್ಯಾಸರಾದ ವಿಜಯಲಕ್ಷ್ಮಿ ಎನ್. ಶೆಟ್ಟಿ, ಪ್ಲೇಸ್ಮೆಂಟ್ ಸೆಲ್ ನ ಸಂಚಾಲಕರಾದ ರಾಜೇಂದ್ರ ಹೋಬಳಿದಾರ್ ಉಪಸ್ಥಿತರಿದ್ದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಲತಿಕ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಸ್ಮೃತಿ ಪ್ರಾರ್ಥನೆ ನೆರವೇರಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ರಶ್ಮಿತಾ ವಿ ಸ್ವಾಗತಿಸ, ವಿದ್ಯಾರ್ಥಿನಿ ಪುಶ್ಪಿತಾ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ, ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಕಾರ್ಯಕ್ರಮ ಸಂಯೋಜಕರಾದ ANO Lt. ಹರೀಶ್ ಬಿ., ಎನ್.ಸಿ.ಸಿ. ಕೇರ್ ಟೇಕರ್ ಶರತ್ ಕುಮಾರ್ ಉಪಸ್ಥಿತರಿದ್ದರು. ಎನ್.ಸಿ.ಸಿ. ಕೆಡೆಟ್‌ಗಳಾದ ಸಹನಾ ಪ್ರಾರ್ಥಿಸಿ, ಸುಪ್ರಜ್ ಕುಮಾರ್ ನಿರೂಪಿಸಿ,

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮುಳ್ಳಿಕಟ್ಟೆ ಸಮೀಪ ರಾ. ಹೆ 66ರ ರಿಕ್ಷಾ ನಿಲ್ದಾಣ ಬಳಿ ಬೆಳಗ್ಗೆ ನಡೆದಿದೆ. ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿ ರಸ್ತೆಯ ಬದಿ ಬಿದ್ದಿದ್ದು, ಇದರಿಂದ ಕಾರಿನಲ್ಲಿದ್ದ ತಾಜುದ್ದೀನ್ ಹಾಗೂ ಚಾಲಕನ ತಾಜ್ಮುಲ್ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸುದರ್ಶನ್ ಪಿ. ಅವರು ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿ, ಎನ್‌ಎಸ್‌ಎಸ್ ನಮ್ಮ ಜೀವನದ ಪಥವನ್ನೇ ಬದಲಾಯಿಸಬಲ್ಲ ಶಕ್ತಿ ಹೊಂದಿದೆ. ವಿದ್ಯಾರ್ಥಿಗಳು ತಮ್ಮೊಳಗಿನ ಅಧಮ್ಯ ಶಕ್ತಿಯನ್ನು ಗುರುತಿಸಿ, ಸದುಪಯೋಗಪಡಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಜೊತೆಗೆ ಮಾನಸಿಕ ಸ್ವಚ್ಛತೆಯೂ ಅಗತ್ಯ. ಹೃದಯ ಶ್ರೀಮಂತಿಕೆ ಆರ್ಥಿಕ ಶ್ರೀಮಂತಿಕೆಗಿಂತ ಮಿಗಿಲಾದದು ಎಂದರು. ಅಂಬಾನಿಯವರಂತಹ ಉದ್ಯಮಿಗಳೂ ಚಿಕ್ಕಮಟ್ಟದಲ್ಲಿ ಪ್ರಾರಂಭಿಸಿ ಇಂದು ದೊಡ್ಡ ಮಟ್ಟದ ಯಶಸ್ಸನ್ನು ಕಂಡಿದ್ದಾರೆ. ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಸಂವಹನ ಕೌಶಲ್ಯಗಳೊಂದಿಗೆ ಕಾರ್ಯನಿರ್ವಹಿಸಬೇಕು. ಈಗ ನಿಮ್ಹಾನ್ಸ್‌ನಂತಹ ಸಂಸ್ಥೆಗಳು ಮೊಬೈಲ್ ಮಧ್ಯವರ್ಜನ ಶಿಬಿರಗಳನ್ನು ನಡೆಸುವ ಪರಿಸ್ಥಿತಿ ಬಂದೊದಗಿದೆ. ಇದು ಅಪಾಯದ ಸಂಕೇತ. ’ಲೈಫ್ ಇಸ್ ಶಾರ್ಟ್, ಮೇಕ್ ಇಟ್ ಸ್ವೀಟ್ – ಫಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮುದಾಯದೊಳಗಿನ ಉದಾರ ಮನಸ್ಸಿನ ಉಳ್ಳವರಿಂದ ದೇಣಿಗೆಯ ರೂಪದಲ್ಲಿ ಆರ್ಥಿಕ ನೆರವು ಪಡೆದು ಇಲ್ಲದವರಿಗೆ ನೆರವಾಗುವ ಹಂತದಲ್ಲಿ ಸಂಘವು ನಿರ್ವಹಿಸಿರುವ ಕೆಲಸಗಳ ಬಗ್ಗೆ ಆತ್ಮತೃಪ್ತಿಯಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಘವು ತನ್ನಲ್ಲಿರುವ ಮಿತ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಬಡ ಕುಟುಂಬಗಳ ಆರೋಗ್ಯ ಸಮಸ್ಯೆಗಳಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ, ವಿಶೇಷ ಚೇತನರ ನಿರೀಕ್ಷೆಗಳಿಗೆ ಬಹುಮುಖಿಯಾಗಿ ಸ್ಪಂದಿಸಿದೆ ಎಂದು ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ಹೇಳಿದರು. ಅವರು ಯಡ್ತರೆ ಬಂಟರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 30ನೇ ವರ್ಷದ ಸಂಭ್ರಮದ ಕಾರ್ಯ ನಿರ್ವಹಣೆಯ ಅವಧಿ ಹಲವು ಬಗೆಯ ಸವಾಲುಗಳಿಗೆ ಮುಖಾಮುಖಿಯಾದದ್ದು. ಸಂಘದ ಚಟುವಟಿಕೆಗಳನ್ನು ರಚನಾತ್ಮಕವಾಗಿ ಕಟ್ಟುವುದು ಒಂದು ವಿಧದ ಗುಣಾತ್ಮಕ ಸವಲಾಗಿ ಪರಿಣಮಿಸಿತು. ಈ ನಡುವೆಯೂ ಸಮುದಾಯ ಭಾಂದವರ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ, ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೀಡಲಾಗುವುದು. ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ, ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿಯನ್ನು ಆಗಸ್ಟ್ 25 ರ ಒಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ…

Read More