Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪರಿಸರದ ಅಗತ್ಯದ ಬಗ್ಗೆ ಅರಿತುಕೊಳ್ಳುವುದರ ಜೊತೆಗೆ ಪರಿಸರವನ್ನು ಉಳಿಸುವಲ್ಲಿ ನಾವು ಕಾರ್ಯಪ್ರವೃತ್ತರಾದಾಗಲೇ ವಿಶ್ವ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ. ಇದು ನಿರಂತರ ದಿನಾಚರಣೆಯಾಗಬೇಕು ಎಂದು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪರಿಸರ ಸ್ನೇಹಿ ತಂತ್ರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹೆಸರಿನಲ್ಲಿ ಕನಿಷ್ಟ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ  ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಬೋಧಕ  ಬಳಗದ  ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು. ಶಿಕ್ಷಕಿ ಮಾಲಾಶ್ರೀ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮನುಷ್ಯ ಸೇರಿದಂತೆ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಸಂಕುಲವೂ ಪರಿಸರವನ್ನು ಅವಲಂಭಿಸಿದೆ. ಮಾನವನ ದುರಾಸೆಯಿಂದ ಗಾಳಿ, ನೀರು ಸೇರಿದಂತೆ ಸೇವಿಸುವ ಆಹಾರವು ಕಲುಷಿತವಾಗುತ್ತಿದೆ. ಪರಿಸರದ ರಕ್ಷಣೆಗೆ ಉತ್ತೇಜಿಸುವುದರೊಂದಿಗೆ ಉತ್ತಮ ಪರಿಸರದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನ ದುರಾಸೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಹಾಗೂ ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ 1972 ರಿಂದ ಪರಿಸರ ದಿನವನ್ನು ಆಚರಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾಡು ಕಡಿದು ನಾಡು ಮಾಡುವ ತವಕದಲ್ಲಿ ಮನುಕುಲ ತಮ್ಮ ಉಸಿರನ್ನು ಚೆಲ್ಲುತ್ತಿದ್ದಾನೆ ಇದರ ದುಷ್ಪರಿಣಾಮ ಪ್ರಸ್ತುತ ಅನುಭವಿಸುತ್ತಿದ್ದೇವೆ ಇದಕ್ಕಾಗಿ ನಾವುಗಳು ಇಂದಿನಿಂದಲೇ ಪ್ರತಿಯೊಬ್ಬರು ಗಿಡ ನಡುವ ಸಂಕಲ್ಪ ಮಾಡಬೇಕು ಎಂದು ಕೋಡಿ ಗ್ರಾಮಪಂಚಾಯತ್ ಪೂರ್ವಾಧ್ಯಕ್ಷ ಸದಸ್ಯ ಪ್ರಭಾಕರ್ ಮೆಂಡನ್ ನುಡಿದರು. ಅವರು ಕೋಡಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟದ ಪಂಚವರ್ಣ ಸಂಘಟನೆ ಇವರ ಸಂಯೋಜನೆಯೊಂದಿಗೆ, ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಇವರ ಸಹಕಾರದೊಂದಿಗೆ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಹಸಿರಿದ್ದರೆ ನಾವುಗಳು ಬದುಕಲು ಸಾಧ್ಯ ಆದರೆ ಆ ಹಸಿರು ನಮ್ಮ ಮನೆಮನೆಯಲ್ಲೂ ಸೃಷ್ಠಿಸಬೇಕಿದೆ ಆಗ ಮಾತ್ರ ತಾಪಮಾನ ಕಡಿಮೆಗೊಳಿಸಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬಹುದಾಗಿದೆ ಈ ಮೂಲಕ ಪಂಚಾಯತ್ ಒಂದು ಹೆಜ್ಜೆಮುಂದಿರಿಸಿ ಕಾರ್ಯನಿರ್ವಹಿಸುತ್ತಿದೆ ಎಂದರು. ಪಂಚವರ್ಣದ ಪರವಾಗಿ ರವೀಂದ್ರ ಕೋಟ ಹಸಿರು ಜೀವ ಅಭಿಯಾನದ ಕುರಿತು ಸಮಗ್ರ ಮಾಹಿತಿ ನೀಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ ಮತ್ತು ಇಲ್ಲಿನ ಅಂಗನವಾಡಿ ಕೇಂದ್ರದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ ಆಚಾರ್ಯ ಮತ್ತು ಸಹ ಶಿಕ್ಷಕ ಯೋಗೇಶ್ ಮಕ್ಕಳಿಗೆ ಗಿಡಗಳನ್ನು ವಿತರಿಸಿ ಅವುಗಳ ಪ್ರಾಮುಖ್ಯತೆ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭದ್ರಾವತಿಯ ಆಭಯಾರಣ್ಯದಿಂದ 15 ದಿನಗಳ ಹಿಂದೆ ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಯೊಂದು ಮಂಗಳವಾರ ರಾತ್ರಿ ಬಾಳೆಬರೆ ಘಾಟಿಯ ಮೂಲಕ ಸಿದ್ದಾಪುರಕ್ಕೆ ಬಂದಿದೆ. ಬುಧವಾರ ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಸಿದ್ದಾಪುರ ಪೇಟೆ ಹಾಗೂ ಪರಿಸರದಲ್ಲಿ ಸಂಚರಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಕಾಡಾನೆ ಬಾಳೆಬರೆ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಹೊಸಂಗಡಿ ಗ್ರಾಮಕ್ಕೆ ಪ್ರವೇಶಿಸಿ ಕೆರೆಬೈಲು, ಕೆಪಿಸಿ ಕಾಲನಿ, ಭದ್ರಾಪುರದ ಮೂಲಕ ಹೊಸಂಗಡಿ ಪೇಟೆಗೆ ಬಂದಿದೆ. ಹೆದ್ದಾರಿಯಲ್ಲಿ ಮುಂದೆ ಸಾಗಿ, ಬೆಳಗಿನ ಜಾವ 6 ಗಂಟೆ ವೇಳೆಗೆ ಸಿದ್ದಾಪುರ ಪೇಟೆಗೆ ಬಂದಿತ್ತು. ಅಲ್ಲಿಂದ ಗ್ರಾಮೀಣ ಭಾಗಕ್ಕೆ ತೆರಳಿದೆ. ಈ ವೇಳೆ ಅರಣ್ಯ ಇಲಾಖೆ ಸಿಬಂದಿ ಮತ್ತು ಪೊಲೀಸರು ಪಟಾಕಿ ಸಿಡಿಸಿ ಅದನ್ನು ಹಿಂದಕ್ಕೆ ಕಳುಹಿಸುವ ಪ್ರಯತ್ನ ನಡೆಸಿದರು. ಆರಂಭದಲ್ಲಿ ಇದಕ್ಕೆ ಅಂಜದ ಆನೆ ಬಳಿಕ ಹಿಂದೆ ಸರಿದು ಪ್ರೌಢಶಾಲೆಯ ಹಿಂಬದಿಯ ತೋಟಕ್ಕೆ ನುಗ್ಗಿ ಕಾಡಿಗೆ ತೆರಳಿತು. ಹಗಲು ವಿಶ್ರಾಂತಿ-ರಾತ್ರಿ ಸಂಚಾರ!ಬುಧವಾರ ಹಗಲಿಡೀ ಕಾಡಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ,ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್. ಪೂಜಾರಿ (87) ಅವರು ಇಂದು ಮುಂಬೈಯ ಸ್ವಗೃದಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ. ಅವರು ಕುಂದಾಪುರದ ಬಿಲ್ಲವ ಸಮಾಜ ಸೇವಾ ಸಂಘ ಗೌರವಾಧ್ಯಕ್ಷರಾಗಿ ಹಾಗೂ ಕುಂದಾಪುರದ ಶ್ರೀ ನಾರಾಯಣ ಗುರು ಏಜ್ಯುಕೇಶನಲ್ & ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ಕೂಲಿ ಕಾರ್ಮಿಕ ಚಂದ್ರ (48) ಅವರು ಇತ್ತೀಚಿಗೆ ಮನೆಯ ದನದ ಕೊಟ್ಟಿಗೆಯ ಹಿಂಬದಿಯ ಪೇರಳೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು  ಮೃತಪಟ್ಟಿದ್ದಾರೆ. ಅವರ ಪತ್ನಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು ಅನಂತರ ಅವರು ಮೌನಕ್ಕೆ ಶರಣಾಗಿದ್ದರು. ಅಡಿಕೆ ಮರಕ್ಕೆ ಔಷಧ ಸಿಂಪರಣೆಗೆ ಚಂದ್ರ ಅವರು ಬರದೆ ಇದ್ದ ಕಾರಣ ಪಕ್ಕದ ಮನೆಯವರು ವಿಚಾರಿಸಲು ಅವರ ಮನೆಗೆ ಹೋಗಿದ್ದು, ಆಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತ ಸಾರ್ವಜನಿಕರು ಬಹುಮಾನಕ್ಕಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರ ಒಳಗಾಗಿ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲೆಯಲ್ಲೂ ಸಹ ಕೆಲವು ಪ್ರಕರಣಗಳು ಉಂಟಾಗಿವೆ. ಸಾರ್ವಜನಿಕರು ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ವಯೋವೃದ್ಧರು, ಮಕ್ಕಳು, ಗರ್ಭಿಣಿಯರು ಕೋವಿಡ್ ಸೋಂಕಿನ ಬಗ್ಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜ್ವರ, ಕೆಮ್ಮು, ನೆಗಡಿ, ಶೀತ, ಉಸಿರಾಟ ತೊಂದರೆ ಮುಂತಾದ ಗುಣಲಕ್ಷಣಗಳು ಕಂಡುಬಂದಲ್ಲಿ ಕೊರೋನಾ ಪರೀಕ್ಷೆಯನ್ನು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬೇಕು. ಸೋಂಕು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಜೊತೆಗೆ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರು. ಪೂರ್ವ…

Read More